ಜಿಲ್ಲೆಯ ಸ್ಕ್ಯಾನಿಂಗ್ ಸೆಂಟರ್ ವೈದ್ಯರಿಗೆ ಕಾರ್ಯಾಗಾರ- ಭ್ರೂಣಲಿಂಗ ಪತ್ತೆ ಮಾಡುವುದು ಕಾನೂನು ಬಾಹಿರ- ಟಿ. ಭೂಬಾಲನ್

ವಿಜಯಪುರ: ದೇಶದಲ್ಲಿ ಲಿಂಗಾನುಪಾತದಲ್ಲಿ ವ್ಯತ್ಯಾಸವಾಗುತ್ತಿದ್ದು, ಇದು ಆತಂಕಕಾರಿ ಬೆಳವಣಿಗೆಯಾಗಿದೆ. ಇದು ಹಲವು ಸಮಸ್ಯೆಗಳಿಗೆ ಕಾರಣವಾಗುತ್ತದೆ.  ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಹಾಗೂ ಹೆಣ್ಣು ಭ್ರೂಣ ಹತ್ಯೆ ಪ್ರಮುಖ ಕಾರಣವಾಗಿದ್ದು, ಇದಕ್ಕೆ ಆಸ್ಪದ ನೀಡದಂತೆ ತಿಳಿಸಿದ ಅವರು,ಇಂತಹ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದ್ದಾರೆ.  ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ಗಾಂಧಿ ಭವನದಲ್ಲಿ ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ನಿಷೇಧ, ಬೇಟಿ […]

ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ಅವೈಜ್ಞಾನಿಕ ಶಿಕ್ಷಣ ನೀತಿ ಆರೋಪ- ಎಬಿವಿಪಿ ಬೃಹತ್ ಪ್ರತಿಭಟನೆ

ವಿಜಯಪುರ: ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಶೈಕ್ಷಣಿಕ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಶ್ರೀ ಸಿದ್ದೇಶ್ವರ ದೇವಾಲಯ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಕಾರ್ಯಕರ್ತರು, ಗಾಂಧಿಚೌಕ್ – ಬಸವೇಶ್ವರ ಚೌಕ್ ರಸ್ತೆ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.  ಅಲ್ಲದೇ, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ವಿರುದ್ಧ ಧಿಕ್ಕಾರ ಘೋಷಣೆ ಹಾಕಿದರು.  ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಪೊಲೀಸರ ಮಧ್ಯೆ ಮಾತಿನ ಚಕಮಕ್ಕಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಎಬಿವಿಪಿ ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ, ಅನೇಕ […]

ಭಾರತದ ಸಂವಿಧಾನ ಸಮಾನತೆಗೆ ಬುನಾದಿಯಾಗಿದೆ- ಎಚ್. ವೈ. ಸಿಂಗೆಗೋಳ

ವಿಜಯಪುರ: ಸಂವಿಧಾನ ಸಮಸಮಾಜದ ಬುನಾದಿಯಾಗಿದ್ದು, ಈ ಕುರಿತು ಜನಜಾಗೃತಿ ಮೂಡಬೇಕಿದೆ ಎಂದು ಸಿಂದಗಿ ಕೃಷಿ ಇಲಾಖೆ ಸಹಾಯಕ ನಿದೇ೯ಶಕ ಎಚ್. ವೈ. ಸಿಂಗೆಗೋಳ ಹೇಳಿದ್ದಾರೆ. ಸಿಂದಗಿ ತಾಲೂಕಿನ ಬ್ರಹ್ಮದೇವನಮಡು ಮತ್ತು ಹೊನ್ನಳ್ಳಿ ಗ್ರಾಮಗಳಗೆ ಆಗಮಿಸಿದ ಸಂವಿಧಾನ ಜಾಗೃತಿ ಜಾಥಾ ರಥವನ್ನು ಸ್ವಾಗತಿಸಿ, ಪುಷ್ಪಾಚ೯ನೆ ಮಾಡಿ ಅವರು ಮಾತನಾಡಿದರು. ದೇಶದ ಸವ೯ಧಮ೯, ಜಾತಿ ಜನರ ಹಿತ ಕಾಪಾಡುವ ಅಂಬೇಡ್ಕರ್ ಅವರ ಸಂವಿಧಾನವನ್ನು ಪ್ರತಿಯೊಬ್ಬರೂ ಗೌರವಿಸಬೇಕಿದೆ.  ಕಾನೂನುಗಳ ಪಾಲನೆ ಬದ್ದತೆ ಬೆಳಸಿಕೊಳ್ಳಬೇಕಿದೆ ಎಂದು ಅವರು ಹೇಳಿದರು. ಈ ಮಧ್ಯೆ ಬ್ರಹ್ಮದೇವರಮಡು […]

ಫೆ. 14 ರಂದು ಚಡಚಣದಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಸಾರ್ವಜನಿಕ ಅಹವಾಲು ಸ್ವೀಕಾರ

ವಿಜಯಪುರ: ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಫೆ. 14 ರಂದು ಚಡಚಣ ತಾಲೂಕು ಪಂಚಾಯಿತಿ ಸಭಾ ಭವನದಲ್ಲಿ ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಲೋಕಾಯುಕ್ತ ಪೊಲೀಸ್ ಅಧೀಕ್ಷಕ (ಮೊ:9364062528), ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ (ಮೊ:9364062557), ಪೊಲೀಸ್ ಇನ್ ಸ್ಪೆಕ್ಟರ್-1 (ಮೊ:9364062640), ಪೊಲೀಸ್ ಇನ್ಸ್‍ಪೆಕ್ಟರ್-2 (ಮೊ: 9364062639) ಇವರು ಅಂದು ಬೆಳಿಗ್ಗೆ 11 ಗಂಟೆಯಿಂದ ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಈ ಅಹವಾಲು ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು.  ಸರಕಾರಿ ಕಚೇರಿಗಳಲ್ಲಿ ಅಧಿಕೃತವಾಗಿ ಕೆಲಸಗಳನ್ನು […]

ವಿಜಯಪುರ ಬಸವೇಶ್ವರ ಚೌಕಿನಲ್ಲಿ ಟ್ಯಾಂಕರ್ ಪಲ್ಟಿ- ಚಾಲಕನಿಗೆ ಗಾಯ

ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ವಾಹನ ಪಲ್ಟಿಯಾದ ಘಟನೆ ವಿಜಯಪುರ ನಗರದ ಬಸವೇಶ್ವರ ಚೌಕ್ ನಲ್ಲಿ ನಡೆದಿದೆ. ನಸುಕಿನ ಜಾವ ಟ್ಯಾಂಕರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಜೆಡಿಎಸ್ ಕಚೇರಿ ಮತ್ತು ಜಯಶ್ರೀ ಟಾಕೀಸ್ ಪಕ್ಕದಲ್ಲಿ ಪಲ್ಟಿಯಾಗಿದೆ.  ಈ ಘಟನೆಯಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.  ಅ ಅಪಘಾತದಿಂದಾಗಿ ರಸ್ತೆಯಲ್ಲಿ ಕೆಲಕಾಲ ವಾಹನಗಳ ಸಂಚಾರ ಬಂದ್ ಆಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಸಂಚಾರಿ ಪೊಲೀಸರು ಪಲ್ಟಿಯಾದ ಟ್ಯಾಂಕರ್ ವಾಹನವನ್ನು ಕ್ರೇನ್ ಸಹಾಯದಿಂದ ತೆರವು ಮಾಡಿ ವಾಹನಗಳ […]

ಮರಗೂರ ಸಕ್ಕರೆ ಕಾರ್ಖಾನೆ ಚುನಾವಣೆ- ಶಾಸಕ ಯಶವಂತರಾಯಗೌಡ ವಿ. ಪಾಟೀಲ ಬಣಕ್ಕೆ ಭರ್ಜರಿ ಗೆಲುವು

ವಿಜಯಪುರ: ಇಂಡಿ ತಾಲೂಕಿನ ಮರಗೂರ ಶ್ರೀ ಭೀಮಾಶಂಕರ ಸಹಕಾರ ಸಕ್ಕರೆ ಕಾರ್ಖಾನೆಯ ನಿರ್ದೇಶಕ ಮಂಡಳಿಗೆ ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಮತ್ತು ಇಂಡಿ ಶಾಸಕ ಯಶವಂತರಾಯಗೌಡ ವಿ. ಪಾಟೀಲ ಬಣಕ್ಕೆ ಭರ್ಜರಿ ಗೆಲುವು ಸಾಧಿಸಿದೆ.  ಶಾಸಕರ ಬಣದಿಂದ ಸ್ಪರ್ಧಿಸಿದ್ದ ಎಲ್ಲ ಅಭ್ಯರ್ಥಿಗಳು ಆಯ್ಕೆಯಾಗುವ ಮೂಲಕ ಕಾರ್ಖಾನೆಯ ಮೇಲೆ ಮತ್ತೆ ಹಿಡಿತ ಸಾಧಿಸಿದ್ದಾರೆ.  ಒಟ್ಟು 13 ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಈಗಾಗಲೇ ಐದು ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಫಲಿತಾಂಶದ ವಿವರ ಸಾಮಾನ್ಯ ಕ್ಷೇತ್ರ(5 ಸ್ಥಾನಗಳು) ಯಶವಂತ್ರಾಯಗೌಡ ಪಾಟೀಲ- […]

ಸಿಂದಗಿ ಪೊಲೀಸರ ಕಾರ್ಯಾಚರಣೆ- 4 ಜನರ ಬಂಧನ, 37 ಬೈಕ್ ವಶ- ಬ್ಯಾಂಕ್, ಫೈನಾನ್ಸ್ ಕಳ್ಳತನದಲ್ಲಿ 3 ಆರೋಪಿಗಳ ಬಂಧನ

ವಿಜಯಪುರ: ಜಿಲ್ಲೆಯ ಸಿಂದಗಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ಕು ಜನ ಬೈಕ್ ಕಳ್ಳರು ಮತ್ತು ಮೂರು ಜನ ಬ್ಯಾಂಕ್ ಹಾಗೂ ಫೈನಾನ್ಸ್ ಕಳ್ಳರನ್ನು ಬಂಧಿಸಿದ್ದಾರೆ. ರೂ. 16.65 ಲಕ್ಷ ಮೌಲ್ಯದ 37 ಬೈಕ್ ವಶ ಮೊದಲ ಪ್ರಕರಣದಲ್ಲಿ ಸಿಂದಗಿ ಪೊಲೀಸರು ನಾಲ್ಕು ಜನ ಬೈಕ್ ಕಳ್ಳರನ್ನು ಬಂಧಿಸಿದ್ದು, ಅವರ ಬಳಿಯಿದ್ದ 37 ಬೈಕ್ ಗಳನ್ನು ವಶಪಡಿಸಿಕೊಂಡಿದ್ದಾರೆ.  ಇವುಗಳ ಒಟ್ಟು ಮೌಲ್ಯ ರೂ. 16.65 ಲಕ್ಷ ಎಂದು ಅಂದಾಜಿಸಲಾಗಿದೆ. ಸಿಂದಗಿ ನಗರ ಮತು […]

ರವಿ ಬೆಳಗೆರೆ ಸಾರಥ್ಯದ ಹಾಯ್ ಬೆಂಗಳೂರು ವಾರ ಪತ್ರಿಕೆ ಭಾವನ ಬೆಳಗೆರೆ ಸಂಪಾದಕತ್ವದಲ್ಲಿ ಶೀಘ್ರದಲ್ಲಿ ಪುನಾರಂಭ

ಬೆಂಗಳೂರು: ರವಿ ಬೆಳಗೆರೆ ಸಾರಥ್ಯದ ಹಾಯ್ ಬೆಂಗಳೂರು ವಾರ ಪತ್ರಿಕೆ ಅತೀ ಶೀಘ್ರದಲ್ಲಿ ಭಾವನಾ ಬೆಳಗೆರೆ ಸಂಪಾದಕತ್ವದಲ್ಲಿ ಪುನಾರಂಭವಾಗಲಿದೆ. ಬೆಂಗಳೂರಿನ ಹಾಯ್ ಬೆಂಗಳೂರು ಪತ್ರಿಕೆ ಕಚೇರಿಯಲ್ಲಿ ಹಿರಿಯ ಪತ್ರಕರ್ತ, ಸಾಹಿತಿ, ಬರಹಗಾರ ರವಿ ಬೆಳೆಗೆರೆ ಅವರ ಎರಡು ಪುಸ್ತಕಗಳಾದ ರಜನೀಶನ ಹುಡುಗಿಯರು, ಅರ್ತಿ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮದಲ್ಲಿ ರವಿ ಬೆಳಗೆರೆ ಪುತ್ರಿ ಮತ್ತು ಪತ್ರಿಕೆಯ ಸಂಪಾದಕಿಯಾಗಿ ಕಾರ್ಯ ನಿರ್ವಹಿಸಲಿರುವ ಭಾವನಾ ಬೆಳಗೆರೆ ಈ ಘೋಷಣೆ ಮಾಡಿದ್ದಾರೆ. ಹಾಯ್ ಬೆಂಗಳೂರು ಮತ್ತು ಓ ಮನಸೆ ಪತ್ರಿಕೆಗಳನ್ನು ಪುನಾರಂಭಿಸುವಂತೆ ರಾಜ್ಯದ […]

ದರಬಾರ ಡಿಗ್ರಿ ಕಾಲೇಜಿನ ಯಶ ಆರ್. ಮುತ್ತಿನಪೆಂಡಿಮಠ ರಾಣಿ ಚನ್ನಮ್ಮ ವಿವಿ ಕ್ರಿಕೆಟ್ ತಂಡಕ್ಕೆ ಬ್ಲ್ಯೂ ಆಗಿ ಆಯ್ಕೆ

ವಿಜಯಪುರ: ನಗರದ ಪ್ರತಿಷ್ಠಿತ ಕುಮುದಬೇನ ದರಬಾರ ಬಿಬಿಎ, ಬಿಸಿಎ ಮತ್ತು ಬಿಕಾಂ ಕಾಲೇಜಿನ ಬಿ. ಕಾಂ. ಸೆಮಿಸ್ಟರ್ ವಿದ್ಯಾರ್ಥಿ ಮಾರ ಯಶ ಆರ್. ಮುತ್ತಿನಪೆಂಡಿಮಠ ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಕ್ರಿಕೆಟ್ ತಂಡಕ್ಕೆ ಬ್ಲ್ಯೂ ಆಗಿ ಆಯ್ಕೆಯಾಗಿದ್ದಾನೆ. ಜಮಖಂಡಿಯ ವಾಣಿಜ್ಯ ಬಿ. ಎಚ್‌. ಎಸ್ ಕಲೆ ಮತ್ತು ಟಿಜಿಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಫೆಬ್ರವರಿ 7 ಮತ್ತು 8 ರಂದು ನಡೆದ ಅಂತರ ಮಹಾವಿದ್ಯಾಲಯಗಳ ಕ್ರಿಕೆಟ್ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಯ ಈ ಸಾಧನೆಗೆ ಸಂಸ್ಥೆಯ ಅದ್ಯಕ್ಷೆ ರಾಧಾ ಆರ್. ದರಬಾರ […]

ವಿಜಯಪುರ ಜಿಲ್ಲಾ ಕೇಂದ್ರ ಕಾರಾಗೃಹಕ್ಕೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರು ಭೇಟಿ, ಪರಿಶೀಲನೆ

ವಿಜಯಪುರ: ನಗರದ ಕೇಂದ್ರ ಕಾರಾಗೃಹಕ್ಕೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಭೆ ಅವರು ಭೇಟಿ ನೀಡಿ, ಕಾರಾಗೃಹ ಬಂದಿಗಳ ಆರೋಗ್ಯ, ಆಹಾರ, ಮೂಲ ಸೌಕರ್ಯದ ಜೊತೆಗೆ ಅವರ ಮಕ್ಕಳ ಕುರಿತು ಮಾಹಿತಿ ಪಡೆದರು. ಕಾರಾಗೃಹ ಬಂದಿಗಳ ಅವರ ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಸ್ಥಿತಿಗತಿಗಳ ಕುರಿತು ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಕಾರಾಗೃಹದ ಅಧಿಕಾರಿಗಳು ಮತ್ತು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅವರಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಕಾರಾಗೃಹದ ಪ್ರಭಾರ ಅಧೀಕ್ಷಕರಾದ ಮಂಜುನಾಥ […]