ತಂತ್ರಜ್ಞಾನದ ಸಮರ್ಪಕ ಬಳಕೆಗೆ ಅರಿವು ಅತ್ಯಗತ್ಯ: ಜಿಲ್ಲಾಧಿಕಾರಿ ಟಿ. ಭೂಬಾಲನ್

ವಿಜಯಪುರ: ಅಂತರ್ಜಾಲವು ಒಂದು ಶಕ್ತಿಯುತ ಸಾಧನವಾಗಿದೆ. ಸರಿಯಾದ ಬಳಕೆಯು ಜೀವನವನ್ನು ಸುಲಭಗೊಳಿಸಬಹುದಾಗಿದ್ದು, ತಂತ್ರಜ್ಞಾನವನ್ನು ಜವಾಬ್ದಾರಿಯುತವಾಗಿ ಬಳಸಬೇಕು. ಸಮರ್ಪಕ ಬಳಕೆಗೆ ಅರಿವು ಅತ್ಯಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಹೇಳಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಾಹಿತಿ ತಂತ್ರಜ್ಞಾನ ಇಲಾಖೆಯ ಸಂಯುಕ್ತಾಶ್ರದಲ್ಲಿ ಸುರಕ್ಷಿತ ಅಂತರ್ಜಾಲ ದಿನದ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು. ಆಧುನಿಕ ಜಗತ್ತಿನಲ್ಲಿ ಅಂತರ್ಜಾಲವು ಮಾನವ ಬದುಕಿನ ಅವಿಭಾಜ ಅಂಗವಾಗಿದೆ. ಇದರ ನಡುವೆಯೇ ವಿವಿಧ ಮಾದರಿಗಳಲ್ಲಿ ಸೈಬರ್ ವಂಚನೆ […]

ಫೆ. 17, 18 ರಂದು ಕಲಬುರಗಿಯಲ್ಲಿ ಮೀಡಿಯಾ ಫೆಸ್ಟ್-2025: ಉತ್ತರ ಕರ್ನಾಟಕದ ಸುಮಾರು 200 ಪತ್ರಿಕೋದ್ಯಮ ವಿದ್ಯಾರ್ಥಿಗಳು ಭಾಗಿ- ಜಡಿಯಪ್ಪ ಗೆದ್ಲಗಟ್ಟಿ

ಕಲಬುರಗಿ: ಕಲ್ಯಾಣ ಕರ್ನಾಟಕದ ಕೇಂದ್ರಸ್ಥಾನ ಕಲಬುರಗಿಯಲ್ಲಿ ಇದೇ ಮೊದಲ ಬಾರಿಗೆ ಸರ್ಕಾರದಿಂದ ಕಲಬುರಗಿ ಶರಣಬಸವ ವಿಶ್ವವಿದ್ಯಾಲಯದಲ್ಲಿ ಫೆಬ್ರವರಿ 17 ಮತ್ತು 18 ರಂದು ಎರಡು ದಿನಗಳ ಕಾಲ ಭವಿಷ್ಯದಲ್ಲಿ ಪತ್ರಕರ್ತರಾಗುವ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗಾಗಿ ಮೀಡಿಯಾ ಫೆಸ್ಟ್-2025 ಕಾರ್ಯಕ್ರಮ ಆಯೋಜಿಸಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಲಬುರಗಿ ಉಪನಿರ್ದೇಶಕ ಜಡಿಯಪ್ಪ ಗೆದ್ಲಗಟ್ಟಿ ತಿಳಿಸಿದ್ದಾರೆ.   ನಗರದ ಪತ್ರಿಕಾ ಭವನದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕರ್ನಾಟಕ ಮಾಧ್ಯಮ ಅಕಾಡೆಮಿ, ಶರಣಬಸವ […]