ಎಸ್.ಯು.ಸಿ.ಐ ಕಮ್ಯೂನಿಸ್ಟ್ ಪಕ್ಷದ ಚುನಾವಣೆ ಪ್ರಚಾರಕ್ಕೆ ಚಾಲನೆ

ವಿಜಯಪುರ: ಎಸ್.ಯು.ಸಿ.ಐ ಕಮ್ಯೂನಿಸ್ಟ್ ಪಕ್ಷದ ಅಭ್ಯರ್ಥಿ ಮಲ್ಲಿಕಾರ್ಜುನ ಎಚ್.ಟಿ ಅವರು ನಗರದಲ್ಲಿರುವ ಹುತಾತ್ಮಹ ವೃತ್ತಕ್ಕೆ ತೆರಳಿ ಸ್ವಾತಂತ್ರ್ಯ ಹೋರಾಟಗಾರರ ಹುತಾತ್ಮ ಸ್ಥಂಭಕ್ಕೆ ಮಾಲಾರ್ಪಣೆ ಮಾಡಿ ತಮ್ಮ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ.  ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಗಾರರು ಬಡತನ ನಿರುದ್ಯೋಗ, ಜಾತಿಪದ್ದತಿ, ಭ್ರಷ್ಟಾಚಾರ ಮುಂತಾದ ಸಮಸ್ಯೆಗಳಿಂದ ಮುಕ್ತವಾದ ಸ್ವಾತಂತ್ರ್ಯ ಬಯಸಿದ್ದರು.  ಆದರೆ, ಸ್ವಾತಂತ್ರ್ಯ ಬಂದ ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್, ಬಿಜೆಪಿ ಹಾಗೂ ಎಲ್ಲ ಪ್ರಾದೇಶಿಕ ಪಕ್ಷಗಳು ಈ ಸಮಸ್ಯೆಗಳನ್ನು ಬಗೆಹರಿಸಲಿಲ್ಲ ಎಂದು ಆರೋಪಿಸಿದರು. […]

ಜಿಲ್ಲೆಯ ಜನ ನೆಮ್ಮದಿಯಿಂದ ಜೀವನ ಸಾಗಿಸುವ ಕೆಲಸ ಮಾಡಿದ್ದೇನೆ- ಎಂ. ಬಿ. ಪಾಟೀಲ

ವಿಜಯಪುರ: ಜಿಲ್ಲೆಯ ಜನ ನೆಮ್ಮದಿಯ ಬದುಕು ಸಾಗಿಸುವ ಕೆಲಸ ಮಾಡಿದ್ದೇನೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ಬಬಲೇಶ್ವರ ತಾಲೂಕಿನ ಯಕ್ಕುಂಡಿಯಲ್ಲಿ ನಡೆದ ಜಲ ರತ್ನಾಕರ ಪ್ರಶಸ್ತಿ ಪ್ರಧಾನ ಮತ್ತು ಮೂರು ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಲಸಂಪನ್ಮೂಲ ಸಚಿವನಾಗಿದ್ದಾಗ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಆಶಯದಂತೆ ಈ ಬಾಗದಲ್ಲಿ ರೂ. 14000 ಕೋ. ವೆಚ್ಚದಲ್ಲಿ ನಾನಾ ನೀರಾವರಿ ಯೋಜನೆಗಳನ್ನು ಮಾಡಿದ್ದೇನೆ. ಇದರಿಂದಾಗಿ ರೈತರು ತೋಟಗಾರಿಕೆ ಬೆಳೆಗಳ ರಕ್ಷಣೆಗಾಗಿ ಪ್ರತಿವರ್ಷ ಟ್ಯಾಂಕರ್ […]

ಮತಗಟ್ಟೆಗಳಲ್ಲಿ ಕಲ್ಪಿಸಲಾಗಿರುವ ಮೂಲಭೂತ ಸೌಲಭ್ಯಗಳ ಕುರಿತು ಮನವರಿಕೆ ಮಾಡಿ- ಮತದಾನಕ್ಕೆ ಪ್ರೇರೆಪಿಸಿ- ಪಿ. ಎಸ್. ವಸ್ತ್ರದ

ವಿಜಯಪುರ: ಪ್ರತಿಯೊಬ್ಬ ಅರ್ಹ ಮತದಾರರು ಕಡ್ಡಾಯವಾಗಿ  ಮತದಾನದಲ್ಲಿ ಭಾಗವಹಿಸಿ ಮತಚಲಾಯಿಸುವಂತೆ ಪ್ರೇರೆಪಿಸಲು ಮತಗಟ್ಟೆಗಳಲ್ಲಿ ಮತದಾರರಿಗೆ ಕಲ್ಪಿಸಲಾದ ಮೂಲಭೂತ ಸೌಲಭ್ಯಗಳ ಕುರಿತು ಸಾರ್ವಜನಿಕರಿಗೆ ಮನವರಿಕೆ ಮಾಡಿ ಮತದಾನಕ್ಕೆ ಪ್ರೇರೆಪಿಸುವಂತೆ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ. ಎಸ್. ವಸ್ತ್ರದ ಹೇಳಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಸದಸ್ಯರೊಂದಿಗೆ ಸ್ವೀಪ್ ಕಾರ್ಯಚಟುವಟಿಕೆಗಳ ಕುರಿತ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಬಿಸಿಲಿನ ತಾಪಮಾನ ಹೆಚ್ಚಿರುವುದರಿಂದ ಮತದಾರರು ಕಡ್ಡಾಯವಾಗಿ ಮತದಾನ ಮಾಡಲು ಮುಂದಾಗುವಂತೆ ಪ್ರೇರೆಪಿಸಬೇಕು. ಜಿಲ್ಲೆಯ […]

ಬಬಲೇಶ್ವರ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ ಎಂ. ಬಿ. ಪಾಟೀಲ

ವಿಜಯಪುರ: ಕೆ.ಪಿ‌‌.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಬಬಲೇಶ್ವರ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಾಂಕೇತಿಕವಾಗಿ  ನಾಮಪತ್ರ ಸಲ್ಲಿಸಿದರು. ಬಬಲೇಶ್ವರ ಪಟ್ಟಣದಲ್ಲಿರುವ ನೀರಾವರಿ ಇಲಾಖೆ ಕಚೇರಿಗೆ ಆಗಮಿಸಿದ ಎಂ. ಬಿ. ಪಾಟೀಲ ಅವರು ಚುನಾವಣಾಧಿಕಾರಿ ಮಂಜುನಾಥ ಅವರಿಗೆ ಎರಡು ಸೆಟ್ ಗಳಲ್ಲಿ ತಮ್ಮ‌ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಜಯಪುರ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರೊ. ರಾಜು ಆಲಗೂರ, ಮುಖಂಡರಾದ ಎಚ್. ಎಸ್. ಕೊರಡ್ಡಿ, ವಿ‌. ಎಸ್. ಪಾಟೀಲ, ರಾಜೇಸಾಬ ಮುಲ್ಲಾ, ಕುಮಾರ ದೇಸಾಯಿ, ಬಿ. ಜಿ. ಬಿರಾದಾರ, […]

ಮತದಾನ ಜಾಗೃತಿಯ ಮಾದರಿ ವಿದ್ಯುನ್ಮಾನ ಮತಯಂತ್ರ ಸ್ತಬ್ದಚಿತ್ರಕ್ಕೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಚಾಲನೆ

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಇವರ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ಮಾದರಿ ವಿದ್ಯುನ್ಮಾನ ಮತಯಂತ್ರದ ಮತದಾನ ಜಾಗೃತಿಯ ಸ್ತಬ್ಧಚಿತ್ರ ಕ್ಕೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಜಿಲ್ಲೆಯಲ್ಲಿ ಕಡಿಮೆ ಮತದಾನವಾಗಿರುವ ಮತಗಟ್ಟೆ ವ್ಯಾಪ್ತಿಯ ಪ್ರದೇಶಗಳಲ್ಲಿ ಪ್ರತಿಶತ 100 ರಷ್ಟು ಮತದಾನ ಪ್ರಮಾಣ ಹೆಚ್ಚಿಸುವ ಉದ್ದೇಶದೊಂದಿಗೆ […]

ವಿಶೇಷ ಚೇತನರ ಇಂಧನ ಚಾಲಿತ ತ್ರಿ-ಚಕ್ರ ವಾಹನಗಳಿಂದ ಮತದಾನ ಜಾಗೃತಿ

ವಿಜಯಪುರ: ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಕೋಲ್ಹಾರ ಹಾಗೂ ಬಸವನ ಬಾಗೇವಾಡಿ ತಾಲೂಕ ಪಂಚಾಯತಿ, ತಾಲೂಕಾ ಆಡಳಿತ ಹಾಗೂ ಪುರಸಭೆ ಇವರ ಸಹಯೋಗದಲ್ಲಿ ಮತದಾನ ಜಾಗೃತಿ ಮೂಡಿಸಲಾಯಿತು.  ಕೋಲ್ಹಾರ ಮತ್ತು ಬಸವನ ಬಾಗೇವಾಡಿ ತಾಲೂಕಿನಲ್ಲಿ ವಿಶೇಷ ಚೇತನರ ಇಂಧನ ಚಾಲಿತ ತ್ರಿ-ಚಕ್ರವಾಹನಗಳ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.

ಇಂಡಿ ಬಿಜೆಪಿ ಅಭ್ಯರ್ಥಿ ಕಾಸುಗೌಡ ಬಿರಾದಾರ ನಾಮಪತ್ರ ಸಲ್ಲಿಕೆ

ವಿಜಯಪುರ: ಇಂಡಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಾಸುಗೌಡ ಬಿರಾದಾರ ನಾಮಪತ್ರ ಸಲ್ಲಿಸಿದ್ದಾರೆ. ಇಂಡಿ ನಗರದ ಆರಾಧ್ಯ ದೈವ ಶ್ರೀ ಶಾಂತೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅವರು, ನಂತರ ತಮ್ಮ ಅಪಾರ ಪ್ರಮಾಣದ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ತೆರಳಿದರು. ಶ್ರೀ ಚತ್ರಪತಿ ಶಿವಾಜಿ ವೃತ್ತದಿಂದ ನಗರ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಡೊಳ್ಳಿನ ಕುಣಿತ, ವಾದ್ಯ, ವೃಂದ, ಸಂಗೀತ, ನೃತ್ಯದೊಂದಿಗೆ, ಕಾರ್ಯಕರ್ತರ ಜೈಕಾರ ದೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮಿನಿ ವಿಧಾನಸೌಧ ಆಗಮಿಸಿದರು. ನಂತರ ಇಂಡಿ ಮತಕ್ಷೇತ್ರದ ಚುನಾವಣೆಯ […]

ಸಂಗಾಪುರ ಎಸ್. ಎಚ್. ರೈತನ ಅಭಿಮಾನ- ಎಂ. ಬಿ. ಪಾಟೀಲ ಚುನಾವಣೆ ಖರ್ಚಿಗೆ ರೂ. 50 ಸಾವಿರ ಮೊತ್ತದ ಚೆಕ್ ಕಾಣಿಕೆ

ವಿಜಯಪುರ: ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಅವರು ಮಾಡಿರುವ ನೀರಾವರಿ ಕೆಲಸಗಳಿಂದ ಸಂತಸನಾದ ರೈತರೊಬ್ಬರು ಎಂ. ಬಿ. ಪಾಟೀಲರ ಚುನಾವಣೆ ಖರ್ಚಿಗೆ ಕಾಣಿಕೆಯಾಗಿ ರೂ.50 ಸಾವಿರ ಚೆಕ್‍ನ್ನು ನೀಡಿ ಅಭಿಮಾನ ತೋರಿದ ಘಟನೆ ವಿಜಯಪುರದಲ್ಲಿ ನಡೆದಿದೆ. ಬೆಳಿಗ್ಗೆ ಎಂ. ಬಿ. ಪಾಟೀಲರ ನಿವಾಸಕ್ಕೆ ರೈತ ಸ್ನೇಹಿತರೊಂದಿಗೆ ಆಗಮಿಸಿದ ಬಬಲೇಶ್ವರ ತಾಲೂಕಿನ ಸಂಗಾಪುರ ಎಸ್.ಎಚ್. ಗ್ರಾಮದ ರೈತ ಶೇಖಪ್ಪ ಚಿಕ್ಕಗಲಗಲಿ ಚೆಕ್ ನೀಡಿ ಸಂಭ್ರಮಿಸಿದರು. ಬಳಿಕ ಮಾತನಾಡಿದ ಶೇಖಪ್ಪ ಚಿಕ್ಕಗಲಗಲಿ, ನಮ್ಮ ಭಾಗದಲ್ಲಿ ಈ […]

ಜಿಲ್ಲೆಯ ನಾನಾ ಗ್ರಾ. ಪಂ. ಗಳಿಗೆ ಭೇಟಿ ಸಿಇಓ ರಾಹುಲ ಶಿಂಧೆ ಭೇಟಿ- ಮೇ 10ರಂದು ಕಡ್ಡಾಯವಾಗಿ ಮತದಾನ ಮಾಡಲು ಕರೆ

ವಿಜಯಪುರ: ಮೇ 10ರಂದು ನಡೆಯುವ ವಿಧಾನ ಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲರೂ ಮತಗಟ್ಟೆಗೆ ತೆರಳಿ ಕಡ್ಡಾಯವಾಗಿ ತಮ್ಮ ಮತದಾನದ ಹಕ್ಕು ಚಲಾಯಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಹೇಳಿದರು. ನಿಡಗುಂದಿ ತಾಲೂಕಿನ ವಂದಾಲ ಮತ್ತು ಗೊಳಸಂಗಿ ಹಾಗೂ ಬಸವನ ಬಾಗೇವಾಡಿ ತಾಲೂಕಿನ ಮುತ್ತಗಿ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ವಿವಿಧ ಕಾಮಗಾರಿ ನಡೆದಿರುವ ಸ್ಥಳಕ್ಕೆ ಭೇಟಿ ನೀಡಿ, ಕೂಲಿ ಕಾರ್ಮಿಕರಿಗೆ ಮತದಾನದ ಮಹತ್ವದ ಕುರಿತು ತಿಳಿ ಹೇಳಿದರು. ನಿಡಗುಂದಿ […]

ಕೆಪಿಸಿಸಿ ಪ್ರಚಾರ ಸಮಿತಿ ಉಪಾಧ್ಯಕ್ಷರಾಗಿ ಎಂ. ಎಸ್. ಲೋಣಿ- ನೇಮಕಾತಿ ಪತ್ರ ನೀಡಿದ ಎಂ. ಬಿ. ಪಾಟೀಲ

ವಿಜಯಪುರ: ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ರಾಜ್ಯ ಉಪಾಧ್ಯಕ್ಷರನ್ನಾಗಿ ಎಂ.ಎಸ್.ಲೋಣಿ ಅವರನ್ನು ನೇಮಕ ಮಾಡಲಾಗಿದೆ. ಈ ನೇಮಕಾತಿ ಆದೇಶ ಪ್ರತಿಯನ್ನು ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಅವರು ಎಂ.ಎಸ್.ಲೋಣಿ ಅವರಿಗೆ ನೀಡಿದರು. ನಂತರ ಮಾತನಾಡಿದ ಎಂ.ಬಿ.ಪಾಟೀಲ ಅವರು, ಲಕ್ಷ್ಮಣ ಸವದಿ, ಜಗದೀಶ ಶೆಟ್ಟರ ಸೇರ್ಪಡೆಯಿಂದ ಪಕ್ಷಕ್ಕೆ ಬಲ ಬಂದಿದೆ. ಕಾಂಗ್ರೆಸ್ ಪಕ್ಷದ ಕೊಡುಗೆಗಳು, ಗ್ಯಾರಂಟಿ ಸ್ಕೀಂ ಗಳು ಮತ್ತು ಬಿಜೆಪಿಯ ವೈಫಲ್ಯಗಳ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸುವಂತೆ ಕರೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಎಂ.ಎಸ್.ಲೋಣಿ ನನ್ನನ್ನು […]