ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರಕ್ಕೆ ವಿಜಯಪುರ ಜಿ. ಪಂ. ಸಿಇಓ ರಿಷಿ ಆನಂದ ಭೇಟಿ, ಪರಿಶೀಲನೆ

ವಿಜಯಪುರ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ರಿಷಿ ಆನಂದ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯ ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕೇಂದ್ರದಲ್ಲಿ ಒದಗಿಸುತ್ತಿರುವ ಆಪ್ತ ಸಮಾಲೋಚನೆ ಹಾಗೂ ಸಲಹೆಗಳ ಕುರಿತು ಪರಿಶೀಲಿಸಿ, ದಾಖಲಾಗಿರುವ ಪ್ರಕರಣಗಳ ಪ್ರತ್ಯೇಕ ಕಡತ, ದೂರವಾಣಿ ಕರೆಗಳ ವಹಿ, ಸಂದರ್ಶಕರ ವಹಿ, ಆಪ್ತ ಸಮಾಲೋಚನಾ ದಾಖಲಾತಿ, ಕೇಂದ್ರದ ಮಾಸಿಕ ಪ್ರಗತಿ ವರದಿ, ಪ್ರಕರಣಗಳ ದಾಖಲಾತಿ ಪುಸ್ತಕ, ಸಿಬ್ಬಂದಿಗಳ ಹಾಜರಾತಿ ಪುಸ್ತಕ ಹಲವಾರು ದಾಖಲಾತಿ […]

ಉಕ ಬಸ್ ಪ್ರಯಾಣಿಕರ ಅನುಕೂಲಕ್ಕಾಗಿ ಮಧ್ಯ ಕರ್ನಾಟಕದಲ್ಲಿ ವಿಶ್ರಾಂತಿ ಧಾಮ ಆರಂಭಿಸಿ- ಸಚಿವ ರಾಮಲಿಂಗಾರೆಡ್ಡಿಗೆ ಸುನೀಲಗೌಡ ಪಾಟೀಲ ಮನವಿ

ವಿಜಯಪುರ: ಉತ್ತರ ಕರ್ನಾಟಕದಿಂದ ಬೆಂಗಳೂರಿಗೆ ರಾಜ್ಯ ಸಾರಿಗೆ ಬಸ್ಸುಗಳಲ್ಲಿ ಸಂಚರಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಮಧ್ಯ ಕರ್ನಾಟಕದಲ್ಲಿ ಸಾರಿಗೆ ಇಲಾಖೆಯಿಂದ ಮೂಲಭೂತ ಸೌಕರ್ಯವುಳ್ಳ ವಿಶ್ರಾಂತಿ ದಾಮ ಆರಂಭಿಸಬೇಕು ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಅವರು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ. ಇಂದು ಬುಧವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿದ ಅವರು, ಉತ್ತರ ಕರ್ನಾಟಕದ ವಿಜಯಪುರ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಕೊಪ್ಪಳ, ಯಾದಗಿರಿ ಮುಂತಾದ ಜಿಲ್ಲೆಗಳಿಂದ ಪ್ರತಿನಿತ್ಯ […]

ಪ್ರಯಾಣಿಕನ ಲ್ಯಾಪಟಾಪ್ ಮರಳಿಸಿ ಪ್ರಾಮಾಣಿಕತೆ ಮೆರೆದ ಬಸವನಾಡಿನ ಚಾಲಕ, ನಿರ್ವಾಹಕ

ವಿಜಯಪುರ: ಪ್ರಯಾಣಿಕನೊಬ್ಬ ಬಸ್ಸಿನಲ್ಲಿ ಮರೆತು ಹೋಗಿದ್ದ ಲ್ಯಾಪಟಾಪ್ ನ್ನು ಮರಳಿಸುವ ಮೂಲಕ ವಿಜಯಪುರ 1ನೇ ಘಟಕದ ಚಾಲಕ ಮತ್ತು ನಿರ್ವಾಹಕ ಪ್ರಾಮಾಣಿಕತೆ ಮೆರೆದಿದ್ದಾರೆ. ವಿಜಯಪುರ ನಗರ ಘಟಕ-1ರ ಬಸ್ ಕೆಎ-28/ಎಫ್- 1703 ವಿಜಯಪುರ ನಗರದಿಂದ ಮುಳಸಾವಳಗಿಗೆ ಸಂಚರಿಸಿತ್ತು.  ಈ ಸಂದರ್ಭದಲ್ಲಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ನೂರಲಿಶಾ ಮಕಾಂದಾರ ಅವರು ಮುಳಸಾವಳಗಿಗೆ ಇಳಿಯುವ ಸಂದರ್ಭದಲ್ಲಿ ತನ್ನ ರೂ. 50 ಸಾವಿರ ಮೌಲ್ಯದ ಲ್ಯಾಪಟಾಪ್ ನ್ನು ಬಸ್ಸಿನಲ್ಲಿಯೇ ಮರೆತು ಹೋಗಿದ್ದರು. ಇದನ್ನು ಗಮನಿಸಿದ ಬಸ್ಸಿನ ಚಾಲಕ ಶೇಖರ ಬೋಗಂ ಮತ್ತು ನಿರ್ವಾಹಕ […]

ಭೀಮಾ ನದಿ ಪ್ರವಾಹ: ಸೊನ್ನ ಬ್ಯಾರೇಜ್‍ಗೆ ಡಿಸಿ ಟಿ. ಭೂಬಾಲನ್ ಭೇಟಿ, ಪರಿಶೀಲನೆ- ಮುನ್ನೆಚ್ಚರಿಕೆ ವಹಿಸಲು ಖಡಕ್ ಸೂಚನೆ

ವಿಜಯಪುರ: ಮಹಾರಾಷ್ಟ್ರ ಭೀಮಾ ನದಿಗೆ 1.60 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಮತ್ತು ಸೊನ್ನ ಬ್ಯಾರೇಜ್ ಹಿನ್ನೀರಿನಿಂದ ವಿಜಯಪುರ ಜಿಲ್ಲೆಯ ಗ್ರಾಮಗಳಿಗೆ ಉಂಟಾಗುವ ಸಮಸ್ಯೆಗಳನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಕಲಬುರಗಿ ಜಿಲ್ಲೆಯ ಅಫಝಲಪುರ ತಾಲೂಕಿನಲ್ಲಿ ಭೀಮಾನದಿಗೆ ನಿರ್ಮಿಸಲಾಗಿರುವ ಸೊನ್ನ ಬ್ಯಾರೇಜಿಗೆ ಭೇಟಿ ನೀಡಿ ಪರೀಶಿಲನೆ ನಡೆಸಿದರು. ಈ ಸಂದರ್ಭದಲ್ಲಿ ಕಲಬುರಗಿ ಜಿಲ್ಲಾಧಿಕಾರಿ  ಫೌಜಿಯಾ ತರನ್ನುಮ ಅವರೊ ಕೂಡ ಉಪಸ್ಥಿತರಿದ್ದರು.  ಮಹಾರಾಷ್ಟ್ರದ ಉಜನಿ ಹಾಗೂ ವೀರ ಜಲಾಶಯದಿಂದ ನೀರು ಹರಿಬಿಟ್ಟಿರುವ […]

ರಸ್ತೆ ಅಪಘಾತದಲ್ಲಿ ತೀವ್ರವಾಗಿ ತಲೆಗೆ ಪೆಟ್ಟಾಗಿದ್ದ 19 ವರ್ಷದ ಯುವಕನಿಗೆ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ

ಬೆಂಗಳೂರು: ತೀವ್ರ ರಸ್ತೆ ಅಪಘಾತಕ್ಕೆ ಒಳಗಾಗಿ ಮೆದುಳಿನ ಕೋಶಗಳ ನಡುವೆ ರಕ್ತಸ್ರಾವ ಉಂಟಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ 19 ವರ್ಷದ ಕಾಲೇಜು ಯುವಕನಿಗೆ ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ಚಿಕಿತ್ಸೆ ನಡೆಸಿದೆ. ಈ ಕುರಿತು ಮಾತನಾಡಿದ ಫೋರ್ಟಿಸ್‌ ಆಸ್ಪತ್ರೆಯ ನರಶಸ್ತ್ರಚಿಕಿತ್ಸಾ ವಿಭಾಗದ ಹೆಚ್ಚುವರಿ ನಿರ್ದೇಶಕ ರಘುರಾಮ್ ಜಿ, 19 ವರ್ಷದ ರಾಜ್ ಎಂಬುವವರು ಹುಳಿಮಾವು ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಫುಟ್‌ಪಾತ್‌ಗೆ ಕಾರು ಡಿಕ್ಕಿಯಾದ ಪರಿಣಾಮ ಹಿಂಬದಿ ಕುಳಿತಿದ್ದ ಇವರ ತಲೆ, ಕೈಗೆ ತೀವ್ರವಾಗಿ ಪೆಟ್ಟಾಗಿತ್ತು. ಅಪಘಾತದ […]

ನಾರಾಯಣಪ್ಪ ಕುರುಬರ ದಕ್ಷ, ಪ್ರಾಮಾಣಿಕ ಡಿಸಿ- ಸಿಬ್ಬಂದಿ ಪ್ರಯಾಣಿಕರಿಗೆ ಅವರ ಸೇವೆ ಶ್ಲಾಘನೀಯ- ಐ. ಐ. ಮುಶ್ರೀಫ್

ವಿಜಯಪುರ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಿಜಯಪುರ ವಿಭಾಗಕ್ಕೆ ಮತ್ತೆ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿ ಆಗಮಿಸಿರುವ ನಾರಾಯಣಪ್ಪ ಕುರುಬರ ಅವರಿಗೆ ಸಾರಿಗೆ ನೌಕರರ ಮಹಾಂಡಳದ ಕಾರ್ಯಕರ್ತರು ಆತ್ಮೀಯವಾಗಿ ಸ್ವಾಗತಿಸಿ ಸನ್ಮಾನಿಸಿ ಗೌರವಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಮಹಾಮಂಡಳದ ಕಾರ್ಯದರ್ಶಿ ಐ. ಐ. ಮುಶ್ರಿಫ್, ಈ ಹಿಂದೆ ವಿಭಾಗೀಯ ನಿಯಂತ್ರಣಾಧಿಕಾರಿಯಾಗಿದ್ದ ನಾರಾಯಣಪ್ಪ ಕುರುಬರ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ್ದರು.  ಕೊರೊನಾ ಸಂದರ್ಭದಲ್ಲಿ ಇಲಾಖೆಯ ಸಿಬ್ಬಂದಿ ಕಾರ್ಯ ನಿರ್ವಹಿಸಲು ಹಿಂಜರಿದಾಗ ಮತ್ತು ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮುಷ್ಕರ ನಡೆಸುತ್ತಿದ್ದಾಗ  ನಾರಾಯಣಪ್ಪ ಕುರುಬರ […]

ಗಡಿ ಜಿಲ್ಲೆಗಳ ಪತ್ರಿಕೆಗಳಿಗೆ ಜಾಹೀರಾತು ನೀಡಲು ಆಗ್ರಹ- ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಗೆ ಮನವಿ ಪತ್ರ ಸಲ್ಲಿಕೆ

ವಿಜಯಪುರ: ಗಡಿ ಭಾಗದ ಜಿಲ್ಲೆಗಳ ಕನ್ನಡ ದಿನ ಪತ್ರಿಕೆಗಳಿಗೆ ಪ್ರತಿ ತಿಂಗಳು ವಿಶೇಷ ಜಾಹೀರಾತು ನೀಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ವಿಜಯಪುರ ಜಿಲ್ಲಾ ಘಟಕದ ಪದಾಧಿಕಾರಿಗಳ ನಿಯೋಗ ಗಡಿ ಅಭಿವೃದ್ದಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿತು. ಜಿಲ್ಲಾ ಪ್ರವಾಸದಲ್ಲಿರುವ ಸೋಮಣ್ಣ ಬೇವಿಜಮರದ ಅವರನ್ನು ಭೇಟಿ ಮಾಡಿದ ವಿಜಯಪುರ ಸ್ಥಳೀಯ ಪತ್ರಿಕೆಗಳ ಸಂಪಾದಕರು ಗಡಿ ಭಾಗದ ಜಿಲ್ಲೆಗಳ ಕನ್ನಡ ದಿನ ಪತ್ರಿಕೆಗಳಿಗೆ ಪ್ರತಿ ತಿಂಗಳು ವಿಶೇಷ […]

ಮಹಾರಾಷ್ಚ್ರದಲ್ಲಿ ಮಳೆ ತುಂಬಿ ಹರಿಯುತ್ತಿದೆ ಭೀಮಾ ಹೊಳೆ- ಗಡಿಯಲ್ಲಿರುವ ಎಂಟೂ ಬ್ಯಾರೇಜುಗಳು ಮುಳಗಡೆ

ವಿಜಯಪುರ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಬಸವನಾಡು ವಿಜಯಪುರ ಜಿಲ್ಲೆಯಲ್ಲಿ ನದಿಗಳು ಉಕ್ಕಿ ಹರಿಯುವಂತೆ ಮಾಡಿದೆ.  ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಸುರಿದ ಮಳೆಯಿಂದಾಗಿ ಮಹಾರಾಷ್‌ಟರ ಕೋಯ್ನಾ ಜಲಾಷಯದಿಂದ ನೀರು ಬಿಡುಗಡೆ ಮಾಡಿದ್ದರಿಂದಾಗಿ ಈಗಾಗಲೇ ಕೃಷ್ಣಾ ನದಿ ತುಂಬಿ ಹರಿಯುತ್ತಿದೆ.  ಈಗ ಪುಣೆ ಮತ್ತೀತರ ಕಡೆಗಳಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಮಹಾರಾಷ್ಟ್ರ ಉಜನಿ ಮತ್ತೀತರ ಜಲಾಷಯಗಳಿಂದ 1.20 ಲಕ್ಷ್ಯ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು, ಈಗ ಭೀಮಾ ನದಿಯೂ ತುಂಬಿ ಹರಿಯುತ್ತಿದೆ. ಸೋಮವಾರ ಸಂಜೆಯಿಂದಲೇ ಬಸವನಾಡು ವಿಜಯಪುರ ಜಿಲ್ಲೆಯ ಚಡಚಣ […]

ಸಿಎಂ ವಿರುದ್ಧ ಷಡ್ಯಂತ್ರ ನಡೆಸುತ್ತಿರುವ ಶಕ್ತಿಗಳ ವಿರುದ್ಧ ಆ. 6 ರಂದು ಬೃಹತ್ ಪ್ರತಿಭಟನೆ- ಅಹಿಂದ ಮುಖಂಡರ ಹೇಳಿಕೆ

ವಿಜಯಪುರ: ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಷಡ್ಯಂತ್ರ ನಡೆಸುತ್ತಿರುವ ಶಕ್ತಿಗಳ ವಿರುದ್ಧ ಆ. 6 ರಂದು ನಗರದಲ್ಲಿ ಬೃಹತ್ ಪ್ರತಿಭಟನೆ ಯಾತ್ರೆ ನಡೆಸಲಾಗುವುದು ಎಂದು ಅಹಿಂದ ಮುಖಂಡರು ಆರೋಪಿಸಿದ್ದಾರೆ. ನಗರದಲ್ಲಿ ಅಹಿಂದ ಮತ್ತು ಕಾಂಗ್ರೆಸ್ ಮುಖಂಡರಾದ ಕೆಪಿಸಿಸಿ ಸದಸ್ಯ ಅಬ್ದುಲ್ ಹಮೀದ್ ಮುಶ್ರಿಫ್, ಮಲ್ಲಿಕಾರ್ಜುನ ಲೋಣಿ, ಎಸ್. ಎಂ. ಪಾಟೀಲ ಗಣಿಹಾರ, ಅಬ್ದುಲ್ ರಜಾಕ್ ಹೊರ್ತಿ, ಅಡಿವೆಪ್ಪ ಸಾಲಗಲ, ಶಿವಾಜಿ ಮೆಟಗಾರ ಜಂಟಿ ಸುದ್ದಿಗೋಷ್ಠಿ ನಡೆಸಿ ಈ ಮಾಹಿತಿ ನೀಡಿದ್ದಾರೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ […]

ಭೀಮಾ ತೀರದಲ್ಲಿ ಧೊಪ್ಪೆಂದು ನೆಲಕ್ಕಪ್ಪಳಿಸಿದ ಬಾಹ್ಯಾಕಾಶ ಪರಿಕರ- ಡಿಸಿ ಹೇಳಿದ್ದೇನು ಗೊತ್ತಾ?

ವಿಜಯಪುರ: ಆಗಸದಲ್ಲಿ ಹಾರಾಡುತ್ತಿದ್ದ ಪರಿಕರವೊಂದು ರೈತರೊಬ್ಬರ ಜಮೀನಿನಲ್ಲಿ ಬಿದ್ದು ಆತಂಕ ಸೃಷ್ಠಿಸಿದ ಘಟನೆ ಚಡಚಣ ತಾಲೂಕಿನ ಮರಗೂರ ಬಳಿ ನಡೆದಿದೆ. ಪ್ಯಾರಾಚೂಟ್ ಮಾದರಿಯ ಈ ಪರಿಕರ ಕಂಡು ರೈತರು ಗಾಬರಿಯಾಗಿದ್ದಾರೆ.  ಈ ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಗ್ರಾಮದ ಜನರು ಅದರ ಮೇಲೆ ಬರೆಯಲಾದ ಮಾಹಿತಿ ತಿಳಿದು ಸ್ವಲ್ಪ ನಿಟ್ಟುಸಿರು ಬಿಟ್ಟಿದ್ದಾರೆ. ಪರಿಶೀಲನೆ ನಡೆಸಿದಾಗ ಇದು ಲೋ ಇನ್ಟೆನ್ಸಿಟಿ ವೆದರ್ ಮಾನಿಟರರಿಂಗ್ ಸಿಸ್ಟಮ್ ಪರಿಕರವಾಗಿದ್ದು, ಬೆಂಗಳೂರಿನ ಇಸ್ರೋದಿಂದ ಕೆಲ ದಿನಗಳ ಹಿಂದೆ ಉಡಾವಣೆ ಮಾಡಲಾಗಿತ್ತು ಎನ್ನಲಾಗಿದೆ.  ಲೋ […]