ವಿಜಯಪುರ ನಗರದ ನಾನಾ ಕಚೇರಿಗಳಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಭೇಟಿ, ಪರಿಶೀಲನೆ
ವಿಜಯಪುರ: ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಶನಿವಾರ ನಗರದ ಅಗ್ನಿಶಾಮಕ, ಅರಣ್ಯ ಇಲಾಖೆ, ನಿರಾಶ್ರಿತರ ಕೇಂದ್ರ, ಜಿಲ್ಲಾ ತರಬೇತಿ ಶಿಕ್ಷಣ ಸಂಸ್ಥೆ, ಕೇಂದ್ರೀಯ ವಿದ್ಯಾಲಯ, ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ, ಸರಕಾರಿ ಬಾಲಕರ ಬಾಲಮಂದಿರ ಹಾಗೂ ನಿರ್ಮಿತಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರದ ಟಕ್ಕೆಯಲ್ಲಿರುವ ನಿರಾಶ್ರಿತರ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ನಿರಾಶ್ರಿತರಿಗಾಗಿ ಕಲ್ಪಿಸಿರುವ ವ್ಯವಸ್ಥೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಒಳಾಂಗಣದಲ್ಲಿ ಬೆಳೆಸಿರುವ ಹಸರಿಕರಣ- ಪರಿಸರ ಪ್ರಜ್ಞೆಗೆ ಸಾಕ್ಷಿಯಾಗಿದೆ. […]
ಆಲಮಟ್ಟಿ, ಹೆರಕಲ್ ಗ್ರಾಮಗಳಲ್ಲಿರುವ ಉದ್ದೇಶಿತ ಯೋಜನಾ ಸ್ಥಳಗಳಿಗೆ ಕೆಎಂಬಿ ಸಿಇಒ ಭೇಟಿ
ಬಾಗಲಕೋಟೆ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಸಾಗರಮಾಲ ಯೋಜನೆಯಡಿ ಪ್ರವಾಸೋದ್ಯಮ ಪೂರಕವಾಗಿ ಮತ್ತು ಸ್ಥಳೀಯ ಜನರಿಗೆ ಅನುಕೂಲವಾಗುವ ಆಲಮಟ್ಟಿ, ಹೆರಕಲ್ ಗ್ರಾಮಗಳಲ್ಲಿರುವ ಉದ್ದೇಶಿತ ಯೋಜನೆಯನ್ನು ಅಭಿವೃದ್ಧಿ ಪಡಿಸಲಾಗುತ್ತದೆ ಎಂದು ಕರ್ನಾಟಕ ಜಲಸಾರಿಗೆ ಮಂಡಳಿಯ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಜಯರಾಮ್ ರಾಯಪುರ ಅವರು ತಿಳಿಸಿದರು. ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಆಲಮಟ್ಟಿ ಮತ್ತು ಹೆರಕಲ್ ಗ್ರಾಮಗಳಲ್ಲಿರುವ ಉದ್ದೇಶಿತ ಯೋಜನಾ ಸ್ಥಳಗಳ ಕಾರ್ಯಸಾಧ್ಯತೆ, ಯೋಜನೆಯ ಭೂಸ್ವಾಧೀನ ಮತ್ತು ಜಲಸಾರಿಗೆ ಉಪಯುಕ್ತತೆ ಬಗ್ಗೆ ಪರಿಶೀಲನೆ ಹಾಗೂ ಆಲಮಟ್ಟಿ ಆಣೆಕಟ್ಟಿನ […]
ವಕ್ಫ್ ಆಸ್ತಿ ಬರೀ 11 ಎಕರೆ, ಮಿಕ್ಕಿದ್ದು ಹೊನವಾಡ ಗ್ರಾಮದ ರೈತರದು: 1974ರ ಗೆಜೆಟ್ ನಲ್ಲಿನ ತಪ್ಪನ್ನು 1977ರಲ್ಲಿ ವಕ್ಫ್ ಮಂಡಳಿ ಸರಿ ಮಾಡಿದೆ- ಸಚಿವ ಎಂ. ಬಿ. ಪಾಟೀಲ
ಬೆಂಗಳೂರು: ಗೆಜೆಟ್‌ನಲ್ಲಿ ತಪ್ಪಾಗಿ ನಮೂದಿಸಿದ್ದರಿಂದಾಗಿ ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಹೊನವಾಡ ಗ್ರಾಮದ 1,200 ಎಕರೆ ವಕ್ಫ್ ಆಸ್ತಿ ಎನ್ನುವ ಗೊಂದಲ ಸೃಷ್ಟಿಯಾಗಿದೆಯಷ್ಟೆ. ಇಲ್ಲಿ 11 ಎಕರೆ ಮಾತ್ರ ವಕ್ಫ್ ಗೆ ಸೇರಿದ್ದು, ಇದರಲ್ಲಿ 10 ಎಕರೆ 14 ಗುಂಟೆಯಲ್ಲಿ ಖಬರಸ್ತಾನವಿದೆ. ಉಳಿದ 24 ಗುಂಟೆಯಲ್ಲಿ ಈದ್ಗಾ, ಮಸೀದಿ ಇತ್ಯಾದಿ ಕಟ್ಟಡಗಳಿವೆ. ಉಳಿದ ಜಮೀನೆಲ್ಲ ರೈತರಿಗೆ ಸೇರಿದೆ. ಇದನ್ನು ತಹಸೀಲ್ದಾರ್ ಮತ್ತು ಜಿಲ್ಲಾಧಿಕಾರಿಗಳು ಕೂಡ ಸ್ಪಷ್ಟಪಡಿಸಿದ್ದಾರೆ ಎಂದು ಆ ಜಿಲ್ಲೆಯ ಉಸ್ತುವಾರಿಯೂ ಆಗಿರುವ ಬೃಹತ್ ಮತ್ತು ಮಧ್ಯಮ […]