ಬಿರುಗಾಳಿ ಸಹಿತ ಮಳೆಗೆ ಧರೆಗುರುಳಿದ 1000ಕ್ಕೂ ಹೆಚ್ಚು ಬಾಳೆಗಿಡಗಳು- ಕೈಗೆ ಬಂದ ತುತ್ತು ಬಾಯಿಗೆ ಬಾರದೆ ಕಂಗಾಲಾದ ರೈತ

ವಿಜಯಪುರ: ಬಿರುಗಾಳಿ ಸಹಿತ ಮಳೆಗೆ ಬಾಳೆ ತೋಟ ನಾಶವಾದ ಘಟನೆ ವಿಜಯಪುರ ತಾಲೂಕಿನ ಬೊಮ್ಮನಳ್ಳಿಯಲ್ಲಿ ಶನಿವಾರ ಸಂಜೆ ನಡೆದಿದೆ. ಮುರುಗೆಪ್ಪ ಚೌಗುಲಾ ಎಂಬುವರಿಗೆ ಸೇರಿದ ತೋಟದಲ್ಲಿ ಈ ಘಟನೆ ನಡೆದಿದ್ದು, ಶನಿವಾರ ಸಂಜೆ ಬೀಸಿದ ಬಿರುಗಾಳಿ ಸಹಿತ ಮಳೆಗೆ ಇಡೀ ಬಾಳೆ ತೋಟ ಹಾಳಾಗಿದೆ.  ಮುರುಗೆಪ್ಪ ಚೌಗುಲಾ ಸುಮಾರು ಒಂದು ಕಾಲು ಎಕರೆ ಪ್ರದೇಶದಲ್ಲಿ ಬಾಳೆ ಗಿಡಗಳನ್ನು ಬೆಳೆದಿದ್ದರು.  ಫಸಲು ಕೂಡ ಉತ್ತಮವಾಗಿತ್ತು.  ಇನ್ನು ಕೆಲವೇ ದಿನಗಳಲ್ಲಿ ಕಟಾವು ಮಾಡಬೇಕಿತ್ತು.   ಆದರೆ, ಶನಿವಾರ ಸಂಜೆ ಬೀಸಿದ […]

ವಾರ್ತಾ ಇಲಾಖೆ ನೂತನ ಆಯುಕ್ತರಾಗಿ ಸುರಳ್ಕರ ವಿಕಾಸ ಕಿಶೋರ ವರ್ಗಾವಣೆ

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ‌ಇಲಾಖೆಯ ನೂತನ ಆಯುಕ್ತರನ್ನಾಗಿ 2012ರ ಐಎಎಸ್‌ ಬ್ಯಾಚ್ ನ ಅಧಿಕಾರಿ ಸುರಳ್ಕರ ವಿಕಾಸ್ ಕಿಶೋರ್ ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ಗಮಿತ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರು ನೂತನ ಆಯುಕ್ತ ಸೂರಳ್ಕರ ವಿಕಾಸ ಕಿಶೋರ ಅವರನ್ನು ಸರಕಾರ ವರ್ಗಾವಣೆ ಮಾಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸುರಳ್ಕರ ವಿಕಾಸ ಕಿಶೋರ  ಅವರನ್ನು ಸರಕಾರ […]

ಚುನಾವಣೆ ಪ್ರಕ್ರಿಯೆ ಯಶಸ್ವಿಗೊಳಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ

ವಿಜಯಪುರ: ಲೋಕಸಭೆ ಚುನಾವಣೆ ಪಾರದರ್ಶಕವಾಗಿ ಮತ್ತು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಚುನಾವಣೆ ಆಯೋಗದ ನಿಯಮಾನುಸಾರ ನಡೆಸಲು ಜಿಲ್ಲಾಡಳಿತ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.  ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಯಾದ ಅಧಿಕಾರಿಗಳು ಮತ್ತು ಸಿಬ್ಬಂದಿ ಚಾಚು ತಪ್ಪದೆ ತಮಗೆ ವಹಿಸಿರುವ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ ನೀಡಿದ್ದಾರೆ.  ಜಿಲ್ಲಾಧಿಕಾರಿ  ಕಚೇರಿಯಲ್ಲಿ  ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡ ನೊಡಲ ಅಧಿಕಾರಿಗಳೊಂದಿಗೆ ವಿಡೀಯೋ ಸಂವಾದ ಸಭೆ ನಡೆಸಿ  ಮಾತನಾಡಿದ ಅವರು, ಚುನಾವಣೆ ಅಕ್ರಮಗಳನ್ನು ತಡೆಗಟ್ಟಲು ಚೆಕ್‌ಪೋಸ್ಟಗಳಲ್ಲಿ […]

ಮಹಿಳೆಯರು ಕಾಂಗ್ರೆಸ್ಸಿಗೆ ದೊಡ್ಡ ಶಕ್ತಿಯಾಗಿದ್ದಾರೆ- ಪ್ರೊ. ರಾಜು ಆಲಗೂರ

ವಿಜಯಪುರ: ಮಹಿಳೆಯರು ಕಾಂಗ್ರೆಸ್ ಪಕ್ಷಕ್ಕೆ ಮಹಿಳೆಯರೇ ದೊಡ್ಡ ಶಕ್ತಿಯಾಗಿದ್ದಾರೆ ಎಂದು ವಿಜಯಪುರ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಹೇಳಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಮಹಿಳಾ ಘಟಕ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಸಭೆಯಲ್ಲಿ ಅವರು ಮಾತನಾಡಿದರು. ಸ್ವಾತಂತ್ರ್ಯದ ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಮಹಿಳೆಯರಿಗೆ ನೂರಾರು ಯೋಜನೆಗಳನ್ನು ಹಾಕಿಕೊಂಡಿದೆ.  ಅವರ ಅಭಿವೃದ್ಧಿಗೆ ಶ್ರಮಿಸಿದೆ.  ಈಗ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಮಹಿಳೆಯರಿಗೆ ಹಲವು ಗ್ಯಾರಂಟಿಗಳನ್ನು ಜಾರಿ ಮಾಡಿದ್ದು ದಾಖಲೆಯಾಗಿದೆ.  ಇದೆಲ್ಲವನ್ನು ಪಕ್ಷದ ನಾಯಕರು […]

Video News: ಪಂಚಮಸಾಲಿ ಸಮುದಾಯ ಯಡ್ಯೂರಪ್ಪ ಜೊತೆಗಿಲ್ಲ- ಲೋಕಾ ಚುನಾವಣೆ ಬಳಿಕ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕೂಗು ಏಳಲಿದೆ- ಯತ್ನಾಳ ಭವಿಷ್ಯ

ವಿಜಯಪುರ: ಪಂಚಮಸಾಲಿ ಸಮುದಾಯ ಯಡಿಯೂರಪ್ಪ ಜೊತೆಗಿಲ್ಲ.  ಲೋಕಸಭೆ ಚುನಾವಣೆ ಬಳಿಕ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕೂಗು ದೊಡ್ಡ ಪ್ರಮಾಣದಲ್ಲಿ ಏಳಲಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದಿಂಗಾಲೇಶ್ವರ ಸ್ವಾಮೀಜಿ, ಕಾಂಗ್ರೆಸ್ ವಿರುದ್ಧವೂ ವಾಗ್ದಾಳಿ ನಡೆಸಿದರು. ಬಿಜೆಪಿಯಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ.  ಎಲ್ಲಾ ಪಕ್ಷಗಳಲ್ಲಿಯೂ ಅಭ್ಯರ್ಥಿಗಳ ಆಯ್ಕೆಯಲ್ಲಿ ಗೊಂದಲವಾಗಿದೆ.  ಮೂಲ ಕಾರ್ಯಕರ್ತರಿಗೆ ಪಕ್ಷದ ಕೆಲಸ ಮಾಡಿದವರಿಗೆ ಟಿಕೆಟ್ ಸಿಗದ ಹಿನ್ನೆಲೆ ಅಸಮಾಧಾನವಾಗಿದೆ.  ನಿಷ್ಕ್ರಿಯರಾಗಿದ್ದವರಿಗೆ ಟಿಕೆಟ್ ಸಿಕ್ಕಾಗ […]

Video News: ಪ್ರೊ. ರಾಜು ಆಲಗೂರ ಗೆಲ್ಲಿಸಲು ಸಾಮೂಹಿಕ ನೇತೃತ್ವ ವಹಿಸುತ್ತೇವೆ- ಎಲ್ಲ ಹೊಣೆ ನಮ್ಮದು- ಎಂ. ಬಿ. ಪಾಟೀಲ

ವಿಜಯಪುರ: ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಜಯಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಪರ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆಯ ಬಳಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಮುಂಬರುವ ಲೋಕಸಭಾ ಚುನಾವಣೆವಲಲ್ಲಿ ಈಗ ಕಾಂಗ್ರೆಸ್ ಅಭ್ಯರ್ಥಿ ರಾಜು ಅಲಗೂರ ಪರ ಪ್ರಚಾರ ಆರಂಭಿಸಿದ್ದೇವೆ.  ಜಿಲ್ಲೆಯಲ್ಲಿ […]

Video News: ಗುಮ್ಮಟ ನಗರಿಯಲ್ಲಿ ಲೋಕಾ ದಾಳಿ: ಆರ್ ಟಿ ಓ ಇನ್ಸಪೆಕ್ಟರ್ ಷಣ್ಮುಖಪ್ಪ ತೀರ್ಥಗೆ ಸೇರಿದ ಆರು ಕಡೆ ಧಾಳಿ

ವಿಜಯಪುರ: ಮನೆಯ ಗೇಟಿನ ಮೇಲೆ Best Officer Here ಬೋರ್ಡು.  ಮನೆಯ ಮೇಲೆ ಗುಡ್ಡಾಂಬೆ ಹೆಸರು.  ಆರ್. ಟಿ. ಓ ಅಧಿಕಾರಿ ನಿವಾಸದ ಮೇಲೆ ಲೋಕಾಯುಕ್ತರ ಧಾಳಿ.  ಇದು ಗುಮ್ಮಟ ನಗರಿ ವಿಜಯಪುರದಲ್ಲಿ ಬೆಳ್ಳಂಬೆಳಿಗ್ಗೆ ಪೊಲೀಸರು ಭ್ರಷ್ಟ ಅಧಿಕಾರಿಯ ನಿವಾಸದ ಮೇಲೆ ನಡೆಸಿರುವ ದಾಳಿ.  ಹೌದು.  ಗುಮ್ಮಟ ನಗರಿ ವಿಜಯಪುರದಲ್ಲಿ ಭ್ರಷ್ಟ ಅಧಿಕಾರಿಯ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಧಾಳಿ ನಡೆಸಿದ್ದಾರೆ. ವಿಜಯಪುರ ನಗರದ ಸೋಲಾಪುರ ರಸ್ತೆಯಲ್ಲಿರುವ ಚಾಲುಕ್ಯ ನಗರ ಪಶ್ಚಿಮ ಬಡಾವಣೆಯಲ್ಲಿರುವ ಷಣ್ಮುಖಪ್ಪ ತೀರ್ಥ ಅವರ […]

ಗಾಂಧಿಚೌಕ್ ಪೊಲೀಸರ ಕಾರ್ಯಾಚರಣೆ- ಮೂವರ ಬಂಧನ- ರೂ. 15.60 ಲಕ್ಷ ಮೌಲ್ಯದ 26 ಬೈಕ್ ವಶ

ವಿಜಯಪುರ: ನಗರದ ಗಾಂಧಿಚೌಕ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮೂರು ಜನ ಆರೋಪಿಗಳನ್ನು ಬಂಧಿಸಿ 26 ಬೈಕ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಎಸ್ಪಿ ಋಷಿಕೇಷ ಸೋನಾವಣೆ, ನಗರದಲ್ಲಿ ಕಳೆದ ಹಲವಾರು ದಿನಗಳಿಂದ ಬೈಕ್ ಕಳ್ಳತನ ಪ್ರಕರಣಗಳು ವರದಿಯಾಗಿದ್ದವು.  ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಎಸ್ಪಿ ಶಂಕರ ಮಾರಿಹಾಳ ಮತ್ತು ರಾಮನಗೌಡ ಹಟ್ಟಿ, ವಿಜಯಪುರ ನಗರ ಡಿವೈಎಸ್ಪಿ ಬಸವರಾಜ ಯಲಿಗಾರ ಮಾರ್ಗದರ್ಶನದಲ್ಲಿ ಗಾಂಧಿಚೌಕ್ ಸಿಪಿಐ ಮಹಾಂತೇಶ ಕೆ. ಧಾಮಣ್ಣವರ ನೇತ್ವದಲ್ಲಿ ರಚಿಸಲಾಗಿದ್ದ […]

ಭೀಮಾ ನದಿಗೆ ನೀರು ಹರಿಸಲು ಆಗ್ರಹ- ಶಾಸಕ ಯಶವಂತರಾಯಗೌಡ ಪಾಟೀಲ ನೇತೃತ್ವದಲ್ಲಿ ಡಿಸಿಎಂ ಭೇಟಿ- 1.50 ಟಿಎಂಸಿ ನೀರು ಬಿಡಲು ಸಚಿವರ ಸೂಚನೆ

ಬೆಂಗಳೂರು: ವಿಜಯಪುರ ಜಿಲ್ಲೆಯ ಚಡಚಣ, ಇಂಡಿ ಮತ್ತು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕುಗಳಲ್ಲಿ ಕುಡಿಯುವ ನೀರಿಗೆ ತೀವ್ರ ಸಮಸ್ಯೆ ಎದುರಾಗಿದ್ದು, ಭೀಮಾ ನದಿಗೆ ನೀರು ಹರಿಸುವಂತೆ ಆಗ್ರಹಿಸಿ ಇಂಡಿ ಶಾಸಕ ಯಶವಂತರಾಯಗೌಡ ವಿ. ಪಾಟೀಲ ನೇತತ್ವದಲ್ಲಿ ಅಫಝಲಪುರ ಶಾಸಕ ಎಂ. ವೈ. ಪಾಟೀಲ ಮತ್ತೀತರರು ಜಲಸಂಪನ್ಮೂಲ ಸಚಿವ ಮತ್ತು ಡಿಸಿಎಂ ಡಿ. ಕೆ. ಶಿವಕುಮಾರ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು. ಈ ಬಾರಿ ಭೀಕರ ಬರದ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ನದಿ, ಕೆರೆ-ಕಟ್ಟೆಗಳು, ಹಳ್ಳ-ಕೊಳ್ಳಗಳು […]

ಬಾಹುಬಲಿಗೆ ನೈವೇದ್ಯ ಕಟಂಬಲಿ- ಬಸವ ನಾಡಿನಲ್ಲಿ ವಿಶಿಷ್ಠ ಜಾತ್ರೆಗೆ ಸಾಕ್ಷಿಯಾದ ರಂಭಾಪುರ ಜನತೆ

ವಿಜಯಪುರ:  ದೇಶದಲ್ಲಿಯೇ ಅತೀ ಹೆಚ್ಚು ಜಾತ್ರೆ ನಡೆಯುವ ಜಿಲ್ಲೆ ಬಸವನಾಡಿನ ವಿಜಯಪುರ.  ಈ ಲ್ಲೆಯಲ್ಲಿ ಪ್ರತಿದಿನ ಒಂದಿಲ್ಲೋಂದು ಊರಿನಲ್ಲಿ ಒಂದಿಲ್ಲೋಂದು ಜಾತ್ರೆಗಳು, ದೇವಸ್ಥಾನದ ನಾನಾ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಲೇ ಇರುತ್ತವೆ.  ಅದರಲ್ಲೂ ಒಂದೊಂದು ಊರಿನಲ್ಲಿ ಒಂದು ವಿಶೇಷ ಜಾತ್ರೆಗಳು ನಡೆಯುತ್ತವೆ.  ಕೆಲವು ಜಾತ್ರೆಗಳನ್ನು ಊರಿನ ಗ್ರಾಮಸ್ಥರೆಲ್ಲರೂ ಸೇರಿ ಆಚರಿಸಿದರೆ, ಮತ್ತೆ ಹಲವು ಜಾತ್ರೆಗಳನ್ನು ಒಂದೊಂದು ಕುಟುಂಬಗಳು ಕಾರ್ಯಕ್ರಮದ ರೂಪದಲ್ಲಿ ಆಚರಿಸುತ್ತವೆ. ಇಂಥ ವಿಶೇಷ ಜಾತ್ರೆಯೊಂದು ಗುಮ್ಮಟ ನಗರಿ ವಿಜಯಪುರದ ಹೊರಭಾಗದಲ್ಲಿರುವ ರಂಭಾಪುರ ಗ್ರಾಮದಲ್ಲಿ ನಡೆಯಿತು.  […]