ಸಚಿವ ಶಿವಾನಂದ ಪಾಟೀಲರಿಗೆ ಶ್ರೀ ಹಡಪದ ಅಪ್ಪಣ್ಣ ವಿವಿದೋದ್ದೇಶ ಸಹಕಾರ ಸಂಘದ ಪದಾಧಿಕಾರಿಗಳಿಂದ ಸನ್ಮಾನ

ವಿಜಯಪುರ: ಸಕ್ಕರೆ ಮತ್ತು ಜವಳಿ ಖಾತೆ ಸಚಿವ ಶಿವಾನಂದ ಎಸ್. ಪಾಟೀಲ ಅವರನ್ನು ಶ್ರೀ ಹಡಪದ ಅಪ್ಪಣ್ಣ ವಿವಿದೋದ್ದೇಶಗಳ ಸಹಕಾರ ಸಂಘದ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ನಿಂಗಪ್ಪ ಎ. ನಾವಿ, ಉಪಾಧ್ಯಕ್ಷ ಚಿದಾನಂದ ಹ. ತೊರವಿ, ನಿರ್ದೇಶಕರಾದ ವಿರೂಪಾಕ್ಷಿ ಗಿ. ಕತ್ನಳ್ಳಿ, ಶಿವಾನಂದ ಆರ್. ನಾವಿ, ನರಸು ನಾವಿ ಮುಂತಾದವರು ಉಪಸ್ಥಿತರಿದ್ದರು.

ಮಹಿಳಾ ವಿವಿ ವುಮೆನ್ಸ್ ಸ್ಟಡಿ ವಿಭಾಗದಲ್ಲಿ ಐದು ದಿನಗಳ ಕಾರ್ಯಾಗಾರ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಮಹಿಳಾ ಅಧ್ಯಯನ ವಿಭಾಗದ ವತಿಯಿಂದ ಮೇ 29ರಿಂದ ಜೂನ್ 2ರ ವರೆಗೆ ಸಂಶೋಧನೆ ಮತ್ತು ಪ್ರಕಟಣೆ ನೈತಿಕ ಸಂಗತಿಗಳು ವಿಷಯದ ಕುರಿತು ಐದು ದಿನಗಳ ಕಾರ್ಯಾಗಾರ ನಡೆಯಿತು.  ಈ ಕಾರ್ಯಾಗಾರದಲ್ಲಿ ಪ್ರೊ. ಪಿ. ಜಿ. ತಡಸದ, ಪ್ರೊ. ಗವಿಸಿದ್ದಪ್ಪ, ಆನಂದ ಹಳ್ಳಿ, ಪ್ರೊ. ಶಾಂತಾದೇವಿ ಟಿ., ಡಾ. ಎಂ. ಎಂ. ಬಾಚಲಾಪುರ, ಡಾ. ಅಶೋಕಕುಮಾರ ಸುರಪುರ, ಹಾಗೂ ಡಾ. ಸೌಭಾಗ್ಯ ಜಿ. ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿ, […]

ಚಿಣ್ಣರಿಗಾಗಿ ಗೊಂಬೆ ಬ್ಯಾಂಕ್- ಮನೆಮನೆಗೆ ತೆರಳಿ ಸಂಗ್ರಹಿಸಿದ ಬೊಂಬೆಗಳನ್ನು ಅಂಗನವಾಡಿಗೆ ತೆರಳಿ ಮಕ್ಕಳಿಗೆ ನೀಡಿದ ಕಾಲೇಜು ವಿದ್ಯಾರ್ಥಿಗಳು

ವಿಜಯಪುರ: ಸಾಮಾಜಿಕ ಕಾರ್ಯಗಳ ಮೂಲಕ ಮಕ್ಕಳನ್ನು ಶಾಲೆಗಳಲ್ಲ ಆಕರ್ಷಿಸಲು ಕಾಲೇಜು ವಿದ್ಯಾರ್ಥಿಗಳು ಕೈಗೊಂಡ ಕ್ರಮ ಗಮನ ಸೆಳೆದಿದ್ದಾರೆ. ನಗರದ ಬಿ.ಎಲ್.ಡಿ.ಈ ಸಂಸ್ಥೆಯ ಎ. ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ದೇಶಪಾಂಡೆ ಫೌಂಡೇಶನ್ ನ ಜೊತೆ ಒಡಂಬಡಿಕೆ ಮಾಡಿಕೊಂಡಿದ್ದು, ಈ ಫೌಂಡೇಶನ್ ಸ್ಕಿಲ್ ಪ್ಲಸ್ ಯೋಜನೆಯ ರೂಪಿಸಿದೆ.  ಅದರಂತೆ ಈ ವಿದ್ಯಾರ್ಥಿಗಳು ತಮ್ಮ ಸಾಮಾಜಿಕ ಕಾರ್ಯದ ಭಾಗವಾಗಿ ಶಾಲೆಗಳತ್ತ ಮಕ್ಕಳನ್ನು ಆಕರ್ಷಿಸಲು ಬಣ್ಣ ಬಣ್ಣದ ಗೊಂಬೆಗಳನ್ನು ಅಂಗನವಾಡಿ ಮಕ್ಕಳಿಗೆ ವಿತರಿಸಿದರು. ಕಲಿಕೆಯಯ ಜೊತೆಗೆ ಮನರಂಜನೆ ಮತ್ತು ಮಕ್ಕಳನ್ನು […]

ಅಹಿಂದ ವರ್ಗಕ್ಕಾಗಿ ಏಳಿಗೆಗಾಗಿ ದೇವರಾಜ ಅರಸ ಕೊಡುಗೆ ಅಪಾರ- ಸೋಮನಾಥ ಕಳ್ಳಿಮನಿ

ವಿಜಯಪುರ: ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ದಲಿತರ ಏಳಿಗೆಗಾಗಿ ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸ ಅವರ ಕೊಡುಗೆ ಅಪಾರವಾಗಿದೆ ಎಂದು ಅಹಿಂದ ಮುಖಂಡ ಸೋಮನಾಥ ಕಳ್ಳಿಮನಿ ಹೇಳಿದ್ದಾರೆ. ನಗರದಲ್ಲಿ ದೇವರಾಜ ಅರಸು ವಿಚಾರ ವೇದಿಕೆ ಮತ್ತು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಡೆದ ದೇವರಾಜ ಅರಸು ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅಹಿಂದ ವರ್ಗದ ಕಲ್ಯಾಣಕ್ಕಾಗಿ ಹಗಲಿರುಳು ದುಡಿದು ಅವರನ್ನು ಆರ್ಥಿಕವಾಗಿ, ಶೈಕ್ಷಣಿಕವಾಗಿ ಮತ್ತು ರಾಜಕೀಯವಾಗಿ ಮೇಲೆತ್ತಲು ಇಂದಿರಾ ಗಾಂಧಿಜಿಯವರು ಜಾರಿಗೆ ತಂದಿದ್ದ […]

ಬಸವ ನಾಡಿನಲ್ಲಿ ಛತ್ರಪತಿ ಶಿವಾಜಿ ಅವರ 350ನೇ ರಾಜ್ಯಾಭಿಷೇಕ ದಿನ ಆಚರಣೆ-ಎಎಸ್ಪಿ ಶಂಕರ ಮಾರಿಹಾಳ ಭಾಗಿ

ವಿಜಯಪುರ: ನಗರದ ಶಿವಾಜಿ ವೃತ್ತದಲ್ಲಿ ಮರಾಠಾ ಸಮಾದ ವತಿಯಿಂದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ 350ನೇ ರಾಜ್ಯಾಭಿಷೇಕ ದಿನದ ಅಂಗವಾಗಿ ಪೂಜೆ ಸಲ್ಲಿಸಲಾಯಿತು.  ಎಎಸ್ಪಿ ಶಂಕರ ಮಾರಿಹಾಳ ಅವರು ಶಿವಾಜಿ ಮಹಾರಾಜರ ಪ್ರತಿಮೆಗೆ ಪೂಜೆ ನೆರವೇರಿಸಿದ ನಮನ ಸಲ್ಲಿಸಿದರು.  ಬಳಿಕ ಮಾತನಾಡಿದ ಅವರು, ಛತ್ರಪತಿ ಶಿವಾಜಿ ಮಹಾರಾಜರು ವಿಶ್ವದ ಶ್ರೇಷ್ಠ ನಾಯಕ.  ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯ ರಾಹುಲ ಜಾಧವ, ಮರಾಠಾ ಸಮಾಜ ಅಧ್ಯಕ್ಷ ವಿಜಯಕುಮಾರ […]

ಬೆಳೆಗಳಲ್ಲಿ ರೈತರು ಎಂ. ಬಿ. ಪಾಟೀಲರನ್ನು ಕಾಣುತ್ತಿರುವುದಾಗಿ ಹೆಮ್ಮೆಯಿಂದ ಹೇಳುತ್ತಿದ್ದಾರೆ- ಶ್ರೀ ಬಸವಾನಂದ ಸ್ವಾಮೀಜಿ

ವಿಜಯಪುರ: ರೈತರು ಬೆಳೆಯುವ ಬೆಳೆಗಳಲ್ಲಿ ಎಂ. ಬಿ. ಪಾಟೀಲರನ್ನು ಕಾಣುತ್ತಿದ್ದೇವೆ ಎಂದು ಹೆಮ್ಮೆಯಿಂದ ಹೇಳುತ್ತಾರೆ.  ಇದು ಎಂ. ಬಿ. ಪಾಟೀಲರು ಜಲಸಂಪನ್ಮೂಲ ಸಚಿವರಾಗಿದ್ದಾಗ ಈ ಭಾಗದಲ್ಲಿ ನೀರಾವರಿ ಕ್ಷೇತ್ರದಲ್ಲಿ ಮಾಡಿರುವ ಜಲಕ್ರಾಂತಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಜ್ಞಾನಯೋಗಾಶ್ರಮದ ಅಧ್ಯಕ್ಷ ಶ್ರೀ ಬಸವಾನಂದ ಸ್ವಾಮೀಜಿ ಹೇಳಿದ್ದಾರೆ. ಜ್ಞಾನಯೋಗಾಶ್ರಮದಲ್ಲಿ ಹುಣ್ಣಿಮೆ ಅಂಗವಾಗಿ ನಡೆದ ಪಲ್ಲಕ್ಕಿ ಉತ್ಸವ ಕಾರ್ಯಕ್ರಮದ ಬಳಿಕ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರನ್ನು ಆಶೀರ್ವದಿಸಿ ಮಾತನಾಡಿದರು. […]

ಡೋಮನಾಳ ಗ್ರಾಮದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಟ್ಟ ನಾಗಠಾಣ ಶಾಸಕ ವಿಠ್ಠಲ ಧೋ. ಕಟಕದೊಂಡ

ವಿಜಯಪುರ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಾಗಠಾಣ(ಮೀ) ಕಾಂಗ್ರೆಸ್ ಶಾಸಕ ವಿಠ್ಠಲ ಧೋಂಡಿಬಾ ಕಟಕದೊಂಡ ಡೋಮನಾಳ ಗ್ರಾಮದ ದಾವಲಮಲೀಕ ದೇವಸ್ಥಾನದ ಆವರಣದಲ್ಲಿ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.  ಬಳಿಕ ಮಾತನಾಡಿದ ಶಾಸಕರು, ಪರಿಸರ ಸಂರಕ್ಷಣೆಗಾಗಿ ಜಾಗೃತಿ ಮತ್ತು ಕ್ರಮವನ್ನು ಉತ್ತೇಜಿಸುವ ವಿಶ್ವಸಂಸ್ಥೆಯ ಪ್ರಮುಖ ವಾಹನವಾಗಿದೆ.  1974 ರಲ್ಲಿ ಮೊದಲ ಬಾರಿಗೆ ನಡೆದ ಇದು ಸಮುದ್ರ ಮಾಲಿನ್ಯ, ಮಾನವ ಜನಸಂಖ್ಯೆ ಮತ್ತು ಜಾಗತಿಕ ತಾಪಮಾನ ಏರಿಕೆಯಿಂದ ಹೊರಹೊಮ್ಮುವ ಪರಿಸರ ಸಮಸ್ಯೆಗಳ ಬಗ್ಗೆ ಸುಸ್ಥಿರ ಬಳಕೆ ಮತ್ತು […]

ಜಲ ಬಿರಾದಾರಿ ವತಿಯಿಂದ ಶ್ರಮದಾನ, ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಣೆ

ವಿಜಯಪುರ: ನಗರದ ಬಾಗಲಕೋಟ್ ರಸ್ತೆಯಲ್ಲಿರುವ ಅನಾಥಾಶ್ರಮದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವಿಜಯಪುರ ಜಲ ಬಿರಾದರಿ ವತಿಯಿಂದ ಶ್ರಮದಾನ ಮತ್ತು ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನ ಆಚರಿಸಲಾಯಿತು.  ಈ ಸಂದರ್ಭದಲ್ಲಿ ಜಲ ಬಿರಾದರಿ ಜಿಲ್ಲಾಧ್ಯಕ್ಷ ಪೀಟರ್ ಅಲೆಕ್ಸಾಂಡರ್ ಅವರು ಜಲ ಬಿರಾದರಿಯಿಂದ ಸಂಗ್ರಹಿಸಿಟ್ಟ 101ನದಿಗಳ ನೀರಿನಿಂದ ಪಂಚ ಭೂತಗಳಾದ ಬೆಂಕಿ, ನೀರು, ಗಾಳಿ, ಪೃಥ್ವಿ, ಆಕಾಶ, ಇವುಗಳಿಗೆ ಸಾಂಕೇತಿಕವಾಗಿ ಪೂಜೆ ಸಲ್ಲಿಸಿದರು.  ಅಲ್ಲದೇ, ಸಸಿ ನೆಟ್ಟರು. ಬಳಿಕ ಮಾತನಾಡಿದ ಅವರು, ಇಂದು ಮನುಷ್ಯನ […]

ಶ್ರೀ ರುಕ್ಮಾಂಗದ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವೃಕ್ಷ ದತ್ತು ಯೋಜನೆಗೆ ಚಾಲನೆ

ವಿಜಯಪುರ: ನಗರದ ಶ್ರೀ ರುಕ್ಮಾಂಗದ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಂದ ವೃಕ್ಷ ದತ್ತು ಯೋಜನೆ ಪ್ರಾರಂಭಿಸಲಾಗಿದೆ.  ಈ ಯೋಜನೆಯಂತೆ ವಿದ್ಯಾರ್ಥಿಗಳು ಶಾಲೆಗೆ ಗಿಡಗಳನ್ನು ನೀಡಿ ಒಂದು ವರ್ಷಗಳ ಕಾಲ ಇವುಗಳನ್ನು ಪೋಷಣೆ ಮಾಡಲಿದ್ದಾರೆ.  ಈ ಯೋಜನೆಗೆ ವಿದ್ಯಾರ್ಥಿಗಳೇ ಚಾಲನೆ ನೀಡಿದ್ದು ಗಮನಾರ್ಹವಾಗಿದೆ. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯ ಶಿಕ್ಷ ಆನಂದ ಕುಲಕರ್ಣಿ ಮಾತನಾಡಿ, ಇಂಥ ಯೋಜನೆಗಳು ಪರಿಸರದ ಬಗ್ಗೆ ಕಾಳಜಿಯನ್ನು ಹೆಚ್ಚಿಸುವುದರ ಜೊತೆಗೆ ಪರಿಣಾಮಕಾರಿಯಾಗಿ ಯೋಜನೆ ಅನುಷ್ಠಾನಕ್ಕೆ ಸಹಕಾರಿಯಾಗಲಿದೆ.  ಮಕ್ಕಳಲ್ಲಿ ಪರಿಸರದ ಮೇಲೆ […]

ವಿದ್ಯುತ್ ದರ ಹೆಚ್ಚಳ, ಗೋಹತ್ಯೆ ನಿಷೇಧ ರದ್ದು ಕುರಿತು ಸಚಿವರ ಹೇಳಿಕೆ ಖಂಡಿಸಿ ಬಿಜೆಪಿಯಿಂದ ವಿಜಯಪುರ ನಗರದಲ್ಲಿ ಪ್ರತಿಭಟನೆ

ವಿಜಯಪುರ: ಉಚಿತ ವಿದ್ಯುತ್ ಗ್ಯಾರಂಟಿ ಎನ್ನುವ ಹೆಸರಿನಲ್ಲಿ ಕಾಂಗ್ರೆಸ್ ಸರಕಾರ ಜನತೆಗೆ ಮೋಸ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಬಿಜೆಪಿ ನಗರ ಘಟಕದ ಪದಾಧಿಕಾರಿಗಳು ಶ್ರೀ ಸಿದ್ದೇಶ್ವರ ದೇವಾಲಯದ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಹಾನಗರ ಪಾಲಿಕೆ ಸದಸ್ಯ ಶಿವರುದ್ರ ಬಾಗಲಕೋಟ ಮಾತನಾಡಿ, ಪಶು ಸಂಗೋಪನೆ ಸಚಿವರು ರಾಜ್ಯದಲ್ಲಿ ವಯಸ್ಸಾದ ಹಸುಗಳನ್ನು ಸಾಕಲು ಕಷ್ಟವಾಗುತ್ತದೆ.  ಆದ್ದರಿಂದ ಗೋ ಹತ್ಯೆ ನಿಷೇಧ ಕಾನೂನನ್ನು ರದ್ದು ಮಾಡಿ ಗೋಹತ್ಯೆಗೆ […]