ಸಿಎಂ ಶ್ವೇತ್ರ ಪತ್ರವನ್ನೊಳಗೊಂಡ ಬಜೆಟ್ ಮಂಡಿಸಿದ್ದಾರೆ- ಬಿಜೆಪಿಯವರಿಗೆ ಕೇಂದ್ರಕ್ಕೆ ಹೋಗಲು ತಾಕತ್ತಿಲ್ಲ, ಸದನದಲ್ಲಿ ಕುಳಿತು ಕೇಳುವ ತಾಳ್ಮೆಯಿಲ್ಲ- ಎಂ. ಬಿ. ಪಾಟೀಲ

ವಿಜಯಪುರ: ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಮಂಡಿಸಿರುವ ಆಯವ್ಯಯ ಶ್ವೇತಪತ್ರವನ್ನೊಳಗೊಂಡ ಬಜೆಟ್ ಆಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ವಿಜಯಪುರ ನಗರದ ಹೊರವಯದಲ್ಲಿ ಭೂತ್ನಾಳ ಕೆರೆ ಬಳಿ ಇರುವ ತಿಡಗುಂದಿ ವಯಾಡಕ್ಟ್ ಮೂಲಕ ಕೆರೆಗೆ ನೀರು ಹರಿಸುವ ಸಿದ್ಧತೆ ಪರಿಶೀಲಿಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸಿಎಂ ತಮ್ಮ 15 ನೇ ಬಾರಿ ಬಜೆಟ್ ಮಂಡಿಸಿದ್ದಾರೆ.  ಇದು ಸಾಮಾಜಿಕ ಹಾಗೂ ಅಭಿವೃದ್ದಿ ಸರಿದೂಗಿಸುವ ಬಜೆಟ್ […]

ಬಜೆಟ್ ನಲ್ಲಿ ಬಸವನಾಡಿಗೂ ಭರಪೂರ ಕೊಡುಗೆ ನೀಡಿದ ಸಿಎಂ ಎಸ್. ಸಿದ್ಧರಾಮಯ್ಯ- ಏನೇನು ಗೋತ್ತಾ?

ವಿಜಯಪುರ: ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಮಂಡಿಸಿರುವ ಬಜೆಟ್ ನಲ್ಲಿ ಬಸವನಾಡು ವಿಜಯಪುರ ಜಿಲ್ಲೆಗೂ ಭರಪೂರ ಕೊಡುಗೆ ಸಿಕ್ಕಿದೆ. ವಿಜಯಪುರ ಜಿಲ್ಲೆಗೆ ಸಿಎಂ ನೀಡಿರುವ ಕೊಡುಗೆಗಳು ಏನು ಎಂಬುದರ ಕುರಿತg ಬಜೆಟ್ ನಲ್ಲಿ ನಮೂದಿಸಲಾಗಿರುವ ಅನುಕ್ರಮ ಸಂಖ್ಯೆ ಸಹಿತ ಮಾಹಿತಿ ಇಲ್ಲಿದೆ. ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತನ್ನು ಉತ್ತೇಜಿಸಲು ರಾಜ್ಯದಲ್ಲಿರುವ ವಿಮಾನ ನಿಲ್ದಾಣಗಳ ಹತ್ತಿರದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಇಟ್ಟಂಗಿಹಾಳ ಬಳಿ ಆಹಾರ ಪಾರ್ಕ್ ಸ್ಥಾಪನೆ.   ತೋಟಗಾರಿಕೆ ಬೆಳೆಗಳಿಗೆ ವಿಜಯಪುರ ಜಿಲ್ಲೆಯು ಹೆಸರುವಾಸಿಯಾಗಿದೆ. […]

ಕೆಯುಡಬ್ಲ್ಯೂಜೆ ಹೋರಾಟದ ಫಲ- ಗ್ರಾಮೀಣ ಪತ್ರಕರ್ತರಿಗೆ ಅವರ ಜಿಲ್ಲೆಗಳಲ್ಲಿ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ- ಶಿವಾನಂದ ತಗಡೂರ ಸ್ವಾಗತ

ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಅವರ ಜಿಲ್ಲಾದ್ಯಂತ ಸರಕಾರಿ ಬಸ್ಸುಗಳಲ್ಲಿ ಉಚಿತ ಬಸ್ ಪಾಸ್ ಯೋಜನೆಯನ್ನು ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಅವರು ಈ ಬಾರಿಯ ಬಜೆಟ್ ನಲ್ಲಿ ಪ್ರಕಟಿಸಿದ್ದಾರೆ.  ಇದರಿಂದಾಗಿ ಕೆಯುಡಬ್ಲ್ಯೂಜೆ ದಶಕಗಳ ಹೋರಾಟಕ್ಕೆ ಫಲ ಸಿಕ್ಕಂತಾಗಿದೆ. ದಾವಣಗೆರೆಯಲ್ಲಿ ಇದೇ ಫೆ. 3 ಮತ್ತು 4 ರಂದು ನಡನೆದ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯೂಜೆ)  38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಭರವಸೆಯನ್ನು ಈಗ ಈಡೇರಿಸಿದ್ದು, ಸರಕಾರದ ಈ ನಿರ್ಧಾರವನ್ನು ಸಂಘದ ರಾಜ್ಯಾಧ್ಯಕ್ಷ ಶಿವಾನಂದ […]

ರೇಲ್ವೆ ಕೆಳಸೇತುವೆ ಬಳಿ ವಾಹನಗಳ ಎತ್ತರ ನಿಯಂತ್ರಣಕ್ಕೆ ಅಳವಡಿಸಲಾಗಿದ್ದ ಫ್ರೇಮ್ ತುಂಡಾಗಿ ಬಿದ್ದು ಅವಘಡ

ವಿಜಯಪುರ: ರೇಲ್ವೆ ಕೆಳಸೇತುವೆ ಬಳಿ ಎತ್ತರದ ವಾಹನಗಳು ಸಂಚರಿಸದಂತೆ ಹಾಕಲಾಗಿದ್ದ ಕಬ್ಬಿಣದ ಫ್ರೇಮ್ ತುಂಡಾಗಿ ಬಿದ್ದ ಘಟನೆ ಕೊಲ್ಹಾರ ತಾಲೂಕಿನ ತೆಲಗಿ ಬಳಿ ಸಂಭವಿಸಿದೆ. ಗ್ರಾಮದ ರೇಲ್ವೆ ಕೆಳಸೇತುವೆ ಬಳಿ ಬೃಹತ್ ಲಾರಿಗಳು ಮತ್ತು ಎತ್ತರದ ವಾಹನಗಳು ಸಂಚರಿಸುವುದನ್ನು ನಿಯಂತ್ರಿಸಲು ಫ್ರೇಮ್ ಹಾಕಲಾಗಿತ್ತು.  ಆದರೆ, ರಾತ್ರಿ ಕಬ್ಬು ಸಾಗಾಟ ಮಾಡುವ ವಾಹನಕ್ಕೆ ತಗುಲಿ ಮುರಿದು ಬಿದ್ದಿದೆ.  ಈ ರಸ್ತೆ ತೆಲಗಿಯಿಂದ ಕೊಲ್ಹಾರ ಮಾರ್ಗವಾಗಿ ಬಸವನ ಬಾಗೇವಾಡಿ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುತ್ತದೆ.  ವಾಹನಗಳ ಎತ್ತರ ನಿಯಂತ್ರಕ ಫ್ರೇಮ್ ಮೇಲೀನ […]

ಲಾರಿ ಟಾಯರ್ ನಲ್ಲಿ ಹೊತ್ತಿಕೊಂಡ ಬೆಂಕಿ- ಕ್ಷಣಾರ್ಧದಲ್ಲಿ ಇಡೀ ವಾಹನ ಸುಟ್ಟು ಭಸ್ಮ

ವಿಜಯಪುರ: ಚಲಿಸುತ್ತಿದ್ದ ಲಾರಿಯ ಟಾಯರ್ ನಲ್ಲಿ ಕಾಣಿಸಿಕೊಂಡ ಬೆಂಕಿ ಇಡೀ ವಾಹನವನ್ನು ಸುಟ್ಟು ಭಸ್ಮ ಮಾಡಿದ ಘಟನೆ ಇಂಡಿ ತಾಲೂಕಿನ ಹಳಗುಣಕಿ ಗ್ರಾಮದ ಬಳಿ ನಡೆದಿದೆ. ಸೋಲಾಪುರ- ವಿಜಯಪುರ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 52ರಲ್ಲಿ ತಡರಾತ್ರಿ ಈ ಘಟನೆ ಸಂಭವಿಸಿದ್ದು, ಕೆಲಕಾಲ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು. ತಮಿಳುನಾಡಿಗೆ ಸೇರಿರುವ TN 29- CW 8877 ನಂಬರಿನ ಲಾರಿ ರಾಜಸ್ಥಾನದಿಂದ ಬೆಂಗಳೂರಿಗೆ ಗ್ರಾನೈಟ್ ಕಲ್ಲುಗಳನ್ನು ಸಾಗಿಸುತ್ತಿತ್ತು.  ತಡರಾತ್ರಿ ವೇಳೆ ಈ ಘಟನೆ ಸಂಭವಿಸಿದೆ.  ಬೆಂಕಿ ಇಡೀ ಲಾರಿಗೆ […]

ತಿಕೋಟಾ ತಾಲೂಕಿನ ನಾನಾ ಕಡೆ ಜಿ. ಪಂ. ಸಿಇಓ ರಿಷಿ ಆನಂದ ಭೇಟಿ- ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ವಿಜಯಪುರ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾಗಿ ರಿಷಿ ಆನಂದ ಅವರು ತಿಕೋಟಾ ತಾಲೂಕಿನ ಸಿದ್ದಾಪುರ ಗ್ರಾ. ಪಂ., ಸರಕಾರಿ ಗ್ರಂಥಾಲಯ, ಪ್ರೌಢಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಿದ್ಧಾಪುರ(ಕೆ) ಗ್ರಾ. ಪಂ. ಗೆ ಭೇಟಿ ನೀಡಿದ ಅವರು ಮಹಾತ್ಮ ಗಾಂಧಿ ನರೇಗಾ ಯೋಜನೆ, ಸ್ವಚ್ಛ ಭಾರತ ಮಿಷನ್(ಗ್ರಾ), 15ನೇ ಹಣಕಾಸು, ತೆರಿಗೆ ವಸೂಲಾತಿ ಸೇರಿ ವಿವಿಧ ಅನುದಾನಗಳು, ಹಾಗೂ ಕುಡಿಯುವ ನೀರಿನ ಕುರಿತು, ಬೀದಿ ದೀಪಗಳ ನಿರ್ವಹಣೆ ಸೇರಿ ವಿವಿಧ ಯೋಜನೆಗಳ ಹಾಗೂ ಕಾರ್ಯಕ್ರಮಗಳ ಕುರಿತು […]

ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜಾಗೃತಿ ಮೂಡಿಸಿ- ಜಿಲ್ಲಾಧಿಕಾರಿ ಟಿ. ಭೂಬಾಲನ್

ವಿಜಯಪುರ: ಜಿಲ್ಲೆಯಲ್ಲಿ ಅಪಘಾತ ಪ್ರಕರಣಗಳು ಸಂಭವಿಸದಂತೆ ರಸ್ತೆ ಸುರಕ್ಷತಾ ನಿಮಮಗಳು ಪಾಲನೆಯಾಗುವಂತೆ ನೋಡಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳು ಮುಂಜಾಗೃತ ಕ್ರಮ ವಹಿಸಿಕೊಂಡು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ  ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಂಣದಲ್ಲಿ ನಡೆದ  ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ವಾಹನ ಸವಾರರು ಕಡ್ಡಾಯವಾಗಿ  ರಸ್ತೆ ನಿಯಮಗಳನ್ನು ಪಾಲಿಸುವಂತೆ ಜಾಗೃತಿ ಮೂಡಿಸಬೇಕು. ವೈಜ್ಞಾನಿಕವಾಗಿ ರಸ್ತೆಗಳನ್ನು ನಿರ್ಮಿಸಬೇಕು. ಅಪಘಾತ ತಡೆಗೆ ಸಂಬಂಧಿಸಿದ […]

ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮದಡಿ ಆರೋಗ್ಯ ತಪಾಸಣೆ ಶಿಬಿರ

ವಿಜಯಪುರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳು ಆರೋಗ್ಯ ವಿಭಾಗ ಸಹಯೋಗದಿಂದ ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮದಡಿ ಹದಿಹರೆಯದವರ ಆರೋಗ್ಯ ಮತ್ತು ಕ್ಷೇಮ ದಿನಾಚರಣೆ ಅಂಗವಾಗಿ ಆರೋಗ್ಯ ತಪಾಸಣೆ ಕಾರ್ಯಕ್ರಮ ನಡೆಯಿತು. ನಮ್ಮ ಸರಕಾರಿ ಪಾಲಿಟೆಕ್ನಿಕ್ ಹಾಗೂ ಯುವ ರೆಡಕ್ರಾಸ್ ಘಟಕದಿಂದ ಪಾಲಿಟೆಕ್ನಿಕ್ ಸಂಸ್ಥೆಯ ಆವರಣದಲ್ಲಿ ನಡೆದ ಈ ಅರೋಗ್ಯ ತಪಾಸಣೆ ಶಿಬಿರವನ್ನು ಈ ಕಾರ್ಯಕ್ರಮವನ್ನು ಆರ್. ಸಿ. ಎಚ್ ಅಧಿಕಾರಿ ಡಾ. ಕೆ. ಡಿ. ಗುಂಡಬಾವಡಿ ಉದ್ಘಾಟಿಸಿದರು. ಈ […]

ಜವಳಿ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಸಚಿವ ಶಿವಾನಂದ ಪಾಟೀಲ

ಬೆಂಗಳೂರು: ಜವಳಿ ಕ್ಷೇತ್ರದ ಬೆಳವಣಿಗೆಗೆ ಪೂರಕವಾದ ಉದ್ಯಮಶೀಲರ ಕಡತಗಳನ್ನು ವಿಳಂಬ ಮಾಡದೆ ವಿಲೇವಾರಿ ಮಾಡಿ, ಸಬ್ಸಿಡಿ ಮತ್ತಿತರ ಕಾರಣಗಳಿಗೆ ರೂಪಿತವಾದ ಕಡತಗಳ ಬಗ್ಗೆ ಮುತುವರ್ಜಿ ವಹಿಸಿ ಎಂದು ಜವಳಿ ಸಚಿವ ಶಿವಾನಂದ ಎಸ್. ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಕಾಸಸೌಧದಲ್ಲಿ ಜವಳಿ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ಕಡತ ವಿಲೇವಾರಿ ವಿಳಂಬವಾದರೆ ಉದ್ಯಮಶೀಲರು ಆಸಕ್ತಿ ಕಳೆದುಕೊಳ್ಳಬಹುದು. ಹೀಗಾಗಿ ನೈಜ ಯೋಜನೆಗಳ ಕಡತಗಳನ್ನು ವಿಳಂಬವಿಲ್ಲದೆ ವಿಲೇ ಮಾಡಿ ಹಾಗೂ ಒಪ್ಪಂದದ ಪ್ರಕಾರ ಮೂಲಭೂತ  ಸೌಕರ್ಯಗಳನ್ನು ಕಲ್ಪಿಸಿ ಎಂದು […]

ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಸನ್ನದ್ಧರಾಗಿ- ಟಿ. ಭೂಬಾಲನ್

ವಿಜಯಪುರ: ಬೇಸಿಗೆಯ ಸಂದರ್ಭದಲ್ಲಿ ಜಿಲ್ಲಾದ್ಯಂತ ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಈಗಿನಿಂದಲೇ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ  ಕುಡಿಯುವ ನೀರಿನ ನಿರ್ವಹಣೆ ಹಾಗೂ ನೀರಿನ ಸ್ಥಿತಿಗತಿ ಕುರಿತು ಸಭೆ ನಡೆಸಿದ ಅವರು, ಈಗಿನಿಂದಲೇ ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಬಹುದಾದ ಗ್ರಾಮಗಳನ್ನು ಗುರುತಿಸಿಟ್ಟುಕೊಳ್ಳಬೇಕು.  ಸಮಸ್ಯಾತ್ಮಕ ಪ್ರದೇಶಗಳಲ್ಲಿ ಪಂಚಾಯತಿ ವತಿಯಿಂದ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು.  […]