ಸಿಎಂ ಆಗಿ ಸಿದ್ಧರಾಮಯ್ಯ, ಡಿಸಿಎಂ ಆಗಿ ಡಿಕೆಶಿ, ಎಂ. ಬಿ. ಪಾಟೀಲ ಶಾಸಕರು ಸಚಿವರಾಗಿ ಪ್ರಮಾಣ ವಚನ‌ ಸ್ವೀಕಾರ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ನೂತನ ಸರಕಾರ ಅಧಿಕಾರಕ್ಕೆ ಬಂದಿದ್ದು, ಸಿಎಂ‌ ಆಗಿ ಎಸ್. ಸಿದ್ಧರಾಮಯ್ಯ ಮತ್ತು ಡಿಸಿಎಂ ಆಗಿ ಡಿ. ಕೆ. ಶಿವಕುಮಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಎಂಟು ಜನ‌ ಶಾಸಕರು ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಹಿರಿಯ ಶಾಸಕರಾದ ಡಾ. ಜಿ. ಪರಮೇಶ್ವರ, ಕೆ. ಎಚ್. ಮುನಿಯಪ್ಪ, ಕೆ. ಜೆ. ಜಾರ್ಜ್, ಎಂ. ಬಿ. […]

ಸಿಎಂ, ಡಿಸಿಎಂ ಜೊತೆ ಎಂ. ಬಿ. ಪಾಟೀಲ ಸೇರಿ ಎಂಟು ಜನ ಸಚಿವರಾಗಿ ಇಂದು ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಕಾಂಗ್ರೆಸ್ ನೂತನ ಸರಕಾರ ಇಂದು ಅಧಿಕಾರಕ್ಕೆ ಬರಲಿದ್ದು, ಮುಖ್ಯಮಂತ್ರಿಯಾಗಿ ಎಸ್. ಸಿದ್ಧಾರಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿ. ಕೆ. ಶಿವಕುಮಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.  ಸಿಎಂ, ಡಿಸಿಎಂ ಜೊತೆ ಸಧ್ಯಕ್ಕೆ ಎಂಟು ಜನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲು ಕಾಂಗ್ರೆಸ್ ಹೈಕಮಾಂಡ್ ಪಟ್ಟಿ ಅಂತಿಮಗೊಳಿಸಿದೆ.  ಈ ಪಟ್ಟಿ ಬಸವನಾಡು ವೆಬ್ ಗೆ ಲಭ್ಚವಾಗಿದೆ.  ಜಾತಿ ಮತ್ತು ಪ್ರದೇಶವಾರು ಲೆಕ್ಕಾಚಾರ ಹಾಕಿ ಮೊದಲ ಹಂತದಲ್ಲಿ ಎಂಟು ಜನ ಶಾಸಕರು ಸಚಿವರಾಗಲು ಕಾಂಗ್ರೆಸ್ ಹೈಕಮಾಂಡ್ ಅವಕಾಶ ನೀಡಿದೆ.  ಈ ಎಂಟು […]

ಮಗಳೆದುರು ತಾಯಿಯನ್ನು ಕೊಲೆ ಮಾಡಿದ ಆರೋಪಿಗೆ ಮರಣ ದಂಡನೆ ವಿಧಿಸಿದ ವಿಜಯಪುರ ನ್ಯಾಯಾಲಯ

ವಿಜಯಪುರ: ಮಹಿಳೆಯೊಬ್ಬಳನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಆರೋಪಿಗೆ ವಿಜಯಪುರ 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ. ಸಿಂದಗಿ ತಾಲೂಕಿನ ಕೊಕಟನೂರ ಗ್ರಾಮದ ಆರೋಪಿ ಅಕ್ಬರ್ ಉರ್ಫ್ ಅಕ್ಬರಬಾಷಾ ಗಾಲಿಬಸಾಬ ಬಾಗವಾನ ಎಂಬಾತನ ವಿರುದ್ಧ ದಾಖಲಾಗಿದ್ದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಸತೀಶ ಎಲ್. ಪಿ. ಮರಣ ದಂಡನೆ ವಿಧಿಸಿ ಆದೇಶ ಹೊರಡಿಸಿದ್ದಾರೆ ಎಂದು ಸರಕಾರ ಪರ ಅಭಿ.ಯೋಜಕಿ ವಿ. ಎಸ್. ಇಟಗಿ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಘಟನೆ ಹಿನ್ನೆಲೆ […]

ಜುಲೈ 8 ರಂದು ಜಿಲ್ಲಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್- ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶ- ನ್ಯಾಯಾಧೀಶ ವೆಂಕಣ್ಣ ಹೊಸಮನಿ

ವಿಜಯಪುರ: ಜಿಲ್ಲಾ ಕೇಂದ್ರ ಸೇರಿದಂತೆ ಜಿಲ್ಲಾದ್ಯಂತ ಇರುವ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ಜುಲೈ 8 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದ್ದು, ಈ ಅದಾಲತನಲ್ಲಿ ಕಕ್ಷಿದಾರರು ಭಾಗವಹಿಸಿ, ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶವಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವೆಂಕಣ್ಣ ಬಿ. ಹೊಸಮನಿ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಕಕ್ಷಿದಾರರು ಈ ಅದಾಲತ್ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದ್ದಾರೆ. […]

ರೂ. 2000 ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ನಿರ್ಧರಿಸಿದ ಆರ್ ಬಿ ಐ- 30 ಸೆಪ್ಟೆಂಬರ್ 2023ರ ವರೆಗೆ ನೋಟುಗಳ ಬದಲಾವಣೆಗೆ ಅವಕಾಶ

ನವದೆಹಲಿ: ರೂ. 2000 ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್(ಆರ್ ಬಿ ಐ) ನಿರ್ಧರಿಸಿದೆ.  ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಆರ್ ಬಿ ಐ ಚೀಫ್ ಜನರಲ್ ಮ್ಯಾನೇಜರ್ ಯೋಗೇಶ ದಯಾಳ, ನವೆಂಬರ್ 2016ರಲ್ಲಿ ರೂ. 500 ಮತ್ತು ರೂ. 1000 ನೋಟುಗಳನ್ನು ಬ್ಯಾನ್ ಮಾಡಿದ ನಂತರ ಆರ್ಥಿಕ ಪರಿಸ್ಥಿತಿಗೆ ಅನುಕೂಲವಾಗಲು ರೂ. 2000 ನೋಟುಗಳನ್ನು ಪರಿಚಯಿಸಲಾಗಿತ್ತು.  ಇತರ ನೋಟುಗಳು ಸಾಕಷ್ಟು ಪ್ರಮಾಣದಲ್ಲಿ ಜನರಿಗೆ ಲಭ್ಯವಾಗುವ ನಿಟ್ಟಿನಲ್ಲಿ ರೂ. 2000 ನೋಟನ್ನು ಬಿಡುಗಡೆ ಮಾಡಲಾಗಿತ್ತು.  […]

ಉಮರಾಣಿ ಗ್ರಾಮ ಪಂಚಾಯತಿ ಕೇಂದ್ರ ಸ್ಥಾನ ಕೆರೂರ ಗ್ರಾಮಕ್ಕೆ ಸ್ಥಳಾಂತರ- ಡಿಸಿ ಡಾ. ದಾನಮ್ಮನವರ

ವಿಜಯಪುರ: ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಕೆರೂರ ಗ್ರಾಮ ಪಂಚಾಯತಿಯ ಕೇಂದ್ರ ಸ್ಥಾನವನ್ನು ಮತ್ತೆ ಕೆರೂರ ಗ್ರಾಮಕ್ಕೆ ಸ್ಥಳಾಂತರ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ತಿಳಿಸಿದ್ದಾರೆ. ಈ ಮುಂಚೆ ಕೆರೂರಿನಲ್ಲಿದ್ದ ಕೇಂದ್ರ ಸ್ಥಾನವನ್ನು ಉಮರಾಣಿ ಗ್ರಾಮಕ್ಕೆ ಸ್ಥಳಾಂತರಿಸಿ ಸರಕಾರ ಅಧಿಸೂಚನೆ ಹೊರಡಿಸಿತ್ತು.  ಕಲಬುರ್ಗಿ ಹೈಕೋರ್ಟ್ ಪೀಠ ಅಧಿಸೂಚನೆಯನ್ನು ಮಾನ್ಯ ಮಾಡದ ಕಾರಣ ಈ ಮುಂಚೆ ಇದ್ದಂತೆ ಕೆರೂರಿಗೆ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನವನ್ನು ಸ್ಥಳಾಂತರ ಮಾಡಲಾಗಿದೆ. ಈ ಕೆರೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ […]

ತಾಳಿಕೋಟಿ ತಾಲೂಕಿನ ನಾನಾ ಗ್ರಾ. ಪಂ. ಗಳಿಗೆ ಜಿ. ಪಂ. ಸಿಇಓ ರಾಹುಲ ಶಿಂಧೆ ಭೇಟಿ- ಕಾಮಗಾರಿ ಪರಿಶೀಲನೆ

ವಿಜಯಪುರ: ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ಶಿಂಧೆ ಅವರು ತಾಳಿಕೋಟೆ ತಾಲೂಕಿನ ನಾನಾ ಗ್ರಾಮಗಳಿಗೆ  ಭೇಟಿ ನೀಡಿ, ನಾನಾ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ತಾಳಿಕೋಟಿ ತಾಲೂಕಿನ ಕಲಕೇರಿ ಗ್ರಾಮ ಪಂಚಾಯಿತಿಯ ಸದಸ್ಯರೊಂದಿಗೆ ಸಭೆ ನಡೆಸಿ ಗ್ರಾವiದ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ ನಡೆಸಿದರು. ನರೇಗಾ ಯೋಜನೆಯಲ್ಲಿ ಹೆಚ್ಚಿಗೆ ಕೂಲಿಯಾಧಾರಿತ ಕಾಮಗಾರಿಗಳನ್ನು ಆರ್ಥಿಕ ವರ್ಷದ ಆರಂಭದಲ್ಲಿ ಕೈಗೊಂಡಲ್ಲಿ ನಂತರದ ದಿನಗಳಲ್ಲಿ ಸಾಮಗ್ರಿ ಆಧಾರಿತ ಕಾಮಗಾರಿ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪರಿಶೀಲಿಸಲಾಗುವುದು. ನರೇಗಾ ಯೋಜನೆಯಲ್ಲಿ ಹೆಚ್ಚಿನ ಕೂಲಿ ಕಾರ್ಮಿಕರಿಗೆ […]

ಖೊಟ್ಟಿ ಮತದಾರರ ಹೆಸರು ಸೇರ್ಪಡೆ ಕುರಿತು ನ್ಯಾಯಾಂಗ ತನಿಖೆ ನಡೆಸು ಆಗ್ರಹ- ಅಬ್ದುಲ್ ಹಮೀದ್ ಮುಶ್ರಿಫ್ ನೇತೃತ್ವದಲ್ಲಿ ಮನವಿ ಪತ್ರ ಸಲ್ಲಿಕೆ

ವಿಜಯಪುರ: ಬಿಜಾಪುರ ನಗರ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಖೊಟ್ಟಿ ಹೆಸರುಗಳನ್ನು ಸೇರ್ಪಡೆಯಾಗಿದ್ದು, ಈ ಕುರಿತು ನ್ಯಾಯಾಂಗ ತನಿಖೆ ನಡೆಸುವಂತೆ ಆಗ್ರಹಿಸಿ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರಿಫ್ ಮನವಿ ಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಅಬ್ದುಲ್ ಹಮೀದ್ ಮುಶ್ರಿಫ್ ಮತ್ತು ಕಾಂಗ್ರೆಸ್ ಮುಖಂಡರು ಡಿಸಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಬ್ದುಲ್ ಹಮೀದ್ ಮುಶ್ರಿಫ್, ಬಿಜಾಪುರ ನಗರ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಕಲಬುರಗಿ ಜಿಲ್ಲೆಯ […]

ಶಾಸಕ ಶಿವಾನಂದ ಪಾಟೀಲರಿಗೆ ಡಿಸಿಎಂ, ವಿಜಯಾನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ನೀಡಿ- ಪಂಚಮಸಾಲಿ ಮುಖಂಡ ಶಂಕರಗೌಡ ಬಿರಾದಾರ ಆಗ್ರಹ

ವಿಜಯಪುರ: ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮತ್ತು ಲಿಂಗಾಯತ ಪಂಚಮಸಾಲಿ ಸಮುದಾಯದ ಹಿರಿಯ ಶಾಸಕ ಶಿವಾನಂದ ಪಾಟೀಲ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಮತ್ತು ಜಲಸಂಪನ್ಮೂಲ ಖಾತೆ ನೀಡಬೇಕು ಎಂದು ಅಖಿಲ ಭಾರತ ಲಿಂಗಾಯಿತ ಪಂಚಮಸಾಲಿ ಮಹಾಸಭಾ ಯುವ ಘಟಕದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಂಕರಗೌಡ ಬಿರಾದಾರ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ಶಿವಾನಂದ ಪಾಟೀಲರು ಅತೀ ಹೆಚ್ಚು ಮತ ಪಡೆದು ಆಯ್ಕೆಯಾಗಿದ್ದಾರೆ.  ಕಳೆದ ಮೂರು ದಶಕಗಳಿಂದ ಶಾಸಕರಾಗಿ ಮತ್ತು ಸಚಿವರಾಗಿ ಬಸವನ […]

ಸಿ.ಬಿ.ಎಸ್.ಇ ಪರೀಕ್ಷೆ: ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿನಿ ವಿಜಯಪುರ ನಗರಕ್ಕೆ ಪ್ರಥಮ

ವಿಜಯಪುರ: ಬಿ. ಎಲ್. ಡಿ. ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿ ಪಾವನಿ ಕುಲಕರ್ಣಿ ಈ ಬಾರಿ ಸಿ ಬಿ ಎಸ್ ಇ ಪರೀಕ್ಷೆಯಲ್ಲಿ ವಿಜಯಪುರ ನಗರಕ್ಕೆ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಇತ್ತೀಚೆಗೆ ನಡೆದ ಸಿ ಬಿ ಎಸ್ ಇ 10ನೇ ತರಗತಿ ಫಲಿತಾಂಶ ಪ್ರಕಟವಾಗಿದ್ದು, ಶಾಲೆ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಶಾಲೆಯಿಂದ ಪರೀಕ್ಷೆಯಿಂದ ಹಾಜರಾದ ಎಲ್ಲ 91 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿ […]