ರಸ್ತೆ ಅಪಘಾತ ತಡೆಗೆ ಕಟ್ಟುನಿಟ್ಟಾಗಿ ರಸ್ತೆ ಸುರಕ್ಷತಾ ನಿಯಮ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

ವಿಜಯಪುರ: ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಮುಂಜಾಗೃತ ಕ್ರಮವಾಗಿ ರಸ್ತೆ ಸುರಕ್ಷತಾ ನಿಯಮಗಳನ್ನು ವಿಧಾನಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನನಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಪಘಾತ ತಡೆಯುವ ಹಾಗೂ ಸುಗಮ ಸಂಚಾರ ವ್ಯವಸ್ಥೆಯನ್ನು ಕಾಪಾಡಿಕೊಳ್ಳುವಲ್ಲಿ ಜಾಗೃತಿ ಮೂಡಿಸಬೇಕು. ರಸ್ತೆ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳು ಕಡ್ಡಾಯವಾಗಿ ರಸ್ತೆ ನಿಯಮಗಳ ಪಾಲನೆ ಮಾಡುವಂತೆ ವಾಹನ ಸವಾರರು-ಸಾರ್ವಜನಿಕರಲ್ಲಿ ಸೂಕ್ತ ಅರಿವು ಮೂಡಿಸುವಂತೆ […]