ಜಿಲ್ಲೆಯ 24 ಪರೀಕ್ಷಾ ಕೇಂದ್ರಗಳಲ್ಲಿ ಮೇ 20ರಿಂದ 22ರ ವರೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ- ವ್ಯವಸ್ಥಿತ, ಸುಗಮ ಪರೀಕ್ಷೆಗೆ ಡಿಸಿ ಡಾ. ದಾನಮ್ಮನವರ ಸೂಚನೆ

ವಿಜಯಪುರ: ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕಾಗಿ ಇದೇ ಮೇ 20 ರಿಂದ ಮೇ.22 ರವರೆಗೆ ಜಿಲ್ಲೆಯ 24 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗಳನ್ನು ಅತ್ಯಂತ ಸುವ್ಯವಸ್ಥಿತವಾಗಿ ಹಾಗೂ ಸುಸೂತ್ರವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರು ಪರೀಕ್ಷೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.   ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗಾಗಿ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತಾನಾಡಿದ ಅವರು,  ಮೇ.20ರ ಶನಿವಾರದಂದು […]

ತೊಂದರೆಯಲ್ಲಿ ಇರುವವರಿಗೆ ಫಲಾಪೇಕ್ಷೆಯಿಲ್ಲದ ಸಹಾಯ ಮನೋಭಾವ ಬೆಳೆಸಿಕೊಳ್ಳಬೇಕು- ಜಾವೀದ ಜಮಾದಾರ

ವಿಜಯಪುರ: ತೊಂದರೆಯಲ್ಲಿರುವವರಿಗೆ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೇ ಸಹಾಯ ಮಾಡುವ ಮನೋಭಾವವನ್ನು ಬೆಳೆಸಿಕೊಳ್ಳುವುದು ನಿಶ್ವಾರ್ಥ ಸೇವೆಯಾಗುತ್ತದೆ ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕ್ರತರ ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ಡಾ.ಜಾವಿದ ಜಮಾದಾರ ನುಡಿದರು. ತೊರವಿ ಬಳಿ ಇರುವ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕನ್ನಡ ಭವನದಲ್ಲಿ ಆರ್ಟ್ ಆಫ್ ಗಿವ್ಹಿಂಗ್ ಫೌಂಡೇಶನ್ ನವದೆಹಲಿ ಇವರ ಸಹಯೋಗದಲ್ಲಿ ನಡೆದ ವಿಶ್ವ ಸೇವಾ ಮನೋಭಾವ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಸುಂದರ ಸಮಾಜವನ್ನು ಕಟ್ಟಲು ಪ್ರತಿಯೊಬ್ಬರು ಸೇವಾ ಮನೋಭಾವ,  ಸೌಹಾರ್ದತೆಯನ್ನು ಬೆಳೆಸಿಕೊಳ್ಳಲು ಶ್ರಮಿಸಬೇಕು.  ಪ್ರತಿಯೊಬ್ಬರು ತಮ್ಮ ಸುತ್ತಮುತ್ತಲಿನ […]

ಗ್ರಾಮ ಪಂಚಾಯತಿಗಳಲ್ಲಿ ಆನ್ ಲೈನ್ ಮೂಲಕ ತೆರಿಗೆ ಪಾವತಿಗೆ ಅವಕಾಶ- ಸಿಇಓ ರಾಹುಲ ಶಿಂಧೆ

ವಿಜಯಪುರ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆಯ ಸೇವೆಗಳನ್ನು ತ್ವರಿತವಾಗಿ ಆನಲೈನ್ ಮೂಲಕ  ಒದಗಿಸಲು ಬಾಪೂಜಿ ಸೇವಾ ಕೇಂದ್ರ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಿ, ಅನುಷ್ಠಾನಗೊಳಿಸಲಾಗಿದೆ. ಅದರ ಮುಂದಿನ ಭಾಗವಾಗಿ ಈಗ ಬಾಪೂಜಿ ಸೇವಾ ಕೇಂದ್ರ ತಂತ್ರಾಂಶದ ಮೂಲಕ ಸಾರ್ವಜನಿಕರು ಗ್ರಾಮ ಪಂಚಾಯತಿಯ ಆಸ್ತಿ ತೆರಿಗೆಯನ್ನು ಮತ್ತು ಸೇವೆಗಳಿಗೆ ಸಂಬಂಧಿಸಿದ ಶುಲ್ಕಗಳನ್ನು ಆನ್ ಲೈನ್ ಮೂಲಕ ಪಾವತಿಸಲು ಸರಕಾರದಿಂದ ಅನುವು ಮಾಡಿಕೊಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ರಾಹುಲ್ ಶಿಂಧೆ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ […]

ದಿ ಕೇರಳ ಸ್ಟೋರಿ ಚಲನಚಿತ್ರ ಉಚಿತ ವೀಕ್ಷಣೆಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ವ್ಯವಸ್ಥೆ- ಶಾಸಕರ ಪುತ್ರ ರಾಮನಗೌಡ ಪಾಟೀಲ ಯತ್ನಾಳರಿಂದ ಚಾಲನೆ

ವಿಜಯಪುರ: ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ರಾ ಪಾಟೀಲ ಯತ್ನಾಳ ಅವರು, ದೇಶಾದ್ಯಂತ ಸಂಚಲನ ಮೂಡಿಸಿರುವ ‘ದಿ ಕೇರಳ ಸ್ಟೋರಿ’ ಚಲನಚಿತ್ರವನ್ನು ಹಿಂದೂಗಳು ಒಟ್ಟಾಗಿ ಕುಳಿತುಕೊಂಡು ವೀಕ್ಷಣೆ ಮಾಡಲು ನಗರದ ಅಪ್ಸರಾ ಚಿತ್ರಮಂದಿರದಲ್ಲಿ ಮೂರು ದಿನಗಳ ಕಾಲ ಉಚಿತ ವ್ಯವಸ್ಥೆ ಕಲ್ಪಿಸಿದ್ದು, ಪ್ರಥಮ ಶೋ ಪ್ರದರ್ಶನಕ್ಕೆ ಯತ್ನಾಳ ಪುತ್ರ ರಾಮನಗೌಡ ಪಾಟೀಲ ಯತ್ನಾಳ ಚಾಲನೆ ನೀಡಿ, ಚಿತ್ರ ವೀಕ್ಷಿಸಿದರು.  ಈ ಉಚಿತ ಸಿನೇಮಾ ವೀಕ್ಷಣೆಗೆ ಉತ್ಸಾಹದಿಂದ ಆಗಮಿಸಿದ ಜನರು ಸಂಪೂರ್ಣ ಚಿತ್ರ ವೀಕ್ಷಿಸಿದರು.  ಚಿತ್ರಮಂದಿರದಲ್ಲಿ ಇರುವ […]

ವಾಟ್ಸಾಪ್ ನಲ್ಲಿ ಪಾಕಿಸ್ತಾನದ ಪರ ಮೆಸೇಜ್ ಬರೆದು ಕೃಷ್ಣನ ಜನ್ಮಸ್ಥಾನ ಸೇರಿದ ನಾಲತವಾಡದ ಯುವಕ ವೀರೇಶ

ವಿಜಯಪುರ: ಯುವಕನೊಬ್ಬ ವಾಟ್ಸಾಪ್ ನಲ್ಲಿ ಪಾಕಿಸ್ತಾನದ ಪರ ಬರಹ ಬರೆದು ಕೃಷ್ಣನ ಜನ್ಮಸ್ಥಾನ ಸೇರಿದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡದಲ್ಲಿ ನಡೆದಿದೆ. ನಾಲತವಾಡ ಪಟ್ಟಣದ ಕಾನಬಾವಿ ಓಣಿಯ ನಿವಾಸಿ ವೀರೇಶ ಪರಯ್ಯ ಕರ್ಪೂರಮಠ(31) ಎಂಬಾತ ಈ ಕೃತ್ಯ ಎಸಗಿದ್ದು, ಈತನನ್ನು ಬಂಧಿಸಿರುವ ಮುದ್ದೇಬಿಹಾಳ ಪೊಲೀಸರು ನ್ಯಾಯಾಧೀಶರ ಎದುರು ಹಾಜರು ಪಡಿಸಿ ಕೋರ್ಟಿನ ಆದೇಶದಂತೆ ವಿಜಯಪುರ ನಗರದ ದರ್ಗಾದಲ್ಲಿರುವ ಕೇಂದ್ರ ಕಾರಾಗೃಹಕ್ಕೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮುದ್ದೇಬಿಹಾಳ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿರುವ ಅಪ್ಪಾಜಿ ನಾಡಗೌಡ ಹೆಸರಿನ […]

ಕಾಂಗ್ರೆಸ್ ಬಹುಮತ ಪಡೆಯಲು ಲಿಂಗಾಯಿತರ ಪಾತ್ರ ದೊಡ್ಡದು- ಸಮುದಾಯದ ಎಂ. ಬಿ. ಪಾಟೀಲರನ್ನು ಸಿಎಂ ಮಾಡಬೇಕು- ಸಂಗಮೇಶ ಬಬಲೇಶ್ವರ

ವಿಜಯಪುರ: ಕಾಂಗ್ರೆಸ್ ಬಹುಮತ ಪಡೆಯುವಲ್ಲಿ ಲಿಂಗಾಯಿತ ಪಾತ್ರ ಪ್ರಮುಖವಾಗಿದ್ದು, ಸಮುದಾಯಕ್ಕೆ ಸೇರಿರುವ ಎಂ. ಬಿ. ಪಾಟೀಲರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ರಾಷ್ಟ್ರೀಯ ವಕ್ತಾರ ಸಂಗಮೇಶ ಬಬಲೇಶ್ವರ ಆಗ್ರಹಿಸಿದ್ದಾರೆ ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆಯುವುದಕ್ಕೆ ಲಿಂಗಾಯತ ಸಮುದಾಯದ ಕೊಡುಗೆ ಅಪಾರವಾಗಿದೆ.  ನಮ್ಮನ್ನು ಬಳಸಿ ಬಿಸಾಡಿರುವ ಬಿಜೆಪಿಗೆ ಲಿಂಗಾಯತರು ಈಗ ತಕ್ಕಪಾಠ ಕಲಿಸಿದ್ದಾರೆ. ಕಾಂಗ್ರೆಸ್ಸಿನ ಕಡೆ ವಾಲಿರುವ ಲಿಂಗಾಯತ ಸಮುದಾಯದ ಮತಗಳನ್ನು […]

ಬಸವನ ಬಾಗೇವಾಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗೆದ್ದಿದ್ದಾರೆ- ಶಿವಾನಂದ ಪಾಟೀಲರಿಗೆ ಡಿಸಿಎಂ ಆಗುವ ಅರ್ಹತೆ ಇದೆ- ಸಂಯುಕ್ತಾ ಪಾಟೀಲ

ವಿಜಯಪುರ: ಬಸವನ ಬಾಗೇವಾಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಿವಾನಂದ ಪಾಟೀಲ ಪುನರಾಯ್ಕೆಯಾಗಿರುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಕಾರಣ.  ಈ ಗೆಲವು ಕೇವಲ ಕಾಂಗ್ರೆಸ್ ಪಕ್ಷದ ಜಯವಲ್ಲ.  ಶಿವಾನಂದ ಪಾಟೀಲ ಅವರ ಜಯವಲ್ಲ.  ಇದು ಸಮಸ್ತ ಕಾಂಗ್ರೆಸ್ ಕಾರ್ಯಕರ್ತರ ಗೆಲುವು ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕಿ ಮತ್ತು ಶಾಸಕ ಶಿವಾನಂದ ಪಾಟೀಲ ಅವರ ಜೇಷ್ಠ ಪುತ್ರಿ ಸಂಯುಕ್ತಾ ಪಾಟೀಲ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕರ್ತರು ಮಾಡಿರುವ ಶ್ರಮದ ಫಲವಾಗಿ ಶಿವಾನಂದ ಪಾಟೀಲ ಅವರು ಮರುಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು. ಬಸವನ […]

ಯತ್ನಾಳ ಆಗ್ತಾರಾ ಪ್ರತಿಪಕ್ಷದ ನಾಯಕ? ಅಥವಾ ಬಿಜೆಪಿ ರಾಜ್ಯಾಧ್ಯಕ್ಷ? ಹೈಕಮಾಂಡ್ ನಲ್ಲಿ ನಡೆದಿದೆ ಚಿಂತನೆ

ವಿಜಯಪುರ: ಮಾತುಗಳ ಮೂಲಕವೇ ಎದುರಾಳಿಗಳನ್ನು ಸಮರ್ಥವಾಗಿ ಎದುರಿಸಿ ಕಟ್ಟಿಹಾಕುವ ಸಾಮರ್ಥ್ಯ ಹೊಂದಿರುವ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ರಾಜ್ಯ ವಿಧಾನ ಸಭೆ ಪ್ರತಿಪಕ್ಷದ ನಾಯಕ ಅಥವಾ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಒಲಿದು ಬರಲಿದೆ ಎಂದು ಮೂಲಗಳು ತಿಳಿಸಿವೆ. ಈ ಮುಂಚೆಯಿಂದಲೂ ತಮ್ಮಿಷ್ಟದಂತೆ ಸ್ವಪಕ್ಷದವರಿರಲಿ ಅಥವಾ ಪ್ರತಿಪಕ್ಷದವರೇ ಆಗಿರಲಿ ನೇರವಾಗಿ ತಮ್ಮದೇ ವ್ಯಂಗ್ಯಭರಿತ ಮಾತುಗಳಿಂದ ವಾಗ್ದಾಳಿ ನಡೆಸುವ ಯತ್ನಾಳ ಅವರ ಬಿಜೆಪಿ ಸರಕಾರದಲ್ಲಿ ಸಚಿವ ಸ್ಥಾನದಿಂದ ವಂಚಿತರಾಗಿದ್ದರು.  ಆದರೆ, ಈಗ ರಾಜ್ಯದಲ್ಲಿ ಬಿಜೆಪಿ […]

ಇಂಡಿಯಲ್ಲಿ ಸತತ ಮೂರನೇ ಬಾರಿ ಗೆದ್ದು ಹ್ಯಾಟ್ರಿಕ್ ಸಾಧನೆ ಮಾಡಿದ ಯಶವಂತರಾಯಗೌಡ ವಿ. ಪಾಟೀಲ

ವಿಜಯಪುರ: ಇಂಡಿ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ವಿ. ಪಾಟೀಲ ಸತತ ಮೂರನೇ ಬಾರಿಗೆ ಆಯ್ಕೆಯಾಗುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಈ ಬಾರಿ ಯಶವಂತರಾಯಗೌಡ ವಿ. ಪಾಟೀಲ ಅವರು, ತಮ್ಮ ಸಮೀಪದ ಪ್ರತಿಸ್ಪರ್ಧಿ ಜೆಡಿಎಸ್ ಅಭ್ಯರ್ಥಿ ಬಿ. ಡಿ. ಪಾಟೀಲ ಅವರನ್ನು 10329 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಯಶವಂತರಾಯಗೌಡ ಪಾಟೀಲ ಅವರಿಗೆ 71785 ಮತಗಳನ್ನು ಪಡೆದರೆ ಅವರ ಸಮೀಪದ ಪ್ರತಿಸ್ಪರ್ಧಿ ಜೆಡಿಎಸ್ ಅಭ್ಯರ್ಥಿ ಬಿ. ಡಿ. ಪಾಟೀಲ ಅವರಿಗೆ 61456 ಮತಗಳು ಬಂದವು.  ಬಿಜೆಪಿ […]

ಅಭಿವೃದ್ಧಿ ಸುರಕ್ಷತೆ ಹಿಂದುತ್ವವನ್ನು ಮನಸ್ಸಿನಲ್ಲಿಟ್ಟುಕೊಂಡು ಜನ ಮತ್ತೊಮ್ಮೆ ನನಗೆ ಆಶೀರ್ವಾದ ಮಾಡಿದ್ದಾರೆ- ಯತ್ನಾಳ

ವಿಜಯಪುರ: ಬಹಳ ಪೈಪೋಟಿಯಿಂದ ಕೂಡಿದೆ ಎಂದೇ ನಿರೀಕ್ಷಿಸಲಾಗಿದ್ದ ಬಿಜಾಪುರ ನಗರ ಮತಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಳೆದ ಸಲಕ್ಕಿಂತಲೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುವ ಮೂಲಕ ಬಿಜೆಪಿಯಲ್ಲಿರುವ ತಮ್ಮ ವಿರೋಧಿಗಳಿಗೆ ತಕ್ಕ ಉತ್ತರ ನೀಡಿದ್ದಾರೆ.  ಬಿ ಎಸ್. ಯಡಿಯೂರಪ್ಪ, ವಿಜಯೇಂದ್ರ, ನರೇಂದ್ರ ಮೋದಿ, ಅಮಿತ್ ಶಾ ಅವರನ್ನು ತಮ್ಮ ನೇರ ಮಾತುಗಳಿಂದಲೇ ತರಾಟೆಗೆ ತೆಗೆದುಕೊಂಡು ಮತ್ತು ತಮಗನಿಸಿದ್ದನ್ನು ನೇರವಾಗಿ ಹೇಳುವ ಮೂಲಕ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದ್ದ ಯತ್ನಾಳ ಅವರು, ಮತ್ತೋಮ್ಮೆ ಬಿಜೆಪಿ ಟೆಕೆಟ್ […]