ಗೋವುಗಳ ಗಣಿಯಾಗಲಿ- ಲದ್ದಿಜೀವಿಗಳ ಮೂಲಕ ರಚಿಸಿದ ಪಠ್ಯಕ್ರಮವನ್ನು ಬುದ್ದಿಜೀವಿಗಳ ಮೂಲಕ ತಿದ್ದುವ ಕೆಲಸ ನಡೆದಿದೆ- ಎಸ್. ಎಂ. ಪಾಟೀಲ ಗಣಿಹಾರ

ವಿಜಯಪುರ: ಗೋವುಗಳ ಗಣತಿ ನಡೆಯಬೇಕು.  ಯಾವ ಆರ್‌ ಎಸ್‌ ಎಸ್ ನಾಯಕರು ಗೋವುಗಳನ್ನು ಪೋಷಿಸುತ್ತಿದ್ದಾರೆ? ಗೋವುಗಳನ್ನು ಹೇಗೆ ಸಾಕುತ್ತಿದ್ದಾರೆ ಎಂಬ ಬಗ್ಗೆಯೂ ಗಣತಿ ನಡೆಯಬೇಕು ಎಂದು ಕೆಪಿಸಿಸಿ ವಕ್ತಾರ ಎಸ್. ಎಂ. ಪಾಟೀಲ ಗಣಿಹಾರ ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಗೆ ನಿಜವಾಗಿಯೂ ಗೋವುಗಳಿಗೆ ಕಾಳಜಿ ಇದ್ದರೆ ಕೂಡಲೇ ಗೋಮುಕ್ತಿ ಕಾನೂನು ಜಾರಿಗೊಳಿಸಿ ಅನುಷ್ಠಾನಗೊಳಿಸಬೇಕು.  ಗೋವುಗಳ ರಕ್ಷಣೆ ಬಗ್ಗೆ ಮಾತನಾಡುವ ಅನೇಕರು ಕೋವಿಡ್ ಸಂದರ್ಭದಲ್ಲಿ ತಮ್ಮ ಸಂಬಂಧಿಕರ ಅಂತ್ಯಕ್ರಿಯೆ ಮಾಡಲಿಲ್ಲ.  ಗೋವುಗಳನ್ನು ಸಾಕಲು ಬಾರದವರು, ಗೋವುಗಳನ್ನು […]

ಜೂ. 20 ರಂದು ವಿಜಯಪುರದಲ್ಲಿ ದ್ರಾಕ್ಷಿ ಬೆಳೆಗಾರರ ಸಮಸ್ಯೆ ಚರ್ಚೆ ಕುರಿತು ಪೂರ್ವಭಾವಿ ಸಭೆ

ವಿಜಯಪುರ: ಕರ್ನಾಟಕ ದ್ರಾಕ್ಷಿ ಬೆಳೆಗಾರರ ಸಂಘದ ವತಿಯಿಂದ ಜೂ. 20 ರಂದು ಮಂಗಳವಾರ ದ್ರಾಕ್ಷಿ ಬೆಳೆಗಾರರ ಸಮಸ್ಯೆ ಕುರಿತು ಚರ್ಚಿಸಲು ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಎಂದು ಕರ್ನಾಟಕ ದ್ರಾಕ್ಷಿ ಬೆಳೆಗಾರರ ಸಂಘದ ಅಧ್ಯಕ್ಷ ಡಾ. ಕೆ. ಎಚ್. ಮುಂಬಾರಡ್ಡಿ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಜೂ. 20 ರಂದು ಬೆ. 11ಕ್ಕೆ ವಿಜಯಪುರ ನಗರದ ಜಿಲ್ಲಾ ಪಂಚಾಯಿತಿ ಹತ್ತಿರದ ಕನಕದಾಸ ಬಡಾವಣೆಯಲ್ಲಿರುವ ಕೃಷಿ ತಂತ್ರಜ್ಞಾನ ಸಂಸ್ಥೆಯಲ್ಲಿ ಒಣ ದ್ರಾಕ್ಷಿ ಸಮಸ್ಯೆ ಕುರಿತು […]

ಆಲಮೇಲದಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲು ಜಿಲ್ಲಾಧಿಕಾರಿ ಡಾ. ದಾನಮ್ಮನವರ ಸೂಚನೆ

ವಿಜಯಪುರ: ನೂತನ ತಾಲೂಕು ಕೇಂದ್ರವಾಗಿರುವ ಆಲಮೇಲದಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ತಹಸೀಲ್ದಾರಗೆ ಸೂಚನೆ ನೀಡಿದ್ದಾರೆ. ಆಲಮೇಲದ ರಾಯಲ್ ಫಂಕ್ಷನ್ ಹಾಲ್‍ನಲ್ಲಿ ನಡೆದ ಮೀಸಲಾತಿ ನಿಗದಿ ಸಭೆಯ ನಂತರ ಆಲಮೇಲ ನಗರದಲ್ಲಿ ಮಿನಿ ವಿಧಾನಸೌಧ ನಿರ್ಮಾಣದ ಉದ್ದೇಶಿತ ಸ್ಥಳಕ್ಕೆಅವರು ಸಿಂದಗಿ ಶಾಸಕ ಅಶೋಕ ಮನಗೂಳಿ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಯುಕೆಪಿ ಕ್ವಾಟರ್ಸ್ ಸರ್ವೆ ನಂಬರ್ 606ರಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಪ್ರಸ್ತಾವನೆ ಸಿದ್ಧಪಡಿಸಿ ಸಲ್ಲಿಸುವಂತೆ ಡಿಸಿ […]

ಮಹಿಳೆಯರ ಶಕ್ತಿ- ಮುರಿದು ಕೈಗೆ ಬಂದ ಬಸ್ ಬಾಗಿಲು- ಪೆಚ್ಚು ಮೋರೆ ಹಾಕಿ ನಿಂತ ಕಂಡಕ್ಟರ್

ಚಾಮರಾಜನಗರ: ಉಚಿತವಾಗಿ ಪ್ರಯಾಣಿಸಲು ಬಸ್ಸು ಹತ್ತುವಾಗ ಮಹಿಳೆಯರು ಶಕ್ತಿ ಪ್ರದರ್ಶನ ತೋರಿದ ಹಿನ್ನೆಲೆಯಲ್ಲಿ ಬಸ್ ಬಾಗಿಲು ಮುರಿದು ಕೈಗೆ ಬಂದ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ಬಸ್ ನಿಲ್ದಾಣದಲ್ಲಿ ನಡೆದಿದೆ.  ರಾಜ್ಯ ಸರಕಾರ ಬಸ್ಸಿನಲ್ಲಿ ಮಹಿಳೆಯರು ಉಚಿತವಾಗಿ ಸಂಚರಿಸಲು ಶಕ್ತಿ ಯೋಜನೆ ಘೋಷಿಸಿದ್ದು, ಈಗ ಮಹಿಳೆಯರು ಹೆಚ್ಚು ಪ್ರಯಾಣ ಮತ್ತು ಪ್ರವಾಸ ಆರಂಭಿಸಿದ್ದಾರೆ.  ಈ ಯೋಜನೆ ಮಹಿಳೆಯರ ಪಾಲಿಗೆ ವರದಾನವಾಗಿದೆ.  ಆದರೆ, ಈ ಯೋಜನೆ ಜಾರಿಯಿಂದಾಗಿ ಪ್ರತಿದಿನ ಒಂದಿಲ್ಲೊಂದು ಪ್ರಸಂಗಗಳು ನಗೆ ಮತ್ತು ಅಚ್ಚರಿ ತರಿಸುತ್ತಿವೆ. ಇಂಥದ್ದೆ […]

ಬಸವನಾಡಿನಲ್ಲಿ ಮಣ್ಣೆತ್ತಿನ ಅಮವಾಸ್ಯೆ ಸಂಭ್ರಮ- ಮಣ್ಣಿನ ಜೋಡೆತ್ತು ವ್ಯಾಪಾರಕ್ಕೆ ಉತ್ತಮ ಪ್ರತಿಕ್ರಿಯೆ

ವಿಜಯಪುರ: ಕಳೆದ ಎರಡ್ಮೂರು ವರ್ಷಗಳಿಂದ ಕೊರೊನಾದಿಂದಾಗಿ ಕಳೆಗುಂದಿದ್ದ ಕಾರಹುಣ್ಣಿಮೆ ಈ ಬಾರಿ ಗತವೈಭವಕ್ಕೆ ಮರಳಿತ್ತು.  ಅದೇ ರೀತಿ ಈಗ ಮಣ್ಣೆತ್ತಿನ ಅಮವಾಸ್ಯೆಗೂ ಮತ್ತೆ ಹಳೆಯ ಕಳೆ ಬಂದಿದೆ.  ಉತ್ತರ ಕರ್ನಾಟಕ ಅದರಲ್ಲೂ ಬಸವನಾಡು ವಿಜಯಪುರ ಜಿಲ್ಲೆಯಲ್ಲಿ ರೈತರಿಗೆ ಎತ್ತುಗಳೆಂದರೆ ಕುಟುಂಬ ಸದಸ್ಯರಿದ್ದಂತೆ.  ಅವುಗಳ ಬಗ್ಗೆ ರೈತರಿಗೆ ಇರುವ ಪ್ರೀತಿ, ವಿಶ್ವಾಸ ವರ್ಣಿಸಲು ಸಾಧ್ಯವಿಲ್ಲ.  ಮುಂಗಾರು ಹಂಗಾಮು ಆರಂಭವಾಗುತ್ತಿದ್ದಂತೆ ಬರುವ ಮಣ್ಣೆತ್ತಿನ ಅಮವಾಸ್ಯೆ ದಿನ ರೈತರು ಎತ್ತುಗಳ ಪೂಜೆ ಮಾಡುತ್ತಾರೆ.  ಮಣ್ಣೆತ್ತಿನ ಅಮವಾಸ್ಯೆ ದಿನ ಎತ್ತುಗಳು ಇಲ್ಲದವರು ಮಣ್ಣಿನಿಂದ […]

ಸಚಿವ ಎಂ. ಬಿ. ಪಾಟೀಲರ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಡಾ. ಮಹಾಂತೇಶ ಬಿರಾದಾರ ನೇಮಕ

ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಡಾ. ಮಹಾಂತೇಶ ಬಿರಾದಾರ ಅವರನ್ನು ನೇಮಕ ಮಾಡಲಾಗಿದೆ.  ಸದಾ ಸಮಾಜಪರ ಚಟುವಟಿಕೆಯಿಂದ ಹೆಸರು ಮಾಡಿರುವ ಡಾ. ಮಹಾಂತೇಶ ಬಿರಾದಾರ ಅವರು ಎಂ. ಬಿ. ಪಾಟೀಲರು ಈ ಹಿಂದೆ ಜಲಸಂಪನ್ಮೂಲ ಸಚಿವರಾಗಿದ್ದಾಗ ಮಾಧ್ಯಮ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದಾರೆ.  ಈಗ ಅವರನ್ನು ಸಚಿವ ಎಂ. ಬಿ. ಪಾಟೀಲ ಅವರ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ನೇಮಕ ಮಾಡಲಾಗಿದೆ.  […]

ಜೂ. 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಅರ್ಥಪೂರ್ಣವಾಗಿ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆಯುಷ್ ಇಲಾಖೆ ಸಹಯೋಗದಲ್ಲಿ ಜೂ. 21 ರಂದು ಜಿಲ್ಲೆಯಲ್ಲಿ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಪೂರ್ವಸಿದ್ದತೆ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ನಗರದ ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ ಕ್ರೀಡಾಂಗಣದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಅಂದು ಬೆ. 6 ರಿಂದ ಬೆ. 7.30ರ ವರೆಗೆ ಈ ಕಾರ್ಯಕ್ರಮ ನಡೆಯಲಿದೆ.  ಆಯುರ್ವೇದ, […]

ರಕ್ತದಾನ ರೋಗಿಗಳ ಜೀವ ಉಳಿಸುವುದಷ್ಟೇ ಅಲ್ಲ, ದಾನಿಗಳ ಆರೋಗ್ಯಕ್ಕೂ ಪೂರಕವಾಗಿದೆ- ಶಾಲ್ಮೊನ್ ಚೋಪಡೆ

ವಿಜಯಪುರ: ರಕ್ತದಾನ ಮಹಾದಾನ. ರಕ್ತದಾನ ಮಾಡುವುದರಿಂದ ಜನರ ಜೀವ ಉಳಿಸಲು ಸಾಧ್ಯ ಮತ್ತು ರಕ್ತದಾನ ಮಾಡುವುದರಿಂದ ದಾನಿಗಳೂ ಆರೋಗ್ಯವಂತರಾಗಲು ಸಹಾಯವಾಗುತ್ತದೆ ಎಂದು ಬಿ.ಎಲ್.ಡಿ.ಇ ನರ್ಸಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಶಾಲ್ಮೊನ್ ಚೋಪಡೆ ಹೇಳಿದ್ದಾರೆ. ಕಾಲೇಜಿನಲ್ಲಿ ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ನಗರದ ಬಿ. ಎಲ್. ಡಿ. ಇ ನರ್ಸಿಂಗ್ ಕಾಲೇಜಿನಲ್ಲಿ ಎನ್ ಎಸ್ ಎಸ್ ಸಹಯೋಗದಲ್ಲಿ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪಪ್ರಾಚಾರ್ಯೆ ಪ್ರೋ. ಸುಚಿತ್ರಾ ರಾಟಿ, ಎನ್. ಎಸ್. ಎಸ್. […]

ಪ್ರಧಾನಿ ಮೋದಿ, ಪಕ್ಷ ನನಗೆ ಟಿಕೆಟ್ ಕೊಡುತ್ತಾರೆ- ಹೊಟ್ಟೆ ಉರಿ ಇರುವವರು ಟಿಕೆಟ್ ಸಿಗಲ್ಲ ಎಂದು ಅಪಪ್ರಚಾರ ಮಾಡ್ತಾರೆ- ಸಂಸದ ರಮೇಶ ಜಿಗಜಿಣಗಿ ವಾಗ್ದಾಳಿ

ವಿಜಯಪುರ: ಲೋಕಸಭೆ ಟಿಕೆಟ್ ಕೈತಪ್ಪುವುದಿಲ್ಲ.  ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷ ನನಗೆ ಅನ್ಯಾಯ ಮಾಡುವುದಿಲ್ಲ ಎಂದು ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಹಿರಿಯ ಸಂಸದರಿಗೆ ಬಿಜೆಪಿ ಟಿಕೆಟ್ ಕೈತಪ್ಪಲಿದೆ ಎಂಬ ವದಂತಿಗಳಿಗೆ ಖಾರವಾಗಿ ಪ್ರತಿಕ್ರಿಯೆ ನೀಡಿದರು. ಹೊಟ್ಟೆ ಉರಿಯುವವರು ಹಿರಿಯರಿಗೆ ಬಿಜೆಪಿಯಲ್ಲಿ ಟಿಕೆಟ್ ಸಿಗುವುದಿಲ್ಲ ಎಂದು ಹೇಳುತ್ತಾರೆ.  ಯಾವುದೇ ಪಟ್ಟಿ ಇದ್ದರೂ ಅದರಲ್ಲಿ ರಮೇಶ ಜಿಗಜಿಣಗಿ ಹೆಸರನ್ನು ದುರುದ್ದೇಶದಿಂದ ಸೇರಿಸಿ ಅಪಪ್ರಚಾರ ಮಾಡುತ್ತಾರೆ ಎಂದು […]

ಕಾನಿಪ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ನೇತೃತ್ವದಲ್ಲಿ ಸಿಎಂ ಸಿದ್ಧರಾಮಯ್ಯ ಭೇಟಿ ಮಾಡಿದ ಪತ್ರಕರ್ತರು- ನಾನಾ ಬೇಡಿಕೆ ಈಡೇರಿಸಲು ಮನವಿ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕಾನಿಪ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗವು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿತು. ರಾಜ್ಯದ ಪತ್ರಕರ್ತರ ಕ್ಷೇಮಾಭಿವೃದ್ಧಿಗಾಗಿ ರೂ. 500 ಕೋ. ಅನುದಾನವನ್ನು ಮೀಸಲಿಡುವುದಾಗಿ ಕಾಂಗ್ರೆಸ್ ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿರುವುದಕ್ಕಾಗಿ ಧನ್ಯವಾದಗಳನ್ನು ಸಲ್ಲಿಸಿದರು.  ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್, ಯಶಸ್ವಿನಿ ಯೋಜನೆಗೆ ಪತ್ರಕರ್ತರ ಸೇರ್ಪಡೆ,  ಮಾಸಾಶನ ಹೆಚ್ಚಳ, ಕಾರ್ಮಿಕ ಇಲಾಖೆಯ ಮೂಲಕ ಅಗತ್ಯ ಸೌಲಭ್ಯಗಳು, ಸೇರಿದಂತೆ ಇನ್ನಿತರ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳ […]