Lokasabhe Election: ನಾಮಪತ್ರ ಸಲ್ಲಿಕೆ ಮುಕ್ತಾಯ- ಈವರೆಗೆ 21 ಅಭ್ಯರ್ಥಿಗಳಿಂದ 35 ನಾಮಪತ್ರ ಸಲ್ಲಿಕೆ

ವಿಜಯಪುರ: ಮೂರನೇ ಹಂತದಲ್ಲಿ ಲೋಕಸಭೆ ಚುನಾವಣೆ ಮತದಾನ ನಡೆಯಲಿರುವ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಮುಕ್ತಾಯವಾಗಿದ್ದು, ಬಿಜಾಪುರ(ಪ. ಜಾ) ಲೋಕಸಭೆ ಮತಕ್ಷೇತ್ರದಲ್ಲಿ ಕೊನೆಯ ದಿನ ಒಂಬತ್ತು ಅಭ್ಯರ್ಥಿಗಳು ಒಟ್ಟು 10 ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ಆರಂಭವಾದ ಏಪ್ರಿಲ್ 12 ರಿಂದ ಕೊನೆಯ ದಿನ ಏಪ್ರಿಲ್ 19ರ ವರೆಗೆ ಒಟ್ಟು 21 ಅಭ್ಯರ್ಥಿಗಳು ಒಟ್ಟು 35 ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಯ ಕೊನೆಯ ದಿನ ಸಂಸದ ಮತ್ತು ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಎರಡು, ಎಸ್ ಯು ಸಿ […]

ನಾಗರಭಾವಿ ಫೋರ್ಟಿಸ್‌ ಅತ್ಯಾಧುನಿಕ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಕೆ: ಆಸ್ಪತ್ರೆ ಉದ್ಘಾಟಿಸಿದ ನಟ ಉಪೇಂದ್ರ

ಬೆಂಗಳೂರು: ನಾಗರಭಾವಿ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿ, ಬರೋಬ್ಬರಿ 80 ಹಾಸಿಗೆy ಸಾಮರ್ಥ್ಯಕ್ಕೆ ಹೆಚ್ಚಿಸುವ ಮೂಲಕ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಿದ್ದು, ಪಶ್ಚಿಮ ಬೆಂಗಳೂರಿನಲ್ಲಿ ಅತ್ಯುತ್ತಮ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಾಗಿ ಹೊರಹೊಮ್ಮಿದೆ. ನಟ ಉಪೇಂದ್ರ ನಾಗರಭಾವಿಯ ಮಲ್ಟಿಸ್ಪೆಷಾಲಿಟಿ ಫೋರ್ಟಿಸ್‌ ಆಸ್ಪತ್ರೆಯನ್ನು ಉದ್ಘಾಟಿಸಿದರು, ಬಳಿಕ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ನಾಗರಭಾವಿ ಸಾಕಷ್ಟು ಬೆಳೆದಿದೆ, ಒಂದರ್ಥದಲ್ಲಿ ನಾಗರಭಾವಿ ಮಿನಿ ಗಾಂಧೀನಗರವಾಗಿದೆ, ಏಕೆಂದರೆ, ಶೇ.೯೦ರಷ್ಟು ಸಿನಿಮಾ ಮಂದಿ ಇದೇ ಸ್ಥಳದಲ್ಲಿ ವಾಸಿಸುತ್ತಿದ್ದಾರೆ, ಈ ಭಾಗದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಫೋರ್ಟಿಸ್‌ ಮೇಲ್ದರ್ಜೆಗೇರಿಸಿರುವುದು […]

Video News ಸಂಸದ ರಮೇಶ ಜಿಗಜಿಣಗಿ ಎರಡನೇ ಬಾರಿ ನಾಮಪತ್ರ ಸಲ್ಲಿಕೆ- ಎರಡು ಸೆಟ್ ಗಳಲ್ಲಿ ಉಮೇದುವಾರಿಕೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ

ವಿಜಯಪುರ: ಸಂಸದ ರಮೇಶ ಜಿಗಜಿಣಗಿ ವಿಜಯಪುರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ 2ನೇ ಬಾರಿ ನಾಮಪತ್ರ ಸಲ್ಲಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಅವರು, ಜಿಲ್ಲಾ ಚುನಾವಣಾಧಿಕಾರಿ ಟಿ. ಭೂಬಾಲನ್ ಅವರಿಗೆ ಎರಡು ಸೆಟ್ ಗಳಲ್ಲಿ ನಾಮಪತ್ರ ಸಲ್ಲಿಸಿದರು. ಮೊದಲ ಸೆಟ್ ಸಲ್ಲಿಸುವಾಗ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಮಾಜಿ ಶಾಸಕರಾದ ರಮೇಶ ಭೂಸನೂರ, ಸೋಮನಗೌಡ ಪಾಟೀಲ, ನ್ಯಾಯವಾದಿ ಸಂಗಮೇಶ ಹೌದೆ ಉಪಸ್ಥಿತರಿದ್ದರು. ವಿಡಿಯೋ ಸುದ್ದಿ ನೋಡಿ: ಎರಡನೇ ಸೆಟ್ ಸಲ್ಲಿಸುವಾಗ ಕಾರ್ಪೋರೇಟರ್ ರಾಜು ಮಗಿಮಠ, ಸುನಂದಾ ಕುಮಸಿ, […]

ಸಿಡಿಲು ಬಡಿದು ಐತಿಹಾಸಿಕ ಮೆಹತರ ಮಹಲ್ ಮಿನಾರ್ ಹೆ ಹಾನಿ- ಒಂದು ಕಾರು, ಎರಡು ಬೈಕ್ ಜಖಂ

ವಿಜಯಪುರ: ಗುಮ್ಮಟ ನಗರಿ ವಿಜಯಪುರದಲ್ಲಿ ಸಂಜೆ ಸುರಿದ ಸಿಡಿಲು ಸಹಿತ ಮಳೆಗೆ ಜುಮ್ಮಾ ಮಸೀದಿ ರಸ್ತೆಯಲ್ಲಿರುವ ಮೆಹತರ ಮಹಲ್ ಗೆ ಸ್ವಲ್ಪ ಹಾನಿಯಾಗಿದ್ದು, ಒಂದು ಕಾರು, ಎರಡು ಬೈಕುಗಳು ಜಖಂ ಗೊಂಡಿವೆ. ಸಂಜೆ ಗಾಳಿ, ಗುಡುಗು ಮತ್ತು ಸಿಡಿಲು ಸಹಿತ ಮಳೆ ಸುರಿದಿದೆ.  ಈ ಸಂದರ್ಭದಲ್ಲಿ ಮೆಹತರ ಮಹಲ್ ನ ಮಿನಾರ್ ವೊಂದರ ಮೇಲ್ಭಾಗದಲ್ಲಿ ಮಿಂಚು ಸಹಿತ ಸಿಡಿಲು ಬಡಿದಿದ್ದು, ಆ ಭಾಗದ ಕಲ್ಲುಗಳು ಕೆಳಗೆ ಬಿದ್ದಿವೆ.  ಇದರಿಂದಾಗಿ ಸ್ಮಾರಕದ ಎದುರು ನಿಲ್ಲಿಸಲಾಗಿದ್ದ ಒಂದು ಕಾರು ಮತ್ತು […]

ಕಾಂಗ್ರೆಸ್ ಅಭ್ಯರ್ಥಿಯಾಗಿ ಮೂರನೇ ಬಾರಿಗೆ ನಾಮಪತ್ರ ಸಲ್ಲಿಸಿದ ಪ್ರೊ. ರಾಜು ಆಲಗೂರ

ವಿಜಯಪುರ: ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರೊ. ರಾಜು ಆಲಗೂರ ಅವರು ಮೂರನೇ ಬಾರಿಗೆ ನಾಮಪತ್ರ ಸಲ್ಲಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಅವರು ಚುನಾವಣಾಧಿಕಾರಿ ಟಿ. ಭೂಬಾಲನ್ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ ಶಾಸಕ ಪ್ರಕಾಶ ರಾಠೋಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಹಿರಿಯ ಮುಖಂಡ ಡಿ. ಎಲ್. ಚವ್ಹಾಣ ಹಾಗೂ ನಿಂಗಪ್ಪ ಪೂಜಾರಿ ಉಪಸ್ಥಿತರಿದ್ದರು.

ಮನರೇಗಾ ಕಾರ್ಮಿಕರಿಗೆ ಮತದಾನ ಜಾಗೃತಿ ಮೂಡಿಸಿದ ಜಿ.ಪಂ. ಸಿಇಓ ರಿಷಿ ಆನಂದ

ವಿಜಯಪುರ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾನದ ದಿನ ಕಡ್ಡಾಯವಾಗಿ ಮತಗಟ್ಟೆಗಳಿಗೆ ಬಂದು ಎಲ್ಲರೂ ಮತದಾನ ಮಾಡಿ, ಮತದಾನವನ್ನು ನಿಮಗಾಗಿ, ನಿಮ್ಮ ಭವಿಷ್ಯಕ್ಕಾಗಿ, ನಮ್ಮ ಸಮಾಜಕ್ಕಾಗಿ ಮತ್ತು ನಮ್ಮ ದೇಶಕ್ಕಾಗಿ ಮತದಾನ ಮಾಡಿ ಚುನಾವಣೆ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ರಿಶಿ ಆನಂದ ಹೇಳಿದರು. ವಿಜಯಪುರ ತಾಲೂಕಿನ ನಾಗಠಾಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ನರೇಗಾ ಕಾರ್ಮಿಕರಿಗೆ ಮತದಾನ […]

ಟಿಎ, ಡಿಎಗೆ ಸೀಮಿತರಾಗುವವರ ಬದಲು ಜನಪರ ಕೆಲಸಗಾರ ಪ್ರೊ. ರಾಜು ಆಲಗೂರ ಅವರನ್ನು ಗೆಲ್ಲಿಸಬೇಕು- ಸಚಿವ ಎಂ. ಬಿ. ಪಾಟೀಲ

ವಿಜಯಪುರ: ಕೇವಲ ಟಿಎ, ಡಿಎ ಗೆ ಸೀಮಿತವಾಗಿರುವ ಸಂಸದ ರಮೇಶ ಜಿಗಜಿಣಗಿ ಬದಲು ಸಂಸತ್ತಿನಲ್ಲಿ ಬಸವ ನಾಡಿನ‌ ಜನರ ಪರ ಧ್ವನಿ‌ ಎತ್ತಲು ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರನ್ನು ಗೆಲ್ಲಿಸಬೇಕಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ‌ ಹೇಳಿದ್ದಾರೆ. ಇಂದು ಬುಧವಾರ ತಿಕೋಟಾ ತಾಲೂಕಿನ ಮುಮ್ಮೆಟಿಗುಡ್ಡದ ಬಳಿ ಅರ್ಜುನ ರಾಠೊಡ ಅವರ ತೋಟದಲ್ಲಿ ನಡೆದ ಅರಕೇರಿ ಜಿ. ಪಂ. ವ್ಯಾಪ್ತಿಯ ಕಾಂಗ್ರೆಸ್ ಚುನಾವಣೆ ಪ್ರಚಾರ ಸಭೆಯಲ್ಲಿ […]

UPSC Rank: ವಿಜಯಪುರ ಯುವಕ ಸಂತೋಷ ಶ್ರೀಕಾಂತ ಶಿರಾಡೋಣ ಗೆ 641ನೇ ರ್ಯಾಂಕ್

ವಿಜಯಪುರ: ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ ವಿಜಯಪುರ ಜಿಲ್ಲೆಯ ಮತ್ತೋರ್ವ ಯುವಕ ಪಾಸ್ ಆಗುವ ಮೂಲಕ ಗಮನ ಸೆಳೆದಿದ್ದಾನೆ. ಸಂತೋಷ ಶ್ರೀಕಾಂತ ಶಿರಾಡೋಣ ದೇಶಕ್ಕೆ 641ನೇ ರ್ಯಾಂಕ್ ಪಡೆದಿದ್ದು, ಶಿರಾಡೋಣ ಕುಟುಂಬದಲ್ಲಿ ಸಂತಸ ಮೂಡಿಸಿದೆ. ವಿಜಯಪುರ ನಗರದ ಸೈನಿಕ ಶಾಲೆಯ ಶಿಶುನಿಕೇತನ ಶಾಲೆಯಲ್ಲಿ ಒಂದರಿಂದ 5ನೇ ತರಗತಿ ವಿದ್ಯಾಭ್ಯಾಸ ಮಾಡಿರುವ ಯುವಕ, 6 ರಿಂದ 7ನೇ ತರಗತಿವರೆಗೆ ಗದಗ ತಾಲೂಕಿನ ಹುಲಕೋಟಿಯ ರಾಜರಾಜೇಶ್ವರಿ ಪ್ರೌಢ ಶಾಲೆಯಲ್ಲಿ ಮತ್ತು 8 ರಿಂದ 10ನೇ ತರಗತಿಯನ್ನು ವಿಜಯಪುರ ತಾಲೂಕಿನ‌ ಕಗ್ಗೋಡದ ಸಂಗನಬಸವ ಇಂಟರ್ […]

UPSC Exam: ವಿಜಯಪುರ ಮೂಲದ ಯುವತಿ ವಿಜೇತಾ ಭೀಮಸೇನ ಹೊಸಮನಿ‌ಗೆ 100ನೇ ರ್ಯಾಂಕ್

ವಿಜಯಪುರ: ಯು.ಪಿ.ಎಸ್.ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ವಿಜಯಯಪುರ ಮೂಲದ ಯುವತಿ‌ ವಿಜೇತಾ ಭೀಮಸೇನ ಹೊಸಮನಿಗೆ 100 ನೇ ರ‌್ಯಾಂಕ್ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ. ಯುವತಿಯ ಪೋಷಕರು‌ ಈಗ ಹುಬ್ಬಳ್ಳಿಯಲ್ಲಿ ನೆಲೆಸಿದ್ದಾರೆ. ಮಗಳ ಸಾಧನೆಗೆ ಪೋಷಕರ ಸಂತಸ ವ್ಯಕ್ತಪಡಿಸಿದ್ದಾರೆ. ಎಲ್. ಕೆ. ಜಿ ಯಿಂದ 5ನೇ ತರಗತಿವರೆ ವಿಜೇಜಾ ಭೀಮಸೇನ ಹೊಸಮನಿ ವಿಜಯಪುರ ನಗರದ ಸೈನಿಕ ಶಾಲೆಯ ಶಿಶುನಿಕೇತನ ಸ್ಕೂಲ್ ನಲ್ಲಿ ಓದಿದ್ದಾರೆ. 6 ರಿಂದ 10ನೇ ತರಗತಿವರೆಗೆ ಬಾಗಲಕೋಟೆಯ ಬಸವೇಶ್ವರ ಇಂಟರ್‌ ನ್ಯಾಷನಲ್ ಪಬ್ಲಿಕ್ […]

ಸ್ವೀಪ್ ಸಮಿತಿ ವತಿಯಿಂದ ವಿಜಯಪುರದಲ್ಲಿ ಮೇಣದ ಬತ್ತಿ ಬೆಳಗಿಸಿಕೊಂಡು ಜಾಗೃತಿ ಜಾಥಾ

ವಿಜಯಪುರ: ಮತದಾನ ಮಾಡಿ ದೇಶದ ಏಳಿಗೆಗೆ ಸಹಕರಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದ್ದಾರೆ.  ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ವಿಜಯಪುರ ಮಹಾನಗರ ಪಾಲಿಕೆ ಸಹಯೋಗದಲ್ಲಿ  ಲೋಕಸಭೆ ಚುನಾವಣೆ 2024ರ ಅಂಗವಾಗಿ ಮತದಾನ ಜಾಗೃತಿ ಮೂಡಿಸಲು ಆಯೋಜಿಸಲಾಗಿದ್ದ ಮೇಣದ ಬತ್ತಿ ಬೆಳಗಿಸಿಕೊಂಡು ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಎಲ್ಲರೂ ತಪ್ಪದೇ ಮತದಾನ ಮಾಡುವ ಜೊತೆಗೆ ನೆರೆಹೊರೆಯವರನ್ನು ಮತದಾನ ಮಾಡುವಂತೆ ಜಾಗೃತಿ ಮೂಡಿಸಬೇಕು.  ಪ್ರಜ್ಞಾವಂತ ನಾಗರೀಕರಾಗಿ ದೇಶದ ಏಳಿಗೆಗ ಮತದಾನ ಮಾಡುವುದನ್ನು ಮರೆಯಬಾರದು […]