ದನ ತಿವಿದು ಗಾಯಗೊಂಡಿದ್ದ ಮಗುವಿನ ಮೊಗದಲ್ಲಿ ಮತ್ತೆ ಮಂದಹಾಸ ಮೂಡಿಸಿದ ಜೆ ಎಸ್ ಎಸ್ ಆಸ್ಪತ್ರೆ ವೈದ್ಯರು

ವಿಜಯಪುರ: ದನ ತಿವಿದ ಕಾರಣ ಕೆಳತುಟಿಯ ಭಾಗದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಎರಡು ವರ್ಷದ ಪುಟ್ಟ ಬಾಲಕಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಬಸವ ನಾಡಿನ ಜೆ ಎಸ್ ಎಸ್ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿದ್ದಾರೆ. ತಿಕೋಟಾ ತಾಲೂಕಿನ ಮಲಕನದೇವರ ಹಟ್ಟಿಯ ಎರಡು ವರ್ಷದ ಬಾಲಗಿ ಮನೆಯ ಮುಂದೆ ಆಟವಾಡುವ ಸಂದರ್ಭದಲ್ಲಿ ದನ ತಿವಿದ ಪರಿಣಾಮ ಆಕೆಯ ಕೆಳತುಟಿಯ ಭಾಗದಲ್ಲಿ ಕೆನ್ನೆ ಕತ್ತರಿಸಿತ್ತು.  ಗಂಭೀರವಾಗಿ ಗಾಯಗೊಂಡಿದ್ದ ಸ್ಥಿತಿಯಲ್ಲಿ ಆಕೆಯ ಪೋಷಕರು ನಗರದ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಸೂಪರ್ ಸ್ಪೆಷಾಲಿಟಿ […]

ಬಿಜೆಪಿಯವರು ಇಂಥದ್ದನ್ನು ಹೇಳಿಯೇ 65ಕ್ಕೆ ಬಂದು ನಿಂತಿದ್ದಾರೆ- ಲಕ್ಷ್ಮಣ ಸವದಿ ವಾಗ್ದಳಿ

ವಿಜಯಪುರ: ಕಾಂಗ್ರೆಸ್ ಗ್ಯಾರಂಟಿ ಸ್ಕೀಂ ಗಳ ಬಗ್ಗೆ ಬಿಜೆಪಿ ನಾಯಕರು ಮಾಡುತ್ತಿರುವ ಟೀಕೆಗಳ ಕುರಿತು ಮಾಜಿ ಡಿಸಿಎಂ ಮತ್ತು ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸುಕ್ಷೇತ್ರ ಇಂಚಗೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಜಾರಿ ಸಾಧ್ಯವಿಲ್ಲ ಎಂದು ಟೀಕೆ ಮಾಡುತ್ತಿರುವ ಬಿಜೆಪಿ ನಾಯಕರು ಈಗ 65 ಸ್ಥಾನಗಳಿಗೆ ಬಂತು ನಿಂತಿದ್ದಾರೆ.  ಒಳ್ಳೆಯ ಕೆಲಸ ಮಾಡುವ ಸರಕಾರವನ್ನು ಪ್ರೋತ್ಸಾಹಿಸಬೇಕು.  ಅನಾವಶ್ಯಕವಾಗಿ ಟೇಕೆ ಮಾಡುವುದು […]

ಬಸವ ನಾಡಿನಲ್ಲಿ ವಿನೂತನ ಕಾರ್ಯಕ್ರಮ- ಎತ್ತಿನ ಗಾಡಿಯಲ್ಲಿ ಮಕ್ಕಳನ್ನು ಕರೆತಂದು ಶಾಲೆ ಪ್ರಾರಂಭೋತ್ಸವ

ವಿಜಯಪುರ: ಬೇಸಿಗೆ ಬಿಡುವಿನ ನಂತರ ಇಂದಿನಿದ ಶಾಲೆಗಳು ಆರಂಭವಾಗಿದ್ದು, ಮಕ್ಕಳನ್ನು ಶಾಲೆಗೆ ಕರೆತರಲು ಬವಸ ನಾಡಿನ ಶಾಲೆಯೊಂದು ವಿನೂತನ ಕಾರ್ಯಕ್ರಮ ಆಯೋಜಿಸುವ ಮೂಲಕ ಗಮನ ಸೆಳೆದಿದೆ. ವಿಜಯಪುರ ನಗರದ ದಿವಟಗೇರಿ ಗಲ್ಲಿಯಲ್ಲಿರುವ ಶ್ರೀ ರುಕ್ಮಾಂಗದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ ವಿನೂತನವಾಗಿ ಸ್ವಾಗತಿಸುವ ಮೂಲಕ ಜನಮೆಚ್ಚುಗೆಗೆ ಪಾತ್ರವಾಗಿದೆ.  ವಿದ್ಯಾರ್ಥಿಗಳನ್ನು ವಿಶೇಷವಾಗಿ ಸಿಂಗರಿಸಲಾಗಿದ್ದ ಎತ್ತಿನ ಗಾಡಿಯಲ್ಲಿ ಕುಳ್ಳಿರಿಸಿಕೊಂಡು ಶಾಲೆಗೆ ಕರೆತರಲಾಯಿತು.  ಈ ಮೂಲಕ ಶಾಲೆ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ವಿಶೇಷ ಮೆರಗು ಕಲ್ಪಿಸಲಾಯಿತು. ಈ ಕಾರ್ಯಕ್ರಮದದಲ್ಲಿ ಅತಿಥಿಯಾಗಿ ಪಾಲ್ಗೊಂಡ […]

ದೀಪಕ ಶಿಂತ್ರೆ ಅವರಿಗೆ ಪತ್ರಕರ್ತ ರತ್ನ ಪ್ರಶಸ್ತಿ

ವಿಜಯಪುರ: ನಗರದ ಹಿರಿಯ ಪತ್ರಕರ್ತ ಮತ್ತು ಕಾರ್ಯನಿರತ ಪತ್ರಕರ್ತರ ಸಂಘದ ಸಹ ಖಜಾಂಚಿ ದೀಪಕ ಶಿಂತ್ರೆ ಅವರು ಮಹಾರಾಷ್ಟ್ರ ರಾಜ್ಯ ಪತ್ರಕರ್ತರ ಸಂಘ ಪತ್ರಕರ್ತ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.  ಕಳೆದ 25 ವರ್ಷಗಳಿಂದ ಪತ್ರಿಕಾ ರಂಗದಲ್ಲಿ1998ರಿಂದ ಸಕ್ರೀಯರಾಗಿರುವ ದೀಪಕ ಶಿಂತ್ರೆ ಅವರು ಮಹಾರಾಷ್ಟ್ರದ ಮರಾಠಿ ದಿನಪತ್ರಿಕೆಗಳಾದ ಸಂಚಾರ, ತರುಣ ಭಾರತ, ಸ್ವರಾಜ್ಯ (ಸೊಲಾಪೂರ), ಲಲಕಾರ, ಮಹಾ ಸತ್ತಾ (ಸಾಂಗಲಿ) ಅಲ್ಲದೇ ಬೆಳಗಾವಿಯಿಂದ ಪ್ರಕಟವಾಗುವ ಪುಡಾರಿ ಹಾಗೂ ಸ್ವತಂತ್ರ ಪ್ರಗತಿ ಮರಾಠಿ ದಿನಪತ್ರಿಕೆಗಳಲ್ಲಿ ಕೆಲಸ ಮಾಡಿದ್ದಾರೆ.  ಅಲ್ಲದೇ, ಕೈಫಿಯತ್ […]

ಮೇ ಸಾಹಿತ್ಯ ಸಮ್ಮೇಳನದಲ್ಲಿ ಕೈಗೊಳ್ಳಲಾದ ಎಂಟು ಹಕ್ಕೋತ್ತಾಯ ಈಡೇರಿಸಲು ಆಗ್ರಹಿಸಿ ಮನವಿ ಪತ್ರ ಸಲ್ಲಿಕೆ

ವಿಜಯಪುರ: ನಗರದಲ್ಲಿ ಮೇ 27 ಮತ್ತು 28 ರಂದು ನಡೆದ 9ನೇ ಮೇ ಸಾಹಿತ್ಯ ಸಮ್ಮೇಳನದಲ್ಲಿ ಕೈಗೊಳ್ಳಲಾದ ಎಂಟು ಹಕ್ಕೋತ್ತಾಯಗಳನ್ನು ಈಡೇರಿಸಲು ಆಗ್ರಹಿಸಿ ಲಡಾಯಿ ಪ್ರಕಾಶನ, ಕವಿ ಪ್ರಕಾಶನ, ಚಿತ್ತಾರ ಕಲಾ ಬಳಗ ಮ್ತತು ಮೇ ಸಾಹಿತ್ಯ ಮೇಳ ಬಳಗದ ವತಿಯಿಂದ ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.  ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ಪತ್ರಕರ್ತ ಅನಿಲ ಹೊಸಮನಿ, ಮೇ 27 ಮತ್ತು 28 ರಂದು ವಿಜಯಪುರದಲ್ಲಿ […]

ಬುಧವಾರ ಶಾಲೆಗಳು ಪುನಾರಂಭ: ಮಕ್ಕಳ ಸ್ವಾಗತಕ್ಕೆ ಶಾಲೆಗಳಲ್ಲಿ ಅಗತ್ಯ ಸಿದ್ಧತೆ- ಜಿ. ಪಂ. ಸಿಇಒ ರಾಹುಲ ಶಿಂಧೆ ಮನವಿ

ವಿಜಯಪುರ: 2023-24ನೇ ಶೈಕ್ಷಣಿಕ ವರ್ಷದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಮೇ 31 ಬುಧವಾರದಿಂದ ಪ್ರಾರಂಭವಾಗುತ್ತಿದ್ದು,ಶಾಲಾ ಕೊಠಡಿ ಹಾಗೂ ಶಾಲಾ  ಆವರಣವನ್ನು ಸ್ವಚ್ಛಗೊಳಿಸಿ ಎಲ್ಲಾ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತಿಯ ಸಿಇಓ ರಾಹುಲ್ ಶಿಂಧೆ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ 3345 ಶಾಲೆಗಳಲ್ಲಿ 5.28 ಲಕ್ಷ ಮಕ್ಕಳಿದ್ದು, ಶಾಲೆಗಳನ್ನು ಅಲಂಕರಿಸಿ ಮಕ್ಕಳನ್ನು ಸ್ವಾಗತಿಸಲು ಕ್ರಮ ಕೈಗೊಳ್ಳಲಾಗಿದೆ.  ಎಲ್ಲ ಮಕ್ಕಳಿಗೂ ಸಮವಸ್ತ್ರ ಮತ್ತು ಪಠ್ಯ ಪುಸ್ತಕ ವಿತರಣೆ ಮಾಡಲು ಸಹ ಸಿದ್ಧತೆ […]

ವಿಜಯಪುರ ತಾಲೂಕಿನ ನಾನಾ ಗ್ರಾಮಗಳಿಗೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಓ ರಾಹುಲ ಶಿಂಧೆ

ವಿಜಯಪುರ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ರಾಹುಲ ಶಿಂಧೆ ಅವರು ವಿಜಯಪುರ ತಾಲೂಕಿನ ನಾನಾ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ನಾನಾ ಯೋಜನೆಯಡಿ ಪ್ರಗತಿಯಲ್ಲಿರುವ ಕಾಮಗಾರಿ ಪರಿಶೀಲನೆ ನಡೆಸಿದರು. ಹಡಗಲಿ ಎಲ್ ಟಿ  ಗ್ರಾಮದ  ಅಂಗನವಾಡಿ ಕಟ್ಟಡ ನಿರ್ಮಾಣದ ಕಾರ್ಯ ಪರಿಶೀಲಿಸಿದರು. ಹಡಗಲಿ   ಎಲ್ ಟಿ-2 ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ  ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ಅಂಗನವಾಡಿ ಮಕ್ಕಳಿಗೆ ಒದಗಿಸುವ ಪೌಷ್ಠಿಕ ಆಹಾರದ ವಿವರ ಪಡೆದುಕೊಂಡರು.  ಹಡಗಲಿ ಗ್ರಾಮದ ಸರಕಾರಿ ಹಿರಿಯ […]

ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ವಹಿಸಿ- ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ

ವಿಜಯಪುರ: ಮಳೆಗಾಲ ಆರಂಭವಾಗಿರುವುದರಿಂದ ಯಾವುದೇ ಸಾಂಕ್ರಾಮಿಕ ರೋಗಗಳು ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಮತ್ತು ವಿಶ್ವ ಮಲೇರಿಯಾ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಡೆಂಗ್ಯೂಮತ್ತು ಮಲೇರಿಯಾ ರೋಗಗಳ ಸ್ಥಿತಿಗತಿ, ನಿವಾರಣೆ ಹಾಗೂ ಕಾರ್ಯತಂತ್ರದ ಬಗ್ಗೆ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಮುಂಜಾಗೃತೆ ಕ್ರಮಗಳನ್ನು ಕೈಗೊಂಡು ಡೆಂಗ್ಯೂ ಮಲೇರಿಯಾ ರೋಗ […]

ಬಾಗಲಕೋಟೆ ಬಿವಿವಿ.ಎಸ್ ಹೋಮಿಯೋಪಥಿಕ ವೈದ್ಯಕೀಯ ಮಹಾ ವಿದ್ಯಾಲಯದಲ್ಲಿ ಖೇಲ್ ಔರ್ ಕಲಾ ಕ್ರೀಡಾಕೂಟ

ಬಾಗಲಕೋಟೆ: ನಗರದ ಬವಿವಿ ಸಂಘದ ಹೋಮಿಯೋಪಥಿಕ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಆರು ದಿನಗಳ ಕಾಲ ಆಯೋಜಿಸಲಾದ ಖೇಲ್ ಔರ ಕಲಾ ವಾಷಿ೯ಕ ಕ್ರೀಡಾಕೂಟಕ್ಕೆ ಜಿಲ್ಲಾ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಜಿ. ಸಿ. ಡೂಗನವರ ಚಾಲನೆ ನೀಡಿದರು.  ಬಳಿಕ ಮಾತನಾಡಿದ ಅವರು, ವಿದ್ಯಾಥಿ೯ಗಳಿಗೆ ಶೈಕ್ಷಣಿಕ ಪಠ್ಯಗಳಲ್ಲಿ ಯಶಸ್ವಿಯಾಗಲು ಕ್ರೀಡೆಗಳು ಅವಶ್ಯ.  ಸದೃಢವಾದ ಶರೀರದಲ್ಲಿ ಮಾತ್ರ ಸದೃಡ ಮನಸ್ಸು ಇರಲು ಸಾಧ್ಯ ಎಂದು ಹೇಳಿದರು. ಕಾಲೇಜನ ಆಡಳಿತ ಮಂಡಳಿಯ ಅಧ್ಯಕ್ಷ ಮಲ್ಲಿಕಾಜು೯ನ ಸಾಸನೂರ ಮಾತನಾಡಿ, ಕ್ರೀಡೆಗಳು […]

ಮಿಲಾಪ್ ನಿಂದ ಬೆಂಗಳೂರಿನಲ್ಲಿ ಕೂದಲು ದೇಣಿಗೆ ಉಪಕ್ರಮ, ಕ್ಯಾನ್ಸರ್ ಗೆದ್ದವರ ಭೇಟಿಯ ಮೂಲಕ ಕ್ಯಾನ್ಸರ್ ಗೆದ್ದವರ ದಿನ ಆಚರಣೆ

ಬೆಂಗಳೂರು: ರಾಷ್ಟ್ರೀಯ ಕ್ಯಾನ್ಸರ್ ಗೆದ್ದವರ ದಿನಾಚರಣೆ ಅಂಗವಾಗಿ ಭಾರತದ ಅತ್ಯಂತ ದೊಡ್ಡ ಕ್ರೌಡ್ ಫಂಡಿಂಗ್ ಪ್ಲಾಟ್‍ಫಾರಂ ಮಿಲಾಪ್ ನಗರದ ಕ್ಯಾನ್ಸರ್ ಗೆದ್ದವರಿಗೆ ಬೆಂಬಲಿಸಲು ಇಂಡಿಯನ್ ಕ್ಯಾನ್ಸರ್ ಸೊಸೈಟಿ ಬೆಂಗಳೂರು ಮತ್ತು ಬೆಂಗಳೂರು ಹೇರ್ ಡೊನೇಷನ್ ಸಹಯೋಗದಲ್ಲಿ ಒಂದು ದಿನವಿಡೀ ಕಾರ್ಯಕ್ರಮ ನಡೆಯಿತು.  ನಗರದ ಸಲೂನ್‍ಗೆ ಕೂದಲು ದಾನ ನೀಡುವ ಮೂಲಕ ಕಾರ್ಯಕ್ರಮ ಆರಂಭವಾಯಿತು.  ನಂತರ ಕ್ಯಾನ್ಸರ್ ಗೆದ್ದವರು, ಅವರ ಕುಟುಂಬಗಳ ಭೇಟಿ ಮತ್ತು ದಾನಿಗಳಿಗೆ ಈ ಸ್ಥಿತಿಯ ಕುರಿತು ಅರಿವನ್ನು ಮೂಡಿಸುವುದು ಮತ್ತು ರೋಗದ ವಿರುದ್ಧ ಹೋರಾಡುವಲ್ಲಿ […]