ಬಸವ ನಾಡಿನಲ್ಲಿ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಸಚಿವ ಎಂ. ಬಿ. ಪಾಟೀಲ ಚಾಲನೆ

ವಿಜಯಪುರ: ಜಿಲ್ಲೆಯಲ್ಲಿ ಮಾರ್ಚ್ 3 ರಿಂದ 6ವರೆಗೆ ಹಮ್ಮಿಕೊಂಡ ಪೋಲಿಯೋ ಲಸಿಕಾ ಅಭಿಯಾನಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಅವರು ಚಾಲನೆ ನೀಡಿದರು. ರವಿವಾರ ನಗರದ ಜಿಲ್ಲಾಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಾಗೂ ಮೇಯರ್ ಮಹೇಜಬಿನ್ ಅಬ್ದುಲ್ ರಜಾಕ್ ಹೊರ್ತಿ ಜೊತೆ ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ  ಮಾತನಾಡಿದರು. ಜಿಲ್ಲೆಯಲ್ಲಿ 0 […]

ಜಿಗಜಿಣಗಿ ಸಾಹೇಬ್ರು ಅರಾಮ ಅದಾರ- ಯಾರೂ ಗಾಬರಿಯಾಗಬ್ಯಾಡ್ರಿ- ಪುತ್ರ ವಿನೋದ, ಆಪ್ತ ಅಪ್ಪು ಪಟ್ಟಣಶೆಟ್ಟಿ

ವಿಜಯಪುರ: ಸಂಸದ ರಮೇಶ ಜಿಗಜಿಣಗಿ ಆರೋಗ್ಯದಿಂದಿದ್ದು ಯಾರೂ ಆತಂಕ ಪಡಬಾರದು ಎಂದು ಸಂಸದ ಪುತ್ರ ವಿನೋದ ಜಿಗಜಿಣಗಿ ಹೇಳಿದ್ದಾರೆ. ಈ ಕುರಿತು ದೂರವಾಣಿ ಮೂಲಕ ಮಾತನಾಡಿರುವ ಅವರು, ತಂದೆಯವರಿಗೆ ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಶನಿವಾರ ಬೆಳಗಾವಿಗೆ ತೆರಳಿದ್ದರು.  ಆರೋಗ್ಯದ ಸ್ವಲ್ಪ ಏರುಪೇರಾದ ಹಿನ್ನೆಲೆ ಕೆಎಲ್ಇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಎರಡು ದಿನಗಳ ಹಿಂದೆ 97 ವರ್ಷದ ಅತ್ತೆ ರಾಧಾಬಾಯಿ(ಸಂಸದ ರಮೇಶ ಜಿಗಜಿಣಗಿ ಅವರ ಅಕ್ಕ) ನಿಧನರಾಗಿದ್ದರು.  ಸಂಸದರು ಹಿರಿಯ […]

ಸಮಾಜ ಸೇವಕ ಫಯಾಜ್ ಕಲಾದಗಿಗೆ ನೇಪಾಳ ದೇಶದ ಪ್ರಶಸ್ತಿ- ಯಾವುದು ಗೊತ್ತಾ?

ವಿಜಯಪುರ: ಸಮಾಜ ಸೇವಕ ಫಯಾಜ್ ಕಲಾದಗಿ ಅವರಿಗೆ ನೇಪಾಳ ದೇಶದ ಬಿರಾಟ ನಗರದದ ಸಮತಾ ಸಾಹಿತ್ಯ ಪ್ರತಿಷ್ಠಾನ ಅಂತಾರಾಷ್ಟ್ರೀಯ ಅತ್ಯುತ್ತಮ ಸಮಾಜ ಸೇವಕ ಪ್ರಶಸ್ತಿ ಘೋಷಿಸಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರವವ ಸಮತಾ ಸಾಹಿತ್ಯ ಪ್ರತಿಷ್ಠಾನದ ಅಧ್ಯಕ್ಷ ಶಿವನಾರಾಯಣ ಸಿಂಗ್ಲೆ ಮತ್ತು ಕಾರ್ಯದರ್ಶಿ ಸರಿತಾ ತುಳದಾರ, ಈ ಬಾರಿಯ ಅತ್ಯುತ್ತಮ ಸಮಾಜ ಸೇವಕ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ಫಯಾಜ್ ಕಲಾದಗಿ ಅವರಿಗೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಫಯಾಜ ಕಲಾದಗಿ ಅವರ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು […]

ಜಿಲ್ಲೆಯ ಸರ್ವಾಂಗೀಣ ಅಭಿವೃದ್ದಿಗೆ ಕ್ರಮ: ಸಚಿವ ಎಂ. ಬಿ. ಪಾಟೀಲ

ವಿಜಯಪುರ: ಜಿಲ್ಲೆಯಲ್ಲಿ ನಾನಾ ಕೈಗಾರಿಕೆಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುತ್ತಿದೆ.  ಆಹಾರ ಸಂಸ್ಕøರಣ ಘಟಕಗಳ ಸ್ಥಾಪನೆಯಿಂದ ಜಿಲ್ಲೆಯಲ್ಲಿ ಬೆಳೆಯಲಾದ ದ್ರಾಕ್ಷಿ ಸೇರಿದಂತೆ ನಾನಾ ಬೆಳೆಗಳಿಗೆ ಉತ್ತಮ ಬೆಲೆ ದೊರಕಿ ಆರ್ಥಿಕತೆ ವೃದ್ದಿಯಾಗಿ, ಸ್ಥಳೀಯವಾಗಿಯೇ ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯಲಿದ್ದು, ಜಿಲ್ಲೆಯ ಸರ್ವಾಂಗೀರ್ಣ ಅಭಿವೃದ್ದಿಗೆ ಶ್ರಮಿಸಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.  ತಿಕೋಟಾದಲ್ಲಿ ರೂ. 10 ಕೋ. ವೆಚ್ಚದಲ್ಲಿ ನಿರ್ಮಿಸಲಾದ ಮಿನಿ ವಿಧಾನಸೌಧ ಉದ್ಘಾಟನೆ ಹಾಗೂ […]

ರಾಜ್ಯದಲ್ಲಿ ಜನರ ಜೀವನಕ್ಕೆ ಗ್ಯಾರಂಟಿ ಇಲ್ಲ- ನಿಭಾಯಿಸದಾಗದಿದ್ದರೆ ರಾಜೀನಾಮೆ ನೀಡಿ ಚುನಾವಣೆ ಎದುರಿಸಿ- ಯತ್ನಾಳ

ವಿಜಯಪುರ: ವಿಧಾನಸಭೆಯಲ್ಲಿ ಪಾಕಿಸ್ತಾನ ಪರ ಘೋಷಣೆ ಮತ್ತು ಬೆಂಗಳೂರಿನಲ್ಲಿ ಬಾಂಬ್ ಸ್ಪೋಟ ಪ್ರಕರಗಳು ಭಯೋತ್ಪಾದನೆ ಚಟುವಟಿಕೆಗಳಿಗೆ ಇಂಬು ನೀಡುತ್ತಿದ್ದು, ಇವುಗಳನ್ನು ನಿಯಂತ್ರಿಸಲಾಗದಿದ್ದರೆ ಸಿಎಂ ಎಸ್. ಸಿದ್ಧರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ಮತ್ತು ಸಚಿವರು ಬರೀ ಗ್ಯಾರಂಟಿ, ಗ್ಯಾರಂಟಿ ಎಂದು ಜಪಿಸುತ್ತ ಲೋಕಸಭೆ ಚುನಾವಣೆ ಕಡೆಗೆ ಲಕ್ಷ್ಯ ವಹಿಸಿದ್ದಾರೆ.  ಆದರೆ, ರಾಜ್ಯದಲ್ಲಿ ಜನರ ಜೀವನಕ್ಕೆ ಗ್ಯಾರಂಟಿ […]

ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ಸಮರ್ಪಕವಾಗಿ ಕಾರ್ಯ ನಿರ್ವಹಿಸಿ- ಆಯೋಗದ ಸದಸ್ಯ ಎಸ್. ಕೆ. ವಂಟಿಗೋಡಿ ಸಲಹೆ

ವಿಜಯಪುರ: ಸಾರ್ವಜನಿಕರ ಯಾವುದೇ ಸಮಸ್ಯೆಗಳಿಗೆ ಅಧಿಕಾರಿಗಳು ತುಂಬಾ ಜಾಗರೂಕತೆಯಿಂದ ಸಹಾನುಭೂತಿಯಿಂದ ಸಮಸ್ಯೆಗಳನ್ನು ಆಲಿಸಿ ನಿಮ್ಮ ಹಂತದಲ್ಲಿಯೇ ಪರಿಹರಿಸುವ ಮೂಲಕ ಮಾನವ ಹಕ್ಕುಗಳ ರಕ್ಷಣೆಗೆ ಮುಂದಾಗುವಂತೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾದ ಎಸ್. ಕೆ. ವಂಟಿಗೋಡಿ ಅವರು ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಾನವ ಹಕ್ಕುಗಳ ಕುರಿತ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ಮಾನವ ಹಕ್ಕುಗಳ ಸಂರಕ್ಷಣೆ, ಉಲ್ಲಂಘಣೆ ತಡೆಗಟ್ಟುವುದು, ಪರಿಹಾರ ಒದಗಿಸುವುದೇ ಮಾನವ […]

ಟಾಂಗಾದಲ್ಲಿ ಕಚೇರಿಗೆ ಬಂದ ಗುಮ್ಮಟ ನಗರಿ ಮೇಯರ್- ಕಾರಣವೇನು ಗೊತ್ತಾ?

ವಿಜಯಪುರ: ಮಹಾನಗರ ಪಾಲಿಕೆ ಮೇಯರ್ ತಮ್ಮದೇ ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಟಾಂಗಾದಲ್ಲಿ ಸಾಮಾನ್ಯ ಸಭೆಗೆ ಆಗಮಿಸುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದ ಘಟನೆ ವಿಜಯಪುರದಲ್ಲಿ ನಡೆದಿದೆ. ಬೆಳಿಗ್ಗೆ 11 ಗಂಟೆಗೆ ವಿಜಯಪುರ ಮಹಾನಗರ ಪಾಲಿಕೆ ಸಾಮಾನ್ಯ ಸಭೆ ನಿಗದಿಯಾಗಿತ್ತು.  ಈ ಸಂದರ್ಭದಲ್ಲಿ ಎಲ್ಲರೂ ಮೇಯರ್ ಮೆಹಜಬೀನ್ ಅಬ್ದುಲ್ ರಜಾಕ್ ಹೊರ್ತಿ ಆಗಮನಕ್ಕೆ ಕಾಯುತ್ತಿದ್ದರು.  ಎಲ್ಲರೂ ಕಾರಿಗಾಗಿ ದಾರಿ ಕಾಯುತ್ತಿದ್ದರೆ, ಮೇಯರ್ ಮಾತ್ರ ವಿಜಯಪುರ ನಗರದಲ್ಲಿ ಪ್ರವಾಸಿಗರನ್ನು ಹೆಚ್ಚಾಗಿ ಆಕರ್ಷಿಸುವ ಟಾಂಗಾ ಬರುತ್ತಿರುವುದನ್ನು ಗಮನಿಸಿದರು.  ಆ ಟಾಂಗಾ […]

ಬಸವನಾಡಿನ ಕಾಂತಾ ನಾಯಕ ಸೇರಿ 44 ಜನರಿಗೆ ನಿಗಮ, ಮಂಡಳಿ ಅಧ್ಯಕ್ಷರಾಗಿ ನೇಮಕ

ಬೆಂಗಳೂರು: ಬಸವನಾಡು ವಿಜಯಪುರ ಜಿಲ್ಲೆಯ ಬಂಜಾರಾ ಸಮುದಾಯದ ನಾಯಕಿ ಕಾಂತಾ ನಾಯಕ ಸೇರಿ ರಾಜ್ಯದ 44 ಕಾಂಗ್ರೆಸ್ ಕಾರ್ಯಕರ್ತರಿಗೆ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.  ಎರಡು ವರ್ಷಗಳ ಅವಧಿಗೆ ಇವರನ್ನು ಅಧ್ಯಕ್ಷರನ್ನಾಗಿ ಮಾಡಲಾಗಿದ್ದು, ಲೋಕಸಭೆ ಚುನಾವಣೆ ಹೊತ್ತಿನಲ್ಲಿ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಲು ಸಿಎಂ ಎಸ್. ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ಆಧ್ಯಕ್ಷ ಡಿ. ಕೆ. ಶಿವಕುಮಾರ ಅವರು ಈ ಕ್ರಮ ಕೈಗೊಂಡಿದ್ದಾರೆ. ನಿಗಮ ಮಂಡಳಿಗೆ ನೂತನ ಅಧ್ಯಕ್ಷರಾದವರ ಹೆಸರು ಮತ್ತು ಅವರಿಗೆ ವಹಿಸಲಾದ ಜವಾಬ್ದಾರಿಯ ಮಾಹಿತಿ ಇಲ್ಲಿದೆ. […]

ಕಾಖಂಡಕಿಯಲ್ಲಿ ಶ್ರೀಶೈಲ ಜಗದ್ಗುರುಗಳು ಪಲ್ಲಕ್ಕಿ, ಬೆಳ್ಳಿ ಕಂಬಿಯ ಲೋಕಾರ್ಪಣೆ

ವಿಜಯಪುರ: ಶ್ರೀಶೈಲ ಜಗದ್ಗುರುಗಳ ಪಲ್ಲಕ್ಕಿ ಉತ್ಸವ ಮತ್ತು ಮಲ್ಲಯ್ಯನ ದೇವಸ್ಥಾನದ ಬೆಳ್ಳಿ ಕಂಬಿಯ ಲೋಕಾರ್ಪಣೆ ಕಾರ್ಯಕ್ರಮ ಬಬಲೇಶ್ವರ ತಾಲೂಕಿನ ಕಾಖಂಡಕಿ ಗ್ರಾಮದಲ್ಲಿ ನಡೆಯಿತು. ಕಾಖಂಡಕಿ ಗ್ರಾಮದ ಹೊರವಲಯದಲ್ಲಿರುವ ಪರಮಹಂಸ ಪೂರ್ವ ಪ್ರಾಥಮಿಕ ಶಾಲೆ ಆವರಣದಲ್ಲಿ ಶ್ರೀಶೈಲ ಮಲ್ಲಿಕಾರ್ಜುನ ಸೇವಾ ಸಮಿತಿ ಪಾದಯಾತ್ರೆ ಭಕ್ತರ ವತಿಯಿಂದ 20ನೇ ವರ್ಷದ ಪಾದಯಾತ್ರೆ ಅಂಗವಾಗಿ ಶ್ರೀಶೈಲ ಜಗದ್ಗುರುಗಳು ಪಲ್ಲಕ್ಕಿ ಮಹೋತ್ಸವ ಮತ್ತು ಮಲ್ಲಯ್ಯನ ಭಕ್ತರ ವತಿಯಿಂದ ವಿನೂತನವಾದ ಐದು ಕೆ.ಜಿ ಬೆಳ್ಳಿಯ ಕಂಬಿಯ ಲೋಕಾರ್ಪಣೆ, ಧರ್ಮಸಭೆ, ವರದಾನಿ ಶ್ರೀ ಗುಡ್ಡಾಪುರ ದಾನಮ್ಮ […]

ಕಾಂಗ್ರೆಸ್ ಕಾರ್ಯಾಲಯಕ್ಕೆ ಮುತ್ತಿಗೆ ಯತ್ನ- ಬಿಜೆಪಿ ಕಾರ್ಯಕ್ರರ್ತರನ್ನು ವಶಕ್ಕೆ ಪಡೆದು ಬಿಡುಗಡೆ ಮಾಡಿದ ಪೊಲೀಸರು

ವಿಜಯಪುರ: ವಿಧಾನ ಸಭೆಯಲ್ಲಿ ರಾಜ್ಯಸಭೆ ಕಾಂಗ್ರೆಸ್ ನೂತನ ಸದಸ್ಯನ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆ ಹಾಕಿರುವ ಆರೋಪದ ಹಿನ್ನೆಲೆಯಲ್ಲಿ ಆರೋಪಿತರನ್ನು ಬಂಧಿಸುವಂತೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಗುಮ್ಮಟ ನಗರಿ ವಿಜಯಪುರದಲ್ಲಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿ ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್ ದೇಶ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಧಿಕ್ಕಾರ ಹಾಕಿದ ನೂರಾರು ಕಾರ್ಯಕರ್ತರು ವಿಜಯಪುರದಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಎಸ್. ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ […]