ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರು ಇಡಲಾಗುವುದು- ಎಂ. ಬಿ. ಪಾಟೀಲ

ವಿಜಯಪುರ: ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಬ್ರಿಟೀಷರ ವಿರುದ್ಧ ಹೋರಾಡಿದ ಧೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ ಅವರ ಹೆಸರು ಇಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಭೂತ ಸೌಕರ್ಯ ಅಭಿವೃದ್ಧಿ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದ ವತಿಯಿಂದ ಆಯೋಜಿಸಲಾದ ಮಹಿಳೆಯರಿಗೆ ನಗರ ಸಾರಿಗೆ, ಸಾಮಾನ್ಯ ಹಾಗೂ ವೇಗದೂತ ಸರಕಾರಿ ಬಸ್ಸುಗಳಲ್ಲಿ ಉಚಿತ […]

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಬಹುಭಾಷೆಗಳ ಜ್ಞಾನ, ಸಂವಹನ ಕೌಶಲ್ಯ ಅಗತ್ಯ- ಪ್ರೊ. ವಿಷ್ಣು ಎಂ. ಶಿಂಧೆ

ವಿಜಯಪುರ: ಇಂದಿನ ಸ್ಪರ್ಧಾತ್ಮ ದಿನಳಲ್ಲಿ ಬಹುಭಾಷೆಗಳ ಜ್ಞಾನ, ಸಂವಹನ ಕೌಶಲ್ಯಗಳು ಅದರಲ್ಲೂ ಇಂಗ್ಲೀಷ್ ಭಾಷೆಯ ಜ್ಞಾನವು ಉದ್ಯೋಗ ಪಡೆಯುವಲ್ಲಿ ಬಹುಮುಖ್ಯವಾಗಿದೆ ಎಂದು ಮಹಿಳಾ ವಿವಿಯ ಶಿಕ್ಷಣ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ. ವಿಷ್ಣು ಎಂ. ಶಿಂದೆ ಹೇಳಿದರು. ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯ ಹಾಗೂ ಬೆಂಗಳೂರಿನ ಉನ್ನತಿ ಫೌಂಡೇಶನ್ ಸಹಯೋಗದಲ್ಲಿ ನಡೆದ ಒಂದು ತಿಂಗಳ ಕೌಶಲ್ಯ ಅಭಿವೃದ್ಧಿ ತರಬೇತಿ ಶಿಬಿರ ಇಂಗ್ಲೀಷ್ ಸಂವಹನ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಯಾವುದೇ ಭಾಷೆಯನ್ನು […]

ಅಧಿಕಾರಿಗಳು ವಿಜಯಪುರವನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಲು ಶ್ರಮಿಸಬೇಕು- ಲೋಕಾಯುಕ್ತ ನ್ಯಾ. ಬಿ. ಎಸ್. ಪಾಟೀಲ –

ವಿಜಯಪುರ: ಜಿಲ್ಲೆಯ ಮಕ್ಕಳಿಗೆ ಉತ್ಕೃಷ್ಣ, ಗುಣಮಟ್ಟವಾದ ಶಿಕ್ಷಣ, ವಿವಿಧ ವಸತಿ ನಿಲಯಗಳ ವಿದ್ಯಾರ್ಥಿಗಳು ಹಾಗೂ ಅಂಗನವಾಡಿ ಮಕ್ಕಳ ಆರೋಗ್ಯ ಕಾಳಜಿ, ತ್ಯಾಜ್ಯ ನಿರ್ವಹಣೆ, ನಗರದ ಸ್ವಚ್ಛತೆ, ಕುಡಿಯುವ ನೀರು ಸೇರಿದಂತೆ ಜನರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಮಾದರಿಯಾಗಿ ಕಾರ್ಯನಿರ್ವಹಿಸುವ ಮೂಲಕ ಮಾದರಿ ಜಿಲ್ಲೆಯನ್ನಾಗಿಸಲು ಶ್ರಮಿಸುವಂತೆ ಅಧಿಕಾರಿಗಳಿಗೆ ಕರ್ನಾಟಕ ಲೋಕಾಯುಕ್ತ ನ್ಯಾ. ಬಿ. ಎಸ್. ಪಾಟೀಲ ಸೂಚನೆ ನೀಡಿದ್ದಾರೆ.  ನಗರದ ಜಿ. ಪಂ. ಸಭಾಂಗಣದಲ್ಲಿ ಜಿಲ್ಲೆಯ ನಾನಾ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ […]

ವೈದ್ಯಕೀಯ ಕ್ಷೇತ್ರದಲ್ಲಿ ಸೇವಾ ಮನೋಭಾವ ಮುಖ್ಯ- ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ

ಬಾಗಲಕೋಟೆ: ವೈದ್ಯಕೀಯ ಕ್ಷೇತ್ರದಲ್ಲಿ ಸೇವಾ ಮನೋಭಾವ ಮುಖ್ಯವಾಗಿದೆ.  ಬಡವ ಮತ್ತು ಶ್ರೀಮಂತ ಎಂಬ ಯಾವುದೇ ಭೇದಭಾವವಿಲ್ಲದೇ ಸೇವಾ ಮನೋಭಾವದಿಂದ ಕೆಲಸ ಮಾಡುವುದು ನಿಜವಾದ ಕರ್ತವ್ಯವಾಗಿದೆ ಎಂದು ಬೀದರ ದಕ್ಷೀಣ ಶಾಸಕ ಡಾ. ಶೈಲೆಂದ್ರ ಬೆಲ್ದಾಳೆ ಹೇಳಿದರು. ನಗರದ ಬಿ. ವಿ. ವಿ. ಎಸ್. ಹೋಮಿಯೋಪಥಿಕ ವೈದ್ಯಕೀಯ ಮಹಾವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ಕಾಲೇಜುಗಳು ಒಳ್ಳೆಯ ಪ್ರವೃತ್ತಿ ಬೆಳೆಸುವ ಕೇಂದ್ರಗಳಾಗಬೇಕು.  ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಪದವಿಯ ಹಂತ ಅತ್ಯಂತ ಪ್ರಮುಖವಾಗಿದೆ.  ಬಸವೇಶ್ವರ ವೀರಶೈವ ವಿದ್ಯಾವರ್ಧಕ […]

ಮಹಿಳಾ ಸಿಸ್ಟೊಬಾಲ್ ವಿಶ್ವಕಪ್ ನಲ್ಲಿ ಭಾರತ ರನ್ನರ್ ಅಪ್- ರಾಷ್ರ್ಟೀಯ ತಂಡದಲ್ಲಿ ಆಡಿದ ಮಹಿಳಾ ವಿವಿಯ ಶೃತಿ ಟಿ. ಎಸ್.

ವಿಜಯಪುರ: ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಮೊದಲ ಮಹಿಳಾ ಸಿಸ್ಟೋಬಾಲ್ ವಿಶ್ವಕಪ್‍ನಲ್ಲಿ ಭಾರತೀಯ ವನಿತೆಯರ ತಂಡ ರನ್ನರ್ ಅಪ್ ಆಗಿ ಹೊರಹೊಮ್ಮಿದೆ.  ಈ ತಂಡದಲ್ಲಿದ್ದ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಸಂಶೋಧನೆ ವಿದ್ಯಾರ್ಥಿನಿ ಶೃತಿ ಟಿ. ಎಸ್. ಅತ್ಯುತ್ತಮ ಪ್ರದರ್ಶನ ತೋರಿ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.  ಮೇ ತಿಂಗಳ ಕೊನೆಯ ವಾರದಲ್ಲಿ ನಡೆದ ಸಿಸ್ಟೋಬಾರ್ ವಿಶ್ವಕಪ್‍ನಲ್ಲಿ ಭಾರತ, ಶ್ರೀಲಂಕಾ ಅರ್ಜೆಂಟೀನಾ, ಬಾಂಗ್ಲಾ, ಭೂತಾನ ಮತ್ತು ಪ್ರಾನ್ಸ್ ದೇಶಗಳು ಭಾಗವಹಿಸಿದ್ದವು.  ಈ ಸ್ಪರ್ಧೆಯಲ್ಲಿ […]

ಜ್ಞಾನದಾಹ: 81ನೇ ಇಳಿವಯಸ್ಸಿನಲ್ಲಿ 5ನೇ ಸ್ನಾತಕೋತ್ತರ ಪರೀಕ್ಷೆ ಬರೆಯುತ್ತಿರುವ ನಿಂಗಯ್ಯ ಒಡೆಯರ

ವಿಜಯಪುರ: ಮಕ್ಕಳು ಶಾಲೆಗಳನ್ನು ಅರ್ಧಕ್ಕೆ ತೊರೆಯುವುದು, ಯುವಕರು ಕಲಿಕಾಸಕ್ತಿ ಕಡಿಮೆಯಿಂದಾಗಿ ಎಸ್ ಎಸ್ ಎಲ್ ಸಿ ಅಥವಾ ಪಿಯುಸಿ ವರೆಗೆ ಮಾತ್ರ ಓದುವುದು ಹಾಗೂ ಪದವಿ ಕಾಲೇಜುಗಳಿಗೆ ಪ್ರವೇಶ ಪಡೆದರೂ ಪದವಿ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸುವವರೂ ಇರುವ ಇಂದಿನ ದಿನಗಳಲ್ಲಿ 81 ವರ್ಷದ ಹಿರಿಯ ನಿಂಗಯ್ಯ ಒಡೆಯರ ಸ್ನಾತಕೋತ್ತರ ಪರೀಕ್ಷೆ ಬರೆಯುವ ಮೂಲಕ ಗಮನ ಸೆಳೆದಿದ್ದಾರೆ.  ಕಲಿಕೆಗೆ ವಯಸ್ಸು ಎಂಬುದಿಲ್ಲ.  ದೇಹಕ್ಕೆ ವಯಸ್ಸಾಗಬಹುದೇ ಹೊರತು ಕಲಿಕಾಸಕ್ತಿಗೆ ಇಲ್ಲ ಎಂಬುದನ್ನು ನಿಂಗಯ್ಯ ಒಡೆಯರ  ತೋರಿಸಿ ಕೊಟ್ಟಿದ್ದಾರೆ.   ನಗರದ ಪ್ರತಿಷ್ಠಿತ ಬಿ. […]

ಎಂ. ಬಿ. ಪಾಟೀಲರಿಗೆ ವಿಜಯಪುರ ಜಿಲ್ಲೆಯ ಉಸ್ತುವಾರಿ- ಉಳಿದ ಸಚಿವರಿಗೆ ಯಾವ ಜಿಲ್ಲೆಯ ಉಸ್ತುವಾರಿ? ಇಲ್ಲಿದೆ ಮಾಹಿತಿ

ಬೆಂಗಳೂರು: ಅಂತೂ ಇಂದೂ ಅಳೆದು ತೂಗಿ ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಿದ್ದಾರೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯ ಸಚಿವ ಎಂ. ಬಿ. ಪಾಟೀಲ ಅವರಿಗೆ ನಿರೀಕ್ಷೆಯಂತೆ ವಿಜಯಪುರ ಜಿಲ್ಲೆಯ ಉಸ್ತುವಾರಿ ವಹಿಸಲಾಗಿದೆ. ಸಚಿವರು ಮತ್ತು ಅವರಿಗೆ ವಹಿಸಲಾಗಿರುವ ಜಿಲ್ಲೆಗಳ ಉಸ್ತುವಾರಿ ಮಾಹಿತಿ ಇಲ್ಲಿದೆ. ಡಿ. ಕೆ. ಶಿವಕುಮಾರ- ಬೆಂಗಳೂರು ನಗರ ಡಾ. ಜಿ. ಪರಮೇಶ್ವರ- ತುಮಕೂರು ಎಚ್. ಕೆ. ಪಾಟೀಲ- ಗದಗ ಕೆ. ಎಚ್. ಮುನಿಯಪ್ಪ- ಬೆಂಗಳೂರು […]

ಯೋಧರು ನಿವೃತ್ತಿ ಬಳಿಕ ಆರೋಗ್ಯದ ಬಗ್ಗೆ ಗಮನ ಹರಿಸಬೇಕು- ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ

ವಿಜಯಪುರ: ದೇಶ ಸೇವೆ ಮಾಡುವ ಯೋಧರು ನಿವೃತ್ತರಾದ ಬಳಿಕ ತಮ್ಮ ಆರೋಗ್ಯದ ಬಗ್ಗೆ ಗಮನ ಹರಿಸಬೇಕು ಎಂದು ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ.ಎಂ ಪಾಟೀಲ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ ಹೇಳಿದರು. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕೇಂದ್ರಿಯ ಅರಸೇನಾ ಪಡೆಗಳ ಮಾಜಿ ಮತ್ತು ಹಾಲಿ ಯೋದರು ಹಾಗೂ ಅವರ ಕುಟುಂಬ ಸದಸ್ಯರಿಗಾಗಿ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಯೋದರು ಸೇವೆಯಲ್ಲಿದ್ದಾಗ ಜೀವದ […]

ಬಾಲ್ಯ ವಿವಾಹ ತಡೆಗಟ್ಟಲು ಜಾಗೃತಿ ಮೂಡಿಸಲು ಅಧಿಕಾರಿಗಳಿಗೆ ಡಿಸಿ ಡಾ. ದಾನಮ್ಮನವರ ಸೂಚನೆ

ವಿಜಯಪುರ: ಬಾಲ್ಯ ವಿವಾಹ ತಡೆಗಟ್ಟುವ ಮತ್ತು ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಕುರಿತು ಜನರಲ್ಲಿ ಜಾಗೃತಿ ಅಭಿಯಾನ ಕೈಗೊಂಡು ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ಬಿ. ದಾನಮ್ಮನವರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಇಲಾಖೆಗಳ ಯೋಜನೆ ಮತ್ತು ಕಾರ್ಯಕ್ರಮಗಳ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಾಲ್ಯ ವಿವಾಹ ತಡೆಗಟ್ಟಲು ಹಾಗೂ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ  ಹಿನ್ನೆಲೆಯಲ್ಲಿ  ನಗರ ಹಾಗೂ […]

ಕೊಲ್ಹಾರ ನೀರು ಶುದ್ಧೀಕರಣ ಘಟಕ ಸೇರಿ ನಾನಾ ಕಡೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿ. ಪಂ. ಸಿಇಓ ರಾಹುಲ ಶಿಂಧೆ

ವಿಜಯಪುರ: ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ಶಿಂಧೆ ಅವರು ವಿಜಯಪುರ ಜಿಲ್ಲೆಯ ಮನಗೂಳಿ ಪಟ್ಟಣ ಮತ್ತು ಕೊಲ್ಹಾರ ತಾಲೂಕಿನ ನಾನಾ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.  ಮನಗೂಳಿ ಸೇರಿದಂತೆ 35 ಗ್ರಾಮಗಳ ಬಹು ಹಳ್ಳಿ ಕುಡಿಯುವ ನೀರು ಸರಬರಾಜು ಯೋಜನೆಯ ತೆಲಗಿ ಗ್ರಾಮದ ಹತ್ತಿರ ಇರುವ ನೀರು ಶುದ್ಧೀಕರಣ ಘಟಕದ ವೀಕ್ಷಣೆ ಮಾಡಿದ ಅವರು, ಘಟಕದಲ್ಲಿ ನೀರು ಶುದ್ಧಿಕರಣದ ಬಗ್ಗೆ ಮಾಹಿತಿ ಪಡೆದರು.  ಘಟಕ ನಿರ್ವಹಿಸುವ ಅಧಿಕಾರಿಗಳು ಮಾಹಿತಿ ನೀಡಿದರು.  ಇದೇ ಯೋಜನೆಗೆ […]