ಸಾಗುವಳಿ ಜಮೀನನ್ನು ಸಕ್ರಮಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಪ್ರತಿಭಟನೆ

ವಿಜಯಪುರ: ವಿಜಯಪುರ, ಇಂಡಿ, ಸಿಂದಗಿ ಮತ್ತು ಬಸವನ ಬಾಗೇವಾಡಿ ತಾಲೂಕುಗಳಲ್ಲಿ ಬಡ ರೈತರು ಸರಕಾರಿ ಪಡಾ ಜಮೀನನ್ನು ಸುಮಾರು 20 ರಿಂದ 30 ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬಂದಿದ್ದು, ಇದನ್ನು ಸಕ್ರಮಗೊಳಿಸಿ ಹಕ್ಕುಪತ್ರ ವಿತರಿಸುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಸಂಘಟನೆ ಮುಖಂಡರು ಮತ್ತು ಕಾರ್ಯಕರ್ತರು ಸರ್ಕಾರದ ಆದೇಶದಂತೆ ಅಕ್ರಮ ಸಾಗುವಳಿ ಜಮೀನನ್ನು ಸಕ್ರಮಗೊಳಿಸಿ ಹಕ್ಕು ಪತ್ರ ವಿತರಿಸಬೇಕು ಎಂದು ಆಗ್ರಹಿಸಿದರು.  ಅಲ್ಲದೇ, ಅಪರ ಜಿಲ್ಲಾಧಿಕಾರಿ […]

ಏಕರೂಪ ನಾಗರಿಕ ಸಂಹಿತೆ ಡಾ. ಅಂಬೇಡ್ಕರ ಆಶಯವಾಗಿತ್ತು- ಅದನ್ನು ಸಾಕಾರಗೊಳಿಸಲು ಮೋದಿ ಪ್ರತಿಪಾದಿಸುತ್ತಿದ್ದಾರೆ- ರಮೇಶ ಜಿಗಜಿಣಗಿ

ವಿಜಯಪುರ: ದೇಶದಲ್ಲಿರುವ ಎಲ್ಲ ನಿವಾಸಿಗಳು ಸಹೋದರರು.  ಎಲ್ಲರಿಗೂ ಒಂದೇ ಕಾನೂನು ಇರಬೇಕು ಎಂಬುದು ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ ಅವರ ಆಶಯವಾಗಿತ್ತು.  ಈ ಆಶಯ ಸಾಕಾರಗೊಳಿಸಲು ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರು ಏಕರೂಪ ನಾಗರಿಕ ಸಂಹಿತೆ ಅವಶ್ಯಕತೆಯನ್ನು ಪ್ರತಿಪಾದಿಸಿದ್ದಾರೆ ಎಂದು ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಏಕರೂಪ ನಾಗರಿಕ ಸಂಹಿತೆ ಡಾ. ಬಿ. ಆರ್. ಅಂಬೇಡ್ಕರ ಅವರ ಕನಸು ಮತ್ತು ಆಶಯವಾಗಿತ್ತು.  […]

ಮಾದರಿ ಅಂಗನವಾಡಿಯಲ್ಲಿದೆ ಚಿಣ್ಣ ಕಲಿಯಲು ಬೇಕಾದ ಜ್ಞಾನದ ಭಂಡಾರ- ಆಟದೊಂದಿಗೆ ಶಿಕ್ಷಕರು ಮಾಡುವ ಪಾಠ ಬಲು ಸುಂದರ

ವಿಜಯಪುರ: ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರಭಾವ ಹೆಚ್ಚಾಗಿರುವ ಇಂದಿನ ದಿನಗಳಲ್ಲಿ ಇಲಾಖೆ, ಗ್ರಾ. ಪಂ. ಆಡಳಿತ ಮಂಡಳಿ ಮತ್ತು ಶಿಕ್ಷಕರು ಮನಸ್ಸು ಮಾಡಿದರೆ ಹೇಗೆ ಮಾದರಿ ಕೆಲಸ ಮಾಡಬಲ್ಲರು ಎಂಬುದಕ್ಕೆ ಸಾಕ್ಷಿಯಾಗಿದೆ ಬಸವ ನಾಡಿನ ಈ ಅಂಗನವಾಡಿ ಕೇಂದ್ರ.  ಇಲ್ಲಿ ಮಕ್ಕಳ ಆಟದ ಜೊತೆಗೆ ಪಾಠವನ್ನು ಕಲಿಸಲಾಗುತ್ತಿದ್ದು, ಎಲ್ಲವೂ ಹೊಸ ಶಿಕ್ಷಣ ನೀತಿಯಂತೆ ನಡೆಯುತ್ತಿರುವುದು ಗಮನಾರ್ಹವಾಗಿದೆ.  ಯಾವುದೇ ಕಾನ್ವೆಂಟ್ ಗಳಿಗೂ ಕಮ್ಮಿ ಇಲ್ಲ ನಮ್ಮ ಅಂಗನವಾಡಿ ಎಂದು ಅಲ್ಲಿ ಪೋಷಕರೇ ಹೇಳುವುದು ಕುತೂಹಲಕ್ಕ ಕೆರಳಿಸುತ್ತಿದೆ. ಇದು ಬಸವನಾಡು […]

ದಿ. ಬಿ. ಎಂ. ಪಾಟೀಲ ಪುಣ್ಯಸ್ಮರಣೆ ಅಂಗವಾಗಿ ಬಿ. ಎಲ್. ಡಿ. ಆಸ್ಪತ್ರೆಯಲ್ಲಿ ಜು. 1 ರಿಂದ 31ರ ವರೆಗೆ ಒಂದು ತಿಂಗಳು ಉಚಿತ ಆರೋಗ್ಯ ತಪಾಸಣೆ, ಚಿಕಿತ್ಸೆ ಶಿಬಿರ

ವಿಜಯಪುರ: ಮಾಜಿ ಸಚಿವ ದಿ. ಶ್ರೀ ಬಿ. ಎಂ. ಪಾಟೀಲ ಅವರ ಪುಣ್ಯಸ್ಮರಣೆ ಅಂಗವಾಗಿ ಜುಲೈ 1 ರಿಂದ ಜುಲೈ 31ರ ವರೆಗೆ ನಗರದ ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ, ಈ ಶಿಬಿರದಲ್ಲಿ ಉಚಿತವಾಗಿ ನೋಂದಣಿ, ಬಿಪಿ, […]

ಕುಡಿಯುವ ನೀರಿನ ಸಮಸ್ಯೆ: ಗ್ರಾ. ಪಂ. ಯತ್ ಮಟ್ಟದಲ್ಲಿ ಕಾರ್ಯಪಡೆ ರಚಿಸಿ ಕಾರ್ಯ ನಿರ್ವಹಿಸಲು ಡಿಸಿ ಡಾ. ದಾನಮ್ಮನವರ ಸೂಚನೆ

ವಿಜಯಪುರ: ಕುಡಿಯುವ ನೀರಿನ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಗ್ರಾ. ಪಂ. ಮಟ್ಟದಲ್ಲಿ ಗ್ರಾ. ಪಂ. ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚಿಸಿ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ನಿರ್ವಹಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಗ್ರಾಮ ಮಟ್ಟದಲ್ಲಿ ರಚಿತವಾಗುವ ಕಾರ್ಯಪಡೆ ಸಮಿತಿಯಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿ, ವಿಎ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ  ಇಲಾಖೆ ಸಹಾಯಕ ಅಭಿಯಂತರರನ್ನೊಳಗೊAಡ ಸಮಿತಿಯು […]

ಗುಮ್ಮಟ ನಗರಿಯಲ್ಲಿ ಮುಸ್ಲಿಂ ಬಾಂಧವರಿಂದ ಶ್ರದ್ಧಾ ಭಕ್ತಿಯಿಂದ ಬಕ್ರೀದ್ ಆಚರಣೆ

ವಿಜಯಪುರ: ಗುಮ್ಮಟ ನಗರಿ ವಿಜಯಪುರದಲ್ಲಿ ಮುಸ್ಲಿಂ ಬಾಂಧವರು ಶ್ರದ್ಧಾ ಭಕ್ತಿಯಿಂದ ಪವಿತ್ರ ಬಕ್ರೀದ್ ಹಬ್ಬವನ್ನು ಆಚರಿಸಿದರು.  ನಗರದ ನಾನಾ ಮಸೀದಿ ಮತ್ತು ಈದ್ಗಾಗಳಿಗೆ ತೆರಳಿದ ಸಾವಿರಾರು ಜನರು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು. ದಖನಿ ಈ ಮೈದಾನದಲ್ಲಿ ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರಿಫ್ ಸೇರಿದಂತೆ ನಾನಾ ಮುಖಂಡರು ವಿಶ್ವಶಾಂತಿಗಾಗಿ ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸಿದರು. ನಂತರ ಪರಸ್ಪರ ಆಲಂಗಿಸಿಕೊಂಡು ಶುಭಾಷಯ ವಿನಿಮಯ ಮಾಡಿಕೊಂಡರು.

ಪ್ರಧಾನಿ ಅಕ್ಕಿ ನೀಡುವ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿಕೆ- ಸಂಸದ ರಮೇಶ ಜಿಗಜಿಣಗಿ ತರಾಟೆ

ವಿಜಯಪುರ: ಪ್ರಧಾನ ಮಂತ್ರಿಗಳು ಅವರಪ್ಪನ ಮನೆಯಿಂದ ಅಕ್ಕಿ ಕೊಡುತ್ತಾರಾ? ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಿಂದೆ ಕಾಂಗ್ರೆಸ್ ಸರಕಾರ ಅಕ್ಕಿಯನ್ನು ಕೊಟ್ಟಿದ್ದು ಯಾರಪ್ಪನ ಮನೆಯಿಂದ? ಅದು ಸಹ ರಾಜ್ಯದ ಜನತೆಯ ಹಣದಿಂದಲೇ ಎಂಬುದು ಅವರು ಮರೆತಂತಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸದಾಗಿ ಸಿಎಂ ಆದ ಮೇಲೆ ಕೇವಲ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕೆ ಮಾಡುವುದೇ ಕಾಯಕವನ್ನಾಗಿ ಮಾಡಿಕೊಂಡಿದ್ದಾರೆ […]

ಬಸವ ನಾಡಿಗೆ ಬಂದು ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ತೆರಳಿ ದರ್ಶನ ಪಡೆದ ಖಾನಪುರ ಬಿಜೆಪಿ ಶಾಸಕ ವಿಠ್ಠಲ ಹಲಗೇಕರ

ವಿಜಯಪುರ: ಬೆಳಗಾವಿ ಜಿಲ್ಲೆಯ ಖಾನಾಪುರ ಬಿಜೆಪಿ ಶಾಸಕ ವಿಠ್ಠಲ ಹಲಗೇಕರ ಅವರು ನಗರದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದಾರೆ.  ಈ ಸಂದರ್ಭದಲ್ಲಿ ಉಪಸ್ಥಿತಿತರಿದ್ದ ಮಠದ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡ ಪ್ರಕಾಶ ಅಕ್ಕಲಕೋಟ ಶಾಸಕರನ್ನು ಆತ್ಮೀಯವಾಗಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಠದ ನಿರ್ದೇಶಕರಾದ ವಿಜಯ ಜೋಶಿ, ರಾಕೇಶ ಕುಲಕರ್ಣಿ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಡಬ್ಬಿ, ಗೋವಿಂದರಾಜ ದೇಶಪಾಂಡೆ, ಶ್ರೀಹರಿ ಕುಲಕರ್ಣಿ, ವೆಂಕಟೇಶ ಖಾಸನೀಸ, ವಿನಾಯಕ […]

ಯತ್ನಾಳರಿಂದ ಬಿಜೆಪಿಗೆ ಡ್ಯಾಮೇಜ್- ನಿರಾಣಿ: ನಾನಾರಿಗೂ ಹೆದರಲ್ಲ ನನ್ನ ರಾಜಕೀಯವೇ ಬೇರೆ- ಜಿಗಜಿಣಗಿ: ಯತ್ನಾಳ ಇಂಥ ರಾಜಕೀಯ ನಿಲ್ಲಿಸಲಿ- ನಡಹಳ್ಳಿ

ವಿಜಯಪುರ: ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಮಾಜಿ ಸಚಿವ ಮುರುಗೇಶ ನಿರಾಣಿ, ಸಂಸದ ರಮೇಶ ಜಿಗಜಿಣಗಿ ಮತ್ತು ಮಾಜಿ ಶಾಸಕ ಎ. ಎಸ್. ಪಾಟೀಲ ನಡಹಳ್ಳಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಮುರುಗೇಶ ನಿರಾಣಿ,  ಹೇಳಿಕೆ ಮತ್ತು ವರ್ತನೆಯಿಂದ ಬಿಜೆಪಿಗೆ ಡ್ಯಾಮೇಜ್ ಆಗಿದ್ದು, ಅವರ ಪಾಪದ ಕೊಡ ತುಂಬಿದೆ ಎಂದು ವಾಗ್ದಾಳಿ ನಡೆಸಿದರು. ಸಂಕೇಶ್ವರ ತ್ಯಾಗದಿಂದ ಯತ್ನಾಳ ಕೇಂದ್ರ ಸಚಿವರಾಗಿದ್ದರು ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ಅಂದಿನ […]

ಉತ್ತಮ ಆರೋಗ್ಯಕ್ಕೆ ಶುದ್ಧ ಕುಡಿಯುವ ನೀರು ಸೇವನೆ ಅತೀ ಮುಖ್ಯ- ಡಾ. ಆರ್. ಬಿ. ಕೊಟ್ನಾಳ

ವಿಜಯಪುರ: ಇಂದಿನ ದಿನಗಳಲ್ಲಿ ಉತ್ತಮ ಆರೋಗ್ಯಕ್ಕೆ ಶುದ್ಧ ಕುಡಿಯುವ ನೀರು ಸೇವನೆ ಮುಖ್ಯವಾಗಿದೆ ಎಂದು ಬಿ. ಎಲ್. ಡಿ. ಇ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಡಾ. ಆರ್. ಬಿ. ಕೊಟ್ನಾಳ ಹೇಳಿದ್ದಾರೆ. ನಗರದ ಬಿ.ಎಲ್.ಡಿಇ ಸಂಸ್ಥೆಯ ಎಸ್. ಎಸ್. ಪಿಯು ಕಾಲೇಜಿನಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಅವರು ಮಾತನಾಡಿದರು. ಮೂಲಭೂತ ಸೌಕರ್ಯಗಳಲ್ಲಿ ನೀರು ಪ್ರಮುಖವಾಗಿದೆ. ಈ ಹಿನ್ನೆಲೆಯಲ್ಲಿ ಎಸ್. ಎಸ್. ಪಿಯು ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆ ಜೊತೆಗೆ ಶುದ್ಧ ನೀರು ಕುಡಿಯುವ ವ್ಯವಸ್ಥೆ […]