ಕೊಡದಿಂದ 6000 ಲೀ. ಸಾಮರ್ಥ್ಯದ ಓಕುಳಿ ಹೊಂಡ ತುಂಬಿದ ಶ್ರೀ ಮಾರತೇಶ್ವರ ಭಕ್ತ ಚಂದನಗೌಡ ಶಿವಪ್ಪಗೌಡ ಕೊಡಗಾನೂರ

ವಿಜಯಪುರ: ಬಸವನಾಡು ವಿಜಯಪುರ ಜಿಲ್ಲೆ ದೇಶದಲ್ಲಿಯೇ ಅತೀ ಹೆಚ್ಚು ಮತ್ತು ವಿಶಿಷ್ಠ ಜಾತ್ರೆಗಳಿಗೆ ಹೆಸರುವಾಸಿ.  ಜಿಲ್ಲೆಯಲ್ಲಿ ವರ್ಷವಿಡೀ ಒಂದಿಲ್ಲೋಂದು ಊರಿನಲ್ಲಿ ಒಂದಿಲ್ಲೋಂದು ಜಾತ್ರೆಗಳು ನಡೆಯುತ್ತಲೇ ಇರುತ್ತವೆ.  ಈ ಜಾತ್ರೆಗಳಲ್ಲಿ ಭಕ್ತರು ತಮ್ಮಿಷ್ಠದ ಹರಕೆ ಹೊತ್ತು ಬಯಕೆ ಈಡೇರಿದ ಬಳಿಕ ಹರಕೆ ತೀರಿಸುವ ಮೂಲಕ ದೇವರ ಕೃಪೆಗೆ ಪಾತ್ರರಾಗುತ್ತಿರುತ್ತಾರೆ. ಈ ಸುದ್ದಿ ಕೂಡ ಅಂಥದ್ದೆ ಒಂದು ವಿಶೇಷತೆಯಿಂದ ಕೂಡಿದೆ.  ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹುಲ್ಲೂರು ಗ್ರಾಮದ ಬಿ.ಎಸ್ಸಿ ಓದುತ್ತಿರುವ ಯುವಕ ಚಂದನಗೌಡ ಶಿವಪ್ಪಗೌಡ ಕೊಡಗಾನೂರ ವಿನೂತನವಾಗಿ ದೇವರ […]

ಪ್ರಾಚೀನ ಸ್ಮಾರಕಗಳ ರಕ್ಷಣೆ ನಮ್ಮೆಲ್ಲರ ಹೊಣೆ: ಡಾ. ಮಲ್ಲಿಕಾರ್ಜುನ ಮೇತ್ರಿ

ವಿಜಯಪುರ: ಯುವ ಜನರು ನಮ್ಮ ಹಿಂದಿನ ಗತಕಾಲದ ವೈಭವವನ್ನು ಅರಿಯುವ ದೃಷ್ಟಿಕೋನ ಹೊಂದಿರಬೇಕು. ಪ್ರಾಚೀನ ಸ್ಮಾರಕಗಳ ರಕ್ಷಣೆ ನಮ್ಮೆಲ್ಲರ ಹೊಣೆಯಾಗಬೇಕು ಎಂದು ಸಿಕಾಬ್ ಎ.ಆರ್‌.ಎಸ್‌.ಐ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮಲ್ಲಿಕಾರ್ಜುನ ಎಸ್. ಮೇತ್ರಿ ಹೇಳಿದರು. ಭಾರತೀಯ ಪುರಾತತ್ವ ಸರ್ವೇಕ್ಷಣ, ಧಾರವಾಢ ವಲಯದ ವತಿಯಿಂದ ಗೋಳಗುಮ್ಮಟದ ಆವರಣದಲ್ಲಿರುವ ಪ್ರಾಚ್ಯವಸ್ತು ಸಂಗ್ರಹಾಲಯದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಅಂತಾರರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಇತಿಹಾಸವನ್ನು ತಿಳಿಯದವನ್ನು ಇತಿಹಾಸವನ್ನು ಸೃಷ್ಟಿಸಲಾರ ಎಂಬ ಮಾತಿದೆ. ಅದರಂತೆ ತಮ್ಮ ಊರಿನಲ್ಲಿ […]

ಪರಿಹಾರ ಹಣ ಸಾಲಕ್ಕೆ ಕಡಿತಗೊಳಿಸಿದ್ದರೆ ರೈತರ ಖಾತೆಗಳಿಗೆ ಮರುಪಾವತಿಸಿ- ಬ್ಯಾಂಕುಗಳಿಗೆ ಡಿಸಿ ಟಿ. ಭೂಬಾಲನ್ ಸೂಚನೆ

ವಿಜಯಪುರ: ರೈತರ ಪರಿಹಾರದ ಹಣವನ್ನು ಸಾಲದ ಖಾತೆಗೆ ಜಮೆ ಮಾಡಿಕೊಂಡಿರುವ ಬಗ್ಗೆ ದೂರುಗಳು ಬಂದಿರುವುದರಿxದ ತಕ್ಷಣ ಮರುಪಾವತಿಸುವಂತೆ ಜಿಲ್ಲೆಯ ಎಲ್ಲಾ ಬ್ಯಾಂಕ್‌ಗಳಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ ನೀೡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಕರ್ನಾಟಕ ಸರ್ಕಾರ ಜಿಲ್ಲೆಯ ರೈತರಿಗೆ ಬರ ಪರಿಹಾರವಾಗಿ ರೂ. 360.10 ಕೋ. ಹಣ ಬಿಡುಗಡೆ ಮಾಡಲಾಗಿದೆ.  ರಾಜ್ಯ ಸರಕಾರದಿಂದ ನೇರವಾಗಿ ರೈತರ ಖಾತೆಗಳಿಗೆ ಬರ ಪರಿಹಾರದ ಹಣ ಬಿಡುಗಡೆ ಮಾಡಿದ ಹಣ ಇದಾಗಿದ್ದು, ಇದನ್ನು ರೈತರ ಸಾಲದ ಖಾತೆಗೆ […]

ವಿದ್ಯಾರ್ಥಿನಿಯರಿಗೆ ಟಾಟಾ ಮೋಟಾರ್ಸ್ ನಿಂದ ಸ್ಟೈಫಂಡ್ ಸಹಿತ ಉಚಿತವಾಗಿ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ- ಅರ್ಹತೆ, ಅರ್ಜಿ ಸಲ್ಲಿಕೆ ಕುರಿತ ಮಾಹಿತಿ ಇಲ್ಲಿದೆ

ವಿಜಯಪುರ: ಜನಪರ ಸೇವೆಯ ಮೂಲಕ ಸಾರ್ವಜನಿಕ ಉದ್ಯಮದಲ್ಲಿ ಅದರದೇ ಆದ ಕೊಡುಗೆ ನೀಡುವ ಮೂಲಕ ಮನೆಮಾತಾಗಿರುವ ಟಾಟಾ ಮೋಟಾರ್ಸ್ ಈಗ ಪಿಯುಸಿ ಪಾಸಾಗಿರುವ ವಿದ್ಯಾರ್ಥಿನಿಯರಿಗಾಗಿ ಮೂರು ವರ್ಷದ ಡಿಪ್ಲೋಮಾ ಕೋರ್ಸಿಗೆ ಅರ್ಜಿ ಆಹ್ವಾನಿಸಿದ್ದು, ಪ್ರತಿ ತಿಂಗಳು ಸ್ಟೈಫಂಡ್ ಸಹಿತಿ ತರಬೇತಿ ನೀಡಲಿದೆ. ಗ್ರಾಮೀಣ ವಿದ್ಯಾರ್ಥಿನಿಯರ ಪಾಲಿಗೆ ಇದು ವಿದ್ಯಾಭ್ಯಾಸದ ಜೊತೆಗೆ ಸ್ಟೈಫಂಡ್ ಸಹಿತ ವೃತ್ತಿಕೌಶಲ್ಯ ಹೆಚ್ಚಿಸುವ ಸದಾವಕಾಶವಾಗಿದ್ದು, ಧಾರವಾಡ ಟಾಟಾ ಮೋಟಾರ್ಸ್ ಲಿಮಿಟೆಡ್ ಫುಲ್ ಟರ್ಮ್ ಅಪ್ರೆಂಟಿಸ್ಶಿಪ್ ಗಾಗಿ ಆನಲೈನ್ ಅರ್ಜಿಗಳನ್ನು ಅಹ್ವಾನಿಸಿದೆ.  50 ವಿದ್ಯಾರ್ಥಿನಿಯರಿಗೆ ಪ್ರವೇಶಕ್ಕೆ […]

Video News: ಮೊಸರ ನಾಡಿನ ಬಳಿ ರೂ. 32 ಲಕ್ಷ ದರೋಡೆ- ಲಾರಿ ಚಾಲಕ, ಕ್ಲಿನರ್ ಮೇಲೆ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು

ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿ ದರೋಡೆ ನಡೆದಿದೆ. ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಹೊರ ವಲಯದಲ್ಲಿ ಶುಕ್ರವಾರ ತಡರಾತ್ರಿ ಕ್ಯಾಂಟರ್ ವಾಹವ ತಡೆದ ದುಷ್ಕರ್ಮಿಗಳು ಚಾಲಕ ಮತ್ತೋರ್ವನ ಮೇಲೆ ಖಾರದ ಪುಡಿ ಎರಚಿ ರಾಡ್ ನಿಂದ ಹಲ್ಲೆ ಮಾಡಿ ಕ್ಯಾಂಟರ್ ನಲ್ಲಿದ್ದ ರೂ. 32 ಲಕ್ಷ ರೂಪಾಯಿ ನಗದನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ಈ ಘಟನೆಯಲ್ಲಿ ದರೋಡೆಕೋರರಿಂದ ಹಲ್ಲೆಗೀಡಾದ ಕ್ಯಾಂಟರ್ ಚಾಲಕ ಮಹಾಂತೇಶ ಕುಂಬಾರ ಹಾಗೂ ಕ್ಲೀನರ್ ಮಲ್ಲು ಕೊಡಚಿ ಅವರಿಗೆ ಕೊಲ್ಹಾರ ಪಟ್ಟಣದಲ್ಲಿರುವ ಪ್ರಾಥಮಿಕ ಆರೋಗ್ಯ […]

ಲೋಕಾಯುಕ್ತರ ಬಲೆಗೆ ಬಿದ್ದ ಲಂಚಬಾಕ ಸರ್ವೇಯರ್, ಖಾಸಗಿ ವ್ಯಕ್ತಿ

ವಿಜಯಪುರ: ಜಮೀನಿನ ತತ್ಕಾಲ್ ಪೋಡಿ ಮಾಡಲು ಲಂಚ ಪಡೆಯುತ್ತಿದ್ದ ಸರ್ವೇಯರ್ ಮತ್ತು ಖಾಸಗಿ ವ್ಯಕ್ತಿ ಲೋಕಾಯುಕ್ತರ ಬಲೆಗೆ ಸಿಲುಕಿದ ಘಟನೆ ವಿಜಯಪುರದಲ್ಲಿ ನಡೆದಿದೆ. ಪ್ರಕಾಶ ಸಿಂಗೆ ಎಬುವರು ತಮ್ಮ ನಾಲ್ಕು ಎಕರೆ ಜಮೀನಿನ ತತ್ಕಾಲ ಪೋಡಿ ಮಾಡಲು ಅರ್ಜಿ ಸಲ್ಲಿಸಿದ್ದರು.  ಆದರೆ, ಈ ಕೆಲಸಕ್ಕಾಗಿ ಸರ್ವೇಯರ್ ಮಲ್ಲಪ್ಪ ಜಂಬಗಿ ಮತ್ತು ಖಾಸಗಿ ಸಹಾಯಕ ಗುರುದತ್ತ ಬಿರಾದಾರ ಅವರು ರೂ. 47,500 ಲಂಚ ಕೇಳಿದ್ದರು.  ಈ ಹಿನ್ನೆಲೆಯಲ್ಲಿ ಪ್ರಕಾಶ ಸಿಂಗೆ ಲೋಕಾಯುಕ್ತರ ಮೊರೆ ಹೋಗಿದ್ದರು. ಈ ಮಧ್ಯೆ ತತ್ಕಾಲ […]

ಅಡ್ರೆಸ್ ಕೇಳುವ ನೆಪದಲ್ಲಿ ನಿವೃತ್ತ ನೌಕರನ ಬಳಿಯಿದ್ದ ರೂ. 2.20 ಲಕ್ಷ ದೋಚಿದ ಕಳ್ಳರು- ತಾಳಿಕೋಟೆಯಲ್ಲಿ ಹಾಡುಹಗಲೇ ನಡೆದ ಘಟನೆ

ವಿಜಯಪುರ: ನಿವೃತ್ತ ನೌಕರರೊಬ್ಬರ ಗಮನ ಬೇರೆಡೆ ಸೆಳೆದು ಅವರ ಬಳಿಯಿದ್ದ ರೂ. 2.20 ಲಕ್ಷ ಹಣವನ್ನು ಇಬ್ಬರು ಕಳ್ಳರು ಹಾಡುಹಗಲೇ ಎಗರಿಸಿಕೊಂಡು ಪರಾರಿಯಾದ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದಲ್ಲಿ ನಡೆದಿದೆ. ತಾಳಿಕೋಟೆ ನಿವಾಸಿ ನಾಗಪ್ಪ ಅಮ್ಮಪ್ಪ ಕೆಂಭಾವಿ(61) ಕೊಡಗಾನೂರ ಬಸವೇಶ್ವರ ಪ್ರೌಢಶಾಲೆಯಲ್ಲಿ ಎಸ್ ಡಿ ಸಿ ಆಗಿ ಸೇವೆ ಸಲ್ಲಿಸಿ ಕಳೆದ ವರ್ಷ ನಿವೃತ್ತಿಯಾಗಿದ್ದರು.  ಅಲ್ಲದೇ, ಈ ವೇಳೆ ಬಂದಿದ್ದ ಹಣವನ್ನು ಬ್ಯಾಂಕಿನಲ್ಲಿ ಇಟ್ಟಿದ್ದರು.  ಮನೆ ಖರ್ಚಿಗಾಗಿ ತನ್ನ ಬ್ಯಾಂಕ್ ಖಾತೆಯಲ್ಲಿದ್ದ ಹಣದಲ್ಲಿ ರೂ. 2.20 […]

ಅವೈಜ್ಞಾನಿಕ ಆಹಾರ ಪದ್ಧತಿಯಿಂದ ಕಾಯಿಲೆಗಳು ಉಲ್ಬಣ- ಪ್ರತಿನಿತ್ಯ ಔಷಧಿ ಖರ್ಚು ಹೆ್ಚ್ಚಳ- ಕನೇರಿ ಸ್ವಾಮೀಜಿ

ವಿಜಯಪುರ: ಅವೈಜ್ಞಾನಿಕ ಆಹಾರ ಸೇವನೆ ಪದ್ಧಯಿಂದಾಗಿ ಪ್ರತಿನಿತ್ಯ ಔಷಧಿಗಾಗಿ ಸರಾಸರಿ ರೂ. 150  ಹಣವನ್ನು ಖರ್ಚು ಮಾಡುತ್ತಿದ್ದೇವೆ ಎಂದು ಕೋಲ್ಹಾಪುರ ಕನ್ಹೇರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮೀಜಿ ಹೇಳಿದ್ದಾರೆ.   ಬಬಲೇಶ್ವರ ತಾಲೂಕಿನ ಕಂಬಾಗಿಯಲ್ಲಿ ಮಧುರಾ ಆಯಿಲ್ ಇಂಡಸ್ಟ್ರೀಸ್‍ನಲ್ಲಿ ಕಟ್ಟಿಗೆ ಗಾಣದಿಂದ ಕುಸಬಿ, ಶೇಂಗಾ ಮತ್ತು ಕೊಬ್ಬರಿ ಎಣ್ಣೆ ಉತ್ಪಾದಿಸುವ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು ಯಾವ ದೇಶದಲ್ಲಿ ಜನರ ಆರೋಗ್ಯ ಸರಿ ಇರುವುದಿಲ್ಲವೋ ಆ ದೇಶದ ಆರ್ಥಿಕ ಬೆಳವಣಿಗೆ ಸಾಧ್ಯವಿಲ್ಲ.  ರಿಫಾಯಿನ್ಡ್ ಎಣ್ಣೆ ಬಳಸುವದರಿಂದ ಮಧುಮೇಹ, […]

CBSE Exam: ಶ್ರೀ ಬಿ. ಎಂ. ಪಾಟೀಲ ಸ್ಕೂಲ್ ವಿದ್ಯಾರ್ಥಿ ವಿಜಯಪುರ, ಬಾಗಲಕೋಟೆ ಜಿಲ್ಲೆಗೆ ಪ್ರಥಮ ಸ್ಥಾನ

ವಿಜಯಪುರ: ಇತ್ತೀಚೆಗೆ ನಡೆದ ಸಿ.ಬಿ.ಎಸ್.ಸಿ 10 ನೇ ತರಗತಿ ಪರೀಕ್ಷೆಯಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ.ಎಂ.ಪಾಟೀಲ ಪಬ್ಲಿಕ್ ಶಾಲೆ ವಿದ್ಯಾರ್ಥಿ ಮಿಹೀರ್ ಮಹೇಶ ದೇಶಪಾಂಡೆ ಶೇ.98 ಅಂಕ ಪಡೆದು ವಿಜಯಪುರ ಮತ್ತು ಬಾಗಲಕೋಟೆ ಎರಡು ಜಿಲ್ಲೆಗಳಿಗೆ ದ್ವಿತೀಯ ಗಳಿಸಿದ್ದಾನೆ. ಅಲ್ಲದೇ, ಈ ಪರೀಕ್ಷೆಯಲ್ಲಿ ಎಲ್ಲ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿ ಪಾಸಾಗುವ ಮೂಲಕ ಶಾಲೆ ಶೇ.100 ರಷ್ಟು ಫಲಿತಾಂಶ ದಾಖಲಿಸಲು ಕಾರಣರಾಗಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಶಾಲೆಯ ಪ್ರಾಚಾರ್ಯ ಬಂದನಾ ಬ್ಯಾನರ್ಜಿ, ಈ ಬಾರಿ […]

ಫೋರ್ಟೀಸ್ ಆಸ್ಪತ್ರೆ: ಕೊನೆ ಹಂತದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ ಇಬ್ಬರಿಗೆ ರೋಬೋಟಿಕ್‌ ತಂತ್ರಜ್ಞಾನ ಬಳಸಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆ

ಬೆಂಗಳೂರು: ಕೊನೆಯ ಹಂತದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ ಇಬ್ಬರಿಗೆ ರೋಬೋಟಿಕ್‌ಸಹಾಯದಿಂದ ಅಪರೂಪದ “ಸಂಕೀರ್ಣ ಕಿಡ್ನಿ ಕಸಿ” ಶಸ್ತ್ರಚಿಕಿತ್ಸೆಯನ್ನು ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ನಡೆಸಿದೆ. ಯೆಮೆನ್‌ ದೇಶದ 11 ವರ್ಷದ ಬಾಲಕ ಮತ್ತು ಬೆಂಗಳೂರಿನ 34 ವರ್ಷದ ವ್ಯಕ್ತಿ ಈ ಇಬ್ಬರಿಗೂ ರೋಬೋಟ್‌ ತಂತ್ರಜ್ಞಾನ ಬಳಸಿ ಯುರೋ ಆಂಕೊಲಾಜಿಸ್ಟ್‌ ಡಾ. ಮೋಹನ್ ಕೇಶವಮೂರ್ತಿ ಹಾಗೂ ನೆಫ್ರಾಲಜಿಸ್ಟ್‌ ಡಾ. ಎಸ್‌. ಮಂಜುನಾಥ್ ಅವರ ತಂಡ ಶಸ್ತ್ರಚಿಕಿತ್ಸೆ ನಡೆಸಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯುರೋ ಆಂಕೊಲಾಜಿಸ್ಟ್‌ ಡಾ. […]