ಚುನಾವಣೆ ಪ್ರಕ್ರಿಯೆ ಸಮಗ್ರ ಜ್ಞಾನ ಹೊಂದಿ ಪಾರದರ್ಶಕ ಚುನಾವಣೆಗೆ ಸನ್ನದ್ಧರಾಗಿ- ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ

ವಿಜಯಪುರ: ಮುಂಬರುವ ಚುನಾವಣೆಗೆ ನಿಯೋಜಿತ ಸೆಕ್ಟರ್ ಅಧಿಕಾರಿಗಳು ಯಾವುದೇ ಗೊಂದಲಕ್ಕೆ ಒಳಗಾಗದೇ ಕ್ಲೀಷ್ಟಕರ ಹಾಗೂ ಕಷ್ಟಕರ ಪರಿಸ್ಥಿತಿಯನ್ನು ನಿಭಾಯಿಸುವ ಕೌಶಲ್ಯ ರೂಢಿಸಿಕೊಳ್ಳಬೇಕು. ಚುನಾವಣಾ ಪ್ರಕ್ರಿಯೆ ಬಗ್ಗೆ ಸಮಗ್ರ ಜ್ಞಾನ ಹೊಂದುವ ಮೂಲಕ ಪಾರದರ್ಶಕ ಚುನಾವಣೆಗೆ ಸನ್ನದ್ಧರಾಗುವಂತೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಹೇಳಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಮುಂಬರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಮತದಾನ ಪೂರ್ವಸಿದ್ಧತೆ ಹಾಗೂ ಚುನಾವಣೆಗೆ ನಿಯೋಜಿತ 29-ಬಬಲೇಶ್ವ್ವರ, 30-ಬಿಜಾಪುರ ನಗರÀ, 31-ನಾಗಠಾಣ ಮತಕ್ಷೇತ್ರದ ಸೆಕ್ಟರ್ ಅಧಿಕಾರಿಗಳಿಗೆ ಹಮ್ಮಿಕೊಂಡ ತರಬೇತಿ ಕಾರ್ಯಕ್ರಮದಲ್ಲಿ ಅವರು […]

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ- ಕನ್ನಡ ಭಾಷೆ, ಸಂಸ್ಕೃತಿ ಉಳಿಸಿಕೊಂಡು ಹೋಗುವುದು ಎಲ್ಲರ ಜವಾಬ್ದಾರಿ- ಸಿದ್ದಣ್ಣ ಉತ್ನಾಳ

ವಿಜಯಪುರ: ಕನ್ನಡ ಭಾಷೆ, ಸಂಸ್ಕೃತಿಯನ್ನು ನಾವು ಸದಾ ಉಳಿಸಿಕೊಂಡು ಹೋಗಬೇಕು.  ಅದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸಮ್ಮೇಳನಾಧ್ಯಕ್ಷ ಸಿದ್ದಣ್ಣ ಉತ್ನಾಳ ಹೇಳಿದ್ದಾರೆ. ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಜಿಲ್ಲಾ 18ನೇ ಕನ್ನಡ ಸಾಹಿತ್ಯ ಸಮ್ಮೇಳನಧ್ಯಕ್ಷರಾಗಿ ಅವರು ಮಾತನಾಡಿದರು. ವಿಜಯಪುರ ಜಿಲ್ಲೆಯಲ್ಲಿ ಅತೀ ಪ್ರಾಚೀನ ಕಾಲದಿಂದಲೂ ವಿದ್ಯಾ ಕೇಂದ್ರಗಳಾದ ಅಗ್ರಹಾರ, ಘಟಿಕಾಸ್ಥಾನ, ಬ್ರಹ್ಮಪುತ್ರಿ ಶಾಲೆಗಳಿದ್ದವು. ರಾಷ್ಟ್ರಕೂಟರ ಕಾಲದಲ್ಲಿಯೇ ಸಾಲೋಟಗಿ ಶಿಕ್ಷಣ ಕೇಂದ್ರವಾಗಿತ್ತು. ಜಗತ್ತಿಗೆ ಗಣಿತ ಶಾಸ್ತ್ರಕ್ಕೆ ಸೊನ್ನೆಯ ಪರಿಕಲ್ಪನೆ ಮಾಡಿಕೊಟ್ಟ ಕ್ರಿ.ಶ 1114ರಲ್ಲಿ ಜನಿಸಿದ ಭಾಸ್ಕರಾಚಾರ್ಯರು ವಿಜಯಪುರ […]

ಮಾ. 31ರಿಂದ ಏ.15ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ- ಪಾರದರ್ಶಕ ಹಾಗೂ ಸುಸೂತ್ರ ಪರೀಕ್ಷೆ ನಡೆಸಲು ಡಿಸಿ ಡಾ. ದಾನಮ್ಮನವರ ಸೂಚನೆ

ವಿಜಯಪುರ: ಜಿಲ್ಲೆಯಲ್ಲಿ ಇದೇ ಮಾ.31 ರಿಂದ ಏಪ್ರಿಲ್ 15ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ಜರುಗಲಿದ್ದು, ಪರೀಕ್ಷೆ ಪಾರದರ್ಶಕ ಹಾಗೂ ಸುಸೂತ್ರವಾಗಿ ನಡೆಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ  ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷಾ ಪೂರ್ವಸಿದ್ಧತೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯ ಒಟ್ಟು 147 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿದ್ದು, ಯಾವುದೇ ರೀತಿಯ ಅನಾನೂಕೂಲವಾಗದಂತೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡು ಪಾರದರ್ಶಕ ಪರೀಕ್ಷೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಸೂಚನೆ […]

ಜೂನ್ 24ರಂದು ಜಿಲ್ಲೆಯಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್- ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶ

ವಿಜಯಪುರ: ಜಿಲ್ಲಾದ್ಯಂತ ಎಲ್ಲ ಅಧೀನ ನ್ಯಾಯಾಲಯಗಳಲ್ಲಿ ಜೂನ್ 24 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದ್ದು, ಈ ಅದಾಲತನಲ್ಲಿ ಕಕ್ಷಿದಾರರು ಭಾಗವಹಿಸಿ, ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶವಿದೆ.  ಇದನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರು ತಿಳಿಸಿದ್ದಾರೆ. ರಾಜ್ಯ ಹೈಕೋರ್ಟ್ ಹಿರಿಯ ನ್ಯಾಯಮೂರ್ತಿಗಳು ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯ ನಿರ್ವಾಹಕ ಅಧ್ಯಕ್ಷರ ನಿರ್ದೇಶನದಂತೆ ಎಲ್ಲ ವರ್ಗದ ಕಕ್ಷಿದಾರರಿಗೆ ಅನುಕೂಲವಾಗುವ […]

ಹಿಂದೂಗಳ ವೈಭವದ ನಗರ ವಿಜಯಪುರ- ಬಸನಗೌಡ ಪಾಟೀಲ ಯತ್ನಾಳ

ವಿಜಯಪುರ: ಹಿಂದೂಗಳ ಅತ್ಯಂತ ವೈಭವದ ನಗರ ವಿಜಯಪುರ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.  ನಗರದ ಹನುಮಗಿರಿ ರಸ್ತೆಯ ಖಣಿ ಹತ್ತಿರದ ಮೋಹನ ನಗರದಲ್ಲಿ ವೆಂಕಟೇಶ್ವರ ದೇವಸ್ಥಾನದ ಗೀತಾ ಭವನ ಮತ್ತು ವಾನಪ್ರಸ್ಥಧಾಮ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ನಗರದಲ್ಲಿ ಅನೇಕ ದೇವಸ್ಥಾನಗಳನ್ನು ದಾಳಿ ಮಾಡಿದ ಕಾಲದಲ್ಲಿ ನಾಶಪಡಿಸಲಾಗಿದೆ.  ನಗರದಲ್ಲಿ ಎಲ್ಲಿಯೇ ಉತ್ಖನನ ಮಾಡಿದರೂ ಹಿಂದು ಕುರುಹು ಸಿಗುವ ನಗರ ವಿಜಯಪುರ ಎಂದು ಅವರು ಹೇಳಿದರು. ಆದಿಲ್ ಶಾಹಿ ಹೋಟೆಲ್ ಬಳಿಯ ಯಾದವರ […]

ಬೀರಲಿಂಗೇಶ್ವರ ಮಹಿಮೆ- ಅಕ್ಕಿ ತುಂಬಿದ ಬಿಂದಿಗೆಯಲ್ಲಿ ತಲ್ವಾರ್ ಹಾಕಿ ಇಡೀ ಬಿಂದಿಗೆ ಮೇಲೆತ್ತಿ ಪವಾಡ ಮಾಡಿದ ದೇವಸ್ಥಾನದ ಪೂಜಾರಿ

ವಿಜಯಪುರ: ಬಸವನಾಡು ವಿಜಯಪುರ ಜಿಲ್ಲೆಯ ಜಾತ್ರೆಗಳಿಗೆ ಹೆಸರುವಾಸಿ.  ಇಲ್ಲಿ ನಡೆಯುವ ಆಚರಣೆಗಳು ಮತ್ತು ಸಂಪ್ರದಾಯಗಳ ಪಾಲನೆ ಒಂದಿಲ್ಲೊಂದು ವಿಶೇಷತೆಗಳಿಂದ ಕೂಡಿರುತ್ತದೆ.  ದೇಶದಲ್ಲಿಯೇ ಅತೀ ಹೆಚ್ಚು ಜಾತ್ರೆಗಳು ನಡೆಯುವ ಜಿಲ್ಲೆ ಎಂದೂ ವಿಜಯಪುರ ಖ್ಯಾತಿಯಾಗಿದೆ.  ಈ ಜಿಲ್ಲೆಯಲ್ಲಿ ವರ್ಷವಿಡೀ ಒಂದಿಲ್ಲೊಂದು ಊರಿನಲ್ಲಿ ಒಂದಿಲ್ಲೊಂದು ಜಾತ್ರೆ, ಆಚರಣೆ, ಸಂಪ್ರದಾಯಗಳ ಪಾಲನೆ ಸೇರಿದಂತೆ ನಾನಾ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಲೇ ಇರುತ್ತವೆ. ಹೊಳೆಬಬಲಾದಿ ಸದಾಶಿವ ಮುತ್ಯಾನ ಜಾತ್ರೆ ಮದ್ಯ ನೈವೇದ್ಯ ಮತ್ತು ವರ್ಷದ ಭವಿಷ್ಯ ಹೇಳುವುದಕ್ಕೆ ಹೆಸರಾಗಿದ್ದರೆ, ಸಿಂದಗಿ ಬಿಂದಿಗೆ […]

ಕಥಕ್ ನೃತ್ಯವನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ- ಲತಾ ಜಹಾಗೀರದಾರ

ವಿಜಯಪುರ: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಮತ್ತು ವಿಜಯಪುರದ ನವರಸ ನೃತ್ಯ ಕಲಾ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಕಥಕ್ ನೃತ್ಯ ತರಬೇತಿ ಶಿಬಿರ ನಗರದಲ್ಲಿ ನಡೆಯಿತು.  ಈ ಶಿಬಿರವನ್ನು ಶೇಷ ಘಟಕ ಯೋಜನೆ ಅಡಿಯಲ್ಲಿ ಗುರುಶಿಷ್ಯ ಪರಂಪರೆ ಅಂಗವಾಗಿ ಆಯೋಜಿಸಲಾಗಿದ್ದ ಈ ತರಬೇತಿ ಶಿಬಿರವನ್ನುಕರ್ನಾಟಕ ಸಂಗೀತ, ನೃತ್ಯ ಅಕಾಡೆಮಿ ಮಾಜಿ ಸತಸ್ಯೆ ಮತ್ತು ಖ್ಯಾತ ಸಂಗೀತ ಕಲಾವಿದೆ ಲತಾ ಜಾಗೀರದಾರ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ನೃತ್ಯ ಸರ್ವ ರೋಗಕ್ಕೂ ರಾಮಬಾಣವಿದ್ದಂತೆ.  ನೃತ್ಯದಿಂದ ನಮ್ಮ ದೇಹದ ಸರ್ವ ಅಂಗಾಂಗಗಳಿಗೂ […]

ಬಿ.ಎಲ್.ಡಿ. ಸೌಹಾರ್ದ ಸಹಕಾರ ಸಂಘದ ನೂತನ ಶಾಖೆ ಕಾರ್ಯಾರಂಭ

ವಿಜಯಪುರ: ಬಿಜಾಪುರ ಲಿಂಗಾಯತ ಡೆವಲೆಪಮೆಂಟ್ ಸೌಹಾರ್ದ ಸಂಘದ ನೂತನ ಶಾಖೆಯ ಉದ್ಘಾಟನೆ ಸಮಾರಂಭ ಬಿ.ಎಲ್.ಡಿ.ಇ ಸಂಸ್ಥೆಯ ಬಂಗಾರಮ್ಮ ಸಜ್ಜನ ಆವರಣದಲ್ಲಿ ನಡೆಯಿತು. ಬಿ.ಎಲ್.ಡಿ.ಇ ಸಂಸ್ಥೆ ಮತ್ತು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಅವರು ನೂತನ ಶಾಖೆಯನ್ನು ಉದ್ಘಾಟಿಸಿದರು.  ಈ ಸಂದರ್ಭದಲ್ಲಿ ಅಧಿಕಾರಿಗಳಿಂದ ಸೌಹಾರ್ಧದ ಬಗ್ಗೆ ಮಾಹಿತಿ ಪಡೆದ ಅವರು, ಶುಭ ಕೋರಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ, ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, […]

ವಿಜಯಪುರ ಜಿಲ್ಲೆಯಲ್ಲಿ 4.64 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸುವ ಗುರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ 4.64 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸುವ ಗುರಿಯಿದ್ದು, ಈಗಾಗಲೇ 2.87 ಸಾವಿರ ಮನೆಗಳಿಗೆ ನೀರು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.   ಜಿಲ್ಲಾಡಳಿತ ವಿಜಯಪುರ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಮುದ್ದೇಬಿಹಾಳದ ನಾಲತಾವಾಡ ಪಟ್ಟಣದಲ್ಲಿ ಆಯೋಜಿಸಿರುವ ಮುದ್ದೇಬಿಹಾಳ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿನ ವಿವಿಧ ಅಭಿವೃದ್ಧಿ ಕಾಮಕಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನಾ ಕಾರ್ಯವನ್ನು ಹಾಗೂ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ನೆರವೇರಿಸಿ ಅವರು ಮಾತನಾಡಿದರು . ಜಲ್ ಜೀವನ್ ಮಿಷನ್ ಅಡಿಯಲ್ಲಿ […]

ಸಾರ್ವಜನಿಕ ಸಮಾರಂಭದಲ್ಲಿ ಮೂರು ಬಾರಿ ಸಿಎಂಗೆ ಮಹತ್ವದ ಫೋನ್ ಕಾಲ್- ಮೈಕ್ ಬಂದ್ ಮಾಡಿಸಿದಸಿಎಂ ಬಸವರಾಜ ಬೊಮ್ಮಾಯಿ

ವಿಜಯಪುರ: ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಮತ್ತು ಉದ್ಘಾಟನೆಗೆ ಆಗಮಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೂರು ಬಾರಿ ಕಾರ್ಯಕ್ರಮದ ಮೈಕ್ ಬಂದ್ ಮಾಡಿಸಿ ಫೋನ್ ನಲ್ಲಿ ಮಾತನಾಡಿದ ಪ್ರಸಂಗ ಬಸವನಾಡು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದಲ್ಲಿ ನಡೆದಿದೆ. ನಾಲತವಾಡ ಪಟ್ಟಣದ ಪಟ್ಟಣದ ಶರಣ ವಿರೇಶ್ವರ ಮಹಾವಿದ್ಯಾಲಯದ ಆವರಣದಲ್ಲಿ ನಡೆದ ಕಾರ್ಯಕ್ರಮಕ್ಕೆ ಆಗಮಿಸಿದ ಸಿಎಂ ವೇದಿಕೆಗೆ ಬರುತ್ತಿದ್ದಂತೆ ಮೊಬೈಲ್ ನಲ್ಲಿ ಮಾತನಾಡುತ್ತ ಬ್ಯೂಸಿಯಾದರು.  ಮೊದಲ ಬಾರಿಗೆ ಮೊಬೈಲ್ ಫೋನ್ ರಿಂಗಣಿಸಿದಾಗ ಕಾರ್ಯಕ್ರಮ ನಿರೂಪಕರು ಮಾತನಾಡುವುದನ್ನು ನಿಲ್ಲಿಸಲು […]