ದೇವರ ಹಿಪ್ಪರಗಿಯಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ನೀಡಬೇಕು- ಎಸ್. ಆರ್. ಪಾಟೀಲರಿಗೆ ನೀಡಿದರೆ ಕೆಲಸ ಮಾಡಲ್ಲ- ಬಾಪುಗೌಡ ಪಾಟೀಲ ವಡವಡಗಿ

ವಿಜಯಪುರ: ಈ ಬಾರಿಯ ವಿಧಾನ ಸಭೆ ಚುನಾವಣೆಯಲ್ಲಿ ದೇವರ ಹಿಪ್ಪರಗಿ ಮತಕ್ಷೇತ್ರದಿಂದ ನನಗೆ ಟಿಕೆಟ್ ನೀಡಬೇಕು ಎಂದು ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಬಾಪುಗೌಡ ಮಲ್ಲನಗೌಡ ಪಾಟೀಲ(ವಡವಡಗಿ) ಆಗ್ರಹಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವರ ಹಿಪ್ರರಗಿ ಮತಕ್ಷೇತ್ರದವನಾಗಿ ಕಳೆದ 19 ವರ್ಷಗಳಿಂದ ಕಾಂಗ್ರೆಸ್ ಸಂಘಟನೆಗಾಗಿ ಬಹಳಷ್ಟು ದುಡಿದಿದ್ದೇನೆ.  2005 ರಿಂದ ದೇವರ ಹಿಪ್ಪರಗಿ ಮತಕ್ಷೇತ್ರದಲ್ಲಿ ಸಮಾಜ ಸೇವೆ ಮಾಡುತ್ತ ಕಾಂಗ್ರೆಸ್ ಬಲಪಡಿಸಿದ್ದೇನೆ.  ಈ ಕ್ಷೇತ್ರದಿಂದ ಎ. ಎಸ್. ಪಾಟೀಲ ನಡಹಳ್ಳಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಲು […]

ಪೊಲೀಸರು ಶ್ರದ್ಧೆ, ಪ್ರಜ್ಞೆ, ರಚನಾತ್ಮಕವಾಗಿ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು- ನಿವೃತ್ತ ಪೊಲೀಸ್ ಅಧಿಕಾರಿ ಸಿ. ಬಿ. ಬಾಗೇವಾಡಿ

ವಿಜಯಪುರ: ನಮ್ಮನ್ನು ನಾವು ಹೆಚ್ಚು ಶ್ರದ್ದಾಪೂರ್ವಕವಾಗಿ, ಪ್ರಜ್ಞಾಪೂರ್ವಕವಾಗಿ, ರಚನಾತ್ಮಕವಾಗಿ ಮತ್ತು ನಿಷ್ಠಾಪೂರಕವಾಗಿ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಳ್ಳುವುದು ಅವಶ್ಯವಾಗಿದೆ ಎಂದು ನಿವೃತ್ತ ಸಿಪಿಐ ಸಿ. ಬಿ. ಬಾಗೇವಾಡಿ ಹೇಳಿದ್ದಾರೆ.  ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ವಿಜಯಪುರ ಜಿಲ್ಲಾ ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಧ್ವಜ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ಈ ದಿನದಂದು ನಮ್ಮ ಸಂಕಲ್ಪ ದೃಢಪಡಿಸುವುದರ ಜೊತೆಗೆ, ಪೊಲೀಸ್ ಪಡೆಗಳ ಧೈರ್ಯ, ಶೌರ್ಯ, ಸ್ಥೈರ್ಯ ಮತ್ತು ಸಮರ್ಪಿತ ಮನೋಭಾವವನ್ನು […]

ಅಗಸನಾಳ ಗ್ರಾಮದಲ್ಲಿ ಮಲ್ಲಿಕಾರ್ಜುನ ದೇವಸ್ಥಾನ ಜಾತ್ರೆ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ವಿಜಯಪುರ: ಅಗಸನಾಳ ಗ್ರಾಮದಲ್ಲಿ ಮಲ್ಲಿಕಾರ್ಜುನ ದೇವಸ್ಥಾನ ಜಾತ್ರೆಯ ಅಂಗವಾಗಿ ಯಶೋದಾ ಟ್ರಸ್ಟ ವತಿಯಿಂದ ಯಶೋಧಾ  ಆಸ್ಪತ್ರೆ ಮತ್ತು ಮಲ್ಲಿಕಾರ್ಜುನ ದೇವಸ್ಥಾನ ಸಮಿತಿ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು. ಯಶೋದಾ ಟ್ರಸ್ಟ್ ಚೇರಮನ್ ಮತ್ತು ಮುಖ್ಯ ನೆಫ್ರಾಲಾಜಿಸ್ಟ ಡಾ. ರವೀಂದ್ರ. ಎಂ. ಮದ್ದರಕಿ, ಯುರೊಲಾಜಿಸ್ಟ್ ಡಾ. ಸುನೀಲ ಸಜ್ಜನ, ಹೃದ್ರೋಗ ಮತ್ತು ಮಧುಮೇಹ ತಜ್ಞ, ಡಾ. ಶ್ರೀನಿವಾಸ ಮುಂತಾದ ವೈದ್ಯರು ಹೃದ್ರೋಗ, ಮಧುಮೇಹ, ಕಿಡ್ನಿ ಸಮಸ್ಯೆಗಳ ಕುರಿತು ರೋಗಿಗಳ ಆರೋಗ್ಯ ತಪಾಸಣೆ ನಡೆಸಿದರು. ಒಟ್ಟು 95 […]

ಜಲನಗರ ಬಸ್ ನಿಲ್ದಾಣಕ್ಕೆ ಅಂದವಾದ ಬಣ್ಣ ಹಚ್ಚಿ ಚಂದ ಮಾಡಿದ ಗಾನಯೋಗಿ ಸಂಘದ ಯುವಕರು

ವಿಜಯಪುರ: ನಗರದಲ್ಲಿ ಹದಗೆಟ್ಟಿದ್ದ ಜಲನಗರ ಬಸ್ ಸ್ಟಾಪ್ ನ್ನು ಗಾನಯೋಗಿ ಸಂಘದ ಯುವಕರು ಅಂದವಾದ ಬಣ್ಣ ಹಚ್ಚಿ ಚಂದವಾಗಿ ಕಾಣುವಂತೆ ಮಾಡಿದ್ದಾರೆ.  ಅಷ್ಟೇ ಅಲ್ಲ, ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಆದರ್ಶ ಗುಣಗಳ ಹಾಗೂ ಅವರ ಸಂಕ್ಷೀಪ್ತ ಮಾಹಿತಿಯ ಕುರಿತು ಫಲಕಗಳನ್ನು ಬಸ್ ನಿಲ್ದಾಣದಲ್ಲಿ ಅಳವಡಿಸಿದ್ದಾರೆ. ಈ ಸಂದರ್ಭದಲ್ಲಿ ಗಾನಬನ ಸಂಘದ ಅಧ್ಯಕ್ಷ ಪ್ರಕಾಶ ಆರ್. ಕೆ ಮಾತನಾಡಿ, ವಿಜಯಪುರ ಮಗರದ ಜನತೆ ಈ ಬಸ್ ನಿಲ್ದಾಣವನ್ನು ಶುಚಿಯಾಗಿಟ್ಟು ಪರಿಸರವನ್ನು ಸುಂದರವಾಗಿಡಬೇಕು ಎಂದು ಮನವಿ […]

ವಿಧಾನಸಭೆ ಚುನಾವಣೆ: ಚುನಾವಣಾಧಿಕಾರಿಗಳಿಂದ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ

ವಿಜಯಪುರ: ವಿಧಾನಸಭೆ ಚುನಾವಣೆ ಈಗಾಗಲೇ ಘೋಷಣೆಯಾಗಿದ್ದು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣಾ ಆಯೋಗವು ಜಾರಿಗೊಳಿಸಿರುವ ನೀತಿ ಸಂಹಿತೆಗಳನ್ನು ತಪ್ಪದೇ ಪಾಲಿಸುವಂತೆ ನಾನಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ವಿಜಯಪುರ ನಗರ ವಿಧಾನಸಭೆ ಮತಕ್ಷೇತ್ರದ ಚುನಾವಣಾಧಿಕಾರಿ ಮತ್ತು ಉಪವಿಭಾಗಾಧಿಕಾರಿ ಕ್ಯಾ. ಮಹೇಶ ಮಾಲಗಿತ್ತಿ  ಸೂಚನೆ ನೀಡಿದರು. ವಿಜಯಪುರ ನಗರ ಮತಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಾನಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಅವರು, ವಿಧಾನಸಭೆ ಚುನಾವಣೆಗೆ ಏ. 13 ಗುರವಾರ ಅಧಿಸೂಚನೆ ಹೊರಡಿಸುವುದು. ನಾಮಪತ್ರ ಸಲ್ಲಿಸಲು ಏ. […]

ಅಪ್ಪು ಪಟ್ಟಣಶೆಟ್ಟಿಗೆ ಟಿಕೆಟ್ ಕೊಡಿ- ಬಣಜಿಗರಿಂದ ಬಿ. ಎಸ್. ಯಡಿಯೂರಪ್ಪ, ಬಿ. ವೈ. ವಿಜಯೇಂದ್ರ, ಜಗದೀಶ ಶೆಟ್ಟರ ಭೇಟಿ- ಮನವಿ ಪತ್ರ ಸಲ್ಲಿಕೆ

ಬೆಂಗಳೂರು: ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಅವರಿಗೆ ವಿಜಯಪುರ ನಗರ ಮತಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡುವಂತೆ ಆಗ್ರಹಿಸಿ ಬಣಜಿಗ ಸಮಾಜದ ಮುಖಂಡರು ಮಾಜಿ ಸಿಎಂ ಗಳಾದ ಬಿ. ಎಸ್. ಯಡಿಯೂರಪ್ಪ, ಜಗದೀಶ ಶೆಟ್ಟರ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿ. ವೈ. ವಿಜಯೇಂದ್ರ ಅವರನ್ನು ಭೇಟಿ ಮಾಡಿ ಆಗ್ರಹಿಸಿದ್ದಾರೆ.  ಬಣಜಿಗ ಸಂಘದ ರಾಜ್ಯಾಧ್ಯಕ್ಷ ಅಂದಾನೆಪ್ಪ ಜವಳಿ ಅವರ ನೇತೃತ್ವದಲ್ಲಿ ಬಿಜೆಪಿ ಮುಖಂಡರನ್ನು ಭೇಟಿ ಮಾಡಿದ ವಿಜಯಪುರ ಜಿಲ್ಲೆಯ ಸುಮಾರು 150 ಜನ ಬಣಜಿಗರ ನಿಯೋಗ ಈ ಮನವಿ […]

ಬಾಲಾಜಿ ಶುಗರ್ಸ್ ಮೇಲೆ ಎರಡನೇ ಬಾರಿ ಚುನಾವಣಾಧಿಕಾರಿಗಳ ಧಾಳಿ- ಸುಮಾರು ರೂ. 40 ಲಕ್ಷ ಮೌಲ್ಯದ ನಾನಾ ಗಿಫ್ಟ್ ಗಳು ವಶ

ವಿಜಯಪುರ: ಮುದ್ದೇಬಿಹಾಳ ತಾಲೂಕಿನ ಬಾಲಾಜಿ ಶುಗರ್ಸ್ ಕಾರ್ಖಾನೆಯ ಮೇಲೆ ಚುನಾವಣಾಧಿಕಾರಿಗಳು ಎರಡನೇ ಬಾರಿ ಧಾಳಿ ನಡೆಸಿದ್ದು, ಮತ್ತೆ ಸುಮಾರು ರೂ. 40 ಲಕ್ಷ ಮೌಲ್ಯದ ನಾನಾ ಗಿಫ್ಟ್ ಐಟಂ ಗಳು ಪತ್ತೆಯಾಗಿವೆ.  ಈ ಸಂದರ್ಭದಲ್ಲಿ ನೂರಾರು ಬಾಕ್ಸ್ ಗಳಲ್ಲಿ ಸಂಗ್ರಹಿಸಿ ಇಡಲಾಗಿದ್ದ ಗಿಫ್ಟ್ ಗಳನ್ನು ಪತ್ತೆ ಮಾಡಲಾಗಿದೆ.  ಮಾ. 27 ರಂದು ರೂ. 2. 10 ಕೋ. ಮೊತ್ತದ ಗಿಫ್ಟ್ ಗಳು ಪತ್ತೆಯಾಗಿದ್ದವು.  ಈ ವೇಳೆ, ಮಾಜಿ ಸಚಿವ ಮತ್ತು ಕಾಂಗ್ರೆಸ್ ಹಿರಿಯ ಮುಖಂಡ ಎಸ್. ಆರ್. […]

ಚಡಚಣ ಪೊಲೀಸರ ಕಾರ್ಯಾಚರಣೆ- ಅಕ್ರಮವಾಗಿ ಸಾಗಿಸಲಾಗುತ್ತಿದ್ದ ರೂ. 27 ಲಕ್ಷ ಮೌಲ್ಯದ ಚಿನ್ನಾಭರಣ ವಶ

ವಿಜಯಪುರ: ದಾಖಲಾತಿ ಇಲ್ಲದೇ ಸಾಗಿಸಲಾಗುತ್ತಿದ್ದ ರೂ. 27 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಚಡಚಣ ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಗಡಿ ಭಾಗದ ಚಡಚಣದಲ್ಲಿ ತಪಾಸಣೆ ನಡೆಸುತ್ತಿದ್ದ ಪೊಲೀಸರು ದೇವರ ನಿಂಬರಗಿ ಬಳಿ ಧಾಳಿ ನಡೆಸಿದಾಗ ಕಾರಿನಲ್ಲಿ ತೆರಳುತ್ತಿದ್ದವರನ್ನು ವಿಚಾರಣೆ ನಡೆಸಿದಾಗ ದಾಖಲಾತಿ ಇಲ್ಲದೇ ಸಾಗಿಸಲಾಗುತ್ತಿದ್ದ 480 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.  ರೂ. 6 ಲಕ್ಷ ನಗದು ಸಹಿತ ಒಟ್ಟು ರೂ. 27 ಲಕ್ಷದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.  MH- 13/AZ- 4201 ನಂಬರಿನ ಕಾರಿನಲ್ಲಿ ಈ ಹಣ […]

ಎಸ್.ಎಸ್.ಎ ಪರೀಕ್ಷೆ ಕೇಂದ್ಲ್ರ ಗಳಿಗೆ ಡಿಸಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಭೇಟಿ, ಪರಿಶೀಲನೆ

ವಿಜಯಪುರ: ಜಿಲ್ಲಾದ್ಯಂತ 147 ಪರೀಕ್ಷಾ ಕೇಂದ್ರಗಳಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಗಳು ಆರಂಭಗೊಂಡಿದ್ದು, ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ ಅವರು ಶುಕ್ರವಾರ ನಗರದ ಟಿಟಿಐ ಆವರಣದಲ್ಲಿರುವ ಸರ್ಕಾರಿ ಉರ್ದು ಪ್ರೌಢ ಶಾಲೆ ಹಾಗೂ ಬಾಗಲಕೋಟೆ ರಸ್ತೆಯಲ್ಲಿರುವ ಪಿಡಿಜೆ ಪ್ರೌಢ ಶಾಲೆ ಹಾಗೂ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಪಾರದರ್ಶಕ ಹಾಗೂ ನಕಲು ಮುಕ್ತ ಪರೀಕ್ಷೆಗಳು ನಡೆಯುವಂತೆ ನೋಡಿಕೊಳ್ಳುವಂತೆ ತಿಳಿಸಿದ ಅವರು, ಪರೀಕ್ಷಾ ಕೇಂದ್ರಗಳ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಪರೀಕ್ಷಾರ್ಥಿಗಳು […]

ಮೀಸಲಾತಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಮುಖಂಡರಿಂದ ಸನ್ಮಾನ

ವಿಜಯಪುರ: ಮೀಸಲಾತಿ ಪ್ರಮಾಣ ಹೆಚ್ಚಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಪಂಚಮಸಾಲಿ ಸಮಾಜದ ಮುಖಂಡರು ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸನ್ಮಾನಿಸಿ ಗೌರವಿಸಿದರು. ಪಂಚಮಸಾಲಿ ಸಮಾಜದ ಬಹು ದಿನಗಳ ಬೇಡಿಕೆಯಾದ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿ, ಆದೇಶ ಪ್ರತಿಯನ್ನು ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು, ಬೆಂಗಳೂರಿನ ನಿವಾಸದಲ್ಲಿ ಭೇಟಿ ಮಾಡಿದ ಸ್ಬಾಮೀಜಿಗಳು, ಮುಖಂಡರಾದ ಬಸನಗೌಡ ಪಾಟೀಲ ಯತ್ನಾಳ, ಸಿದ್ದು ಸವದಿ, ಎಂ. ಎಸ್. […]