ಐತಿಹಾಸಿಕ ಸುರಂಗ ಬಾವಡಿ ಸ್ವಚ್ಛ ಮಾಡಿದ ಪ್ರವಾಸೋದ್ಯಮ, ಎಎಸ್ಐ, ಮಹಾನಗರಪಾಲಿಕೆ, ಜಲ ಬಿರಾದಾರಿ ಸಂಸ್ಥೆ

ವಿಜಯಪುರ: ನಗರದ ಐತಿಹಾಸಿಕ ಸುರಂಗ ಬಾವಡಿ ಭಾವಿಯನ್ನು ಸ್ವಚ್ಛ ಮಾಡುವ ಮೂಲಕ ಪ್ರವಾಸೋದ್ಯಮ ಇಲಾಖೆ, ಭಾರತೀಯ ಪುರಾತತ್ವ ಸರ್ವೇಕ್ಷಣೆ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಜಲ ಬಿರಾಧಾರಿ ಸಂಸ್ಥೆ ಗಮನ ಸೆಳೆದಿವೆ. ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ಜಲಬಿರಾದಾರಿ ಸಂಸ್ಥೆಯ ಪೀಟರ್ ಅಲೆಕ್ಸಾಂಡರ್, ಅಮೀನ್‌ ಹುಲ್ಲೂರ, ಅಮೀತ ಹುದ್ದಾರ, ಸತೀಶ ದೇಶಮುಖ ಸೇರಿದಂತೆ ನಾನಾ ಇಲಾಖೆಯ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.

ಕ್ರೀಡೆಗಳಿಂದ ವಿದ್ಯಾರ್ಥಿಗಳು ದೈಹಿಕ, ಮಾನಸಿಕವಾಗಿ ಸದೃಢರಾಗಲು ಸಾಧ್ಯ- ಎಲ್. ಆರ್. ಹಳ್ಳದಮನಿ

ವಿಜಯಪುರ: ಕ್ರೀಡೆಗಳಿಂದ ವಿದ್ಯಾರ್ಥಿಗಳು ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಲು ಸಾಧ್ಯ ಎಂದು ಕನ್ನೂರಿನ ಸರಕಾರಿ ಪಿಯು ಕಾಲೇಜಿನ ಪ್ರಾಚಾರ್ಯ ಎಲ್. ಆರ್. ಹಳ್ಳದಮನಿ ಹೇಳಿದ್ದಾರೆ. ನಗರದಲ್ಲಿ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮತ್ತು ಅಲ್ ಹಸ್ನಾತ ಪಿಯು ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ನಡೆದ 2024-25ನೇ ಶೈಕ್ಷಣಿಕ ವರ್ಷದ ವಿಜಯಪುರ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇದೇ ವೇಳೆ ಮಾತನಾಡಿದ ಅಲ್ ಹಸ್ನಾತ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎ. ಎ. ಬಿಜಾಪುರ, ಕ್ರೀಡೆ ಮಕ್ಕಳ ಮನಸ್ಸಿಗೆ […]

ರಾಜ್ಯಪಾಲರ ವಿರುದ್ಧ ನಾಳೆ ಆಗಷ್ಟ 19 ರಂದು ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ- ಪ್ರೊ. ರಾಜು ಆಲಗೂರ

ವಿಜಯಪುರ: ಮುಡಾ ಹಗರಣ ವಿಷಯದಲ್ಲಿ ಸಿಎಂ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಖಂಡಿಸಿ ನಾಳೆ ಆಗಷ್ಟ 19 ರಂದು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಶಾಸಕ ಮತ್ತು ಲೋಕಸಭೆ ಚುನಾವಣೆವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಪ್ರೊ. ರಾಜು ಆಲಗೂರ ತಿಳಿಸಿದ್ದಾರೆ. ನಗರದಲ್ಲಿ ಕಾಂಗ್ರೆಸ್ ಮುಖಂಡರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಪಾಲ ಧಾವರಚಂದ ಗೆಹ್ಲೋಟ್ ಅವರು ಸಿಎಂ ಎಸ್. ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿರುವದನ್ನು ವಿರೋಧಿಸಿ ಬೃಹತ್ ಮತ್ತು ಮಧ್ಯಮ […]

ರಾಜ್ಯಪಾಲರ ವಿರುದ್ಧ ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್, ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರಿಂದ ಪ್ರತಿಭಟನೆ

ವಿಜಯಪುರ: ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಕಾಂಗ್ರೆಸ್ ಮತ್ತು ನಾನಾ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ, ರಾಜ್ಯಪಾಲರ ಪ್ರತಿಕೃತಿ ದಹನ ಮಾಡಿದರು. ನಗರದ ಗಾಂಧಿಚೌಕಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಸೋಮನಾಥ ಕಳ್ಳಿಮನಿ ಮತ್ತೀತರ ಮುಖಂಡರು ಸಿಎಂ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದು.  ರಾಜ್ಯದ ಜನ ಅವರ ಜೊತೆಗಿದ್ದಾರೆ.  ಸಿಎಂ ತೇಜೋವಧೆ ಮಾಡುವ ಉದ್ದೇಶದಿಂದ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ್ದಾರೆ.  ಕಾಂಗ್ರೆಸ್ ಪಕ್ಷ ರಾಜ್ಯದ ಜನತೆಗೆ […]

ಆ. 22ರಂದು ಉಪ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ: ಕಾರ್ಯಕ್ರಮ ವ್ಯವಸ್ಥಿತವಾಗಿ ನಿರ್ವಹಣೆಗೆ ಡಿಸಿ ಟಿ. ಭೂಬಾಲನ್ ಸೂಚನೆ

ವಿಜಯಪುರ: ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ. ಎನ್. ಫಣೀಂದ್ರ ಅವರು ಆ. 22ರಂದು ನಗರದ ಸ್ಟೇಶನ್ ರಸ್ತೆಯ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆ ನಡೆಸಲಿದ್ದು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವುದರಿಂದ ವ್ಯವಸ್ಥಿತವಾಗಿ ನಿರ್ವಹಣೆ ಮಾಡುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಕರ್ನಾಟಕದ ಉಪ ಲೋಕಾಯುಕ್ತರು ಅಂದು  ಬೆಳಿಗ್ಗೆ 10 ರಿಂದ 1-30ರವರೆಗೆ ಹಾಗೂ ಮಧ್ಯಾಹ್ನ […]

ನಾನಾ ಬೇಡಿಕೆ ಈಡೇರಿಸಲು ಆಗ್ರಹ- ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದಿಂದ ಮನವಿ ಪತ್ರ ಸಲ್ಲಿಕೆ

ವಿಜಯಪುರ: ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ವತಿಯಿಂದ ವಿಧಾನ ಪರಿಷತ ಮಾಜಿ ಶಾಸಕ ಅರುಣ ಶಹಾಪುರ ನೇತೃತ್ವದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.  ಖಾಸಗಿ ಶೈಕ್ಷಣಿಕ ಸಂಸ್ಥೆಗಳ ಸಿಬ್ಬಂದಿಗಳ ವೇತನ, ನಿವೃತ್ತಿ ವೇತನ ಮತ್ತು ಇತರೆ ಸೌಲಭ್ಯಗಳ ನಿಯಂತ್ರಣ ವಿಧೇಯಕ- 2014ಕ್ಕೆ ತಿದ್ದುಪಡಿ ತಂದು ಅಥವಾ ರದ್ದುಪಡಿಸಿ ಭವಿಷ್ಯವರ್ತಿಯಾಗಿ ಜಾರಿಗೆ ಬರುವಂತೆ ಕ್ರಮ ಕೈಗೊಳ್ಳುವ ಮೂಲಕ 01.04.2006ರ ಪೂರ್ವದಲ್ಲಿ ನೇಮಕವಾಗಿ […]

ಚಿಕ್ಕಗಲಗಲಿಯಲ್ಲಿ ಹೇಮರೆಡ್ಡಿ ಮಲ್ಲಮ್ಮ, ಶ್ರೀ ವೇಮನ ದೇವಾಲಯ ಉದ್ಘಾಟನೆ

ವಿಜಯಪುರ: ಬಬಲೇಶ್ವರ ತಾಲೂಕಿನ ಕೃಷ್ಣಾ ನದಿಯ ದಂಡೆಯಲ್ಲಿರುವ ಚಿಕ್ಕಗಲಗಲಿ ಗ್ರಾಮದಲ್ಲಿ ಹೇಮರೆಡ್ಡಿ ಮಲ್ಲಮ್ಮ ಮತ್ತು ಶ್ರೀ ವೇಮನ ದೇವಾಲಯ ಉದ್ಘಾಟನೆ ಕಾರ್ಯಕ್ರಮ ನಡೆಯಿತು.  ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಮರೆಗುದ್ದಿಯ ಶ್ರೀ ಪ್ರಭು ತೋಂಟದಾರ್ಯ ಮಹಾಸ್ವಾಮಿಗಳು, ಹೇಮರೆಡ್ಡಿ ಮಲ್ಲಮ್ಮ ಮಾನವಳಾಗಿ ಜನಿಸಿ ಶ್ರೀ ಮಲ್ಲಯ್ಯನ ಭಕ್ತಳಾಗಿ ಪರಮಾತ್ಮನಿಂದ ವರ ಪಡೆದು ಕಾಯಕದಲ್ಲಿ ದೇವರನ್ನು ನೆನೆದು ದೇವತೆಯಾಗಿ ಮನುಕುಲ ಉದ್ಧಾರಕ್ಕಾಗಿ ದೇವರ ಆಶಿರ್ವಾದ ಪಡೆದ ಮಹಾಸಾದ್ವಿಯಾಗಿದ್ದಾಳೆ ಎಂದು ಹೇಳಿದರು. ನಿಡೋಣಿಯ ರಾಮಚಂದ್ರ ಗೋವಿಂದಪ್ಪ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಅಡವಿ […]

ಮನಗೂಳಿ ಅಗಸಿ ಬಳಿ ದಲಿತರಿಗಾಗಿ ಮನೆ ನಿರ್ಮಿಸಿ ಕೊಡುವೆ- ಶಾಸಕ ಯತ್ನಾಳ

ವಿಜಯಪುರ: ನಗರದ ಮನಗೂಳಿ ಅಗಸಿ ಬಳಿ ದಲಿತರಿಗೆ ಮನೆಗಳನ್ನು ನಿರ್ಮಿಸಿ ಕೊಡುತ್ತೇನೆ.  ಯಾವುದೇ ಶಕ್ತಿ ಅಡ್ಡ ಬಂದರೂ ಲೆಕ್ಕಿಸದೇ ಸಮುದಾಯದ ಹಿತ ಕಾಪಾಡುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ನಗರದ ವಾರ್ಡ ಸಂಖ್ಯೆ 35ರಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಮಾರ್ಗದಲ್ಲಿ ನೂತನವಾಗಿ ನಿರ್ಮಿಸಲಾದ ನೇತಾಜಿ ಸುಭಾಷ್ ಚಂದ್ರ ಬೋಸ್ ವೃತ್ತದಲ್ಲಿ ನೇತಾಜಿ ಪುತ್ಥಳಿ ಅನಾವರಣ ಮತ್ತು ವೃತ್ತ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. ನಗರದ ಮನಗೂಳಿ ಅಗಸಿ ಬಳಿ ದಲಿತ ಕುಟುಂಬಗಳು ನೂರಾರು […]

Video News: ಬಿಜೆಪಿಯಲ್ಲಿ 20 ಪಂಗಡಗಳಿವೆ- ಜೈನ್, ಸಿಖ್ ರಂತೆ ಲಿಂಗಾಯಿತ ಎಲ್ಲ ಉಪ ಪಂಗಡಗಳಿಗೂ ರಾಜ್ಯ, ಕೇಂದ್ರದಲ್ಲಿ ಮೀಸಲಾತಿ ಸಿಗಲಿ- ಸಚಿವ ಎಂ. ಬಿ. ಪಾಟೀಲ

ವಿಜಯಪುರ: ಬಿಜೆಪಿಯಲ್ಲಿ 20 ಬಣಗಳಿವೆ.  ಒಂದೊಂದು ಬಣ ಒಂದೊಂದು ವಿಷಯ ಇಟ್ಟುಕೊಂಡು ಪಾದಯಾತ್ರೆ ಮಾಡಲಿ ಎಂದು ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ವ್ಯಂಗ್ಯವಾಡಿದ್ದಾರೆ. ವಿಜಯಪುರದಲ್ಲಿ ಗೃಹಕಚೇರಿಯಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತ್ತು ರಮೇಶ ಜಾರಕಿಹೊಳಿ ಬಣ ಮತ್ತೋಂದು ಪಾದಯಾತ್ರೆ ನಡೆಸುವ ಕುರಿತು ಚರ್ಚಿಸುತ್ತಿದೆ ಎಂಬ ವಿಚಾರದ ಕುರಿತು ಕೇಳಲಾದ ಪ್ರಶ್ನೆಗೆ ಸಚಿವರು ವ್ಯಂಗ್ಯವಾಗಿ ಉತ್ತರಿಸಿದರು. ಬಿಜೆಪಿಯಲ್ಲಿ 20 […]

ಶರಣರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು- ವಿಪ ಶಾಸಕ ಸುನೀಲಗೌಡ ಪಾಟೀಲ

ವಿಜಯಪುರ: ಶರಣರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ. ಇಂದು ಶುಕ್ರವಾರ ಬಬಲೇಶ್ವರ ತಾಲೂಕಿನ ಕೊಡಬಾಗಿ ಗ್ರಾಮದಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ನಿರ್ಮಿಸಲಾಗಿರುವ ಅಕ್ಕಮಹಾದೇವಿ ಗುಡಿ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ಅಕ್ಕಮಹಾದೇವಿ ನಮಗೆಲ್ಲರಿಗೂ ತಮ್ಮ ಆಚಾರ, ವಿಚಾರ, ವಚನಗಳ ಮೂಲಕ ಮಾದರಿಯಾಗಿದ್ದಾರೆ. ಶರಣ, ಶರಣೆಯರ ದೇವಸ್ಥಾನ ನಿರ್ಮಿಸುವುದರ ಜೊತೆಗೆ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಬಾಳು ಹಸನಾಗುತ್ತದೆ. ಶ್ರಾವಣ ಮಾಸ ಪ್ರಾರಂಭವಾದಾಗ ಕೆಲವರು ತಮ್ಮ ಆಚಾರ, ವಿಚಾರಗಳನ್ನು […]