ಡಿಜಿಟಲ್ ಇಂಡಿಯಾ ವಿಶ್ವದಲ್ಲಿ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಮುಂಚೂಣಿ ರಾಷ್ಟ್ರವಾಗಿರಲು ಕೊಡುಗೆ ನೀಡಿದೆ- ಡಾ. ಹರಿಕೃಷ್ಣ ಮಾರಮ

ವಿಜಯಪುರ: ಜಾಗತಿಕ ಮಟ್ಟದ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಮುಂಚೂಣಿ ರಾಷ್ಟ್ರವಾಗಿರುವುದಕ್ಕೆ ಡಿಜಿಟಲ್ ಇಂಡಿಯಾ ಕಾರ್ಯಕ್ರಮದ ಕೊಡುಗೆ ಅಪಾರವಾಗಿದೆ ಎಂದು ಡಿಜಿಟಲ್ ಬ್ರ್ಯಾಂಡ ಅಂಬ್ಯಾಸಡರ್ ಹಾಗೂ ವಿಜನ್ ಡಿಜಿಟಲ್ ಇಂಡಿಯಾದ ಅಧ್ಯಕ್ಷ ಡಾ. ಹರಿಕೃಷ್ಟ ಮಾರಮ ಅಭಿಪ್ರಾಯಪಟ್ಟರು. ತೊರವಿ ಬಳಿ ಇರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವ್ಯವಹಾರ ಅಧ್ಯಯನ ವಿಭಾಗ ನವದೆಹಲಿಯ ಐ ಸಿ ಎಸ್‍ ಎಸ್‍ ಆರ್ ಸಹಯೋಗದೊಂದಿಗೆ ‘ಜಾಗತಿಕ ಯುಗದಲ್ಲಿ ಡಿಜಿಟಲ್ ಇಂಡಿಯಾ ಭವಿಷ್ಯದ ನಿರೀಕ್ಷೆಗಳು ವಿಷಯದ ಕುರಿತು ಆಯೋಜಿಸಲಾಗಿರುವ ಎರಡು ದಿನಗಳ […]

ಮುಂಗಾರು ಮಳೆ: ಮುಂಜಾಗ್ರತಾ ಕ್ರಮಗಳ ಪೂರ್ವಸಿದ್ಧತಾ ಸಭೆ- ಯಾವುದೇ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿರಲು ಡಾ. ದಾನಮ್ಮನವರ ಸೂಚನೆ

ವಿಜಯಪುರ:  ಅತಿವೃಷ್ಟಿ ಪರಿಸ್ಥಿತಿ ಹಾಗೂ ಮುಂಬರುವ ಮಳೆಗಾಲ ಸಂದರ್ಭದಲ್ಲಿ ಜನರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಎಲ್ಲ ಇಲಾಖಾ ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಯಾವುದೇ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸನ್ನದ್ಧರಾಗುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಸೂಚನೆ ನೀಡಿದ್ದಾರೆ.  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮುಂಗಾರು ಮಳೆಯ ಮುಂಜಾಗ್ರತಾ ಕ್ರಮಗಳ ಕುರಿತ ಜರುಗಿದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಮಳೆಗಾಲದ ಸಂದರ್ಭದಲ್ಲಿ ವಿವಿಧ ಪ್ರದೇಶಗಳ ತಗ್ಗು ಪ್ರದೇಶಗಳಲ್ಲಿ ನೀರು ಹರಿಯದೇ ಒಂದೇ ಕಡೆ ನಿಲ್ಲುವುದರಿಂದ […]

ಆಲಿಕಲ್ಲು ಮಳೆಯಿಂದಾಗಿ ಬೆಳೆಹಾನಿ- ಪರಿಹಾರಕ್ಕೆ ಆಗ್ರಹಿಸಿ ಜಂಬಗಿ (ಆ) ಗ್ರಾಮಸ್ಥರಿಂದ ಡಿಸಿಗೆ ಮನವಿ ಪತ್ರ ಸಲ್ಲಿಕೆ

ವಿಜಯಪುರ: ವಿಜಯಪುರ ತಾಲೂಕಿನ ಜಂಬಗಿ (ಆ) ಗ್ರಾಮದಲ್ಲಿ ಸುರಿದ ಆಲಿಕಲ್ಲು ಸಹಿತ ಭಾರಿ ಮಳೆಯಿಂದ ಅಪಾರ ಬೆಳೆ ಹಾನಿಯಾಗಿದ್ದು, ರೈತರಿಗೆ ಬೆಳೆ ಪರಿಹಾರ ನೀಡುವಂತೆ ಆಗ್ರಹಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರಿಗೆ ಮನವಿ ಪತ್ರ ಸಲ್ಲಿಸಿದರು.  ಬುಧವಾರ ಸಂಜೆ ಸುರಿದ ಗಾಳಿ, ಆಲಿಕಲ್ಲು ಸಹಿತ ಮಳೆಯಿಂದಾಗಿ ಗ್ರಾಮದಲ್ಲಿ ಬೆಳೆದ ದಾಳಿಂಬೆ, ದ್ರಾಕ್ಷಿ, ನಿಂಬೆ, ಮಾವಿನ ಗಿಡಗಳು ಧರೆಗುರುಳಿವೆ.  ಅಲ್ಲದೇ, ರೈತರ ವಾಸಿಸುತ್ತಿದ್ದ ಪತ್ರಾಸ ಶೆಡ್ಡುಗಳು ಕೂಡ ಕಿತ್ತು ಹೋಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.  […]

ಎಂಜಿನಿಯರುಗಳು ಉದ್ಯೋಗ ಸೃಷ್ಠಿಸಬೇಕೇ ಹೊರತು ಉದ್ಯೋಗ ಹುಡುಕುವಂತಾಗಬಾರದು- ಡಿಸಿ ಡಾ. ದಾನಮ್ಮನವರ

ವಿಜಯಪುರ: ಎಂಜಿನಿಯರುಗಳು ಉದ್ಯೋಗ ಸೃಷ್ಠಿಕರ್ತರಾಗಬೇಕೇ ಹೊರತು ಉದ್ಯೋಗ ಹುಡುಕುವಂತಾಗಬಾರದು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಹೇಳಿದ್ದಾರೆ. ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಇ ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮೂರು ದಿನಗಳ ಓಪನಡೇ, ಇನವಿಕ್ಟಸ್ ತಾಂತ್ರಿಕ ಉತ್ಸವ ಹಾಗೂ ಸಂಭ್ರಮ ವಾರ್ಷಿಕ ದಿನಾಚರಣೆ ಮೂರು ದಿನಗಳ ಕಾರ್ಯಕ್ರಮಕ್ಕೆ ನಡೆಯುತ್ತಿದೆ. ಆಕಾಶಕ್ಕೆ ಬಲೂನನ್ನು ಹಾರಿಸುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಭಾರತ ಆರ್ಥಿಕವಾಗಿ, ತಂತ್ರಜ್ಞಾನ […]

ಜಾಗತಿಕವಾಗಿ ಯಶಸ್ವಿಯಾಗಲು ಸ್ಪರ್ಧಾತ್ಮಕ ಶಿಕ್ಷಣ ನೀಡುವುದು ರಾಷ್ಟ್ರೀಯ ಶಿಕ್ಷಣ ನೀತಿ ಉದ್ದೇಶವಾಗಿದೆ- ಪ್ರೊ. ವೈ. ಎಸ್. ಸಿದ್ದೇಗೌಡ

ವಿಜಯಪುರ: ಜಾಗತಿಕ ಮಟ್ಟದ ಸ್ಪರ್ಧಾತ್ಮಕ ವಾತಾವರಣದಲ್ಲಿ ಯಶಸ್ವಿಯಾಗುವಂಥ ಶಿಕ್ಷಣ ನೀಡುವುದು ರಾಷ್ಟ್ರೀಯ ಶಿಕ್ಷಣ ನೀತಿ-2020ರ ಮುಖ್ಯ ಉದ್ದೇಶವಾಗಿದೆ ಎಂದು ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ. ವೈ. ಎಸ್. ಸಿದ್ದೇಗೌಡ ಹೇಳಿದ್ದಾರೆ.  ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಐಕ್ಯೂಎಸಿ ಘಟಕದ ಆಶ್ರಯದಲ್ಲಿ ನಡೆದ ಕೃತಕ ಬುದ್ದಿಮತ್ತೆ ಬೋಧನಾ ಕೌಶಲಗಳು ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ನಾನಾ ಕೌಶಲಯುತ ಶಿಕ್ಷಣ, ಜ್ಞಾನ ಸಂಪಾದಿಸುವ ಮೂಲಕ ಜೀವನದ ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಸಾಧಿಸುವಂತಹ […]

ಕನ್ನಡ ಮಾಧ್ಯಮದಲ್ಲಿ ಯುಪಿಎಸ್‌ಸಿ ಪರೀಕ್ಷೆ ಪಾಸು ಮಾಡಿದ ಬಸವನಾಡಿನ ಯುವಕ ಯಲಗೂರೇಶ ನಾಯಕ

ವಿಜಯಪುರ: ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ.  ಕಠಿಣ ಪ್ರರಿಶ್ರಮ ಮತ್ತು ಶ್ರದ್ಧೆ ಇದ್ದರೆ ಸಾಕು ಯಾವ ಮಾಧ್ಯಮವಾದರೇನು ಕನಸನ್ನು ನನಸು ಮಾಡಬಹುದು ಎಂಬುದಕ್ಕೆ ಬಸವನಾಡು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಸರೂರ ತಾಂಡಾದ ಯುವಕ ಯಲಗೂರೇಶ ಅರ್ಜುನ ನಾಯಕ ಸಾಕ್ಷಿಯಾಗಿದ್ದಾರೆ. ಕನ್ನಡ ಮಾಧ್ಯಮದಲ್ಲಿ ಯು ಪಿ ಎಸ್ ಸಿ ಪರೀಕ್ಷೆ ಪಡೆದು ರಾಷ್ಟ್ರ ಮಟ್ಟದಲ್ಲಿ 890ನೇ ಸ್ಥಾನ ಪಡೆದಿರುವ ಯುವಕ ಈಗ ವಿಜಯ.ಪುರ ಜೆಲ್ಲೆಯ ಜನತೆಯಲ್ಲಿ ಸಂತಸ ಮೂಡಿಸಿದ್ದಾರೆ. ಈ ಸುದ್ದಿ ತಿಳಿದಿದ್ದೇ ತಡ ಯಲಗೂರೇಶ ನಾಯಕ […]

ಐತಿಹಾಸಿಕ ಗೋಳಗುಮ್ಮಟ ಆವರಣದಲ್ಲಿ ಯೋಗೋತ್ಸವ ಕಾರ್ಯಕ್ರಮ

ವಿಜಯಪುರ: ಯೋಗೋತ್ಸವದ ಅಂಗವಾಗಿ ಮಾನವೀಯತೆಗಾಗಿ ಯೋಗ ಕಾರ್ಯಕ್ರಮ ನಗರದ ಐತಿಹಾಸಿಕ ಗೋಳಗುಮ್ಮಟ ಆವರಣದಲ್ಲಿ ನಡೆಯಿತು. ಕಾತ್ರಾಳ ಗುರುದೇವ ಆಶ್ರಮದ ಡಾ. ಅಮೃತಾನಂದ ಸ್ವಾಮೀಜಿ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಿ.ಎಲ್.ಡಿ.ಇ ಸಂಸ್ಥೆಯ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಯೋಗ ಮತ್ತು ವ್ಯಾಯಾಮ ವಿಜ್ಞಾನ ಕೇಂದ್ರ, ಶರೀರಶಾಸ್ತ್ರ ವಿಭಾಗ ಮತ್ತು ನವದೆಹಲಿಯ ಮೊರಾರ್ಜಿ ದೇಸಾಯಿ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಯೋಗ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಿತು. ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಆರ್. ಎಸ್. ಮುಧೋಳ, ವೈದ್ಯಕೀಯ ಮಹಾವಿದ್ಯಾಲಯದ ಉಪಪ್ರಾಚಾರ್ಯ […]

ಜೂ. 6ರಂದು ಜಿಲ್ಲಾದ್ಯಂತ 14 ಸ್ಥಳಗಳಲ್ಲಿ ಪಿಂಚಣಿ ಅದಾಲತ್- ಡಿಸಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ

ವಿಜಯಪುರ: ಸಾಮಾಜಿಕ ಭದ್ರತಾ ಯೋಜನಯೆಡಿ ಪಿಂಚಣಿದಾರರ ಅಹವಾಲು ಆಲಿಸಲು ಹಾಗೂ ಅರ್ಹರಿಗೆ ಪಿಂಚಣಿ ಮಂಜೂರು ಮಾಡಲು ಜೂ. 6ರಂದು ಜಿಲ್ಲೆಯ 14 ಗ್ರಾಮಗಳಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರು ತಿಳಿಸಿದ್ದಾರೆ. ಜೂ. 6 ರಂದು ಬೆ. 11 ಗಂಟೆಗೆ ವಿಜಯಪುರ ಉಪವಿಭಾಗಾಧಿಕಾರಿ ಕ್ಯಾ. ಮಹೇಶ ಮಾಲಗಿತ್ತಿ ಅವರು  ವಿಜಯಪುರ ನಗರದ ವಾರ್ಡ ನಂ.14ರ ಮಾಂಗಗಾರುಡಿ ತರುಣ ಸಂಘ ಸಮುದಾಯ ಭವನದಲ್ಲಿ, ಇಂಡಿ ಉಪವಿಭಾಗಾಧಿಕಾರಿಗಳು ಅಂಬಳನೂರ ಗ್ರಾಮದ ಶ್ರೀ […]

ಜೂ 22ರವರೆಗೆ ಜಿಲ್ಲೆಯ ಎಲ್ಲ ಗ್ರಾ. ಪಂ. ಮಟ್ಟದಲ್ಲಿ ನರೇಗಾ ಯೋಜನೆಯ ಕಾಮಗಾರಿ ಸ್ಥಳದಲ್ಲಿ ಉಚಿತ ಆರೋಗ್ಯ ತಪಾಸಣೆ- ರಾಹುಲ ಶಿಂಧೆ

ವಿಜಯಪುರ: ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ಕಾಮಗಾರಿಗಳಲ್ಲಿ ಕೆಲಸ ನಿರ್ವಹಿಸುವ ಕೂಲಿ ಕಾರ್ಮಿಕರಿಗಾಗಿ ಮೇ 22 ರಿಂದ ಜೂನ್ 22ರ ವರೆಗೆ ಒಂದು ತಿಂಗಳು ಗ್ರಾಮ ಆರೋಗ್ಯ ಅಭಿಯಾನ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ನರೇಗಾ ಕೂಲಿ ಕಾರ್ಮಿಕರ ಆರೋಗ್ಯದ ದೃಷ್ಟಿಯಿಂದ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ಆದೇಶದ ಮೇರೆಗೆ ಆರೋಗ್ಯ ಸೇವೆ ಒದಗಿಸುವ ಕರ್ನಾಟಕ ಆರೋಗ್ಯ ಸಂವರ್ಧನಾ ಸಂಸ್ಥೆ (ಕರ್ನಾಟಕ […]

ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಿದ ಅಧಿಕಾರಿ, ಸಿಬ್ಬಂದಿಗಳಿಗೆ ಪ್ರಶಸ್ತಿ ವಿತರಣೆ

ವಿಜಯಪುರ: ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಚಟುವಟಿಕೆಗಳಲ್ಲಿ ಉತ್ತಮ ಸಾಧನೆ ಮಾಡಿದ ಹಾಗೂ 2022-23ನೇ ಆರ್ಥಿಕ ವರ್ಷದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ವಿಷಯಗಳ ಬಗ್ಗೆ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, […]