ಎಸ್.ಯು.ಸಿಐ ಕಮ್ಯೂನಿಷ್ಟ್ ಪಕ್ಷದ ಕಾರ್ಯಕರ್ತರಿಂದ ಡಿಸಿ ಕಚೇರಿ ಎದುರು ಪ್ರತಿಭಟನೆ

ವಿಜಯಪುರ: ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹಿಸಿ ಎಸ್.ಯು.ಸಿ.ಐ ಕಮ್ಯೂನಿಷ್ಟ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ವಿಜಯಪುರ ನಗರದಲ್ಲಿ ಸಿಟಿ ಬಸ್ಸುಗಳ ಮತ್ತು ಜಿಲ್ಲೆಯಲ್ಲಿ ಸಾಮಾನ್ಯ ಬಸ್ಸುಗಳ ಸಂಖ್ಯೆಯನ್ನು ಹೆಚ್ಚಿಸಬೇಕು.  ನವಭಾಗ ಮುಖ್ಯ ರಸ್ತೆ ಸೇರಿದಂತೆ ನಗರದಲ್ಲಿ ಹಾಳಾಗಿರುವ ರಸ್ತೆಗಳನ್ನು ದುರಸ್ತಿಗೊಳಿಸಬೇಕು.  ಸಂಕಷ್ಟದಲ್ಲಿರುವ ಎಲ್ಲಾ ರೈತರಿಗೆ ಬರ ಪರಿಹಾರ ಒದಗಿಸಬೇಕು.  ಜಿಲ್ಲೆಯಲ್ಲಿ ಸರಕಾರಿ ಎಂಜಿನೀಯರಿಂಗ್ ಮತ್ತು ಮೆಡಿಕಲ್ ಕಾಲೇಜ್‌ಗಳನ್ನು ಪ್ರಾರಂಭಿಸಬೇಕು.  ಸರಕಾರಿ ಆಸ್ಪತ್ರೆ ಖಾಸಗೀಕರಣ ಮಾಡುವುದನ್ನು ಕೈ ಬಿಡಬೇಕು.  ಜಿಲ್ಲಾ ಕ್ರೀಡಾಂಗಣವನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಿ […]

ವ್ಯಾನಿಟಿ ಬ್ಯಾಗ್ ಗಳಿಗೆ ಕನ್ನ ಹಾಕುತ್ತಿದ್ದ ಮೂರು ಜನ ಕಳ್ಳಿಯರ ಬಂಧಿಸಿದ ಗಾಂಧಿಚೌಕ್ ಪೊಲೀಸರು- ಚಿನ್ನಾಭರಣ ವಶ

ವಿಜಯಪುರ: ನಗರ ಕೇಂದ್ರ ಮತ್ತು ಸೆಟಲೈಟ್ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ವ್ಯಾನಿಟಿ ಬ್ಯಾಗ್ ಗೆ ಕನ್ನ ಹಾಕಿ ಚಿನ್ನಾಭರಣ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಗಾಂಧಿಚೌಕ್ ಪೊಲೀಸರು ಮೂರು ಜನ ಅಂತರ್ ಜಿಲ್ಲಾ ಕಳ್ಳಿಯರನ್ನು ಬಂಧಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಎಸ್ಪಿ ಋಷಿಕೇಶ ಸೋನಾವಣೆ, ವಿಜಯಪುರ ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಬಸ್ಸುಗಳನ್ನು ಹತ್ತುವಾಗ ಅವರ ವ್ಯಾನಿಟಿ ಬ್ಯಾಗಗಳಲ್ಲಿನ ಚಿನ್ನಾಭರಣ ಕಳ್ಳತನವಾದ ಕುರಿತು ಐದು ಪ್ರಕರಣಗಳು ದಾಖಲಾಗಿದ್ದವು.  ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಎಸ್ಪಿ ಶಂಕರ ಮಾರಿಹಾಳ, […]

ದ್ವಿತೀಯ ಪಿಯು ಪರೀಕ್ಷೆ: ಸುಸೂತ್ರವಾಗಿ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸೂಚನೆ

ವಿಜಯಪುರ: ಜಿಲ್ಲಾದ್ಯಂತ ಮಾರ್ಚ 1 ರಿಂದ 22ರ ವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದ್ದು, ವ್ಯವಸ್ಥಿತ ಮತ್ತು ಸುಸೂತ್ರವಾಗಿ ಪರೀಕ್ಷೆ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರು ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯ ಪೂರ್ವಸಿದ್ಧತೆ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯ 59 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ.  ಒಟ್ಟು 31,921 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.  ಪರೀಕ್ಷೆ ನಡೆಯುವ ದಿನಗಳಂದು ಜಿಲ್ಲಾ ಭದ್ರತಾ ಕೊಠಡಿಯಿಂದ ಗೌಪ್ಯ […]

ಮಹಿಳಾ ವಿವಿ ಸ್ಕೌಟ್ಸ್, ಗೌಡ್ಸ್ ವಿದ್ಯಾರ್ಥಿನಿಯರಿಗೆ ರೋವರ್ಸ್ ರೇಂಜರ್ಸ್ ರಾಜ್ಯ ಪುರಸ್ಕಾರ

ವಿಜಯಪುರ: ರಾಜ್ಯ ಅಕ್ಕಮiಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರಾದ ದುರ್ಗಾ, ಮನಿಷಾ ಚವ್ಹಾಣ, ಭವಾನಿ ಅಂಗಡಿ, ವಿದ್ಯಾಶ್ರೀ ಅವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸನಲ್ಲಿ ಉತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ 2022-23ನೇ ವರ್ಷದ ರೋವರ್ಸ ರೇಂಜರ್ಸ್ ರಾಜ್ಯ ಪುರಸ್ಕಾರ ಪ್ರಮಾಣ ಪತ್ರ ನೀಡಿಲಾಗಿದೆ.  ಈ ಪುರಸ್ಕಾರ ಪಡೆದ ವಿದ್ಯಾರ್ಥಿನಿಯರಿಗೆ ಮಹಿಳಾ ವಿವಿಯ ಕುಲಪತಿ ಪ್ರೊ. ಬಿ. ಕೆ. ತುಳಸಿಮಾಲ, ಕುಲಸಚಿವ ಶಂಕರಗೌಡ ಸೋಮನಾಳ, ಸ್ಕೌಟ್ಸ್ ಮತ್ತು ಗೈಡ್ಸ್ ಘಟಕದ ಸಂಯೋಜಕ ಡಾ. ಶ್ರೀನಿವಾಸ ಮತ್ತಿತರರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಡಾ. ಪ್ರಭುಗೌಡ ಲಿಂಗದಳ್ಳಿ ಮಾನವೀಯತೆ- ಮಧ್ಯರಾತ್ರಿ ಬೈಕ್ ಜೊತೆ ರಸ್ತೆಬದಿ ಕಂದಕಕ್ಕೆ ಬಿದ್ದಿದ್ದ ಯುವಕನ ರಕ್ಷಿಸಿ ಚಿಕಿತ್ಸೆ

ವಿಜಯಪುರ: ಬೈಕ್ ಜೊತೆ ರಸ್ತೆ ಬದಿಯಲ್ಲಿ ಬಿದ್ದಿದ್ದ ಯುವಕನೊಬ್ಬನನ್ನು ಖ್ಯಾತ ನೇತ್ರತಜ್ಞ ಮತ್ತು ಕಾಂಗ್ರೆಸ್ ಮುಖಂಡ ಡಾ. ಪ್ರಭುಗೌಡ ಲಿಂಗದಳ್ಳಿ ರಕ್ಷಣೆ ಮಾಡಿ ಪ್ರಾಥಮಿಕ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಕಳುಹಿಸಿಕೊಟ್ಟು ಮಾನವೀಯತೆ ಮೆರೆದಿದ್ದಾರೆ. ದೇವರ ಹಿಪ್ಪರಗಿ ಮತಕ್ಷೇತ್ರದ ನಾವದಗಿಯಲ್ಲಿ ಪ್ರವಚನ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಡಾ. ಪ್ರಭುಗೌಡ ಲಿಂಗದಳ್ಳಿ ವಣಕ್ಯಾಳ ಗ್ರಾಮಕ್ಕೆ ನಾಟಕ ಉದ್ಘಾಟನೆಗೆ ತೆರಳುತ್ತಿದ್ದರು.  ಆಗ ಮಾರ್ಗ ಮಧ್ಯೆ ಬೆಕಿನಾಳ ಕ್ರಾಸ್ ಬಳಿ ಬೈಕ್ ಅಪಘಾತವಾಗಿ ಯುವಕನೋರ್ವ ರಸ್ತೆ ಬದಿಯಲ್ಲಿ ಬಿದ್ದಿದ್ದನ್ನು ಗಮನಿಸಿದರು.  ಕೂಡಲೇ ಕಾರು ನಿಲ್ಲಿಸಿ […]

ಲಿಂಬೆ ಅಭಿವೃದ್ಧಿ ಮಂಡಳಿಗೆ ಸರಕಾರದಿಂದ ರೂ. 7.50 ಕೋ. ಅನುದಾನ- ಯಶವಂತರಾಯಗೌಡ ವಿ. ಪಾಟೀಲ

ಬೆಂಗಳೂರು: ರಾಜ್ಯ ಸರಕಾರ ಮತ್ತು ತೋಟಗಾರಿಕೆ ಇಲಾಖೆ ಇಂಡಿಯಲ್ಲಿರುವ ಲಿಂಬೆ ಅಭಿವೃದ್ಧಿ ಮಂಡಳಿಗೆ ರೂ. 7.50 ಕೋ. ಅನುದಾನ ನೀಡಿದೆ ಎಂದು ಇಂಡಿ ಶಾಸಕ ಯಶವಂತರಾಯಗೌಡ ವಿ. ಪಾಟೀಲ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬೆಂಗಳೂರಿನಲ್ಲಿ ತೋಟಗಾರಿಕೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಚಿವರು ಈ ಮಾಹಿತಿ ನೀಡಿದ್ದಾರೆ.  ಈಗಾಗಲೇ ರೂ. 30 ಲಕ್ಷ ಬಿಡುಗಡೆ ಮಾಡಲಾಗಿದೆ.  ಅಲ್ಲದೇ, […]

ಹೊರ್ತಿಯಲ್ಲಿ ಫೆ. 24 ರಂದು ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ

ವಿಜಯಪುರ: ನಗರದ ಬಿ. ಎಲ್. ಡಿ. ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯ ವತಿಯಿಂದ ಇಂಡಿ ತಾಲೂಕಿನ ಹೊರ್ತಿ ಗ್ರಾಮದಲ್ಲಿ ಫೆ. 24 ರಂದು ಶನಿವಾರ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಲಿದೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ವಿಜಯಕುಮಾರ ಕಲ್ಯಾಣಪ್ಪಗೊಳ ತಿಳಿಸಿದ್ದಾರೆ. ಹೊರ್ತಿಯಲ್ಲಿ ಪೋಸ್ಟ್ ಆಫೀಸ್ ಹತ್ತಿರ ಹೊಸ ಕಾಂಪ್ಲೆಕ್ಸ್ ನಲ್ಲಿರುವ ಪಿಕೆಪಿಎಸ್ ನಲ್ಲಿ ಬೆಳಿಗ್ಗೆ 10 ರಿಂದ ಸಂಜೆ 4 ಗಂಟಯೆ ವರೆಗೆ ಈ ಶಿಬಿರ ನಡೆಯಲಿದೆ. […]

ವಿಜಯ ಜೋಶಿಗೆ ಮತ್ತೆ ಒಲಿದ ವಿಜಯಪುರ ಬಿಜೆಪಿ ಮಾಧ್ಯಮ ಪ್ರಮುಖ ಜವಾಬ್ದಾರಿ- ಆದೇಶ ಪತ್ರ ನೀಡಿದ ಆರ್. ಎಸ್. ಪಾಟೀಲ ಕೂಚಬಾಳ

ವಿಜಯಪುರ: ವಿಜಯ ಜೋಶಿ ಅವರನ್ನು ವಿಜಯಪುರ ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಮುಖರನ್ನಾಗಿ ಮತ್ತೋಮ್ಮೆ ನೇಮಕ ಮಾಡಲಾಗಿದೆ. ಕಳೆದ ಅವಧಿಯಲ್ಲಿ ಇದೇ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸಿದ್ದ ವಿಜಯ ಜೋಶಿ ಅವರ ಕಾರ್ಯ ವೈಖರಿಗೆ ಮಾನ್ಯತೆ ನೀಡಿರುವ ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.  ಅಲ್ಲದೇ, ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೇಮಕಾತಿ ಆದೇಶ ಪತ್ರವನ್ನು ನೀಡಿದ್ದಾರೆ.   ತಮಗೆ ವಹಿಸಿರುವ ಜವಾಬ್ದಾರಿಯನ್ನು ನಿರೀಕ್ಷೆ ಮೀರಿ ಅತ್ಯಂತ ಯಶಸ್ವಿಯಾಗಿ ಕಾರ್ಯ ನಿರ್ವಹಿಸುವ ಮೂಲಕ, […]

ಮಾರಾಟ ಮತ್ತು ವಸ್ತು ಪ್ರದರ್ಶನ ಮೇಳಕ್ಕೆ ಉಪಮೇಯರ ಚಾಲನೆ

ವಿಜಯಪುರ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಲಾಗಿರುವ ಮೂರು ದಿನಗಳ ಮಾರಾಟ ಮತ್ತು ವಸ್ತು ಪ್ರದರ್ಶನಕ್ಕೆ ಉಪಮೇಯರ್ ದಿನೇಶ ಹಳ್ಳಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಪ್ರಶಾಂತ ಬಾರಿಗಿಡದ, ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿ ನಾರಾಯಣ ಕಾಂಬಳೆ, ಸುಭಾಷ ಪಾಟೀಲ ಮುಂತಾದವರು ಉಪಸ್ಥಿತರಿದ್ದರು. ಈ ಮೇಳವು ಫೆ. 21 ರಿಂದ 23ರ ವರೆಗೆ ಪ್ರತಿದಿನ ಬೆ. 10 ರಿಂದ ರಾತ್ರಿ […]

ತಂಬಾಕು ಸೇವನೆ ದುಷ್ಪರಿಣಾಮದ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ- ಜಿಲ್ಲಾಧಿಕಾರಿ ಟಿ. ಭೂಬಾಲನ್

ವಿಜಯಪುರ: ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಅಧಿಕಾರಿಗಳು ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ 2023-24ನೇ ಆರ್ಥಿಕ ವರ್ಷದ  ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಂಬಾಕು ಸೇವನೆಯಿಂದ ಹಲವಾರು ಗಂಭೀರ ಕಾಯಿಲೆಗಳಿಗೆ ತುತ್ತಾಗಿ, ಆರೋಗ್ಯದ ವ್ಯಕ್ತಿರಿಕ್ತ ಪರಿಣಾಮಗಳು ಉಂಟಾಗಲಿರುವ ಕುರಿತು ವ್ಯಾಪಕವಾಗಿ ಜಾಗೃತಿ ಕಾರ್ಯಕ್ರಮಗಳನ್ನು […]