ವರುಣನ ಕೃಪೆಗಾಗಿ ಸ್ಮಶಾನದಲ್ಲಿರುವ ಗೋರಿಗಳಿಗೆ ನೀರು ಹಾಕಿ ಪ್ರಾರ್ಥಿಸಿದ ಕಲಕೇರಿ ಜನ

ವಿಜಯಪುರ: ಮುಂಗಾರು ಹಂಗಾಮು ಆರಂಭವಾಗಿ ಜೂನ್ ತಿಂಗಳು ಮುಗಿಯುತ್ತ ಬಂದರೂ ಮೇಘರಾಜ ಮಳೆ ಸುರಿಸುತ್ತಿಲ್ಲ.  ವರಣನ ದೇವನ ಕೃಪೆಗಾಗಿ ಜನರು ಹಾತೊರಯುತ್ತಿದ್ದಾರೆ.  ಅದೇ ರೀತಿ ರಾಜ್ಯದಲ್ಲಿ ದೇವೇಂದ್ರ ಮಳೆ ಸುರಿಸಲಿ ಎಂದು ಜನರು ದೇವರ ಪೂಜೆ, ಶಿವಲಿಂಗಕ್ಕೆ ಜಲಪೂಜೆ, ಕತ್ತೆಗಳ ಮದುವೆ, ಕಪ್ಪೆಗಳ ಮದುವೆ, ಮಕ್ಕಳ ಸಾಂಕೇತಿಕ ಮದುವೆ ಮಾಡುವುದು ತಾವೆಲ್ಲರೂ ಕೇಳಿರ್ತೀರಿ ಮತ್ತು ನೋಡಿರ್ತೀರಿ.  ಆದರೆ, ಐತಿಹಾಸಿಕ ವಿಜಯಪುರ ಜಿಲ್ಲೆಯಲ್ಲಿ ಮಳೆಗಾಗಿ ಜನರು ವಿಚಿತ್ರ ಆಚರಣೆ ನಡೆಸಿದ ಘಟನೆ ತಾಳಿಕೋಟೆ ತಾಲೂಕಿನ ಕಲಕೇರಿ ಗ್ರಾಮದಲ್ಲಿ ನಡೆದಿದೆ.  […]

ಮಕ್ಕಳು, ಶಿಶು ಆರೈಕೆ ಅವಕಾಶ, ಸವಾಲು, ಸಂಶೋಧನೆಗಳ ಕುರಿತು ರಾಷ್ಟ್ರೀಯ ಸಮ್ಮೇಳನ

ವಿಜಯಪುರ: ದೇಶದಲ್ಲಿ ಶಿಶುಗಳು ಮತ್ತು ಮಕ್ಕಳಿಗೆ ಈವರೆಗೆ ನಡೆದ ಸಂಶೋಧನೆಗಳ ಫಲಿತಾಂಶದ ಆಧಾರದ ಮೇಲೆ ಚಿಕಿತ್ಸೆ ನೀಡಲಾಗುತ್ತಿದೆ.  ಈಗ ನಡೆಯುತ್ತಿರುವ ಸಂಶೋಧನೆಗಳಿಂದ ಮುಂಬರುವ ದಿನಗಳಲ್ಲಿ ಮಕ್ಕಳ ಆರೋಗ್ಯ ಮತ್ತಷ್ಟು ವೃದ್ಧಿಸಲಿದೆ ಎಂದು ರಿಷಿಕೇಶ ಏಮ್ಸ್ ನರ್ಸಿಂಗ್ ಕಾಲೇಜಿನ ಪ್ರಿನ್ಸಿಪಾಲ ಡಾ. ಸ್ಮೃತಿ ಅರೊರಾ ಹೇಳಿದ್ದಾರೆ.  ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ಶ್ರೀ. ಬಿ. ಎಂ. ಪಾಟೀಲ ನರ್ಸಿಂಗ ಕಾಲೇಜಿನಲ್ಲಿ ರಾಜೀವ ಗಾಂಧಿ ಆರೋಗ್ಯ ವಿಜ್ಙಾನ ವಿಶ್ವವಿದ್ಯಾಲಯದ ಸಹಯೋಗದಲ್ಲಿ ನಡೆದ ಮಕ್ಕಳ ಮತ್ತು ಶಿಶು ಆರೈಕೆಯ ಅವಕಾಶ, ಸವಾಲು ಹಾಗೂ […]

ಸಚಿವರಾದ ಎಂ. ಬಿ. ಪಾಟೀಲ, ಶಿವಾನಂದ ಪಾಟೀಲ, ಶಾಸಕ ವಿಠ್ಠಲ ಕಟಕದೊಂಡ ಅವರಿಗೆ ಹಾಲುಮತ ಪಟ್ಟದ ಪೂಜಾರಿಗಳ, ಜಡೆತಲೆ ಪೂಜಾರಿಗಳಿಂದ ಸನ್ಮಾನ

ವಿಜಯಪುರ: ಹಾಲುಮತ ಧರ್ಮದ ವಿಜಯಪುರ ಜಿಲ್ಲೆಯ ಪಟ್ಟದ ಪೂಜಾರಿಗಳ ಹಾಗೂ ಜಡೆತಲೆ ಪೂಜಾರಿಗಳ ಸಂಘದ ವತಿಯಿಂದ ಸಚಿವರಾದ ಎಂ. ಬಿ. ಪಾಟೀಲ, ಶಿವಾನಂದ ಪಾಟೀಲ ಹಾಗೂ ಶಾಸಕ ವಿಠ್ಠಲ ಕಟಕದೊಂಡ ಅವರನ್ನು ಸನ್ಮಾನಿಸಲಾಯಿತು. ಎಂ. ಬಿ. ಪಾಟೀಲ ಅವರ ನಿವಾಸಕ್ಕೆ ತೆರಳಿದ ಸಂಘದ ಪೂಜಾರಿಗಳು ಸಚಿವರನ್ನು ಕಂಬಳಿ ಮತ್ತು ಹೂಮಾಲೆ ಹಾಕಿ ಸನ್ಮಾನಿಸಿ ಗೌರವಿಸಿದರು. ನಂತರ ಸಚಿವ ಶಿವಾನಂದ ಪಾಟೀಲ ಅವರನ್ನು ಭೇಟಿ ಮಾಡಿದ ಪೂಜಾರಿಗಳು ಅವರನ್ನೂ ಸನ್ಮಾನಿಸಿ ಗೌರವಿಸಿದರು. ಅಷ್ಟೇ ಅಲ್ಲ, ನಾಗಠಾಣ(ಮೀ) ಕಾಂಗ್ರೆಸ್ ಶಾಸಕ […]

ವಿಜಯಪುರ ಜಿಓಸಿಸಿ ಬ್ಯಾಂಕಿನ ನಾನಾ ಡಿಜಿಟಲ್ ಸೇವೆಗಳಿಗೆ ಚಾಲನೆ ನೀಡಿದ ಸಚಿವ ಎಂ. ಬಿ. ಪಾಟೀಲ

ವಿಜಯಪುರ: ಜಿಲ್ಲೆಯಲ್ಲಿ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಸಂಸ್ಥೆಗಳು ಇಂದು ಬೃಹದಾಕಾರವಾಗಿ ಬೆಳೆಯಲು ವಚನಪಿತಾಮಹ ಡಾ. ಫ. ಗು. ಹಳಕಟ್ಟಿ, ಬಂಥನಾಳ ಶಿವಯೋಗಿಗಳು, ಸಾಠೆ, ಬಿ. ಎಂ. ಪಾಟೀಲ ಅವರಂಥ ಮಹನೀಯರ ದೂರದೃಷ್ಠಿ ಮತ್ತು ಕೊಡುಗೆ ಅಪಾರ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ನಗರದಲ್ಲಿರುವ ಸರಕಾರಿ ನೌಕರರ ಸಹಕಾರಿ (ಜಿಓಸಿಸಿ) ಬ್ಯಾಂಕಿನಲ್ಲಿ ಫೋನ್ ಪೆ, ಗೂಗಲ್ ಪೆ, ಮೊಬೈಲ್ […]

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಜೂ. 26ರಂದು ಗುಮ್ಮಟ ನಗರಿಗೆ ಭೇಟಿ

ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಒಂಬತ್ತು ವರ್ಷಗಳ ಸಾಧನೆಯನು ಜನರಿಗೆ ತಲುಪಿಸಲು ಜೂ. 26 ರಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗುಮ್ಮಟ ನಗರಿಗೆ ಭೇಟಿ ನೀಡಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ, ಜೂ. 26 ರಂದು ಮ. 3ಕ್ಕೆ ನಗರದ ಸಂಗನಬಸವ ಸಮುದಾಯ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಬಸವರಾಜ ಬೊಮ್ಮಾಯಿ ಕಾರ್ಯಕ್ರಮ ಉದ್ಗಾಟಿಸಲಿದ್ದಾರೆ ಎಂದು ತಿಳಿಸಿದರು. ಬಿಜೆಪಿ ಸರಕಾರದ ಒಂಬತ್ತು ವರ್ಷಗಳ […]

ಮಹಾರಾಷ್ಟ್ರದಿಂದ 3 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಮನವಿ ಮಾಡಲು ಕೆಡಿಪಿ ಸಭೆಯಲ್ಲಿ ನಿರ್ಣಯ

ವಿಜಯಪುರ: ಜಿಲ್ಲೆಯಲ್ಲಿ ಎದುರಾಗಬಹುದಾದ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಹಾರಾಷ್ಟ್ರ ಕೋಯ್ನಾ ಜಲಾಷಯದಿಂದ 3 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಸರಕಾರದಕ್ಕೆ ಮನವಿ ಮಾಡಲು ಜಿಲ್ಲಾ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.  ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಕುಡಿಯುವ ನೀರಿನ ಸಮಸ್ಯೆಗಳ ಕುರಿತು ವಿಸ್ತೃತ ಚರ್ಚೆ ನಡೆಯಿತು.  ಈಗಾಗಲೇ ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದಾಗಿ ಕೇವಲ ಶೇ. 1 ರಷ್ಟು ಮಾತ್ರ ಬಿತ್ತನೆಯಾಗಿದೆ.  ಅಲ್ಲದೇ, ಬಹುತೇಕ ಕೆರೆಗಳು ಬತ್ತಿದ್ದು, […]

ಕೆ ಇ ಆರ್ ಸಿ ವಿದ್ಯುತ್ ದರ ಹೆಚ್ಚಿಸಿದೆ- ಜುಲೈ ಮೊದಲ ವಾರ ದೆಹಲಿಗೆ ಭೇಟಿ ನೀಡುತ್ತೇನೆ- ಎಂ. ಬಿ. ಪಾಟೀಲ

ವಿಜಯಪುರ: ವಿದ್ಯುತ್ ದರ ಹೆಚ್ಚಳ ಸರಕಾರ ಕೈಗೊಂಡ ನಿರ್ಧಾರವಲ್ಲ.  ಅದು ಸ್ವಾಯತ್ತ ಸಂಸ್ಥೆಯಾಗಿರುವ ಕೆ. ಇ. ಆರ್‌. ಸಿ ಮಾಡಿರುವ ತೀರ್ಮಾನವಾಗಿದೆ.  ವಿದ್ಯುತ್ ದರ ಹೆಚ್ಚಳಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ಸರಕಾರ ಅಧಿಕಾರಕ್ಕೆ ಬರುವ ಮುಂಚೆಯೇ ಕೆ. ಇ. ಆರ್‌. ಸಿ ವಿದ್ಯುತ್ ದರ ಹೆಚ್ಚಳ […]

ಯೋಗಾಭ್ಯಾಸ ಆರೋಗ್ಯ ವೃದ್ದಿಗೆ ಸಹಕಾರಿಯಾಗಿದೆ: ನ್ಯಾಯಾಧೀಶ ನಲವಡೆ

ವಿಜಯಪುರ: ಪ್ರತಿದಿನ ಯೋಗಾಭ್ಯಾಸ ಮಾಡುವುದರಿಂದ ದೈಹಿಕ ಹಾಗೂ ಮಾನಸಿಕ ಸಮತೋಲನ ಕಾಪಾಡಿಕೊಳ್ಳುವುದಲ್ಲದೇ, ಸದೃಢ ಆರೋಗ್ಯ ಮತ್ತು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಯೋಗ ಸಹಕಾರಿಯಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್. ಎ. ನಲವಡೆ ಹೇಳಿದರು. ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ 9ನೇ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಸಂತೋಷ ಎಸ್. ಕುಂದರ, ವಕೀಲರ ಸಂಘದ ಅಧ್ಯಕ್ಷ ಐ. […]

ಜೀವನದಲ್ಲಿ ಯೋಗ ರೂಢಿಸಿಕೊಂಡು ಸದೃಢ ದೇಶ ನಿರ್ಮಾಣಕ್ಕೆ ಕೈ ಜೋಡಿಸಬೇಕು- ಸಂಸದ ರಮೇಶ ಜಿಗಜಿಣಗಿ ಕರೆ

ವಿಜಯಪುರ: ದೇಶದ ಋಷಿ ಮುನಿಗಳಿಂದ ಕೊಡುಗೆಯಾಗಿ ಬಂದ  ಬಹು ಪುರಾತನವಾದ ಯೋಗವನ್ನು ಪ್ರತಿಯೊಬ್ಬರು ಪ್ರತಿನಿತ್ಯ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು, ಸದೃಢ ಆರೋಗ್ಯ ಹೊಂದುವ ಮೂಲಕ ಸದೃಢ ದೇಶ ನಿರ್ಮಾಣಕ್ಕೆ ಕೈ ಜೋಡಿಸಬೇಕು  ಎಂದು ಸಂಸದ ರಮೇಶ ಜಿಗಜಿಣಗಿ ಅವರು ಕರೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆಯುಷ್ ಇಲಾಖೆ ಇವರ ಸಹಯೋಗದಲ್ಲಿ ನಗರದ ಡಾ. ಬಿ. ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಅವರು […]

ಇಂಡಿ ತಾಲೂಕಿನ ನಾನಾ ಕಡೆ ಕುಡಿಯುವ ನೀರು ಪೂರೈಕೆ ಪರಿಶೀಲನೆ ನಡೆಸಿದ ಸಿಇಓ ರಾಹುಲ ಶಿಂಧೆ- ಸಮರ್ಸೂಕ ನಿರೋದಗಿಸಲು ಅಧಿಕಾರಿಗಳಿಗೆ ಸೂಚನೆ

ವಿಜಯಪುರ: ಇಂಡಿ ತಾಲೂಕಿನ ವಿವಿಧ ಗ್ರಾಮಗಳಿಗೆ ಬುಧವಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಭೇಟಿ ನೀಡಿ ಕುಡಿಯುವ ನೀರಿನ ಕುರಿತು ಪರಿಶೀಲನೆ ನಡೆಸಿ, ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಕುಡಿಯುವ ನೀರು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇಂಡಿ ತಾಲೂಕಿನ ಬಸನಾಳ ಗ್ರಾಮ ಪಂಚಾಯಿತಿಯ ಮುಲ್ಲಾ ವಸ್ತಿಗೆ ಭೇಟಿ ನೀಡಿ ಅಲ್ಲಿನ ಜನರೊಂದಿಗೆ ಸಂವಾದ ನಡೆಸಿ, ಅಲ್ಲಿಯ ಸಾರ್ವಜನಿಕರ ಮನವಿಯ ಮೇರೆಗೆ ಮುಲ್ಲಾ ವಸ್ತಿಗೆ ಗ್ರಾಮದ […]