ಭಾರತದ ಸಂವಿಧಾನ ಶ್ರೇಷ್ಠ ಸಂವಿಧಾನ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ

ವಿಜಯಪುರ: ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ವಿಶ್ವದ ಗಮನ ಸೆಳೆಯುತ್ತಿದೆ. ಸಂವಿಧಾನದಲ್ಲಿ ಎಲ್ಲ ಆದರ್ಶಗಳನ್ನು ಅಳವಡಿಸುವ ಮೂಲಕ ಜನತೆಗೆ ಸಮಾನತೆಯನ್ನು ಒದಗಿಸಿದ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಭಾರತದ ಸಂವಿಧಾನ ಶ್ರೇಷ್ಠ ಸಂವಿಧಾನವಾಗಿದೆ ಎಂದು ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಅವರು ಹೇಳಿದರು. ಚುನಾವಣಾ ನೀತಿ ಸಂಹಿತೆ ಜಾರಿಯಿರುವ ಹಿನ್ನಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ, ಅರ್ಥಪೂರ್ಣವಾಗಿ ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿ ಆಚರಿಸಲಾಯಿತು. ಜಿಲ್ಲಾಧಿಕಾರಿಗಳು ಮಾತನಾಡಿ, […]

ಹಿಂದತ್ವದ ಜೊತೆ ಗೆ ಅಭಿವೃದ್ಧಿ ಮಾಡಿದ್ದೇನೆ- ನಾನು ರಾಜ್ಯದ ಇತರೆಡೆ ಪ್ರಚಾರಕ್ಕೆ ಹೋಗಬೇಕಿದೆ ನೀವೇ ಯತ್ನಾಳ ಎಂದು ತಿಳಿದು ಪ್ರಚಾರ- ಯತ್ನಾಳ

ವಿಜಯಪುರ:  ಹಿಂದುತ್ವದ ಜೊತೆ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡಿದ್ದೇನೆ.  ಇಡೀ ರಾಜ್ಯ ವಿಜಯಪುರದತ್ತ ನೋಡುತ್ತಿದ್ದು, ನಾನು ಇತರೆಡೆ ಪ್ರಚಾರಕ್ಕೆ ಹೋಗಬೇಕಿದೆ.  ಹೀಗಾಗಿ ನೀವೇ ಯತ್ನಾಳ ಎಂದು ತಿಳಿದು ಪ್ರಚಾರ ಮಾಡಿ ಎಂದು ಬಿಜೆಪಿ ಅಭ್ಯರ್ಥಿ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ನಗರದ ಗುರುಕುಲ ರಸ್ತೆಯಲ್ಲಿ ಪ್ರಚಾರ ಕಾರ್ಯಾಲಯ ಉದ್ಘಾಟನೆ ಅಂಗವಾಗಿ ನಡೆದ ಗೋ ಮಾತೆ ಪೂಜೆ ನೆರವೇರಿಸಿ, ಹೋಮ ಹವನ ನಡೆಸಿ, ವಿಘ್ನೇಶ್ವರ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಕರ್ನಾಟಕದಲ್ಲಿ ಗೂಂಡಾಗಿರಿ ನಗರವಾಗಿದ್ದ ವಿಜಯಪುರದಲ್ಲಿ ಜನಸಾಮಾನ್ಯರು ಜೀವನ […]

ಇಂಡಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಸಕ ಯಶವಂತರಾಯಗೌಡ ವಿ. ಪಾಟೀಲ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ

ವಿಜಯಪುರ: ವಿಧಾನ ಸಭೆ ಚುನಾವಣೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ಅಭ್ಯರ್ಥಿಗಳು ತಂತಮ್ಮ ನಾಮಪತ್ರಗಳನ್ನು ಸಲ್ಲಿಸುತ್ತಿದ್ದು, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಕೂಡ ನಾಮಪತ್ರ ಸಲ್ಲಿಸಿದ್ದಾರೆ. ಇಂಡಿಯಲ್ಲಿ ಚುನಾವಣಾಧಿಕಾರಿ ರಾಮಚಂದ್ರ ಗಡದೆ ಅವರಿಗೆ ಯಶವಂತರಾಯಗೌಡ ವಿ. ಪಾಟೀಲ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಾಂಕೇತಿಕವಾಗಿ ತಮ್ಮ ನಾಮಪತ್ರ ಸಲ್ಲಿಸಿದರು.  ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಜೆಟ್ಟೆಪ್ಪ ರವಳಿ, ಧರ್ಮರಾಜ ವಾಲಿಕಾರ, ವಿಶ್ವನಾಥ ಬಿರಾದಾರ, ಶಿವಾನಂದ ನಿಂಬಾಳ ಮುಂತಾದವರು ಉಪಸ್ಥಿತರಿದ್ದರು. ಈಗಾಗಲೇ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಯಶವಂತರಾಯಗೌಡ ಪಾಟೀಲ ಅವರಿಗೆ […]

ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ಸಿಂದಗಿಯಲ್ಲಿ ನಾಮಪತ್ರ ಸಲ್ಲಿಕೆ

ವಿಜಯಪುರ: ಕಾಂಗ್ರೆಸ್ ಮುಖಂಡ ಅಶೋಕ‌ ಮನಗೂಳಿ ಸಿಂದಗಿ ಮತಕ್ಷೇತ್ರದಿಂದ ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಸಿಂದಗಿ‌ ಮತಕ್ಷೇತ್ರಕ್ಕೆ ಇನ್ನೂ ಯಾರಿಗೂ ಟಿಕೆಟ್ ಘೋಷಣೆ ಮಾಡಿಲ್ಲ. ಆದರೂ, ಗುರುವಾರ ಶುಭ ದಿನವಾಗಿರುವ ಹಿನ್ನೆಲೆಯಲ್ಲಿ ಬಿ ಫಾರಂ ಇಲ್ಲದೇ ಕಾಂಗ್ರೆಸ್ ಅಭ್ಯರ್ಥಿಯಾಗಿ‌ ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿ ಶಿದ್ರಾಮ ಮಾರಿಹಾಳ ಅವರಿಗೆ ಅಶೋಕ ಮನಗೂಳಿ‌ ತಮ್ಮ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ನ್ಯಾಯವಾದಿ ಬಿ. ಜಿ. ನೆಲ್ಲಗಿ, ರಮೇಶ ಭಂಟನೂರ, ಎಂ. ಕೆ. ಸೊನ್ನದ ಹಾಗೂ ಸಹಾಯಕ ಚುನಾವಣಾಧಿಕಾರಿ ತಹಸೀಲ್ದಾರ […]

ಶಾಸಕ‌ ರಮೇಶ ಭೂಸನೂರ ಸಿಂದಗಿಯಿಂದ ಮರು ಆಯ್ಕೆ ಬಯಸಿ ನಾಮಪತ್ರ ಸಲ್ಲಿಕೆ

ವಿಜಯಪುರ: ವಿಧಾನ ಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗುತ್ತಿದ್ದಂತೆ ಶಾಸಕ ರಮೇಶ ಭೂಸನೂರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಈಗಾಗಲೇ ರಮೇಶ ಭೂಸನೂರ ಅವರಿಗೆ ಟಿಕೆಟ್ ನೀಡಿದ್ದು, ತಹಸೀಲ್ದಾರ ಕಚೇರಿಗೆ ತೆರಳಿ ಚುನಾವಣಾಧಿಕಾರಿ‌ ಸಿದ್ರಾಮ ಮಾರಿಹಾಳ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ನ್ಯಾಯವಾದಿ ಅರವಿಂದ ಕನ್ನೂರ, ಮಲ್ಲಣ್ಣ ಸಾಲಿ, ಸಿದ್ಧರಾಮ ಪಾಟೀಲ ಹೂವಿನಹಳ್ಳಿ, ಪೀರು ಕೆರೂರ, ಮಂಡಲ ಅಧ್ಯಕ್ಷ ಈರಣ್ಣ ರಾವೂರ ಉಪಸ್ಥಿತರಿದ್ದರು. ಸಹಾಯಕ ಚುನಾವಣಾಧಿಕಾರಿ ನಿಂಗಣ್ಣ ಬಿರಾದಾರ, ಸುರೇಶ ಚವಲರ ಅವರೂ ಉಪಸ್ಥಿತರಿದ್ದರು.

ನಾನಾ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಜಿ. ಪಂ. ಸಿಇಓ ರಾಹುಲ್ ಶಿಂಧೆ

ವಿಜಯಪುರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಮಂಳವಾರ ದೇವರಹಿಪ್ಪರಗಿ ಹಾಗೂ ಸಿಂದಗಿ ತಾಲೂಕಿನ ಗ್ರಾಮ ಪಂಚಾಯತ್‍ಗಳಿಗೆ ಭೇಟಿ ನೀಡಿ, ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು. ದೇವರಹಿಪ್ಪರಗಿ ತಾಲೂಕಿನ ಸಾತಿಹಾಳ ಮತಗಟ್ಟೆಗೆ ಭೇಟಿ ನೀಡಿ, ಮತಗಟ್ಟೆಯಲ್ಲಿ ಕಲ್ಪಿಸಲಾದ ಮೂಲಭೂತ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು. ಬೈರವಾಡಿ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳ ಹಾಗೂ ಕೊಕಟನೂರ ಸರಕಾರಿ ಹಳ್ಳದಲ್ಲಿ ಹೂಳು ತೆಗೆಯುವ ಕಾಮಗಾರಿ ಸ್ಥಳಗಳಿಗೆ ಭೇಟಿ ನೀಡಿ, ಕಾಮಗಾರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ  ಕಾರ್ಮಿಕರನ್ನು ಭೇಟಿ ಮಾಡಿ, […]

ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರಿಗೆ ಮತದಾನ ಜಾಗೃತಿ ಅಭಿಯಾನ

ವಿಜಯಪುರ: ಪ್ರತಿ ಪ್ರಜೆಯು ಮತದಾನ ಮಾಡುವುದು ಸಂವಿಧಾನ ಕಲ್ಪಿಸಿಕೊಟ್ಟಿರುವ ಹಕ್ಕು.  ಬರುವ ಮೇ-10ರ ಮತದಾನ ದಿನದಂದು ಎಲ್ಲರೂ ಪಾಲ್ಗೊಂಡು ಮತದಾನ ಮಾಡಬೇಕು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸಿ. ಬಿ. ಕುಂಬಾರ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೌಶಲ್ಯಾಭಿವೃದ್ಧಿ ಇಲಾಖೆ ಹಾಗೂ ಮಹಾ ನಗರಪಾಲಿಕೆ ಸಹಯೋಗದಲ್ಲಿ ಸ್ವೀಪ್ ಕಾರ್ಯಕ್ರಮದಡಿ ನಗರದ ಶಂಕರಲಿಂಗ ದೇವಸ್ಥಾನ ಜೋರಾಪುರ ಪೇಠದಲ್ಲಿ ಮಹಿಳಾ ಸ್ವ-ಸಹಾಯ ಸಂಘದ ಮಹಿಳೆಯರಿಗಾಗಿ ಆಯೋಜಿಸಿದ್ದ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಮತದಾನದಿಂದ ಯಾರೂ ವಂಚಿತರಾಗಬಾರದು. ಮತದಾರರು […]

ಎರಡು ದಿನಗಳಲ್ಲಿ ಮುಂದಿನ ನಿರ್ಧಾರ- ಟಿಕೆಟ್ ಸಿಗದ ಕುರಿತು ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಅಸಮಾಧಾನ

ವಿಜಯಪುರ: ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಟಿಕೆಟ್ ನೀಡಿರುವುದಕ್ಕೆ ಮಾಜಿ ಸಚಿವ ಮತ್ತು ಬಿಜೆಪಿ ಮುಖಂಡ ಅಪ್ಪು ಪಟ್ಟಣಶೆಟ್ಟಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಎರಡು ದಿನಗಳಲ್ಲಿ ಬೆಂಬಲಿಗರು, ಕಾರ್ಯಕರ್ತರು, ಹಿತೈಷಿಗಳು, ನಾನಾ ಸಮಾಜದ ಮುಖಂಡರ ಸಭೆ ಕರೆದು ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿಜಯಪುರ ನಗರ ಮತಕ್ಷೇತ್ರದಿಂದ ನನಗೆ ಟಿಕೆಟ್ ಸಿಗುವ ನಿರೀಕ್ಷೆಯಿತ್ತು.  ಈಗ ಟಿಕೆಟ್ ಕೈತಪ್ಪಿಸುವುದರಿಂದ ನೋವು ಆಗಿದೆ. ಅಸಮಾಧಾನ ಕೂಡ ಆಗಿದೆ.  ಕಾರ್ಯಕರ್ತರಿಗೂ ಇದರಿಂದ ನೋವು ಮತ್ತು […]

ಚುನಾವಣೆ ಕಾರ್ಯದಲ್ಲಿ ಯಾವುದೇ ತಾಂತ್ರಿಕ ಅಡಚಣೆ ಉಂಟಾಗದಂತೆ ಅಗತ್ಯ ಕ್ರಮಕ್ಕೆ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಸೂಚನೆ

ವಿಜಯಪುರ: ಚುನಾವಣೆ ಸಂದರ್ಭದಲ್ಲಿ ಯಾವುದೇ ತಾಂತ್ರಿಕ ಅಡೆತಡೆ ಉಂಟಾಗದಂತೆ ಮತದಾನ ನಡೆಯುವ ದಿನದಂದು ವೆಬ್‍ಕಾಸ್ಟಿಂಗ್ ಸೇರಿದಂತೆ ಮತದಾನದ ಮಾಹಿತಿ ವಿವರಗಳನ್ನು ತತಕ್ಷಣದಲ್ಲಿ ನೀಡಲು ಯಾವುದೇ ಅಡೆತಡೆಯಾಗದಂತೆ ಏರ್‍ಟೆಲ್-ಜಿಯೋ ಸೇರಿದಂತೆ ಹೈಸ್ಪೀಡ್ ಇಂಟರ್‍ನೆಟ್ ಸೇವೆ ಸೌಲಭ್ಯ ಒದಗಿಸುವಂತೆ ಸೇವಾದಾರರಿಗೆ ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಸಂಜೆ ಜರುಗಿದ ಚುನಾವಣಾ ಕಾರ್ಯಕ್ಕೆ ನಿಯೋಜಿತ ನೋಡಲ್ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯ ಅಧ್ಯಕ್ಷತೆ ವಹಿಸಿದ್ದ, ಅವರು,ಜಿಲ್ಲೆಯಲ್ಲಿ ಒಟ್ಟು 2072 ಮತಗಟ್ಟೆ ಸ್ಥಾಪಿಸಲಾಗಿದೆ.ಚುನಾವಣಾ […]

ವಿಧಾನಸಭೆ ಚುನಾವಣೆ ಮತದಾನ ಬಹಿಷ್ಕರಿಸಲು ನಿರ್ಧರಿಸಿದ ವಿಜಯಪುರ ನಗರ ಮತಕ್ಷೇತ್ರದ ಸೌಭಾಗ್ಯ ನಗರ ಮತದಾರರು

ವಿಜಯಪುರ: ನಾನಾ ಬೇಡಿಕೆಗಳು ಈಡೇರದ ಹಿನ್ನೆಲೆಯಲ್ಲಿ ವಿಜಯಪುರ ನಗರ ಮತಕ್ಷೇತ್ರದ ಶಿವಗಿರಿ ರಸ್ತೆಯಲ್ಲಿರುವ ಮತ್ತು 17ನೇ ವಾರ್ಡ್ ವ್ಯಾಪ್ತಿಯ ಸೌಭಾಗ್ಯ ನಗರ ನಿವಾಸಿಗಳು ಈ ಬಾರಿ ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ್ದಾರೆ.  ಅಲ್ಲದೇ, ಈ ಕುರಿತು ಬಡಾವಣೆಯಲ್ಲಿ ಫ್ಲೆಕ್ಸ್ ಕೂಡ ಅಳವಡಿಸಿದ್ದಾರೆ.  ಈ ಕುರಿತು ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಇಲ್ಲಿನ ಮುಖಂಡರು ಶ್ರೀ ಹನುಮಾನ ಮಂದಿರ ಸೇವಾ ಸಮಿತಿ ನೇತೃತ್ವದಲ್ಲಿ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ತಮ್ಮ ಬಡಾವಣೆಯಲ್ಲಿ ಕಳೆದ ಐದು ವರ್ಷಗಳಿಂದ ರಸ್ತೆ ಮಾಡಿಲ್ಲ.  24×7 ಕುಡಿಯುವ […]