ಆರತಿ ಬೆಳಗಿ, ಕುಂಬಳಕಾಯಿ ಒಡೆದು ಪಿಎಸ್ಐ ಸ್ವಾಗತಿಸಿದ ಅಭಿಮಾನಿಗಳು- ಚಡಚಣಕ್ಕೆ ಬಂದ ಮಹಾದೇವ ಯಲಿಗಾರಗೆ ವಿನೂತನ ಗೌರವ

ವಿಜಯಪುರ: ಪೊಲೀಸ್ ಠಾಣೆಗೆ ಮೂರನೇ ಬಾರಿ ವರ್ಗವಾಗಿ ಬಂದ ಪಿ.ಎಸ್.ಐ ಯನ್ನು ಅವರ ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿ ವಿನೂತನ ರೀತಿಯಲ್ಲಿ ರೀತಿಯಲ್ಲಿ ಸ್ವಾಗತಿಸಿದ ಅಪರೂಪದ ವೆಲ್ ಕಮ್ ಕಾರ್ಯಕ್ರಮ ಭೀಮಾ ತೀರದ ಚಡಚಣ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಪಿ.ಎಸ್.ಐ. ಮಹಾದೇವ ಯಲಿಗಾರ 3ನೇ ಬಾರಿಗೆ ಚಡಚಣ ಪೊಲೀಸ್ ಠಾಣೆಗೆ ಪಿ.ಎಸ್.ಐ ಆಗಿ ವರ್ಗಾವಣೆಯಾಗಿ ಬಂದಿದ್ದಾರೆ.  ಈ ಹಿನ್ನೆಲೆಯಲ್ಲಿ ಚಡಚಣ ಪಟ್ಟಣದ ಅವರ ಅಭಿಮಾನಿಗಳು ಮತ್ತು ಪಟ್ಟಣದ ನಿವಾಸಿಗಳು ಐಬಿಯಿಂದ ಪೊಲೀಸ್ ಠಾಣೆಯವರೆಗೆ ಮೆರವಣಿಗೆಯಲ್ಲಿ ಕರೆತಂದು ಅಭಿಮಾನ ತೋರಿದರು.  […]

ಬಿ.ಎಲ್.ಡಿ.ಇ ಎಂಜಿನಿಯರಿಂಗ್ ಕಾಲೇಜಿಗೆ ಟೈಮ್ಸ್ ಸರ್ವೆಯಲ್ಲಿ ದೇಶದ 37ನೇ, ರಾಜ್ಯದ 5ನೇ ಅತ್ಯುತ್ತಮ ಎಂಜಿನಿಯರಿಂಗ್ ಕಾಲೇಜು ಸ್ಥಾನ

ವಿಜಯಪುರ: ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಇ ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿAಗ್ ಕಾಲೇಜಿಗೆ ರಾಷ್ಟ್ರ ಮಟ್ಟದಲ್ಲಿ 37ನೇ ಮತ್ತು ರಾಜ್ಯ ಮಟ್ಟದಲ್ಲಿ 5ನೇ ಅತ್ಯುತ್ತಮ ಎಂಜಿನಿಯರಿಂಗ್ ಕಾಲೇಜು ರ‍್ಯಾಂಕ ದೊರೆತಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಕಾಲೇಜಿನ ಪ್ರಾಚಾರ್ಯ ಡಾ. ವಿ. ಜಿ. ಸಂಗಮ, ಟಾಯಿಮ್ಸ್ ಆಫ್ ಇಂಡಿಯಾ ನಡೆಸಿದ ಪ್ರತಿಷ್ಠಿತ ಟೈಮ್ಸ್ ಎಂಜಿನಿಯರಿAಗ್ ಸರ್ವೆ- 2023ರ ಸಮೀಕ್ಷೆಯಲ್ಲಿ ಬಿ.ಎಲ್.ಡಿ.ಇ ಎಂಜಿನಿಯರಿAಗ್ ಕಾಲೇಜಿಗೆ ರಾಷ್ಟ್ರ ಮಟ್ಟದಲ್ಲಿ 37ನೇ, ರಾಜ್ಯ […]

ಯೋಗ ಜೀವನ ಪದ್ಧತಿಯಾಗಿದೆ- ಪ್ರತಿದಿನ ಮಾಡುವುದರಿಂದ ಉತ್ತಮ ದೈಹಿಕ, ಮಾನಸಿಕ ಆರೋಗ್ಯ ಸಾಧ್ಯ- ಪ್ರೊ. ವೈ. ಎನ್. ಜಯರಾಜ

ವಿಜಯಪುರ: ಯೋಗ ಅಲೋಪಥಿ, ಹೋಮಿಯೋಪಥಿ, ಆಯುರ್ವೇದ ಯಾವುದೂ ಅಲ್ಲ. ಇದು ಜೀವನದ ವಿಧಾನವಾಗಿದೆ ಎಂದು ವೂ ಅಲ್ಲಇದು ಜೀವನದ ವಿಧಾನವಾಗಿದೆ ಎಂದು ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕಲಾಧಿಪತಿ ಪ್ರೊ. ವೈ. ಎನ್. ಜಯರಾಜ ಹೇಳಿದ್ದಾರೆ. ವಿಶ್ವವಿದ್ಯಾಲಯದಲ್ಲಿ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ಗಾಟಿಸಿ ಅವರು ಮಾತನಾಡಿದರು. ಸದೃಢ ದೇಹ ಮತ್ತು ಮನಸ್ಸು ಮನುಷ್ಯನನ್ನು ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯವಂತ ಮತ್ತು ಬುದ್ದಿವಂತನನ್ನಾಗಿ ಮಾಡುತ್ತದೆ. 21ನೇ ಶತಮಾನದಲ್ಲಿ ಇದರ ಅಗತ್ಯ ಹೆಚ್ಚಾಗಿದೆ. ಭಾರತದ ಯೋಗ […]

ಕೇಂದ್ರ ಸರಕಾರದಿಂದ ದ್ವೇಷ ರಾಜಕಾರಣ ಆರೋಪ- ಗುಮ್ಮಟ ನಗರಿಯಲ್ಲಿ ಕೈ ಕಾರ್ಯಕರ್ತರಿಂದ ಪ್ರತಿಭಟನೆ

ವಿಜಯಪುರ: ಕೇಂದ್ರ ಸರಕಾರ ಅಕ್ಕಿ ವಿತರಣೆ ವಿಚಾರದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದ್ದು, ದ್ವೇಷ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಡಾ. ಬಿ. ಆರ್. ಅಂಬೇಡ್ಕರ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ನಾನಾ ಮುಖಂಡರು, ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದ ಜನತೆಗೆ ಐದು ಜನಪರ ಗ್ಯಾರಂಟಿ ಯೋಜನೆಗಳನ್ನು ನೀಡುವುದಾಗಿ ಹೇಳಿತ್ತು.  ಅದರಲ್ಲಿ ಅನ್ನಭಾಗ್ಯ ಯೋಜನೆಯೂ ಒಂದಾಗಿದೆ.  ರಾಜ್ಯ ಹಸಿವು ಮುಕ್ತವಾಗಬೇಕು ಎಂಬ ಒಳ್ಳೆಯ ಉದ್ದೇಶದಿಂದ ಬಡವರಿಗೆ ತಲಾ 10 […]

ಅನ್ನಭಾಗ್ಯ ಅಕ್ಕಿ ವಿಚಾರ- ಕೇಂದ್ರ ಈ ಯೋಜನೆಯಡಿ ನೀಡುವ ಅಕ್ಕಿ ಪ್ರಮಾಣ, ಸರಕಾರದ ಪಾತ್ರದ ಬಗ್ಗೆ ಸಿಎಂ ಸ್ಪಷ್ಟಪಡಿಸಲಿ- ರಮೇಶ ಜಿಗಜಿಣಗಿ

ವಿಜಯಪುರ: ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರಕಾರ ನೀಡುವ ಅಕ್ಕಿ ಪ್ರಮಾಣ ಮತ್ತು ಇದರಲ್ಲಿ ರಾಜ್ಯ ಸರಕಾರದ ಪಾತ್ರವನ್ನು ಮುಖ್ಯಮಂತ್ರಿ ಎಸ್. ಸಿದ್ಧಾರಮಯ್ಯ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಆಗ್ರಹಿಸಿ್ದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಈ ಯೋಜನೆಯಲ್ಲಿ ಕೇಂದ್ರ ಸರಕಾರದ ಪಾತ್ರವನ್ನು ಸ್ಪಷ್ಟವಾಗಿ ಜನರ ಮುಂದೆ ಹೇಳುವ ಮೂಲಕ ಜನರಲ್ಲಿರುವ ಗೊಂದಲವನ್ನು ನಿವಾರಿಸಬೇಕು ಎಂದು ಒತ್ತಾಯಿಸಿದ್ದಾರೆ. ಅಕ್ಕಿ ವಿಷಯವಾಗಿ ದಿನಕ್ಕೊಂದು ಹೇಳಿಕೆ ನೀಡುವ ಮೂಲಕ ರಾಜ್ಯ ಸರಕಾರ ಜನರ ದಿಕ್ಕು […]

ವಿದ್ಯುತ್ ದರ ಹೆಚ್ಚಳಕ್ಕೆ ವಿರೋಧ- ಜೂ. 22 ರಂದು ವಿಜಯಪುರ ಬಂದ್ ಗೆ ಕರೆ ನೀಡಿದ ನಾನಾ ಸಂಘಟನೆಗಳು

ವಿಜಯಪುರ: ವಿದ್ಯುತ್ ದರ ಹೆಚ್ಚಳ ವಿರೋಧಿಸಿ ನಾನಾ ಸಂಘಟನೆಗಳು ಜೂ. 22ರಂದು ವಿಜಯಪುರ ಬಂದ್ ಕರೆ ನೀಡಿವೆ. ಮರ್ಚಂಟ್ಸ್ ಅಸೋಸಿಯೇಶನ್ ಅಧ್ಯಕ್ಷ ರವೀಂದ್ರ ಬಿಜ್ಜರಗಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಾನಾ ಸಂಘಟನೆಗಳ ಮುಖಂಡರು ಪಾಲ್ಗೋಂಡು ಈ ನಿರ್ಧಾರ ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ನಾನಾ ಮುಖಂಡರು, ರಾಜ್ಯ ಸರಕಾರ ವಿದ್ಯುತ ದರವನ್ನು ಅವೈಜ್ಞಾನಿಕವಾಗಿ ಹೆಚ್ಚಳ ಮಾಡಿದೆ.  ಇದರಿಂದಾಗಿ ಕೈಗಾರಿಕೋದ್ಯಮಕ್ಕೆ ಹೊಡೆತ ಬೀಳಲಿದೆ.  ಗ್ರಾಹಕರಿಗೂ ಇದು ಹೊರೆಯಾಗಲಿದೆ.  ಇಂದಿನ ಸ್ಪರ್ಧಾತ್ಮಕ ದಿನಗಳಲ್ಲಿ ಔದ್ಯೋಗಿಕ ರಂಗ, ಆಯಿಲ್ ಮಿಲ್, ಜಿನ್ನಿಂಗ […]

ಮತಾಂತರ ನಿಷೇಧ ಕಾನೂನು ಹಿಂಪಡೆಯುವ ಸರಕಾರದ ನಿರ್ಧಾರಕ್ಕೆ ವಿರೋಧ- ವಿ ಎಚ್ ಪಿ ಕಾರ್ಯಕರ್ತರಿಂದ ಪ್ರತಿಭಟನೆ, ಮನವಿ ಪತ್ರ ಸಲ್ಲಿಕೆ

ವಿಜಯಪುರ: ರಾಜ್ಯ ಸರಕಾರ ಮತಾಂತರ ನಿಷೇಧ ಕಾನೂನನ್ನು ಹಿಂಪಡೆಯಲು ನಿರ್ಧರಿಸಿರುವುದನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.  ಅಲ್ಲದೇ, ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿಶ್ವ ಹಿಂದೂ ಪರಿಷತ ಕರ್ನಾಟಕ ಉತ್ತರ ಪ್ರಾಂತ ಪ್ರಚಾರ ಪ್ರಸಾರ ಪ್ರಮುಖ ಸುನೀಲ ಭೈರವಾಡಗಿ, ಭಾರತವು ಹಿಂದೂ ರಾಷ್ಟ್ರವಾಗಿದ್ದು ಇಲ್ಲಿ ಹಿಂದುಗಳೊಡನೆ ಅನ್ಯ ಧರ್ಮೀಯರೂ ಸಹ ಸಹಬಾಳ್ವೆಯನ್ನು ಮಾಡಲು ಸಂವಿಧಾನ ಅವಕಾಶ ಮಾಡಿಕೊಟ್ಟಿದೆ.  ಅದರಂತೆ ಕರ್ನಾಟಕದಲ್ಲಿಯೂ ಹಿಂದೂಗಳೊಡನೆ, ಅನ್ಯ ಧರ್ಮೀಯರೂ ಸಹ ತಮ್ಮ […]

ಜುಲೈ 2ರಂದು ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಜನ್ಮದಿನ- ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಪೂರ್ವಭಾವಿ ಸಭೆ

ವಿಜಯಪುರ: ಜಿಲ್ಲಾಡಳಿತ ವತಿಯಿಂದ ಜುಲೈ 2ರಂದು ವಚನಫಿತಾಮಹ ಡಾ. ಫ. ಗು. ಹಳಕಟ್ಟಿ ಅವರ ರಾಜ್ಯ ಮಟ್ಟದ ಜನ್ಮದಿನ- ವಚನ ಸಾಹಿತ್ಯ ಸಂರಕ್ಷಣೆ ದಿನ ಅಂಗವಾಗಿ ಅತ್ಯಂತ ಅರ್ಥಪೂರ್ಣವಾಗಿ ಕಾರ್ಯಕ್ರಮ ಆಯೋಜಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಸೂಚನೆ ನೀಡಿದ್ದಾರೆ.  ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜುಲೈ 2ರಂದು ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಅವರ ಜನ್ಮದಿನದ ಅಂಗವಾಗಿ […]

ಮಕ್ಕಳಿಗಾಗಿ ಹಗಲಿರುಳು ದುಡಿಯುವ ತಂದೆಗೆ ಎಷ್ಟೇ ಕೃತಜ್ಞತೆ ಸಲ್ಲಿಸಿದರೂ ಕಡಿಮೆ- ಶಿವಾಜಿ ಗಾಯಕವಾಡ

ವಿಜಯಪುರ: ಮಕ್ಕಳಿಗಾಗಿ ಹಗಲಿರುಳು ದುಡಿದು ಮಕ್ಕಳ ಭವಿಷ್ಯ ಉಜ್ವಲಗೊಳಿಸುವ ತಂದೆ. ತನ್ನ ವೈಯಕ್ತಿಕ ಹಿತಾಸಕ್ತಿಗಳನ್ನು ಬದಿಗೊತ್ತಿ ಕುಟುಂಬದ ಅಭ್ಯುದಯಕ್ಕೆ ಶ್ರಮಿಸುತ್ತಾನೆ ಎಂದು ನಗರದ ಪ್ರತಿಷ್ಠಿತ ಛತ್ರಪತಿ ಶಿವಾಜಿ ಮಹಾರಾಜರ ಎಜ್ಯುಕೇಷನ್ ಸೊಸೈಟಿ ಅಧ್ಯಕ್ಷ ಶಿವಾಜಿ ಗಾಯಕವಾಡ ಹೇಳಿದ್ದಾರೆ. ರವೀಂದ್ರನಾಥ ಠಾಗೋರ ಶಾಲೆಯಲ್ಲಿ ನಡೆದ ಫಾದರ್ಸ್ ಡೇ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಂದೆ ಮತ್ತು ಮಕ್ಕಳ ಪ್ರೀತಿ ವರ್ಣಿಸಲಸದಳ.  ತಂದೆಯ ಬಗ್ಗೆ ಎಷ್ಟೇ ಹೇಳಿದರೂ ಕಡಿಮೆ ಎಂದು ಅವರು ಹೇಳಿದರು.     ಶಾಲೆಯ ಪ್ರಿನ್ಸಿಪಾಲ್ […]

30 ವರ್ಷದ ವ್ಯಕ್ತಿಗೆ 13 ತಿಂಗಳ ಮೃತ ಮಗುವಿನ ಮೂತ್ರ ಪಿಂಡದ ಯಶಸ್ವಿ ಕಸಿ ಮಾಡಿದ ವೈದ್ಯರು- ವಿಶ್ವದಲ್ಲಿಯೇ ಅತೀ ಅಪರೂಪದ ಪ್ರಕರಣ

ಬೆಂಗಳೂರು: ಕೇವಲ 13 ತಿಂಗಳ ಮಗುವಿನ ಎರಡೂ ಮೂತ್ರಪಿಂಡಗಳನ್ನು 30 ವರ್ಷದ ವ್ಯಕ್ತಿಗೆ ಯಶಸ್ವಿಯಾಗಿ ರೋಬೋಟಿಕ್‌ ಎನ್‌-ಬ್ಲಾಕ್‌ ವಿಧಾನದ ಮೂಲಕ ವೈದ್ಯರು ಕಸಿ  ಮಾಡುವಲ್ಲಿ ಯಶಸ್ವಿಯಾದ ವಿಶ್ವದಲ್ಲಿಯೇ ಅತೀ ಅಪರೂಪದ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ.    ಫೋರ್ಟಿಸ್‌ ಆಸ್ಪತ್ರೆಯ ಮೂತ್ರಶಾಸ್ತ್ರ, ಯುರೋ-ಆಂಕೊಲಾಜಿ ಮತ್ತು ರೋಬೋಟಿಕ್ ಸರ್ಜರಿ ಹಿರಿಯ ನಿರ್ದೇಶಕ ಮೋಹನ್ ಕೇಶವಮೂರ್ತಿ, ಡಾ. ಶ್ರೀಹರ್ಷ ಹರಿನಾಥ ಅವರನ್ನೊಳಗೊಂಡ ತಜ್ಞವೈದ್ಯರ ತಂಡ ಈ ಅಪರೂಪದ ಯಶಸ್ವಿ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ನಡೆಸಿ ಗಮನ ಸಳೆದಿದೆ. ಈ ಕುರಿತು ಮಾತನಾಡಿದ ಡಾ. […]