ಭೋವಿ ಸಮಾಜದಿಂದ ನಿರ್ಮಿಸಲಾದ ಶ್ರೀ ಗಜಾನನ ದೇವಸ್ಥಾನ ಉದ್ಘಾಟಿಸಿದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮೀಜಿ

ವಿಜಯಪುರ: ನಗರದ ಸ್ಟೇಶನ್ ರಸ್ತೆಯ ಭೋವಿ(ವಡ್ಡರ) ಸಮಾಜದವರಿಂದ ನಿರ್ಮಿಸಲಾದ ಶ್ರೀ ಗಜಾನನ ನೂತನ ದೇವಸ್ಥಾನವನ್ನು ಸಮಾಜದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮೀಜಿ ಉದ್ಘಾಟಿಸಿದರು. ಇದೇ ವೇಳೆ, ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಬಸವಲಿಂಗ ಸ್ವಾಮೀಜಿ ಅವರು ದೇವಸ್ಥಾನದ ಕಳಸಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಉಪಮೇಯರ್ ದಿನೇಶ ಹಳ್ಳಿ, ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಪುತ್ರ ರಾಮನಗೌಡ ಪಾಟೀಲ, ಮಾಜಿ ಕಾರ್ಪೋರೇಟರ್ ಉಮೇಶ ವಂದಾಲ, ನ್ಯಾಯವಾದಿ ಕೆ. ಎಫ್. ಅಂಕಲಗಿ, ಮುಖಂಡರಾದ ಬಸವರಾಜ ಗೊಳಸಂಗಿ, ಪ್ರಶಾಂತ ಲಾಳಸಂಗಿ, […]

ಕಾಖಂಡಕಿಯಲ್ಲಿ ಫೆ. 28 ರಂದು ಶ್ರೀಶೈಲ ಶ್ರೀ ಮಲ್ಲಿಕಾರ್ಜುನ ದೇವಸ್ಧಾನದ ನವೀಕರಣವಾದ ಬೆಳ್ಳಿ ಕಂಬಿಯ ಲೋಕಾರ್ಪಣೆ

ವಿಜಯಪುರ: ಬಬಲೇಶ್ವರ ತಾಲೂಕಿನ ಕಾಖಂಡಕಿಯ ಗ್ರಾಮದಲ್ಲಿ ಫೆ. 28 ರಂದು ಶ್ರೀಶೈಲ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ನವೀಕರಣಗೊಂಡಿರುವ ಬೆಳ್ಳಿಯ ಕಂಬಿ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಅಲ್ಲದೇ, 20 ನೆಯ ವರ್ಷದ ಶ್ರೀಶೈಲ ಪಾದಯಾತ್ರೆ ಅಂಗವಾಗಿ ಸುಕ್ಷೇತ್ರ ಗುಡ್ಡಾಪುರ ದಾನಮ್ಮದೇವಿಯ ಜೀವನ ದರ್ಶನ ಪ್ರವಚನ ಕಾರ್ಯಕ್ರಮ ಕೂಡ ನಡೆಯಲಿದೆ.  ಈ ಪ್ರವಚನ ಕಾರ್ಯಕ್ರಮದಲ್ಲಿ ಗುಣದಾಳದ ಕಲ್ಯಾಣ ಮಠದ ಡಾ. ವಿವೇಕಾನಂದ ದೇವರು ಮತ್ತು ಸಂಗೀತ ಸೇವೆ ಕೂಡ ಆಯೋಜಿಸಲಾಗಿದೆ. ಫೆ. 28ರಂದು ಗ್ರಾಮದ ಹೊರವಲಯದಲ್ಲಿರುವ ಪರಮಹಂಸ ಪೂರ್ವ ಪ್ರಾಥಮಿಕ ಶಾಲೆ […]

ನಾನಾ ಬೇಡಿಕೆ ಈಡೇರಿಸಲು ಆಗ್ರಹ: ಕೆ.ಎಸ್.ಆರ್.ಟಿಸಿ ಸ್ಟಾಪ್ ಆ್ಯಂಡ್ ವರ್ಕರ್ಸ್ ಯೂನಿಯನ್ ವತಿಯಿಂದ ಉಪವಾಸ ಸತ್ಯಾಗ್ರಹ

ವಿಜಯಪರ: ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮತ್ತು ಕೆ.ಎಸ್‌.ಆರ್‌.ಟಿ.ಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಯೂನಿಯನ್(ಎಐಟಿಯುಸಿ) ವತಿಯಿಂದ ನಗರದಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲಾಯಿತು.  ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಐ. ಐ. ಮುಶ್ರೀಫ್, 31.12.2023ರ ಮೂಲ ವೇತನದ ಶೇ. 25ರಷ್ಟು ಹೆಚ್ಚಳ ಮಾಡಿ, 01.01.2024 ರಿಂದ ವೇತನ ಶ್ರೇಣಿಗಳನ್ನು ಸಿದ್ಧಪಡಿಸಬೇಕು.  ವೇತನ ಪರಿಷ್ಕರಣೆಯಲ್ಲಿ ಎಲ್ಲಾ ಹಂತಗಳಲ್ಲೂ ಮೂಲ ವೇತನದ […]

ನಾನಾ ರೇಲ್ವೆ ನಿಲ್ದಾಣಗಳ ಪುನರಾಭಿವೃದ್ದಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ- ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣ ಮೂಲಕ ಅಮೃತ ಭಾರತ ಯೋಜನೆ ಮೂಲಕ ದೇಶದ ನಾನಾ ರೇಲ್ವೆ ನಿಲ್ದಾಣಗಳ ಪುನರಾಭಿವೃದ್ದಿ, ರಸ್ತೆ ಮೇಲ್ಸೇತುವೆ ಹಾಗೂ ಕೆಳಸೇತುವೆಗಳ ಸಮರ್ಪಣೆ, ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದ್ದು, ದೇಶದ ರೈಲು ನಿಲ್ದಾಣಗಳು ಸಾರ್ವಜನಿಕರಿಗೆ ಅತ್ಯಾಧುನಿಕ, ಸುಂದರ, ಸ್ವಚ್ಚ ಹಾಗೂ ಅಂತಾರಾಷ್ಟ್ರೀಯ ಗುಣಮಟ್ಟದ ಸೇವೆಗಳನ್ನು ಒದಗಿಸಲಿವೆ ಎಂದು ಸಂಸದ ರಮೇಶ ಜಿಗಜಿಣಗಿ ಅವರು ಹೇಳಿದ್ದಾರೆ.   ನಗರದ ರೈಲ್ವೇ ನಿಲ್ಧಾಣದಲ್ಲಿ ಆಯೋಜಿಸಲಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹುಬ್ಬಳ್ಳಿ ವಿಭಾಗದ […]

ಬಿ.ಎಲ್.ಡಿ.ಇ ಸಂಸ್ಥೆಯ ಡಾ. ಫ.ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿಗೆ A+ ಮಾನ್ಯತೆ

ವಿಜಯಪುರ: ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಇ ಸಂಸ್ಥೆಯ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿಗೆ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮೌಲ್ಯಾಂಕ ಮಂಡಳಿ (NAAC) 2023-2028ರ ಅವಧಿಗೆ A+ ಗ್ರೇಡ್ (3.28 ಅಂಕ) ಮಾನ್ಯತೆ ನೀಡಿದೆ.  ಕಳೆದ ವರ್ಷ ಡಿಸೆಂಬರ್ 7 ಮತ್ತು 8 ರಂದು ಕಾಲೇಜಿಗೆ ಭೇಟಿ ನೀಡಿದ್ದನ್ಯಾಕ್ ಕಮಿಟಿ, ಮಹಾವಿದ್ಯಾಲಯದಲ್ಲಿರುವ ಸೌಲಭ್ಯಗಳು, ಶೈಕ್ಷಣಿಕ ಗುಣಮಟ್ಟ, ಸಂಶೋಧನಾ ಪ್ರಗತಿ, ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಗುಣಮಟ್ಟದ ಶಿಕ್ಷಣ, ಉದ್ಯೋಗಾವಕಾಶ, ಸಾಮಾಜಿಕ ಸಮನ್ವತೆಯನ್ನು ಕೂಲಕಂಷವಾಗಿ ಪರಿಶಿಲಿಸಿ […]

ಸೈಕಲ್ ಮೇಲೆ ಪ್ರಧಾನಿ ಮೋದಿ ಸಾಧನೆಗಳ ಪ್ರಚಾರ: ವಿದ್ಯಾಕಾಶಿಯಿಂದ ಬಸವನಾಡಿಗೆ ಬಂದ ಯುವಕನಿಗೆ ಸ್ವಾಗತಿಸಿ ಗೌರವಿಸಿದ ಉಮೇಶ ಕಾರಜೋಳ

ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಕಾರ್ಯಗಳ ಕುರಿತು ಸೈಕಲ್ ಮೇಲೆ ಸಂಚರಿಸುತ್ತ ಪ್ರಚಾರ ಮಾಡುತ್ತಿರುವ ಧಾರವಾಡದ ಭರತ ಜೈನ್ ವಿಜಯಪುರ ನಗರಕ್ಕೆ ಆಗಮಿಸಿದ್ದು, ಅವರನ್ನು ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಸ್ವಾಗತಿಸಿ ಸನ್ಮಾನಿಸಿ ಗೌರವಿಸಿದರು. ಸೈಕಲ್ ಮೇಲೆ ಹಳ್ಳಿಗಳಿಗೆ ತೆರಳು ಪ್ರಚಾರ ಮಾಡುತ್ತಿರುವ ಭರತ ಜೈನ ಧಾರವಾಡ ಜಿಲ್ಲೆಯ ಮಂಟೂರ ಗ್ರಾಮದವರಾಗಿದ್ದು, ವೃತ್ತಿಯಲ್ಲಿ ಅಟೋ ಚಾಲಕರಾಗಿದ್ದಾರೆ.  ಪ್ರಧಾನಿ ನರೇಂದ್ರ ಮೋದಿಯವರ ಕಟ್ಟಾ ಅಭಿಮಾನಿಯಾಗಿರುವ ಅವರು ಸ್ವಯಂ ಪ್ರೇರಣೆಯಿಂದ […]

ಭೂತ್ನಾಳ ಕೆರೆಗೆ ಸಚಿವ ಎಂ. ಬಿ. ಪಾಟೀಲ ಭೇಟಿ- ನೀರು ತುಂಬಿಸುವ ಯೋಜನೆ ಪರಿಶೀಲನೆ

ವಿಜಯಪುರ: ಈ ಬಾರಿ ಭೀಕರ ಬರಗಾಲವಿದೆ. ಮುಂಬರುವ ಬೇಸಿಗೆಯಲ್ಲಿ ಜನ ಜಾನುವಾರಗಳಿಗೆ ನೀರಿನ ತೊಂದರೆ ಆಗದಂತೆ ಮುಂಜಾಗ್ರತೆ ವಹಿಸಿ, ಅಧಿಕಾರಿಗಳು ಪೂರ್ವ ಯೋಜನೆಯೊದಿಗೆ ಕಾರ್ಯ ನಿರ್ವಹಿಸಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಸಮಪರ್ಕವಾಗಿ ಕುಡಿಯುವ ನೀರು ಒದಗಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು. ಭೂತನಾಳ ಕೆರೆಯನ್ನು ತಿಡಗುಂದಿ ಅಕ್ವಾಡೆಕ್ಟ್ ಮೂಲಕ ನೀರು ತುಂಬಿಸುವ ಸ್ಥಳಕ್ಕೆ ಭಾನುವಾರ ಭೇಟಿ ನೀಡಿ ಪರಿಶೀಲನೆ […]

ಆಲಮೇಲ, ಸಿಂದಗಿ ತಾಲೂಕಿನ ನಾನಾ ಸ್ಥಳಗಳಿಗೆ ಜಿ. ಪಂ. ಸಿಇಓ ರಿಷಿ ಆನಂದ ಭೇಟಿ, ಕುಡಿಯುವ ನೀರಿನ ವ್ಯವಸ್ಥೆ ಪರಿಶೀಲನೆ

ವಿಜಯಪುರ: ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕುಡಿಯುವ ನೀರಿಗೆ ಪ್ರಥಮಾಧ್ಯತೆ ನೀಡಿ, ಸಮರ್ಪಕವಾಗಿ ಕುಡಿಯುವ ನೀರು ಪೂರೈಸಬೇಕು ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಫೆ.24ರಂದು ಸಿಂದಗಿ ಹಾಗೂ ಆಲಮೇಲ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ವಿವಿಧ ಇಲಾಖೆಗಳಡಿ ಕೈಗೊಂಡ ಕಾಮಗಾರಿಗಳ ಪರಿಶೀಲನೆ ನಡೆಸಿದ ಅವರು, ಕುಡಿಯುವ ನೀರು ಒದಗಿಸಲು ಕ್ರಮವಹಿಸಿಬೇಕು. ಯಾವುದೇ ರೀತಿಯ ಸಮಸ್ಯೆಯಾಗದಂತೆ ಗಮನ ಹರಿಸಿ ಕಾರ್ಯ ನಿರ್ವಹಿಸಬೇಕು ಎಂದು ಗ್ರಾಮೀಣ […]

ಇಂಡಿಯಲ್ಲಿ ಗಾಣಿಗರ ಬೃಹತ್ ಶಕ್ತಿ ಪ್ರದರ್ಶನ- ಪಕ್ಷಾತೀತ, ಜಾತ್ಯತೀತವಾಗಿ ಪಾಲ್ಗೊಂಡ ಜನಪ್ರತಿನಿಧಿಗಳು

ವಿಜಯಪುರ: ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಉಳಿದಿರುವ ಮಧ್ಯೆಯೇ ಇಂಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಾಣಿಗ ಸಮಾಜದ ಶಕ್ತಿ ಪ್ರದರ್ಶನ ನಡೆದಿದೆ. ಜ್ಞಾನಯೋಗಿ ಪರಮ ಪೂಜ್ಯ ಶ್ರೀ ಸಿದ್ಧೇಶ್ವರ ಮಹಾಸ್ವಾಮೀಜಿ ಸಭಾ ಭವನದ ಭೂಮಿ ಪೂಜಾ ಕಾರ್ಯಕ್ರಮ ಹಾಗೂ ವಿಜಯಪುರ ಜಿಲ್ಲಾ ಗಾಣಿಗ ಸಮಾಜ ಬೃಹತ್ ಸಮಾವೇಶ ಗಾಣಿಗರ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಯಿತು.  ವಿಜಯಪುರ ಜಿಲ್ಲಾ ಗಾಣಿಗ ಸಮಾಜ ಸಂಘಗಳ ಸಂಯುಕ್ತಾಶ್ರಯದಲ್ಲಿ ನಡೆದ ಈ ಸಮಾವೇಶವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ […]

ದೀಪ ಆರುವ ಮುಂಚೆ ದೊಡ್ಡದಾಗಿ ಉರಿಯುತ್ತದೆ- ಅನಂತಕುಮಾರ ವಿರುದ್ಧ ಲಕ್ಷ್ಮಣ ಸವದಿ ವಾಗ್ದಾಳಿ

ವಿಜಯಪುರ: ದೀಪ ಆರುವ ಮುಂಚೆ ದೊಡ್ಡದಾಗಿ ಉರಿಯುತ್ತದೆ ಎಂದು ಉತ್ತರ ಕನ್ನಡ ಸಂಸದ ಅನಂತಕುಮಾರ ವಿರುದ್ಧ ಬೆಳಗಾವಿ ಜಿಲ್ಲೆಯ ಅಥಣಿ ಶಾಸಕ ಲಕ್ಷ್ಮಣ ಸವದಿ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರದ ವಿರುದ್ಧ ಸಂಸದ ಅನಂತಕುಮಾರ ನೀಡಿರುವ ಹೇಳಿಕೆಯ ಕುರಿತು ಕೇಳಲಾದ ಪ್ರಶ್ನೆಗೆ ಖಾರವಾಗಿ ಪ್ರತಿಕ್ರಿಯೆ ನೀಡಿದರು. ಅನಂತಕುಮಾರ ಹೆಗಡೆ ರಾಜಕೀಯವಾಗಿ ‌ಕಳೆದು ಹೋಗುವ ಮುನ್ನ ಅವಾಚ್ಯ ಶಬ್ದಗಳಿಂದ ಮಾತನಾಡುತ್ತಿದ್ದಾರೆ.  ತಮ್ಮ ಅಸ್ತಿತ್ವವನ್ನು ತಾವೇ ಕಳೆದುಕೊಳ್ಳುತ್ತಿರುವುದು ಪ್ರಾರಂಭವಾಗಿದೆ.  ವಿನಾಶ […]