ಕ್ಯಾನ್ಸರ್ ಬಗ್ಗೆ ಎಚ್ಚರಿಕೆ ಇರಲಿ, ಭಯ ಬೇಡ- ಡಾ. ಮಂಜುನಾಥ ಕೋಟೆಣ್ಣವರ

ವಿಜಯಪುರ: ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ. ಆದರೆ ಭಯ ಬೇಡ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೋಟೆಣ್ಣವರ ಹೇಳಿದ್ದಾರೆ. ಶನಿವಾರ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ ಚಿಕಿತ್ಸಾ ವಿಭಾಗದ ವತಿಯಿಂದ ವಿಜಯಪುರ ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಉಚಿತ ಕ್ಯಾನ್ಸರ್ ರೋಗ ತಪಾಸಣೆ ಮತ್ತು ಜಾಗೃತಿ ಅಭಿಯಾನ ಸಪ್ತಾಹ ಸಮಾರೋಪ ಸಮಾರಂಭದಲ್ಲಿ […]

ಸಾಮಾಜಿಕ, ಆರ್ಥಿಕವಾಗಿ ಸಬಲಗೊಳ್ಳಲು ಕರ್ನಾಟಕ ಮುಲ್ಲಾ ಅಸೋಷಿಯೇಶನ್ ಶ್ರಮಿಸುತ್ತಿರುವುದು ಶ್ಲಾಘನೀಯ- ಶಾಕೀರ ಸನದಿ

ವಿಜಯಪುರ: ಮುಲ್ಲಾ ಎಂಬುದೊಂದು ಶ್ರೇಷ್ಠ ಪದವಾಗಿದ್ದು, ಸಮಾಜದಲ್ಲಿ ಉನ್ನತ ಗೌರವ ಹೊಂದಿದವನಾಗಿದ್ದಾನೆ.  ಸಾಮಾಜಿಕ, ಆರ್ಥಿಕವಾಗಿ ಸಬಲಗೊಳ್ಳಲು ಕರ್ನಾಟಕ ಮುಲ್ಲಾ ಅಸೋಷಿಯೇಶನ್ ಶ್ರಮಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿ ಹೇಳಿದರು. ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಕರ್ನಾಟಕ ಮುಲ್ಲಾ ಅಸೋಷಿಯೇಶನ್ (ಕೆಎಂಎ) ವತಿಯಿಂದ ಹಮ್ಮಿಕೊಳ್ಳಲಾದ ರಾಜ್ಯಮಟ್ಟದ ಮುಲ್ಲಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಂದು ಸಮಾಜದ ಜೊತೆಗೆ ಉತ್ತಮ ಒಡನಾಟ ಹೊಂದುವುದರ ಜೊತೆಗೆ ಸಮಾಜದ ಪ್ರಗತಿಗೆ ಒಕ್ಕಟ್ಟಾಗಬೇಕು ಸರಕಾರಿ ಸೌಲಭ್ಯ […]

ಕ್ರೀಡೆ ಕೇವಲ ಮನರಂಜನೆಗಾಗಿ ಮಾತ್ರವಲ್ಲ, ಉತ್ತಮ ಆರೋಗ್ಯವನ್ನು ಬೆಳೆಸಿಕೊಳ್ಳಲು ಸಹಾಯಕವಾಗಿದೆ- ಅಂತರಾಷ್ಟ್ರೀಯ ಕ್ರೀಡಾಪಟು ಬಾಲಾಜಿ ಪ್ರಭು

ವಿಜಯಪುರ: ಕ್ರೀಡೆ ಕೇವಲ ಮನರಂಜನೆಗಾಗಿ ಮಾತ್ರವಲ್ಲ, ಉತ್ತಮ ಆರೋಗ್ಯವನ್ನು ಬೆಳೆಸಿಕೊಳ್ಳಲು ಸಹಾಯಕವಾಗಿದೆ ಎಂದು ಬೆಂಗಳೂರಿನ ಅಂತರಾಷ್ಟಿ್ರೀಯ ಕ್ರೀಡಾಪಟು ಹಾಗೂ ರಾಜ್ಯ ಸಂಪನ್ಮೂಲ ವ್ಯಕ್ತಿ ಬಾಲಾಜಿ ಪ್ರಭು ಹೇಳಿದರು. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗ ಮತ್ತು ದೈಹಿಕ ನಿರ್ದೇಶನಾಲಯ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ಆಯೋಜಿಸಿದ್ದ ವಾಲಿಬಾಲ್ ಕ್ರೀಡೆಯ ಕುರಿತು ಮೂರು ದಿನಗಳ ಕಾರ್ಯಾಗಾರ ಮತ್ತು ನಿರ್ಣಾಯಕರ ಪರೀಕ್ಷೆ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಜೀವನದಲ್ಲಿ […]

ಘನತೆಯ ಬದುಕಿಗೆ ಕಾಯಕ ಮುಖ್ಯ: ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರು

ವಿಜಯಪುರ: ಘನತೆ ಬದುಕು ರೂಪಿಸಿಕೊಳ್ಳಲು ಕಾಯಕ ತತ್ವ ಅಳವಡಿಸಿಕೊಂಡು ಕಾಯಕದಲ್ಲಿ ನಿರತರಾಗುವುದರ ಮೂಲಕ ಜೀವನವನ್ನು ಸುಂದರಗೊಳಿಸಿಕೊಳ್ಳೋಣ ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರು ಹೇಳಿದರು. ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮAದಿರದಲ್ಲಿ ಸೋಮವಾರ ಕಾಯಕ ಶರಣರಾದ ಮಾದರ ಚನ್ನಯ್ಯ, ಮಾದರ ಧೂಳಯ್ಯ, ಢೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಹಾಗೂ ಉರಿಲಿಂಗ ಪೆದ್ದಿ ಅವರ ಜಯಂತಿ ಆಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. 12ನೇ ಶತಮಾನದಲ್ಲಿ ಶರಣರು ಮೌಲ್ಯಯುತ ಕಾಯಕ ಜೀವನ ನಡೆಸುವುದರ ಮೂಲಕ ಸಮಾಜಕ್ಕೆ ಜ್ಞಾನದ […]