Invest Karnataka-2025: ವಲಯವಾರು ಕೈಗಾರಿಕೆ ಪಾರ್ಕ್ ಗಳ ಅಭಿವೃದ್ಧಿ- ಬಸವನಾಡಿನಲ್ಲಿ ಸೋಲಾರ್ ಸೆಲ್, ಅಗ್ರೋ ಪಾರ್ಕ್- ಎಂ. ಬಿ. ಪಾಟೀಲ

ಬೆಂಗಳೂರು: ರಾಜ್ಯದಲ್ಲಿ ಸಮಗ್ರ ಕೈಗಾರಿಕೆ ಬೆಳವಣಿಗೆಯನ್ನು ಸಾಧಿಸಲು ವಲಯವಾರು ಕೈಗಾರಿಕಾ ಪಾರ್ಕ್ ಗಳನ್ನು ಅಭಿವೃದ್ಧಿಪಡಿಸುತ್ತಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಆಧುನಿಕ ಫಾರ್ಮಾ ಪಾರ್ಕ್, ವಿಜಯಪುರದಲ್ಲಿ ಸೋಲಾರ್ ಸೆಲ್ ಪಾರ್ಕ್ ಮತ್ತು ಕೃಷಿ ಉತ್ಪನ್ನಗಳನ್ನು ಆಧರಿಸಿದ ಆಗ್ರೋ ಪಾರ್ಕ್, ಚಿತ್ರದುರ್ಗದಲ್ಲಿ ಡ್ರೋನ್ ಪಾರ್ಕ್, ಜಂಗಮನಕೋಟೆಯಲ್ಲಿ ಸರ್ ಎಂ ವಿಶ್ವೇಶ್ವರಯ್ಯನವರ ಹೆಸರಿನಲ್ಲಿ ಡೀಪ್-ಟೆಕ್ ಪಾರ್ಕ್, ಡಾಬಸಪೇಟೆಗೆ ಸಮೀಪದ ಹನುಮಂತಪುರದಲ್ಲಿ ಮೆಗಾ ಲಾಜಿಸ್ಟಿಕ್ಸ್ ಪಾರ್ಕ್, ಚಿಕ್ಕಬಳ್ಳಾಪುರ ಜಿಲ್ಲೆ ಮತ್ತು ಧಾರವಾಡದಲ್ಲಿ ಇ.ವಿ ಕ್ಲಸ್ಟರ್ಸ್ ಸ್ಥಾಪಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, […]
ರಾಜ್ಯಪಾಲರಿಗೆ ಮತ್ತೋಮ್ಮೆ ಸುಗ್ರಿವಾಜ್ಞೆ ಕಳುಹಿಸುತ್ತೇವೆ- ಸಚಿವ ಎಚ್. ಕೆ. ಪಾಟೀಲ

ವಿಜಯಪುರ: ಮೈಕ್ರೋ ಫೈನಾನ್ಸ್ ಗೆ ಕಡಿವಾಣ ಹಾಕಲು ಸರಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲರ ನಕಾರ ವಿಚಾರಕ್ಕೆ ಸಂಬಂಧಿಸಿದತೆ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಚ್. ಕೆ. ಪಾಟೀಲ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರಿಗೆ ಸುಗ್ರಿವಾಜ್ಞೆ ಬಗ್ಗೆ ತಪ್ಪು ಗ್ರಹಿಕೆ ಇದೆ. ಹೀಗಾಗಿ ಸುಗ್ರೀವಾಜ್ಞೆಯನ್ನು ಪುರಸ್ಕರಿಸಲು ರಾಜ್ಯಪಾಲರಿಗೆ ಮರು ಸಲ್ಲಿಕೆ ಮಾಡುತ್ತೇವೆ ಎಂದು ಹೇಳಿದರು. ರಾಜ್ಯದಲ್ಲಿ ಕೆಲ ವಾರಗಳಿಂದ ಮೈಕ್ರೋ ಫೈನಾನ್ಸ್ ಗಳಿಂದ ಸಾಲ ವಸೂಲಿ ವಿಚಾರಕ್ಕೆ ಸಂಬಂಧಿಸಿದಂತೆ ಒತ್ತಡದಲ್ಲಿ ವಸೂಲಿ […]
Video News: ದೆಹಲಿಯಿಂದ ಕೈಯ್ಯಲ್ಲಿ ಬಂಗಾರ ಇಟ್ಟುಕೊಂಡು, ವಿಜಯದ ಸಂಕೇತ ಹಿಡಿದುಕೊಂಡು ಬಂದಿದ್ದೇವೆ- ಶಾಸಕ ಯತ್ನಾಳ

ವಿಜಯಪುರ: ದೆಹಲಿ ಭೇಟಿ ಫಲಪ್ರದವಾಗಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ತಾವು ದೆಹಲಿಗೆ ಭೇಟಿ ನೀಡಿರುವ ಕುರಿತು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದರು. ದೆಹಲಿಯಲ್ಲಿ ಯಾರೂ ನಮಗೆ ಭೇಟಿಯಾಗಿಲ್ಲ. ನಮ್ಮ ತಂಡಕ್ಕೆ ಭಯಂಕರ ಅವಮಾನ ಅಗಿದೆ ಎಂದು ಮಾದ್ಯಮಗಳ ವರದಿ ಕುರಿತು ವ್ಯಂಗ್ಯವಾಡಿದ ಅವರು, ದೆಹಲಿ ಭೇಟಿ ಫಲಪ್ರದವಾಗಿದೆ. ಏನು ಆಗಿಲ್ಲ […]