ಬೀದಿ ಬದಿ ವ್ಯಾಪಾರಿಗಳ ವ್ಯಾಪಾರ, ಆಟೋ, ದ್ವಿಚಕ್ರ ವಾಹನಗಳ ನಿಲುಗಡೆಗೆ ಪ್ರತ್ಯೇಕ ನಿಗದಿ: ಪಾಲಿಸದಿದ್ದರೆ ಕ್ರಮ- ವಿಜಯಕುಮಾರ ಮೆಕ್ಕಳಕಿ

ವಿಜಯಪುರ: ನಗರದ ಬೀದಿ ಬದಿ ವ್ಯಾಪಾರಸ್ಥರಿಗೆ ವೆಂಡಿಂಗ್ ಝೋನ್ ಜಾಗದ ವ್ಯವಸ್ಥೆ ಮತ್ತು ಆಟೋ, ದ್ವಿಚಕ್ರ ವಾಹನಗಳ ನಿಲುಗಡೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಜಾಗ ಗುರುತಿಸಲಾಗಿದೆ.  ಈಗ ಸೂಚಿಸಿರುವ ಸ್ಥಳಗಳಲ್ಲಿ ಬೀದಿಬದಿ ವ್ಯಾಪಾರಸ್ಥರು ವ್ಯಾಪಾರ ಕೈಗೊಳ್ಳದಿದ್ದೇದರೆ ಮತ್ತು ಅಟೋ. ದ್ವಿಚಕ್ರ ವಾಹನ ಸವಾರರು ನಿಗದಿತ ಸ್ಥಳಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡದಿದ್ದರೆ ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಂಡು ದಂಡ ವಿಧಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಎಚ್ಚರಿಕೆ ನೀಡಿದ್ದಾರೆ.

ನಗರದ ಬೀದಿ ಬದಿ ವ್ಯಾಪಾರಸ್ಥರು ಎಲ್ಲೆಂದರಲ್ಲಿ ವ್ಯಾಪಾರ ಮಾಡುವುದನ್ನು ತಡೆಯಲು ಹೈಕೋರ್ಟ್ ಆದೇಶದಂತೆ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಮಹಾಪೌರರರ ಮಾರ್ಗದರ್ಶನ ಮತ್ತು ಜಿಲ್ಲಾಧಿಕಾರಿಗಳ ನಿರ್ದೇಶನದಲ್ಲಿ ನಗರದ ಸೌಂದರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಗರದ ನೆಹರು ಮಾರ್ಕೆಟ್ ಹಿಂಭಾಗ, ಎಂ. ಆರ್. ಹೋಟೆಲ್ ಹತ್ತಿರ, ಕೆ.ಎಸ್‍.ಆರ್.ಟಿ.ಸಿ ಡಿಪೋ ಪಕ್ಕ, ಅಂಬೇಡ್ಕರ್ ಕ್ರೀಡಾಂಗಣ ಎದುರು, ಸೈನಿಕಶಾಲೆ ಜಿಮ್‍ಖಾನಾ ಕ್ಲಬ್ ಹಿಂದೆ ಹಾಗೂ ಆಹಾರ ಮಾರಾಟಕ್ಕೆ ಇಂಡಿ ರೋಡ ಕ್ರೀಡಾಂಗಣದ ಹತ್ತಿರ, ಜಾಗಗಳನ್ನು ಗುರುತಿಸಲಾಗಿದೆ.

ವಿಜಯಪುರ ನಗರದ ಮಾರುಕಟ್ಟೆ ಪ್ರದೇಶಕ್ಕೆ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಪೊಲೀಸ್ ಅಧಿಕಾರಿಗಳೊಂದಿಗೆ ಭೇಟಿ ನೀಡಿದರು.

ಈ ಸ್ಥಳಕ್ಕೆ ಬೀದಿ ಬದಿ ವ್ಯಾಪಾರಸ್ಥರರೊಂದಿಗೆ ಮಹಾನಗರ ಪಾಲಿಕೆ ಆಯುಕ್ತರು ಭೇಟಿ ನೀಡಿದರು.  ಈ ಸಂದರ್ಭದಲ್ಲಿ ಬೀದಿ ಬದಿ ವ್ಯಾಪಾರಸ್ಥರು ಸಂತಸ ವ್ಯಕ್ತಪಡಿಸಿದ್ದಲ್ಲದೇ, ಮುಂದಿನ ದಿನಗಳಲ್ಲಿ ಸದರಿ ಜಾಗಗಳಲ್ಲಿಯೇ ವ್ಯಾಪಾರ ಕೈಗೊಳ್ಳುವುದಾಗಿ ತಿಳಿಸಿದರು.

ಜನದಟ್ಟಣೆ ನಿಯಂತ್ರಣ ಮತ್ತು ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಬೀದಿ ಬದಿ ವ್ಯಾಪಾರಸ್ಥರು, ಆಟೋ ಮತ್ತು ಇತರೆ ದ್ವಿಚಕ್ರ ವಾಹನಗಳ ಮಾಲೀಕರೊಂದಿಗೆ ಸಭೆ ಅವರು ಸಭೆ ನಡೆಸಿದರು.  ಈ ಸಂದರ್ಭದಲ್ಲಿ ಮಾತನಾಡಿದ ಹೆಚ್ಚುವರಿ ಎಸ್ಪಿ ಶಂಕರ ಮಾರಿಹಾಳ, ನಿಗದಿತ ಸ್ಥಳಗಳಲ್ಲಿ ಮಾತ್ರ ವಾಹನಗಳನ್ನು ನಿಲುಗಡೆ ಮಾಡಬೇಕು. ನಿಷೇಧಿತ ಪ್ರದೇಶಗಳಲ್ಲಿ ಯಾವುದೇ ವಾಹನಗಳನ್ನು ನಿಲುಗಡೆ ಮಾಡಬಾರದು.  ಈ ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಚಾರ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವೆಂಡಿಂಗ್ ಝೋನ್‍ಗಳಲ್ಲಿ ಮಾತ್ರ ವ್ಯಾಪಾರ ವಹಿವಾಟು ಕೈಗೊಳ್ಳಬೇಕು. ನಿಗದಿತ ಸ್ಥಳಗಳಲ್ಲಿ ವಾಹನ ನಿಲುಗಡೆ ಹಾಗೂ ವ್ಯಾಪಾರ ವಹಿವಾಟು ಮಾಡದವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಸೂಕ್ತ ದಂಡ ವಿಧಿಸಲು ಸಭೆಯಲ್ಲಿ ಈ ನಿರ್ಧರಿಸಲಾಯಿತು.

ಈ ಸಂದರ್ಭದಲ್ಲಿ ಪೊಲೀಸ್ ಮತ್ತು ಇತರ ಇಲಾಖೆ ಇತರೆ ಅಧಿಕಾರಿಗಳು ಮತ್ತೀತರರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌