ತಾಯಿಗಿಂತಲೂ ಮಿಗಿಲಾದ ದೇವರಿಲ್ಲ-ಎಲ್ಲ ಪದಗಳ ಮೂರ್ತರೂಪವೇ ತಾಯಿ- ಎಂ. ಬಿ. ಪಾಟೀಲ ಭಾವನಾತ್ಮಕ ಟ್ವೀಟ್

ವಿಜಯಪುರ: ಮೂರನೇ ಬಾರಿ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ತವರು ಜಿಲ್ಲೆ ವಿಜಯಪುರಕ್ಕೆ ಆಗಮಿಸಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರು ತಮ್ಮ ತಾಯಿ ಕಮಲಾಬಾಯಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ತಾಯಿಗಿಂತಲೂ ಮಿಗಿಲಾದ ದೇವರಿಲ್ಲ.  ಮಮತೆ, ಪ್ರೀತಿ-ವಾತ್ಸಲ್ಯ ತ್ಯಾಗ, ಅನುಕಂಪ ಹೀಗೆ ಎಲ್ಲ ಪದಗಳ ಮೂರ್ತರೂಪವೇ ತಾಯಿ.  ನನ್ನ ಬೆಳವಣಿಗೆ, ಏಳಿಗೆ, ಶ್ರೇಯಸ್ಸು-ಯಶಸ್ಸು ಎಲ್ಲಕ್ಕೂ […]

40% ಭ್ರಷ್ಟಾಚಾರ, ದುಂದುವೆಚ್ಚಕ್ಕೆ ಕಡಿವಾಣ ಹಾಕಿ ಗ್ಯಾರಂಟಿ ಸ್ಕೀಂ ಗಳಿಗೆ ಹಣ ಹೊಂದಿಸುತ್ತೇವೆ- ಎಂ. ಬಿ. ಪಾಟೀಲ

ವಿಜಯಪುರ: 40% ಭ್ರಷ್ಟಾಚಾರಕ್ಕೆ ಮತ್ತು ದುಂದುವೆಚ್ಚಕ್ಕೆ ಕಡಿವಾಣ ಹಾಕುತ್ತೇವೆ.  ನಿರುಪಯುಕ್ತ ಯೋಜನೆಗಳನ್ನು ಕೈಬಿಟ್ಟು ಇತರ ಯೋಜನೆಗಳಿಗೆ ತೊಂದರೆಯಾಗದಂತೆ ಕಾಂಗ್ರೆಸ್ ಗ್ಯಾರಂಟಿ ಸ್ಕೀಂಗಳಿಗೆ ಸಿಎಂ ನೇತೃತ್ವದಲ್ಲಿ ಹಣ ಹೊಂದಿಸುತ್ತೇವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2013- 18ರ ಅವಧಿಯಲ್ಲಿ ಜಲಸಂಪನ್ಮೂಲ ಸಚಿವನಾಗಿ ವಿಜಯಪುರ ಜಿಲ್ಲೆಗೆ ಅಂಟಿದ್ದ ಬರಪೀಡಿತ ಜಿಲ್ಲೆ ಹಣೆಪಟ್ಟಿ ಹೋಗಲಾಡಿಸಲು ಯಶಸ್ವಿಯಾಗಿದ್ದೇನೆ.  ಈಗ ಕೈಗಾರಿಕೆ ಸಚಿವನಾಗಿ ರಾಜ್ಯಾದ್ಯಂತ […]

ರಾಜ್ಯದ ಇತರೆಡೆ ಕೈಗಾರಿಕೆ ಸ್ಥಾಪಿಸಲು ಉತ್ತೇಜನ ನೀಡುತ್ತೇವೆ- ನಾಡನ್ನು ಸರ್ವಜನಾಂಗದ ಶಾಂತಿ ತೋಟ ಮಾಡುತ್ತೇವೆ- ಎಂ. ಬಿ. ಪಾಟೀಲ

ವಿಜಯಪುರ, ಜೂನ್ 03: ಬೆಂಗಳೂರು ಜೊತೆ ರಾಜ್ಯದ ಇತರ ಜಿಲ್ಲೆಗಳಲ್ಲೂ ಕೈಗಾರಿಕೆಗಳನ್ನು ಸ್ಥಾಪಿಸುವ ಗುರಿ ಹೊಂದಿದ್ದೇನೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಭರವಸೆ ನೀಡಿದ್ದಾರೆ. ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ತವರು ಜಿಲ್ಲೆ ವಿಜಯಪುರಕ್ಕೆ ಆಗಮಿಸಿ ಬೃಹತ ರೋಡ್ ಶೋನಲ್ಲಿ ಪಾಲ್ಗೊಂಡ ಬಳಿಕ ಶ್ರೀ ಸಿದ್ಧೇಶ್ವರ ದೇವಸ್ಥಾನದ ಬಳಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು. ರಾಜ್ಯದ ಇತರೆಡೆ ಕೈಗಾರಿಕೆಗಳನ್ನು ಸ್ಥಾಪಿಸುವುದರಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ ಸಿಗಲಿದೆ. ಯುವಕರಿಗೆ […]

ಸಚಿವರಾದ ನಂತರ ತವರಿಗೆ ಬಂದ ಎಂ. ಬಿ. ಪಾಟೀಲರಿಗೆ ಅದ್ದೂರಿ ಸ್ವಾಗತ ನೀಡಿದ ಬಸವ ನಾಡಿನ ಜನತೆ

ವಿಜಯಪುರ: ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ತವರು ಜಿಲ್ಲೆ ವಿಜಯಪುರಕ್ಕೆ ಆಗಮಿಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರಿಗೆ ವಿಜಯಪುರ ನಗರದಲ್ಲಿ ಭರ್ಜರಿ ಸ್ವಾಗತ ನೀಡಲಾಯಿತು. ನಗರದ ಗುರುಪಾದೇಶ್ವರ ನಗರದಲ್ಲಿರುವ ತೋಂಟದಾರ್ಯ ಶಾಖಾ ಮಠಕ್ಕೆ ಭೇಟಿ ನೀಡಿದ ಅವರು, ಗದಗ-ಡಂಬಳ-ಯಡಿಯೂರು ಮಠದ ಜಗದ್ಗುರುಗಳಾದ ಡಾ. ಸಿದ್ದರಾಮ ಮಹಾಸ್ವಾಮಿಗಳು ಮತ್ತು ವಿಜಯಪುರ ಷಣ್ಮುಖಾರೂಡ ಮಠದ ಶ್ರೀ ಅಭಿನವ ಸಿದ್ದಾರೂಢ ಮಹಾಸ್ವಾಮಿಜಿ ಅವರನ್ನು ಗೌರವಿಸಿ ಆಶೀರ್ವಾದ ಪಡೆದರು. […]

ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಸರಕಾರಿ ಶಾಲೆ ಮಕ್ಕಳಿಗೆ ಶೈಕ್ಷಣಿಕ ಪ್ರವಾಸ ವ್ಯವಸ್ಥೆ ಮಾಡಿದ ಡಿಸಿ, ಸಿಇಓ

ವಿಜಯಪುರ: ಇಂದಿನ ಸ್ಪರ್ಧಾತ್ಮಕ ಮತ್ತು ವೇಗದ ಯುಗದಲ್ಲಿ ಪ್ರತಿಯೊಂದು ಮಾಹಿತಿಯ ಅರಿವು ಅತ್ಯವಶ್ಯಕ.  ಈ ಎಲ್ಲ ಮಾಹಿತಿ ಶಿಕ್ಷಣದಿಂದ ಮಾತ್ರ ಪಡೆಯಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಹೇಳಿದ್ದಾರೆ. ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಉನ್ನತ ದರ್ಜೆಯಲ್ಲಿ ಪಾಸಾದ 60 ವಿದ್ಯಾರ್ಥಿಗಳಿಗೆ ಜಿಲ್ಲಾ ಪಂಚಾಯಿತಿ ವತಿಯಿಂದ ಆಯೋಜಿಸಲಾದ ಶೈಕ್ಷಣಿಕ ಪ್ರವಾಸ ಕಾರ್ಯಕ್ರಮಕ್ಕೆ ಜಿ. ಪಂ. ಸಭಾಂಗಣದಲ್ಲಿ ಜಿ. ಪಂ. ಸಿಇಓ ರಾಹುಲ್ ಶಿಂಧೆ ಅವರೊಂದಿಗೆ ಮಕ್ಕಳಿಗೆ ಪ್ರವಾಸ್ ಕಿಟ್ ನೀಡಿ ಕಾರ್ಯಕ್ರಮಕ್ಕೆ […]

ವಿಶ್ವ ಹಾಲು ದಿನಾಚರಣೆ: ಹೈನೋದ್ಯಮ ರೈತರ ಪಾಲಿಗೆ ವರದಾನ- ಡಾ. ಸಂಗಣ್ಣ ಎಲ್. ಲಕ್ಕಣ್ಣವರ

ವಿಜಯಪುರ: ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳು ಗುಣಮಟ್ಟಕ್ಕೆ ಹೆಸರುವಾಸಿಯಾಗಿದ್ದು,  ರೈತರ ಪಾಲಿಗೆ ಹೈನೋದ್ಯಮ ವರದಾನವಾಗಿದೆ. ರೈತರ ಹಾಲಿಗೆ ಯೋಗ್ಯ ದರದ ಮಾರುಕಟ್ಟೆಯನ್ನು ವರ್ಷವಿಡಿ ಒದಗಿಸಿ, ಜೀವನೋಪಾಯ ಕಲ್ಪಿಸುತ್ತಿದೆ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಸಂಗಣ್ಣ ಎಲ್. ಲಕ್ಕಣ್ಣವರ ಹೇಳಿದರು. ವಿಜಯಪುರು ಮತ್ತು ಬಾಗಲಕೋಟ ಜಿಲ್ಲಾ ಸಹಕಾರಿ ಹಾಲು ಒಕ್ಕೂಟವು ಆಯೋಜಿಸಿದ ವಿಶ್ವ ಹಾಲು ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.   ಹಾಲು ಒಂದು ಸಂಪೂರ್ಣ ಆಹಾರ, ಹಾಲಿನಲ್ಲಿ ಮನುಷ್ಯನ ದೇಹಕ್ಕೆ ಬೇಕಾಗಿರುವಂತಹ ಬಹುತೇಕ ಎಲ್ಲ […]

ಬಿ.ಎಲ್.ಡಿ.ಇ ಮೆಡಿಕಲ್ ಕಾಲೇಜಿನ ಪ್ರೊ. ಪ್ರವೀಣ ಶಹಾಪುರ ಈಗ ಶ್ರೀ ರಾಜೀವ ಗಾಂಧಿ ವೈದ್ಯಕೀಯ ವಿವಿಗೆ ನಾಮನಿರ್ದೇಶನ

ವಿಜಯಪುರ: ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ಪ್ರವೀಣ ಶಹಾಪುರ ಅವರನ್ನು ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಅಕಾಡೆಮಿಕ್ ಕೌನ್ಸಿಲ್ ಗೆ ನಾಮನಿರ್ದೇಶನ ಮಾಡಲಾಗಿದೆ. ಬಿ. ಎಲ್. ಡಿ. ಇ ವೈದ್ಯಕೀಯ ಕಾಲೇಜಿನಲ್ಲಿ ಮೈಕ್ರೋಬಯಾಲಜಿ ವಿಭಾಗದ ಪ್ರಾಧ್ಯಾಪಕ ಡಾ. ಪ್ರವೀಣ ಶಹಾಪುರ ಅವರನ್ನು ನೇಮಕ ಮಾಡಿ ಆರೋಗ್ಯ ವಿವಿ ಕುಲಸಚಿವರು ಆದೇಶ ಹೊರಡಿಸಿದ್ದಾರೆ.  

ಶನಿವಾರ ಸಚಿವ ಎಂ. ಬಿ. ಪಾಟೀಲ ಬಸವ ನಾಡಿಗೆ ಆಗಮನ- ಭರ್ಜರಿ ಸ್ವಾಗತಕ್ಕೆ ಸಜ್ಜಾದ ತವರು ಜಿಲ್ಲೆಯ ಜನರು

ವಿಜಯಪುರ: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವರಾದ ನಂತರ ಇದೇ ಮೊದಲ ಬಾರಿಗೆ ಜೂನ್ 3 ರಂದು ಶನಿವಾರ ತವರು ಜಿಲ್ಲೆ ವಿಜಯಪುರಕ್ಕೆ ಆಗಮಿಸುತ್ತಿದ್ದು, ಅವರನ್ನು ಅದ್ದೂರಿಯಾಗಿ ಸ್ವಾಗತಿಸಲು ಸಚಿವರ ಅಭಿಮಾನಿಗಳು, ಬೆಂಬಲಿಗರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ನಿರ್ಧರಿಸಿದ್ದಾರೆ. ವಿಜಯಪುರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಕೆಪಿಸಿಸಿ ಪ್ರಚಾರ ಸಮಿತಿ ಮುಖ್ಯ ವಕ್ತಾರ ಸಂಗಮೇಶ ಬಬಲೇಶ್ವರ ಮಾತನಾಡಿ, ಎಂ.ಬಿ.ಪಾಟೀಲರು ಜಲಸಂಪನ್ಮೂಲ ಸಚಿವರಾಗಿ ಜಿಲ್ಲೆಯಲ್ಲಿ […]

ಅಗ್ನಿ ಅವಘಡ ಮುಂಜಾಗ್ರತೆ ಕ್ರಮ ಕುರಿತು ಅಣುಕು ಪ್ರದರ್ಶನ

ವಿಜಯಪುರ: ಜಿಲ್ಲಾ ವಿಪತ್ತು ನಿರ್ವಹಣಾ ಕೋಶ, ಕಾರ್ಖಾನೆ ಹಾಗೂ ಬಾಯ್ಲರಗಳ ಇಲಾಖೆ ಮತ್ತು ನಂದಿ ಸಕ್ಕರೆ ಕಾರ್ಖಾನೆ ಇವರ ವತಿಯಿಂದ ಬಬಲೇಶ್ವರ ತಾಲೂಕಿನ ಗಲಗಲಿಯ ನಂದಿ ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡಗಳಲ್ಲಿ ಜಾಗೃತಿ-ಅನುಸರಿಸಬೇಕಾದ ಕ್ರಮಗಳ ಕುರಿತು ಅಣುಕು ಪ್ರದರ್ಶನ ನಡೆಯಿತು. ಜಿಲ್ಲಾಧಿಕಾರಿಗಳಾದ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರ ಮಾರ್ಗದರ್ಶನದಂತೆ ಅಣುಕು ಪ್ರದರ್ಶನ ನಡೆಸಲಾಯಿತು. ಅಪಾಯದ ಸಂದರ್ಭದಲ್ಲಿ ಅನುಸರಿಸಬೇಕಾದ ಮುಂಜಾಗೃತೆ ಕ್ರಮಗಳು ಹಾಗೂ ತೆಗೆದುಕೊಳ್ಳಬೇಕಾದ ಸುರಕ್ಷತೆ ಕುರಿತು ನಂದಿ ಸಕ್ಕರೆ ಕಾರ್ಖಾನೆಯ ಸುಮಾರು 300ಕ್ಕೂ ಹೆಚ್ಚು ಸಿಬ್ಬಂದಿಗಳಿಗೆ […]

ಬಿಸಿಯೂಟ ಅಡುಗೆ ಸಿಬ್ಬಂದಿಗಳಿಗೆ ಸಮವಸ್ತ್ರ ವಿತರಣೆ- ಬಸವ ನಾಡಿನಲ್ಲಿ ರಾಜ್ಯದಲ್ಲಿಯೇ ಮೊದಲ ಸಲ ವಿತರಣೆ

ವಿಜಯಪುರ: ಶಾಲಾ ಮಕ್ಕಳಿಗೆ ರುಚಿ-ಶುಚಿಯಾದ ಮಧ್ಯಾಹ್ನದ ಬಿಸಿಯೂಟ ತಯಾರಿಕೆ ಮಾಡುವ ಅಡುಗೆ ಸಿಬ್ಬಂದಿಗಳಿಗೆ ರಾಜ್ಯದಲ್ಲಿಯೇ ಇದೇ ಮೊದಲ ಬಾರಿಗೆ ಸಮವಸ್ತ್ರ ವಿತರಿಸಲಾಯಿತು. ಜಿಲ್ಲಾ ಪಂಚಾಯಿತಿ ವಿಜಯಪುರ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವಿಜಯಪುರರವರ ಸಹಯೋಗದಲ್ಲಿ 2023-24ನೇ ಶೈಕ್ಷಣಿಕ ವರ್ಷದ ವಿಶೇಷ ದಾಖಲಾತಿ ಆಂದೋಲನ ಶಾಲಾ ಪ್ರಾರಂಭೋತ್ಸವ ಪ್ರಯುಕ್ತ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆ ಹಾಗೂ ಡೇ-ನಲ್ಮ್ ದೀನದಯಾಳ ಅಂತ್ಯೋದಯ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆಗಳ ಸಹಭಾಗಿತ್ವದಲ್ಲಿ ವಿಜಯಪುರ ನಗರದ ಸರ್ಕಾರಿ […]