ವಿಜಯಪುರ: ವಿಮಾನ ನಿಲ್ದಾಣದ ಸಿಬ್ಬಂದಿಗೆ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಜಿಲ್ಲಾ ಶಾಖೆಯ ವತಿಯಿಂದ ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ ನಡೆಯಿತು.
ವಿಜಯಪುರ ವಿಮಾನ ನಿಲ್ದಾಣದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಈ ಶಿಬಿರವನ್ನು ಸಂಸ್ಥೆಯ ಅಧ್ಯಕ್ಷ ಎಸ್. ಜಿ. ರೋಡಗಿ ಸಸಿ ನೆಡುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಎಸ್.ಜಿ.ಮುರನಾಳ, ಸೊಸಾಯಿಟಿಯ ಪದಾಧಿಕಾರಿಗಳು, ಪ್ರಥಮ ಚಿಕಿತ್ಸೆ ತರಬೇತಿ ತಜ್ಞರು ಮತ್ತು ವಿಮಾನ ನಿಲ್ದಾಣದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಈ ಶಿಬಿರದಲ್ಲಿ ಭದ್ರತಾ ಸಿಬ್ಬಂದಿ ಮತ್ತು ಇತರೆ ಸಿಬ್ಬಂದಿಗಳು, ವೈದ್ಯರು ಸೇರಿದಂತೆ ತರಬೇತಿ ಪಡೆದ ಸಂಪನ್ಮೂಲ ವ್ಯಕ್ತಿಗಳು ಶಿಬಿರದ ಉಪಸ್ಥಿತರಿರಲಿದ್ದಾರೆ.