ಹನುಮಂತ ಶನಿವಾರ ಕಾಂಗ್ರೆಸ್ಸಿಗೆ ಆಶೀರ್ವಾದ ಮಾಡಿದ್ದಾನೆ- ಬಿಜೆಪಿಗೆ ತಕ್ಕಪಾಠ ಕಲಿಸಿದ್ದಾನೆ- ಎಂ. ಬಿ. ಪಾಟೀಲ

ವಿಜಯಪುರ: ಬಸವನಾಡು ವಿಜಯಪುರ ಜಿಲ್ಲೆ ಮತ್ತು ರಾಜ್ಯಾದ್ಯಂತ ಕಾಂಗ್ರೆಸ್ ಭರ್ಜರಿ ಜಯಗಳಿಸಿರುವುದಕ್ಕೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಸಂತಸ ವ್ಯಕ್ತಪಡಿಸಿದ್ದು, ಬಿಜೆಪಿಯವರ ವರ್ತನೆಯಿಂದ ಬೇಸತ್ತ ಭಜರಂಗಿ ಹನುಮಂತ ಈ ಬಾರಿ ಶನಿವಾರದ ದಿನವೇ ಕಾಂಗ್ರೆಸ್ಸಿಗೆ ಭರ್ಜರಿ ಆಶೀರ್ವಾದ ಮಾಡಿದ್ದಾನೆ ಎಂದು ತಿಳಿಸಿದ್ದಾರೆ. ಬಬಲೇಶ್ವರ ಮತಕ್ಷೇತ್ರದಿಂದ ಭರ್ಜರಿ ಗೆಲುವು ಸಾಧಿಸಿದ ಬಳಿಕ ಮಾಧ್ಯ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ಮತಕ್ಷೇತ್ರದ ಜನತೆಯ ಆಶೀರ್ವಾದ, ತಾಯಂದಿರು, ಹಿರಿಯರು, ಸಹೋದರ, ಸಹೋದರಿಯರ ಆಶೀರ್ವಾದದಿಂದ ಆರನೇ ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ.  […]

ವಿಧಾನಸಭೆ ಚುನಾವಣೆ: ಮತ ಎಣಿಕೆ ಅಧಿಕಾರಿ, ಸಿಬ್ಬಂದಿಗಳಿಗೆ ತರಬೇತಿ- ಸುಗಮವಾಗಿ ಮತ ಎಣಿಕೆ ಕಾರ್ಯಕ್ಕೆ ಸನ್ನದ್ಧರಾಗ: ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ

ವಿಜಯಪುರ: ವಿಧಾನಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮೇ 10ರಂದು ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಸುಸೂತ್ರವಾಗಿ ಮತದಾನ  ನಡೆದಿದ್ದು, ಮೇ 13 ರ ಮತ ಎಣಿಕೆ ನಡೆಯಲಿದ್ದು, ಸುಗಮವಾಗಿ ಮತ ಎಣಿಕೆ ಕಾರ್ಯ ನಡೆಸುವಂತೆ ನಿಯೋಜಿತ ಅಧಿಕಾರಿಗಳಿಗೆ ಜಿಲ್ಲಾ ಚುನಾವಣಾಧಿಕಾರಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ, ದಾನಮ್ಮನವರ ಅವರು ಸೂಚನಾ ನೀಡಿದರು. ನಗರದ ಸೈನಿಕ ಶಾಲೆಯ ಸಭಾಂಗಣದಲ್ಲಿ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಮತ ಎಣಿಕೆಗೆ ನಿಯೋಜಿಸಿರುವ ಅಧಿಕಾರಿಸ ಸಿಬ್ಬಂದಿಗಳಿಗೆ ಆಯೋಜಿಸಿದ 2ನೇ ಹಂತದ ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲಾ […]

ಬಸವನಾಡಿನಲ್ಲಿ ಮತ ಎಣಿಕೆಗೆ ಸಕಲ ಸಿದ್ಧತೆ- ಭೇಟಿ ನೀಡಿ ಪರಿಶೀಲನೆ ನಡೆಸಿದ ಡಿಸಿ ಡಾ. ದಾನಮ್ಮನವರ

ವಿಜಯಪುರ: ವಿಧಾನಸಭಾೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮೇ.10ರಂದು ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ  ಸುಸೂತ್ರವಾಗಿ ಮತದಾನ ನಡೆದಿದ್ದು, ಮತ ಎಣಿಕೆ ಕಾರ್ಯ ಮೇ 13ರಂದು ಶನಿವಾರ ವಿಜಯಪುರ ನಗರದ ಸೈನಿಕ ಶಾಲೆಯಲ್ಲಿ ನಡೆಯಲಿದ್ದು, ಜಿಲ್ಲಾಡಳಿತದಿಂದ ಸಕಲ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರು ತಿಳಿಸಿದ್ದಾರೆ.  ಒಡೆಯರ ಸದನ ಈ ಕಟ್ಟಡದಲ್ಲಿ ಮುದ್ದೇಬಿಹಾಳ ಮತ್ತು ದೇವರ ಹಿಪ್ಪರಗಿ ಮತಕ್ಷೇತ್ರಗಳ ಮತ ಎಣಕಿೆ ನಡೆಯಲಿದೆ. ಆದಿಲ್ ಶಾಹಿ ಸದನ ಈ ಕಟ್ಟಡದಲ್ಲಿ […]

ಚುನಾವಣೆಯಿಂದ ಬಿಡುವು ಪಡೆದು ಮತ್ತೆ ಕುಟುಂಬ ನಿರ್ವಹಣೆಯಲ್ಲಿ ತೊಡಗಿದ ಆಶಾ ಎಂ. ಪಾಟೀಲ

ವಿಜಯಪುರ: ಮತದಾನದ ಬಳಿಕ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲರು ಮತದಾನದ ಬಗ್ಗೆ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಮತದಾನದ ಪ್ರಮಾಣ ಮತ್ತು ಗೆಲುವಿನ ಲೆಕ್ಕಾಚಾರದಲ್ಲಿ ನಿರತರಾಗಿದ್ದಾರೆ.  ಇತ್ತ ಅವರ ಪತ್ನಿ ಆಶಾ ಎಂ. ಪಾಟೀಲ ಅವರು, ಮತದಾನದ ಬಳಿಕ ಕುಟುಂಬ ಸದಸ್ಯರ ಕಾಳಜಿಯಲ್ಲಿ ತೊಡಗಿದ್ದಾರೆ.  ಇಷ್ಟು ದಿನ ಪತಿಯ ಪರ ಗ್ರಾಮ ಗ್ರಾಮಗಳಿಗೆ ತೆರಳಿ ಪ್ರಚಾರ ಕೈಗೊಂಡ ಅವರು ಈಗ ಮತದಾನದ ಲೆಕ್ಕಾಚಾರವನ್ನು ಪತಿಗೆ ಬಿಟ್ಟು ಅಡುಗೆ ಮನೆಯಲ್ಲಿ ಖಾದ್ಯ ತಯಾರಿಯಲ್ಲಿ ತೊಡಗಿದ್ದಾರೆ.  ಮನೆಯಲ್ಲಿ […]

ಬಸವನಾಡಿಲ್ಲಿ ಒಟ್ಟು ಶೇ. 71.34 ಮತದಾನ- ಬಬಲೇಶ್ವರ ಅತೀ ಹೆಚ್ಚು ಶೇ. 81.79, ಬಿಜಾಪುರ ನಗರದಲ್ಲಿ ಅತೀ ಕಡಿಮೆ ಶೇ. 64.59 ಮತದಾನ

ವಿಜಯಪುರ: ಬಸವನಾಡು ವಿಜಯಪುರ ಜಿಲ್ಲೆಯಲ್ಲಿ ನಡೆದ ಮತದಾನ ಒಂದೆರಡು ಅಹಿತಕರ ಘಟನೆಗಳನ್ನು ಹೊರತು ಪಡಿಸಿ ಸಂಪೂರ್ಣ ಶಾಂತಿಯುತವಾಗಿದ್ದು, ಬಬಲೇಶ್ವರ ಮತಕ್ಷೇತ್ರದಲ್ಲಿ ಜಿಲ್ಲೆಯಲ್ಲಿಯೇ ಅತೀ ಹೆಚ್ಚು ಅಂದರೆ ಶೇ. 81.79ರಷ್ಟು ಮತದಾನ ದಾಖಲಾಗಿದೆ.  ಬಿಜಾಪುರ ನಗರದಲ್ಲಿ ಅತೀ ಕಡಿಮೆ ಶೇ. 64.59 ಮತದಾನ ದಾಖಲಾಗಿದೆ. ಈಗ ಎಲ್ಲ ವಿದ್ಯುನ್ಮಾನ ಮತಯಂತ್ರಗಳನ್ನು ಮತ ಎಣಿಕೆ ನಡೆಯಲಿರುವ ವಿಜಯಪುರ ನಗರದ ಸೈನಿಕ ಶಾಲೆಯ ಭದ್ರತಾ ಕೊಠಡಿಯಲ್ಲಿ ಸುರಕ್ಷಿತವಾಗಿ ಇಡಲಾಗಿದೆ.  ಅಲ್ಲದೇ, ಈ ಭದ್ರತಾ ಕೊಠಡಿಗಳ ಸುತ್ತಮುತ್ತ ಅರೆ ಸೇನಾಪಡೆ ಮತ್ತು ಪೊಲೀಸರ ಬಿಗೀ […]

ಈ ಬಾರಿ ಮೋದಿ ಮೋಡಿ ನಡೆಯುವುದಿಲ್ಲ- ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯಲಿದೆ- ಎಂ. ಬಿ.

ವಿಜಯಪುರ: ಚುನಾವಣೆ ಮತದಾನದ ಬಳಿಕ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲರು ಸ್ವಲ್ಪ ರಿಲ್ಯಾಕ್ಸಗ ಮೂಡ್ ನಲ್ಲಿದ್ದು, ಅವರ ಪತ್ನಿ ಆಶಾ ಎಂ. ಪಾಟೀಲ ಮನೆಯಲ್ಲಿ ಕುಟುಂಬ ಸದಸ್ಯರಿಗಾಗಿ ಅಡುಗೆ ತಯಾರಿಸಿದರು. ಬಿ.ಎಂ.ಪಾಟೀಲ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕಾರ್ಯಕರ್ತರಿಂದ ಮತದಾನದ ಕುರಿತು ಮಾಹಿತಿ ಸಂಗ್ರಹಿಸಿದರು. ಅಲ್ಲದೇ ಗೆಲುವಿನ ಅಂತರದ ಲೆಕ್ಕಾಚಾರ ನಡೆಸಿದರು. ಆಗಮಿಸಿದ ಬಬಲೇಶ್ವರ ಮತಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರಿಂದ ಮತದಾನ ಮತ್ತು ಕಾಂಗ್ರೆಸ್ ಪರವಾಗಿ ಮತದಾರರಿಂದ ವ್ಯಕ್ತವಾದ ಪ್ರತಿಕ್ರಿಯೆ ಕುರಿತು ಮಾಹಿತಿ […]

ಬಬಲೇಶ್ವರ ಮತಕ್ಷೇತ್ರದಲ್ಲಿ ಅತೀ ಹೆಚ್ಚು ಸುಮಾರ ಶೇ. 78.28, ದೇ. ಹಿಪ್ಪರಗಿ ಮತಕ್ಷೇತ್ರದಲ್ಲಿ ಅತೀ ಕಡಿಮೆ ಶೇ. 57.03 ರಷ್ಟು ಮತದಾನ- ಉಳಿದೆಡೆ ಎಷ್ಟು ಗೊತ್ತಾ?

ವಿಜಯಪುರ: ಬಸವನಾಡು ವಿಜಯಪುರ ಜಿಲ್ಲೆಯಲ್ಲಿ ನಡೆದ ಮತದಾನ ಒಂದೆರಡು ಅಹಿತಕರ ಘಟನೆಗಳನ್ನು ಹೊರತು ಪಡಿಸಿ ಸಂಪೂರ್ಣ ಶಾಂತಿಯುತವಾಗಿದ್ದು, ಬಬಲೇಶ್ವರ ಮತಕ್ಷೇತ್ರದಲ್ಲಿ ಜಿಲ್ಲೆಯಲ್ಲಿಯೇ ಅತೀ ಹೆಚ್ಚು ಅಂದರೆ ಶೇ. 78.28ರಷ್ಟು ಮತದಾನ ದಾಖಲಾಗಿದೆ.  ಈಗಲೂ ಇನ್ನೂ ಹಲವು ಗ್ರಾಮಗಳಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸಲು ಸರತಿ ಸಾಲುಗಳಲ್ಲಿ ನಿಂತಿದ್ದು, ಈ ಪ್ರಮಾಣ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆ ಇದೆ.  ದೇವರ ಹಿಪ್ಪರಗಿ ಮತಕ್ಷೇತ್ರದಲ್ಲಿ ಅತೀ ಕಡಿಮೆ ಅಂದರೆ ಶೇ. 57.03ರಷ್ಟು ಮತದಾನ ದಾಖಲಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಮತಕ್ಷೇತ್ರವಾರು ದಾಖಲಾದ ಮತದಾನದ […]

ಇಂಡಿ ಆದರ್ಶ ವಿದ್ಯಾಲಯಕ್ಕೆ ಭೇಟಿ ಜಿ. ಪಂ. ಸಿಇಓ ರಾಹುಲ ಶಿಂಧೆ ಭೇಟಿ- ಮಸ್ಟರಿಂಗ್ ಕಾರ್ಯದ ಪೂರ್ವಸಿದ್ಧತೆ ಪರಿಶೀಲನೆ

ವಿಜಯಪುರ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ ಅವರು ಇಂಡಿ ಪಟ್ಟಣದ ಸರಕಾರಿ ಆದರ್ಶ ವಿದ್ಯಾಲಯಕ್ಕೆ ಭೇಟಿ ನೀಡಿ ಮಸ್ಟರಿಂಗ್ ಕಾರ್ಯದ ಪೂರ್ವ ಸಿದ್ಧತೆಯನ್ನು ಪರಿಶೀಲನೆ ನಡೆಸಿದರು. ಮಸ್ಟರಿಂಗ್ ಕೇಂದ್ರದ ಪ್ರತಿ ಕೋಣೆಗಳಿಗೆ ತೆರಳಿ ಚುನಾವಣೆ ಅಧಿಕಾರಿಗಳಿಂದ ಪೂರ್ವ ಸಿದ್ಧತೆಯ ಬಗ್ಗೆ ಮಾಹಿತಿಯನ್ನು ಪಡೆದ ಅವರು, ಈಗಾಗಲೇ ಎಲ್ಲ ಪೂರ್ವಸಿದ್ಧತೆಯನ್ನು ಪರಿಶೀಲಿಸಲಾಗಿದ್ದು, ಎಲ್ಲವೂ ಸರಳವಾಗಿ ನಡೆಯುತ್ತಿದೆ.  ಈ ಬಾರಿಯ ಚುನಾವಣೆಯನ್ನು ಅತ್ಯಂತ ಸುಸೂತ್ರವಾಗಿ ನಡೆಸಿಕೊಂಡು ಹೋಗುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ.  ಚುನಾವಣೆಯ ಸಂದರ್ಭದಲ್ಲಿ ಯಾವದೇ […]

ವಿಧಾನಸಭೆ ಚುನಾವಣೆ: ಮೇ 10ರಂದು ಮತದಾನ- ಸೈನಿಕ್ ಶಾಲೆ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ

ವಿಜಯಪುರ: ಮುಕ್ತ ನ್ಯಾಯ ಸಮ್ಮತ ಹಾಗೂ ಸುಗಮ ಚುನಾವಣೆಗೆ ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ಧತೆಗಳನ್ನು ಕೈಗೊಂಡಿದ್ದು, ಮೇ 10ರಂದು ಬುಧವಾರ ಮತದಾನ ಹಾಗೂ ಮೇ 13ರಂದು ಶನಿವಾರ ಮತ ಎಣಿಕೆ ನಡೆಯಲಿರುವ ನಗರದ ನಗರದ ಸೈನಿಕ ಶಾಲೆಯಲ್ಲಿ ಮತ ಏಣಿಕೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಭೇಟಿ ನೀಡಿ ಸಿದ್ಧತೆಗಳ ಪರಿಶೀಲನೆ ನಡೆಸಿದರು.  ಆತ್ಮ ಸ್ಥೈರ್ಯ ತುಂಬಿದ ಜಿಲ್ಲಾಧಿಕಾರಿ ವಿಧಾನಸಭೆ ಚುನಾವಣಾ ಹಿನ್ನೆಲೆಯಲ್ಲಿ ಬಬಲೇಶ್ವರ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ಬಬಲೇಶ್ವರದ ಸರ್ಕಾರಿ ಐಟಿಐ ಕಾಲೇಜಿನಲ್ಲಿ,ಬಿಜಾಪೂರ ನಗರ […]

ಮಾಡಿರುವ ಕೆಲಸಗಳ ಬಗ್ಗೆ ತೃಪ್ತಿಯಿದೆ- ಮತದಾರರ ಮೇಲೆ ನಂಬಿಕೆಯಿದೆ- ಗೆಲ್ಲುವ ವಿಶ್ವಾಸವಿದೆ- ಎಂ. ಬಿ. ಪಾಟೀಲ

ವಿಜಯಪುರ: ಬಬಲೇಶ್ವರ ಮತಕ್ಷೇತ್ರದಲ್ಲಿ ಮಾಡಿರುವ ಕೆಲಸಗಳ ಬಗ್ಗೆ ಸಂತೃಪ್ತಿ ಇದೆ. ಮತದಾರರ ಮೇಲೆ ಪೂರ್ಣ ನಂಬಿಕೆ ಇದೆ. ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ ಎಂದು ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಹೇಳಿದ್ದಾರೆ. ಇಂದು ತಿಕೋಟಾದಲ್ಲಿ ಪ್ರಚಾರ ಕೈಗೊಂಡು ಮಾತನಾಡಿದ ಅವರು ಮತದಾರರು ಹೆಚ್ಚಿನ ಮತಗಳ ಅಂತರದಿಂದ ಗೆಲುವು ನೀಡಿದರೆ ಇನ್ನೂ 10 ಪಟ್ಟು ಹೆಚ್ಚಾಗಿ ಕೆಲಸ ಮಾಡುತ್ತೇನೆ. ಈವರೆಗೆ ಮಾಡಿರುವ ಕೆಲಸಗಳನ್ನು ಮುಂದಿಟ್ಟುಕೊಂಡು ಹಕ್ಕಿನಿಂದ ಮತ ಕೇಳುತ್ತಿದ್ದೇನೆ. ನಂದನವನವಾಗಿರುವ ಮತಕ್ಷೇತ್ರವನ್ನು ಬಂಗಾರದ ಬಬಲೇಶ್ವರವನ್ನಾಗಿ ಮಾಡಲು […]