ದೇಶದ ರಕ್ಷಣೆ, ಉಳಿವಿಗಾಗಿ ಬಿಜೆಪಿಗೆ ಮತ ಹಾಕಬೇಕು- ಶಾಸಕ ಬಸನಗೌಡ ಪಾಟೀಲ ಯತ್ನಾಳ

ವಿಜಯಪುರ: ನಮ್ಮ ರಕ್ಷಣೆಗಾಗಿ, ದೇಶ ಉಳಿವಿಗಾಗಿ ಬಿಜೆಪಿಗೆ ಮತ ಹಾಕುವ ಕಾಲ ಬಂದಿದೆ.  ನಮ್ಮವರು, ನಮ್ಮ ಮನೆಗಳು ಉಳಿಯಬೇಕೆಂದರೆ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.  ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ಬಿಜೆಪಿ ಸಂಸ್ಥಾಪನೆ ದಿನಾಚರಣೆ ಹಾಗೂ ನಗರ ಮಂಡಲದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ದೇಶದಲ್ಲಿ ಕಳೆದ 10 ವರ್ಷಗಳಲ್ಲಿ ಆಗಿರುವ ಅಭಿವೃದ್ಧಿಯಿಂದ ಯಾರನ್ನು ಕೇಳಿದರೂ ಮೋದಿಗೆ ಮತ ಎನ್ನುತ್ತಾರೆ.  ಯಾವ ಗ್ಯಾರಂಟಿಯೂ […]

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಅವರಿಂದ ಬಿ ಫಾರಂ ಪಡೆದ ಪ್ರೊ. ರಾಜು ಆಲಗೂರ

ಬೆಂಗಳೂರು: ವಿಜಯಪುರ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರು ಬೆಂಗಳೂರಿಗೆ ತೆರಳಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಅವರಿಂದ ಬಿ. ಫಾರಂ ಪಡೆದರು. ಈ ಸಂದರ್ಭದಲ್ಲಿ ಸಿಂದಗಿ ಶಾಸಕ ಅಶೋಕ ಮನಗೂಳಿ, ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ, ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ, ಮುಖಂಡರಾದ ಮಲ್ಲಿಕಾರ್ಜುನ ಲೋಣಿ, ಪ್ರಫುಲ್ ಮಂಗಣ್ಣವರ ಮುಂತಾದವರು ಉಪಸ್ಥಿತರಿದ್ದರು.

ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗಲು ನನ್ನನ್ನು ಮತ್ತೊಮ್ಮೆ ಆಶೀರ್ವದಿಸಿ: ರಮೇಶ ಜಿಗಜಿಣಗಿ ಮನವಿ

ವಿಜಯಪುರ: ನರೇಂದ್ರ ಮೋದಿ ಅವರನ್ನು ಮೂರನೇ ಬಾರಿ ಪ್ರಧಾನಿ ಮಾಡಲು ನನ್ನನ್ನು ಮತ್ತೋಮ್ಮೆ ಲೋಕಸಭೆ ಸದಸ್ಯನಾಗಿ ಮತ್ತೊಮ್ಮೆ ಆಶೀರ್ವದಿಸಿ ಅವಕಾಶ ನೀಡಬೇಕು ಎಂದು ವಿಜಯಪುರ ಎನ್‌ಡಿಎ ಅಭ್ಯರ್ಥಿ ಮತ್ತು ಸಂಸದ ರಮೇಶ ಜಿಗಜಿಣಗಿ ಮನವಿ ಮಾಡಿದ್ದಾರೆ. ದೇವರ ಹಿಪ್ಪರಗಿ ಕ್ಷೇತ್ರದ ಮುಳಸಾವಳಗಿ ಗ್ರಾಮದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿಗಳಾದ ರಾಮಕೃಷ್ಣ ಹೆಗಡೆ, ಜಿ. ಎಚ್. ಪಟೇಲ ಅವರ ಜೊತೆಗೂಡಿ ಹೆಜ್ಜೆ ಹಾಕಿ ರಾಜಕಾರಣ ಮಾಡಿದ್ದೇನೆ.  12 ಚುನಾವಣೆಗಳಲ್ಲಿ ಜನತೆ ನನ್ನನ್ನು ಆಶೀರ್ವದಿಸಿದ್ದಾರೆ.  ಅದೇ […]

Video News: ಮಗು ಸಾತ್ವಿಕ ಸಾವು ಗೆದ್ದು ಬಂತು- ಪೋಷಕರು ಸೇರಿ ಎಲ್ಲರಿಗೂ ಹರ್ಷ ತಂತು

ವಿಜಯಪುರ: ಇಂಡಿ ತಾಲೂಕಿನ ಲಚ್ಯಾಣದಲ್ಲಿ ಮಗು ತೆರೆದ ಕೊಳವೆ ಭಾವಿಗೆ ಬಿದ್ದಿದ್ದ ಪ್ರಕರಣ ಸುಖಾಂತ್ಯ ಕಂಡಿದ್ದು, ದೇವರ ಕೃಪೆಯಿಂದ ಮಗುವನ್ನು ರಕ್ಷಣಾ ಸಿಬ್ಬಂದಿ ಸುರಕ್ಷಿತವಾಗಿ ಹೊರಗೆ ತೆಗೆದಿದ್ದಾರೆ. ಬುಧವಾರ ಸಂಜೆ 6 ಗಂಟೆಗೆ ಕೊಳವೆ ಭಾವಿಗೆ ಬಿದ್ದಿದ್ದ ಮಗುವನ್ನು ಸತತ 20 ಗಂಟೆಗಳ ರಕ್ಷಣಾ ಕಾರ್ಯಾಚರಣೆಯ ಬಳಿಕ ಗುರುವಾರ ಮಧ್ಯಾಹ್ನ ಹೊರಗೆ ತೆಗೆಯಲಾಗಿದೆ. ಬರಗಾಲದ ಹಿನ್ನೆಲೆಯಲ್ಲಿ ತಮ್ಮ 4 ಎಕರೆ ತೋಟದಲ್ಲಿ ಬೆಳೆಯಲಾಗಿದ್ದ ಲಿಂಬೆ ಮತ್ತು ದ್ರಾಕ್ಷಿ ಬೆಳೆಗಳನ್ನು ರಕ್ಷಿಸಲು ಮುಜಗೊಂಡ ಅವರು ತೋಟದಲ್ಲಿ ಕೊಳವೆ ಭಾವಿ […]

Video News: ಲಚ್ಯಾಣದಲ್ಲಿ ಬೋರವೆಲ್ ಗೆ ಬಿದ್ದ ಮಗು- ಕ್ಷಿಪ್ರ ಕಾರ್ಯಾಚರಣೆಗೆ ಸಚಿವ ಎಂ. ಬಿ. ಪಾಟೀಲ ಸೂಚನೆ

ವಿಜಯಪುರ: ಆಟವಾಡುತ್ತಿದ್ದ ಪುಟ್ಟ ಮಗುವೊಂದು ತೆರೆದ ಬೋರವೆಲ್ ಗೆ ಬಿದ್ದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ನಡೆದಿದೆ. ಸುಮಾರು ಒಂದೂವರೆ ವರ್ಷದ ಗಂಡು ಮಗು ಸಾತ್ವಿಕ ಮುಜಗೊಂಡ ಸಂಜೆ 6 ಗಂಟೆಯ ಸುಮಾರಿಗೆ ಆಟವಾಡುತ್ತ ಹೋಗಿ ತೆರೆದ ಬೋರವೆಲ್ ಗೆ ಬಿದ್ದಿದೆ. ಸ್ಥಳಕ್ಕೆ ದೌಡಾಯಿಸಿದ ಡಿಸಿ, ಎಸ್ಪಿ ಮತ್ತೀತರ ಅಧಿಕಾರಿಗಳು ಘಟನೆಯ ಮಾಹಿತಿ ಪಡೆದ ಜಿಲ್ಲಾಧಿಕಾರಿ ಟಿ. ಭೂಬಾಲನ್, ಎಸ್ಪಿ ಋಷಿಕೇಶ ನೋನಾವಣೆ ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ಮಾರ್ಗದರ್ಶನ ಮಾಡುತ್ತಿದ್ದಾರೆ. […]

ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆ: ಪೊಲೀಸ್ ಸೇವೆ ಸ್ಮರಣೀಯ- ಡಿಸಿ ಟಿ. ಭೂಬಾಲನ್

ವಿಜಯಪುರ: ಪೊಲೀಸ್ ಪೇದೆಯಿಂದ ಹಿಡಿದು ಐಜಿಪಿ ವರೆಗಿನ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ಸೇವೆಯು ಸದಾ ಸ್ಮರಿಸುವಂತಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದ್ದಾರೆ. ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಇಲಾಖೆಯಿಂದ ಆಯೋಜಿಸಲಾಗಿದ್ದ ವಿಜಯಪುರ ಜಿಲ್ಲಾ ಪೊಲೀಸ್ ಕಲ್ಯಾಣ ಹಾಗೂ ಧ್ವ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ದೇಶದಲ್ಲಿ ಎಷ್ಟೇ ಸಮಸ್ಯೆಗಳು ಉಧ್ವ್ಬವಿಸಿದರೂ ಕಾನೂನನ್ನು ಅನುಷ್ಠಾನಗೊಳಿಸಿ ಸಾರ್ವಜನಿಕರು ನೆಮ್ಮದಿಯಿಂದ ಇರಲು ಪೊಲೀಸ್ ಇಲಾಖೆ ಶ್ರಮಿಸುವದರಿಂದ ಪೊಲೀಸ್ ಸೇವೆ ಸ್ಮರಣೀಯವಾಗಿದೆ.  ನಿವೃತ್ತ ಪೊಲೀಸ್ ಸಿಬ್ಬಂದಿ […]

ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಪಾದಯಾತ್ರೆ ಮೂಲಕ ಮತಯಾಚನೆ

ವಿಜಯಪುರ: ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರು ಗುಮ್ಮಟ ನಗರಿ ವಿಜಯಪುರದಲ್ಲಿ ಪಾದಯಾತ್ರೆ, ಮೂಲಕ ಬಿರುಸಿನ ಪ್ರಚಾರ ನಡೆಸಿದರು.  ನಗರದ ವಾರ್ಡ್ ಸಂಖ್ಯೆ 32, 33 ಮತ್ತು 34ರಲ್ಲಿ ಪಾದಯಾತ್ರೆನಡೆಸಿದ ಅವರು, ನಗರದಲ್ಲಿ ಪ್ರಚಾರಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ.  ಈ ಸಲ ಮತದಾರರು ಬದಲಾವಣೆ ಬಯಸಿರುವುದು ನಿಚ್ಚಳವಾಗಿದೆ.  ರಾಜ್ಯದಲ್ಲಿ ಎಸ್. ಸಿದ್ದರಾಮಯ್ಯ ಅವರ ಸರಕಾರದ ಸಾಧನೆ ಮನೆ ಮತ್ತು ಮನ ಮುಟ್ಟಿದೆ.  ಜಿಲ್ಲೆಯೊಂದರಲ್ಲಿಯೇ […]

ಕಾಂಗ್ರೆಸ್ ದಲಿತರನ್ನು ಕೇವಲ ಮತಬ್ಯಾಂಕ್ ಆಗಿ ಬಳಸಿಕೊಂಡಿದೆ- ರಾಜ್ಯ ಸರಕಾರ ಎಸ್.ಸಿ.ಪಿ, ಟಿ.ಎಸ್.ಪಿ ಯೋಜನೆಗಳ ರೂ. 25000 ಕೋ. ದುರ್ಬಳಕೆ ಮಾಡಿದೆ- ಮಹೇಂದ್ರಕುಮಾರ ನಾಯಿಕ

ವಿಜಯಪುರ: ಕಾಂಗ್ರೆಸ್ ದಲಿತರನ್ನು ಕೇವಲ ಮತಬ್ಯಾಂಕ್ ಆಗಿ ಬಳಸಿಕೊಂಡಿದ್ದೆ.  ರಾಜ್ಯ ಸರಕಾರ ಎಸ್.ಸಿ.ಪಿ., ಟಿ.ಎಸ್.ಪಿ ಯೋಜನೆಗಳ ರೂ. 25000 ಕೋ. ಹಣವನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹೇಂದ್ರಕುಮಾರ ನಾಯಿಕ ಆರೋಪಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ. ಬಿ. ಆರ್. ಅಂಬೇಡ್ಕರ ಅವರಿಂದ ಹಿಡಿದು ಈವರೆಗೆ ದಲಿತರಿಗೆ ನಿರಂತರ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು. ರಾಜ್ಯ ಸರಕಾರ ಎಸ್.ಸಿ.ಪಿ., ಟಿ.ಎಸ್.ಪಿ ಹಣವನ್ನು ಬೇರೆ ಯೋಜನೆಗೆ ಬಳಸಿಕೊಂಡಿದೆ.  ಈ ವಿಷಯದ ಕುರಿತು ಪ್ರಶ್ನಿಸಿದರೆ ಸಿದ್ದರಾಮಯ್ಯನವರು […]

ಎಲೆಕ್ಟ್ರಾಲ್ ಬಾಂಡ್ ಖರೀದಿದಾರರ ಹೆಸರು ಬಹಿರಂಗವಾದ ಬಳಿಕ ಬಿಜೆಪಿ ಮುಖವಾಡ ಕಳಚಿದೆ- ಸಚಿವ ಎಂ. ಬಿ. ಪಾಟೀಲ

ವಿಜಯಪುರ, ಮಾ. 31: ಎಲೆಕ್ಟ್ರಾಲ್ ಬಾಂಡ್ ವಿಚಾರ ಬಹಿರಂಗವಾದ ಬಳಿಕ ಮೋದಿ ಅವರ ಮುಖವಾಡ ಕಳಚಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ಇಂದು ರವಿವಾರ ಬಬಲೇಶ್ವರದಲ್ಲಿ ವಿ. ಎಸ್. ಪಾಟೀಲ ಅವರ ತೋಟದಲ್ಲಿ ನಡೆದ ಬಬಲೇಶ್ವರ ಪಟ್ಟಣ, ಸಾರವಾಡ ಮತ್ತು ಮಮದಾಪುರ ಜಿ. ಪಂ. ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು, ಯುವಕರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ […]

ಸಮಾಜದ ಎಲ್ಲ ವರ್ಗವದರ ಬಗ್ಗೆ ಗೌರವ ಭಾವನೆಯೊಂದಿಗೆ ರಾಜಕೀಯದಲ್ಲಿದ್ದೇನೆ- ಸಂಸದ ಜಿಗಜಿಣಗಿ

ವಿಜಯಪುರ: ಸಮಾಜದ ಎಲ್ಲ ವರ್ಗದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಬಡವರು, ದಲಿತರು ಮೇಲ್ವರ್ಗದವರು ಸೇರಿದಂತೆ ಎಲ್ಲರ ಬಗ್ಗೆ ಗೌರವ ಭಾವನೆ ಹೊಂದಿದರೆ ರಾಜಕಾರಣ ಮಾಡಲು ಸಾಧ್ಯ ಎಂಬುದನ್ನು ಅರಿಯಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ.  ನಗರದಲ್ಲಿ ಬಿಜೆಪಿ ಆಯೋಜಿಸಿದ್ದ ಶಕ್ತಿ ಕೇಂದ್ರಗಳ ಪ್ರಮುಖರ ಸಭೆಯನ್ನು ಉದ್ಘಾಟಿಸಿ ಮಾತನಾಡಿ ಅವರು, ರಾಜಕಾರಣ ಮಾಡಲು ಕಾರ್ಯಕರ್ತರು ಬೇಕು.  ಅವರು ಇಲ್ಲದಿದ್ದರೆ ನಾವು ಸೊನ್ನೆ ಇದ್ದಂತೆ.  ಅವರಿಂದ ಬಹಳಷ್ಟು ಕಲಿತಿದ್ದೇನೆ ಎಂದು ಹೇಳಿದರು. ಬೂತ್‌ ಗಳಲ್ಲಿರುವಷ್ಟು ಶಕ್ತಿ ಎಲ್ಲಿಯೂ ಇಲ್ಲ.  ಎಲ್ಲಾ […]