Video News: ವಿಜಯಪುರ ಬಿಜೆಪಿ ಅಭ್ಯರ್ಥಿಯಾಗಿ ಸಂಸದ ರಮೇಶ ಜಿಗಜಿಣಗಿ ನಾಮಪತ್ರ ಸಲ್ಲಿಕೆ

ವಿಜಯಪುರ: ಬಿಜಾಪುರ(ಪ.ಜಾ) ಲೋಕಸಭೆ ಮತಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆಯ ಮೂರನೇ ಬಿಜೆಪಿ ಅಭ್ಯರ್ಥಿಯಾಗಿ ಸಂಸದ ರಮೇಶ ಜಿಗಜಿಣಗಿ ಎರಡು ಸೆಟ್ ಗಳಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಅವರು, ಚುನಾವಣಾಧಿಕಾರಿ ಟಿ. ಭೂಬಾಲನ್ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.  ಈ ಸಂದರ್ಭದಲ್ಲಿ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, ದೇವರ ಹಿಪ್ಪರಗಿ ಜೆಡಿಎಸ್ ಶಾಸಕ ರಾಜುಗೌಡ ಪಾಟೀಲ, ಮಾಜಿ ಸಚಿವ ಸಿ. ಟಿ. ರವಿ, ಜೆಡಿಎಸ್ ಮುಖಂಡ ಬಿ. ಡಿ. ಪಾಟೀಲ ಉಪಸ್ಥಿತರಿದ್ದರು. ಸಂಸದ […]

ವಿಜಯಪುರ ಡಿಡಿಪಿಐ ಎನ್. ಎಚ್. ನಾಗೂರು ಅಮಾನತು-

ವಿಜಯಪುರ: ಸಾರ್ವಜನಿಕ ಶಿಕ್ಷಣ ಇಲಾಖೆ(ಡಿಡಿಪಿಐ) ಉಪನಿರ್ದೇಶಕ ಎನ್. ಎಚ್. ನಾಗೂರ ಅವರನ್ನು ಸೇವೆಯಿಂದ ಅಮಾನತು ಮಾಡಾಲಾಗಿದೆ.   ಕರ್ತವ್ಯಲೋಪ ಆರೋಪದ ಹಿನ್ನೆಲೆಯಲ್ಲಿ ಅಮಾನತು ಮಾಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಧಿನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.  ಧಾರವಾಡ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಪರ ಆಯುಕ್ತರ ಶಿಫಾರಸ್ಸಿನ ಮೇಲೆ ಅಮಾನತು ಮಾಡಲಾಗಿದೆ ಎಂದು ಅಧೀನ ಕಾರ್ಯದರ್ಶಿ ಮಲ್ಲಕಾರ್ಜುನ ರಾಮಚಂದ್ರಪ್ಪ ಆದೇಶದಲ್ಲಿ ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆ ಸಂದರ್ಭದಲ್ಲಿ ಸಿಸಿ ಕೆಮೆರಾ ದೃಷ್ಯಾವಳಿ ಪರಿಶೀಲನೆ […]

ಸಂಸತ್ತಿನಲ್ಲಿ ಜಿಲ್ಲೆಯ ಪರ ಧ್ವನಿ ಎತ್ತಲು ಪ್ರೊ. ರಾಜು ಆಲಗೂರ ಗೆಲುವು ಅಗತ್ಯ- ಸಚಿವ ಎಂ. ಬಿ. ಪಾಟೀಲ

ವಿಜಯಪುರ: ಜಿಲ್ಲೆಯ ಸಮಸ್ಯೆಗಳ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತಿ ಕೇಂದ್ರದ ಗಮನ ಸೆಳೆಯಲು ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರನ್ನು ಬಹುಮತದಿಂದ ಗೆಲ್ಲಿಸುವುದು ಅಗತ್ಯವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ಇಂದು ರವಿವಾರ ನಗರದ ಐಶ್ವರ್ಯ ನಗರದಲ್ಲಿ ನಾಗಠಾಣ ವಿಧಾನಸಭೆ ಮತಕ್ಷೇತ್ರದ ಚುನಾವಣೆ ಪ್ರಚಾರ ಸಭೆಯನ್ನು ಉದ್ಘಾಟಿಸಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಪರ ಮತಯಾಚಿಸಿ ಮಾತನಾಡಿದರು. […]

ಇಂಚಗೇರಿ ಮಠಕ್ಕೆ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಭೇಟಿ- ವಿರೋಧಿಗಳಿಗಿಂತ ಹೆಚ್ಚಿನ ರಣತಂತ್ರ ಹೆಣೆದಿದ್ದೇವೆ ಎಂದ ಬಿಜೆಪಿ ಅಭ್ಯರ್ಥಿ

ವಿಜಯಪುರ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಬಿಜೆಪಿ ಸಂಸದ ಅಣ್ಣಾಸಾಹೇಬ ಜೊಲ್ಲೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಇಂಚಗೇರಿ ಮಠಕ್ಕೆ ದಿಢೀರ್ ಭೇಟಿ ನೀಡಿ, ಗೆಲುವಿಗಾಗಿ ಪ್ರಾರ್ಥಿಸಿದ್ದಾರೆ.  ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಮತ್ತು ಭೀಮಾ ಹೋರಾಟಗಾರ ಪಂಚಪ್ಪ ಕಲಬುರ್ಗಿ ಅವರು ಚಿಕ್ಕೋಡಿ ಸಂಸದರ ಜೊತೆಯಲ್ಲಿದ್ದರು. ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಇಂಚಗೇರಿ ಮಠದ ಭಕ್ತರ ಸಂಖ್ಯೆ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಗಳನ್ನು ಭೇಟಿ ಮಾಡಿ ಆಸೀರ್ವಾದ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಶ್ರೀಗಳೊಂದಿಗೆ ಮಾತನಾಡಿ ಆಶೀರ್ವಾದ […]

ಅಂಬೇಡ್ಕರ ಜಯಂತಿ: ಸಚಿವ ಎಂ. ಬಿ. ಪಾಟೀಲ ಅವರಿಂದ ಸಂವಿಧಾನ ಶಿಲ್ಪಿಯ ಪುತ್ಥಳಿಗೆ ಗೌರವ ನಮನ

ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ 133ನೇ ಜನ್ಮದಿನದ ಅಂಗವಾಗಿ ಡಾ. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ. ಇಂದು ರವಿವಾರ ನಗರದ ಅಂಬೇಡ್ಕರ್ ಚೌಕಿಗೆ ತೆರಳಿದ ಸಚಿವರು, ಜಯಂತಿ ಅಂಗವಾಗಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಪ್ರೊ. ರಾಜು ಆಲಗೂರ, ಷಹಜಹಾನ್ ಮುಲ್ಲಾ, […]

ದೇಶಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಕೊಡುಗೆ ಅಪಾರ- ಶಾಸಕ ಬಸನಗೌಡ ಪಾಟೀಲ ಯತ್ನಾಳ

ವಿಜಯಪುರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ನಗರದ ಡಾ.ಅಂಬೇಡ್ಕರ್ ವೃತ್ತದಲ್ಲಿರುವ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಸಾಮಾಜಿಕ ಸಮಾನತೆ, ಅಸ್ಪೃಶ್ಯತೆ ನಿವಾರಣೆಗಾಗಿ ತಮ್ಮ ಜೀವನದುದ್ದಕ್ಕೂ ಶ್ರಮಿಸಿದ ಮಹಾನ್ ನಾಯಕರಾದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರು ಜಗತ್ತಿಗೆ ಮಾದರಿಯಾದ ಸಂವಿಧಾನದ ನೀಡಿದ್ದಾರೆ. ದೇಶಕ್ಕೆ ನೀಡಿರುವ ಕೊಡುವೆ ಅಪಾರವಾದದ್ದು. ಆ ಕೊಡುಗೆಗಳನ್ನು ಸ್ಮರಿಸುವ ಹಾಗೂ ಅವರ ಉದ್ದೇಶಗಳನ್ನು ಈಡೇರಿಸುವ ಕೆಲಸವನ್ನು ಭಾರತೀಯ ಜನತಾ ಪಾರ್ಟಿ […]

ಅಂಬೇಡ್ಕರ್ ಅವರನ್ನು ಪ್ರತಿನಿತ್ಯ ಸ್ಮರಿಸುವ ಕಾರ್ಯವಾಗಬೇಕು- ಡಿಸಿ ಟಿ. ಭೂಬಾಲನ್

ವಿಜಯಪುರ: ಜಗತ್ತಿನಲ್ಲಿಯೇ ಶ್ರೇಷ್ಠ ಸಂವಿಧಾನ ರಚಿಸಿದ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರನ್ನು ಪ್ರತಿಯೊಬ್ಬರು ಪ್ರತಿನಿತ್ಯ ಸ್ಮರಿಸಿ ಅವರ ಸಂದೇಶಗಳನ್ನು ಪಾಲಿಸುವುದರ ಮೂಲಕ ಸಂವಿಧಾನವನ್ನು ಗೌರವಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಕರೆ ನೀಡಿದರು. ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲಾಡಳಿತದ ವತಿಯಿಂದ ರವಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅತ್ಯಂತ ಸರಳ ಹಾಗೂ ಅರ್ಥಪೂರ್ಣವಾಗಿ ಹಮ್ಮಿಕೊಂಡ ಜಯಂತಿ ಕಾರ್ಯಕ್ರಮದಲ್ಲಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ಡಾ.ಬಾಬಾಸಾಹೇಬ್ ಅಂಬೇಡ್ಕರವರು ಬಡವರು, ಪರಿಶಿಷ್ಟ ಜಾತಿ, […]

ಮೂರ್ನಾಲ್ಕು ದಿಗಳಿಗೊಮ್ಮೆಯಾದರೂ ವಿಜಯಪುರ ನಗರಕ್ಕೆ ಕುಡಿಯಲು ನೀರು ಪೂರೈಸಲು ಕ್ರಮ ಕೈಗೊಳ್ಳಿ- ಅಧಿಕಾರಿಗಳಿಗೆ ಡಿಸಿ ಟಿ. ಭೂಬಾಲನ್ ಸೂಚನೆ

ವಿಜಯಪುರ: ವಿಜಯಪುರ ನಗರಕ್ಕೆ ಕನಿಷ್ಠ ಮೂರ್ನಾಲ್ಕು ದಿನಗಳಿಗೊಮ್ಮೆಯಾದರೂ ಕುಡಿಯಲು ನೀರು ಪೂರೈಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕುಡಿಯುವ ನೀರಿನ ನಿರ್ವಹಣೆ ಕುರಿತು ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಸಧ್ಯಕ್ಕೆ ಯಾವುದೇ ಸಮಸ್ಯೆ ಇಲ್ಲ ಆದ್ಯಾಗೂ ಅಧಿಕಾರಿಗಳು ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಜಿಲ್ಲೆಯಲ್ಲಿ ಲಭ್ಯವಿರುವ ನೀರಿನ ಸದ್ಭಳಕೆಯೊಂದಿಗೆ ಸಮರ್ಪಕವಾಗಿ ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು. ನಗರದಲ್ಲಿರುವ […]

ಸಶಕ್ತ ಭಾರತ ನಿರ್ಮಾಣಕ್ಕಾಗಿ ಮತ ಚಲಾಯಿಸಿ: ಜಿಲ್ಲಾಧಿಕಾರಿ ಟಿ.ಭೂಬಾಲನ್

ವಿಜಯಪುರ: ಸಧೃಡ ಭಾರತ ನಿರ್ಮಾಣಕ್ಕಾಗಿ, ಸಶಕ್ತ ಭಾರತವನ್ನು ಮುನ್ನೆಡಸಲು ಯೋಗ್ಯ ವ್ಯಕ್ತಿಯನ್ನು ಆಯ್ಕೆ ಮಾಡಲು ಮತದಾನ ಅತ್ಯಗತ್ಯವಾಗಿದೆ. ಹಾಗಾಗಿ ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ .ಭೂಬಾಲನ್ ಹೇಳಿದ್ದಾರೆ.  ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಲೋಕಸಭೆ ಚುನಾವಣೆ-2024ರ ಅಂಗವಾಗಿ ಮತದಾನ ಜಾಗೃತಿ ಮೂಡಿಸುವ ಸ್ಥಬ್ಧಚಿತ್ರ ವಾಹನಕ್ಕೆ ಶುಕ್ರವಾರ ಹಸಿರು ನಿಶಾನೆ ತೋರುವುದರ ಮೂಲಕ ಮಾತನಾಡಿದರು. ಮತ ಚಲಾಯಿಸುವುದರ ಮೂಲಕ ದೇಶದ ಸಮಗ್ರತೆ ಹಾಗೂ ಪ್ರಗತಿಗೆ ಮುನ್ನುಡಿ ಬರೆಯಬೇಕು. ನಾವು ಹಾಕುವ ಮತ ಕೇವಲ […]

Video News: ಪ್ರೊ. ರಾಜು ಆಲಗೂರ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ- ಸಂಸದ ರಮೇಶ ಜಿಗಜಿಣಗಿ ವಿರುದ್ಧ ವಾಗ್ದಾಳಿ

ವಿಜಯಪುರ: ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ವಿಜಯಪುರ ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಅವರು, ಚುನಾವಣಾಧಿಕಾರಿಯೂ ಆಗಿರುವ ಟಿ. ಭೂಬಾಲನ್ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸೂಚಕರಾದ ಹೊಮನಲ್ಲ ಸಾರವಾಡ, ಬೀರಪ್ಪ ಜುಮನಾಳ, ಅಮೋಘಸಿದ್ಧ ಬಿಜ್ಜರಗಿ, ಸುರೇಶಗೌಡ ಪಾಟೀಲ ಉಪಸ್ಥಿತರಿದ್ದರು. ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪ್ರೊ. ರಾಜು ಆಲಗೂರ, ರಾಜ್ಯ ಸರಕಾರದ ಕೆಲಸಗಳು ನಮ್ಮ ಕೈಹಿಡಿಯಲಿವೆ.  ಜನ ನಮ್ಮ ಮೇಲೆ […]