ಬಾಗಲಕೋಟೆ: ಆಯ್ಕೆ ಮಾಡಿರುವ ಮತದಾರರು ಮತ್ತು ಉಭಯ ಜಿಲ್ಲೆಗಳ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದ್ದೇನೆ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.
ಬಾಗಲಕೋಟೆಯಲ್ಲಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ವಿಧಾನ ಪರಿಷತ್ ಸದಸ್ಯರಾದ ಶ್ರೀ ಸುನೀಲಗೌಡ ಪಾಟೀಲ ರವರನ್ನು ಸನ್ಮಾನಿಸಲಾಯಿತು,
ನನ್ನ ವಿಧಾನ ಪರಿಷತ್ ಶಾಸಕತ್ವದ ಅವಧಿ ಇನ್ನೂ ನಾಲ್ಕು ವರ್ಷವಿದೆ. ಈ ಸಮಯವನ್ನು ನನ್ನ ಮೇಲೆ ಭರವಸೆ ಇಟ್ಟು ವಿಧಾನ ಪರಿಷತ್ ಗೆ ಕಳಿಸಿದ ವಿಜಯಪುರ ಮತ್ತು ಬಾಗಲಕೋಟೆ ಉಭಯ ಜಿಲ್ಲೆಗಳ ಗ್ರಾ. ಪಂ., ತಾ. ಪಂ., ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆ ಸದಸ್ಯರ ಋಣ ತೀರಿಸಲು ಅವರ ಸಕಲ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದೇನೆ ಎಂದು ಅವರು ಹೇಳಿದರು.
ಉಭಯ ಜಿಲ್ಲೆಗಳ ಕಾಂಗ್ರೆಸ್ ಕಾಯ೯ಕತ೯ರ ಅಹವಾಲುಗಳನ್ನು ದೂರವಾಣಿ ಮೂಲಕ ಆಲಿಸಿ ಪರಿಹಾರ ಒದಗಿಸುವುದು ಕಷ್ಟ. ಹೀಗಾಗಿ ಕಾಯ೯ಕತ೯ರು, ಪಂಚಾಯಿತಿ ಸದಸ್ಯರು ತಂತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ನೀಡಬೇಕು. ಇದರಿಂದ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಲು ಅನುಕೂಲವಾಗಲಿದೆ ಎಂದು ಅವರು ಹೇಳಿದರು.
ಗ್ರಾ. ಪಂ. ಸದಸ್ಯರ ಗೌರವ ಧನ ಹೆಚ್ಚಳ, ಪಂಚಾಯಿತಿಗಳಿಗೆ ಸರಕಾರದಿಂದ ಅತೀ ಹೆಚ್ಚಿನ ಅನುದಾನ ಒದಗಿಸುವುದು ಸೇರಿದಂತೆ ಎಲ್ಲ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದೇನೆ. ವಿಜಯಪುರದಿಂದ ಬಾಗಲಕೋಟೆ ಮಾರ್ಗವಾಗಿ ಬೆಂಗಳೂರಿಗೆ ವಂದೇ ಭಾರತ ರೈಲು ಓಡಾಡಬೇಕು ಎಂಬುದು ನನ್ನ ಮಹದಾಸೆಯಾಗಿತ್ತು. ಈ ಕುರಿತು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಮತ್ತು ಬಾಗಲಕೋಟೆ ಸಂಸದ ಪಿ. ಸಿ. ಗದ್ದಿಗೌಡರ, ಕೇಂದ್ರ ರೇಲ್ವೆ ಸಚಿವ ಅಶ್ವಿನಿ ವೈಷ್ಣವ ಸೇರಿದಂತೆ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದೆ. ಆದರೆ, ಅವರಾರೂ ನನ್ನ ಪತ್ರಕ್ಕೆ ಸೌಜನ್ಯ್ಕಕ್ಕೂ ಉತ್ತರ ನೀಡಲಿಲ್ಲ. ಕೊನೆಗೆ ಪ್ರಧಾನಿಗಳಿಗೆ ಪತ್ರ ಬರೆದಿದ್ದೆ. ಈಗ ಅವರಿಂದ ಉತ್ತರ ಬಂದಿದ್ದು, ಈ ಯೋಜನೆ ಕಾರ್ಯಸಾಧುವಲ್ಲ ಎಂದು ಹೇಳಿದ್ದಾರೆ. ಇದರಿಂದ ಉಭಯ ಜಿಲ್ಲೆಗಳಲ್ಲಿ ಪ್ರವಾಸೋದ್ಯಮಕ್ಕೆ ಮತ್ತು ಈ ಭಾಗದ ಆರ್ಥಿಕ ಚಟುವಟಿಕೆಗಳಿಗೂ ಹಿನ್ನೆಡೆಯಾಲಿದೆ ಎಂದು ಅವರು ಹೇಳಿದರು.
ಇದಕ್ಕೂ ಮುನ್ನ ಸುನೀಲಗೌಡ ಪಾಟೀಲ ಅವರನ್ನು ಜಿಲ್ಲಾ ಕಾಂಗ್ರೆಸ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್. ಜ. ನಂಜಯ್ಯನಮಠ, ಶಾಸಕ ಎಚ್. ವೈ. ಮೇಟಿ, ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ನಾಗರಾಜ ಹದ್ಲಿ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಕ್ಷಿತಾ ಈಟಿ, ಜಿಲ್ಲಾ ಪ್ರಧಾನ ಕಾಯ೯ದರ್ಶಿಗಳಾದ ಶ್ರೀನಿವಾಸ ಬಳ್ಳಾರಿ, ಹನಮಂತ ರಾಕುಂಪಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜಾಕ ಬೇನೂರ, ಮುಖಂಡರಾದ ಸಂಗಣ್ಣ ಹಂಡಿ, ಬಸವಂತಪ್ಪ ಅಂಟರದಾನಿ, ದ್ಯಾಮಣ್ಣ ಗಾಳಿ ಶಂಕರ ಮಂಕಣಿ ನಗರಸಭೆಯ ಸದಸ್ಯರಾದ ಹಾಜಿಸಾಬ ದಂಡಿನ, ಚೆನ್ನವೀರ ಅಂಗಡಿ, ಕಮತಗಿ ಪ. ಪಂ. ಅಧ್ಯಕ್ಷ ರಮೇಶ ಜಮಖಂಡಿ, ದೇವಿಪ್ರಸಾದ ನಿಂಬಲಗುಂದಿ, ಅಬ್ದುಲಸತ್ತಾರ ಅದೋಣಿ, ರೇಣುಕಾ ನ್ಯಾಮಗೌಡ, ಮಂಜುಳಾ ಭುಸಾರೆ, ಪಕ್ಷದ ನಾನಾ ಮುಖಂಡರು ಪದಾಧಿಕಾರಿಗಳು, ಮಹಿಳಾ ಮುಖಂಡರು, ಪದಾಧಿಕಾರಿಗಳು, ಕಾಯ೯ಕತ೯ರು ಉಪಸ್ಥಿತರಿದ್ದರು.