ಎ. ಎಸ್. ಪಿ ಕಾಲೇಜಿನ ವ್ಯವಹಾರ ಅಧ್ಯಯನ ಮತ್ತು ಸಂಶೋಧನೆ ಕೇಂದ್ರ- ಬಿಸ್ಲೇರಿ ಇಂಟರನ್ಯಾಶನಲ್ ಪ್ರೈವೆಟ್ ಲಿಮಿಟೆಡ್ ಜೊತೆ ಒಡಂಬಡಿಕೆ

ವಿಜಯಪುರ: ಬಿ.ಎಲ್.ಡಿ.ಇ ಸಂಸ್ಥೆಯ ಎ. ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯ ವ್ಯವಹಾರ ಅಧ್ಯಯನ ಮತ್ತು ಸಂಶೋಧನೆ ಕೇಂದ್ರ ಮತ್ತು ಬಿಸ್ಲೇರಿ ಇಂಟರನ್ಯಾಶನಲ್ ಪ್ರೈವೆಟ್ ಲಿಮಿಟೆಡ್ ಜೊತೆ ಗಳ ಮಧ್ಯೆ ಪಾನಿಯಗಳ ಪ್ಲಾಸ್ಟಿಕ್ ಬಾಟಲ್ ಮರುಬಳಕೆ ಕುರಿತು ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಬಿ.ಎಲ್.ಡಿ.ಇ ಸಂಸ್ಥಾಪನ ದಿನಾಚರಣೆ ಅಂಗವಾಗಿ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಪರವಾಗಿ ವ್ಯವಹಾರ ಅಧ್ಯಯನ ಮತ್ತು ಸಂಶೋಧನೆ ಕೇಂದ್ರದ ನಿರ್ದೇಶಕ ಡಾ. ಚಿದಾನಂದ ಬ್ಯಾಹಟ್ಟಿ ಮತ್ತು ಬಿಸ್ಲೇರಿ ಕಂಪನಿಯ ಪರವಾಗಿ ಬಿಸ್ಲೇರಿ ಸಿಎಸ್ಆರ್ ವಿಭಾಗದ ದಕ್ಷಿಣ ವಲಯ […]

ಕಿತ್ತೂರು ರಾಣಿ ಚನ್ನಮ್ಮ ಶೌರ್ಯದ ಪ್ರತೀಕ: ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ

ವಿಜಯಪುರ: ವೀರ ರಾಣಿ ಕಿತ್ತೂರು ಚೆನ್ನಮ್ಮ ಇತಿಹಾಸದ ಪುಟಗಳಲ್ಲಿ ಶೌರ್ಯದ ಪ್ರತೀಕವಾಗಿ ಗುರುತಿಸಲ್ಪಟ್ಟ ವೀರ ಮಹಿಳಾ ಹೋರಾಟಗಾರ್ತಿ. ಬ್ರಿಟೀಷರ ವಿರುದ್ಧ ಸಮರಸಾರಿ ಇಡೀ ದೇಶವೇ ಸ್ವಾತಂತ್ರ ಸಂಗ್ರಾಮಕ್ಕೆ ದುಮ್ಮಿಕ್ಕುವಂತೆ ಪ್ರೇರಣೆ ನೀಡಿದ ರಾಣಿ ಚೆನ್ನಮ್ಮಳ ಇತಿಹಾಸ ಎಲ್ಲರಿಗೂ ಸ್ಫೂರ್ತಿದಾಯಕವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಗರದ ಶ್ರೀ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಕಿತ್ತೂರ ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ […]

ಗರ್ಭಾವಸ್ಥೆಯಲ್ಲಿ ಅಪರೂಪದ ಸ್ತನಕ್ಯಾನ್ಸರ್‌- ಬೆಂಗಳೂರಿನಲ್ಲಿ ಮಹಿಳೆಗೆ ಯಶಸ್ವಿ ಚಿಕಿತ್ಸೆ

ಬೆಂಗಳೂರು: ಅವಳಿ ಶಿಶುಗಳ ಗರ್ಭಾವಸ್ಥೆಯಲ್ಲೇ ಸ್ತನ ಕ್ಯಾನ್ಸರ್‌ಗೆ ಒಳಗಾಗಿದ್ದ 37 ವರ್ಷದ ಗರ್ಭಿಣಿಗೆ ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ಚಿಕಿತ್ಸೆ ನೀಡಿದ್ದಾರೆ. ಬನ್ನೇರುಘಟ್ಟ ರಸ್ತೆ ಫೋರ್ಟಿಸ್‌ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಆಂಕೊಲಾಜಿ ಸಲಹೆಗಾರರಾದ ಡಾ ಭರತ್ ಜಿ, ಮೆಡಿಕಲ್‌ ಆಂಕೊಲಾಜಿಯ ಹಿರಿಯ ಸಲಹೆಗಾರ ಡಾ ವಿವೇಕ್ ಬೆಳತ್ತೂರ್ ಹಾಗೂ ಸರ್ಜಿಕಲ್ ಆಂಕೊಲಾಜಿ ಮತ್ತು ರೊಬೊಟಿಕ್ ವಿಭಾಗದ ನಿರ್ದೇಶಕ ಡಾ ಸಂದೀಪ್ ನಾಯಕ್ ಪಿ ನೇತೃತ್ವದ ತಂಡ ಈ ಚಿಕಿತ್ಸೆ ನಡೆಸಿದ್ದಾರೆ. ಈ ಕುರಿತು ಮಾತನಾಡಿದ ಶಸ್ತ್ರಚಿಕಿತ್ಸಕ ಆಂಕೊಲಾಜಿಯ […]

ಬಿ.ಎಲ್.ಡಿ.ಇ ಸಂಸ್ಥೆಯ ಪ್ರಾತಃಸ್ಮರಣೀಯರ ಕಾಯಕ ಅಜರಾಮರ- ಶ್ರೀ ಅಭಿನವ ಸಿದ್ಧಾರೂಢ ಮಹಾಸ್ವಾಮೀಜಿ

ವಿಜಯಪುರ: ಬಿ.ಎಲ್.ಡಿ.ಇ ಸಂಸ್ಥೆಯನ್ನು ಕಟ್ಟಿ ಬೆಳೆಸುತ್ತಿರುವ ಪ್ರಾತಃಸ್ಮರಣೀಯರ ಜನಪರ ಕಾರ್ಯ ಸದಾ ಅಜರಾಮರವಾಗಿರಲಿದೆ ಎಂದು ನಗರದ ಶ್ರೀ ಷಣ್ಮುಖಾರೂಢ ಮಠದ ಶ್ರೀ ಅಭಿನವ ಸಿದ್ಧಾರೂಢ ಮಹಾಸ್ವಾಮೀಜಿ ಹೇಳಿದ್ದಾರೆ. ಇಂದು ಬುಧವಾರ ನಗರದ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನ ಗ್ರಂಥಾಲಯ ಕಟ್ಟೆದ ಹೊಸ ಸಭಾಂಗಣದಲ್ಲಿ ನಡೆದ ಬಿ.ಎಲ್.ಡಿ.ಇ 115ನೇ ಸಂಸ್ಥಾಪನ ದಿನಾಚರಣೆ ಮತ್ತು ಸಂಸ್ಥೆಯ ಪ್ರತಿಭಾವಂತ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.   ಈ ಸಂಸ್ಥೆಯನ್ನು ಕಟ್ಟಿರುವ […]

ವಿಕಲಚೇತನ ವಿದ್ಯಾರ್ಥಿಗಳಿಗೆ ಸಾಧನ ಸಲಕರಣೆ ವಿತರಣೆ, ವೈದ್ಯಕೀಯ ಶಿಬಿರ ಆಯೋಜನೆ- ಸದುಯೋಗ ಪಡೆದುಕೊಳ್ಳಲು ರಿಷಿ ಆನಂದ ಮನವಿ

ವಿಜಯಪುರ: ಸಮನ್ವಯ ಶಿಕ್ಷಣ ಮಧ್ಯವರ್ತನೆಯ ಅಡಿಯಲ್ಲಿ ವಿಶೇಷ ಅಗತ್ಯವುಳ್ಳ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 1ರಿಂದ 12ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ಮಕ್ಕಳಿಗಾಗಿ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮ ಆಯೋಜಿಸಲಾಗಿದೆ. ಬಸವನಬಾಗೇವಾಡಿ ಹಾಗೂ ಮುದ್ದೇಬಿಹಾಳ ತಾಲೂಕಿಗೆ ಸಂಬಂಧಿಸಿದಂತೆ ಅ.28ರಂದು ಬಸವನಬಾಗೇವಾಡಿ ತಾಲೂಕಿನ ಹೂವಿನಹಿಪ್ಪರಗಿಯ ದೇವರಹಿಪ್ಪರಗಿ ರಸ್ತೆಯಲ್ಲಿರುವ ಎಂ.ಜಿ.ಕೋರಿ ಡಾ:ಬಿ.ಜಿ.ಬ್ಯಾಕೋಡ್ ಪದವಿ ಪುರ್ವ ಮಹಾವಿದ್ಯಾಲಯದಲ್ಲಿ, ಇಂಡಿ, ಚಡಚಣ, ಸಿಂದಗಿ ತಾಲೂಕಿಗೆ ಸಂಬಂಧಿಸಿದಂತೆ ಅ.29ರಂದು ಇಂಡಿ ನಗರದ ಬಸ್ ಸ್ಟ್ಯಾಂಡ್ ಹತ್ತಿರದ ಯುಬಿಎಂಪಿಎಸ್ […]

ಡೋಣಿ ನದಿ ಪ್ರವಾಹ ತಡೆಗೆ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಟಿ.ಭೂಬಾಲನ್-ಜಿ.ಪಂ.ಸಿಇಓ ರಿಷಿ ಆನಂದ ಡೋಣಿ ನದಿಗೆ ಭೇಟಿ- ಪರಿಶೀಲನೆ

ವಿಜಯಪುರ:  ಜಿಲ್ಲೆಯಲ್ಲಿ ಡೋಣಿ ನದಿಯಿಂದ ಉಂಟಾಗುವ ಪ್ರವಾಹ ಪರಿಸ್ಥಿತಿಯನ್ನು ತಡೆಯಲು ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹಾಗೂ ಜಿಲ್ಲಾಧಿಕಾರಿ ರಿಷಿ ಆನಂದ ಅವರು ಬುಧವಾರ ಜಿಲ್ಲೆಯ ಡೋಣಿ ನದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಣ ಕುರಿತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಪ್ರವಾಹ ನಿಯಂತ್ರಣ ಯೋಜನೆ ರೂಪಿಸುವ ಕುರಿತು ಈಗಾಗಲೇ  ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಡೋಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಸೇತುವೆಗಳಲ್ಲಿ […]