ರಾಷ್ಟ್ರಪಿತನ ತತ್ವಗಳನ್ನು ಪಾಲಿಸಿ ವ್ಯಕ್ತಿತ್ವನ್ನು ಉತ್ತಮವಾಗಿ ರೂಪಿಸಿಕೊಳ್ಳಬಹುದು- ಶಂಕರಗೌಡ ಸೋಮನಾಳ

ವಿಜಯಪುರ: ಗಾಂಧೀಜಿಯವರ ತತ್ವಗಳನ್ನು ಪಾಲಿಸಿದರೆ ನಮ್ಮ ವ್ಯಕ್ತಿತ್ವವನ್ನು ಉತ್ತಮವಾಗಿ ರೂಪಿಸಿಕೊಳ್ಳಬಹುದು ಎಂದು ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದ್ದಾರೆ. ನಗರದ ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಬೆಂಗಳೂರು, ಗಾಂಧಿ ಅಧ್ಯಯನ ಕೇಂದ್ರ, ಎನ್.ಎಸ್.ಎಸ್ ಕೋಶ ಹಾಗೂ ಐಕ್ಯುಎಸಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ವಿಜಯಪುರ ವತಿಯಿಂದ ಗಾಂಧಿ ಸ್ಮಾರಕ ನಿಧಿಯ 75 ನೆಯ ವಾರ್ಷಿಕೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಗಾಂಧಿ ಚಿಂತನೆಗಳ ಮೂಲಕ ಮಾನವೀಯ ಮೌಲ್ಯಗಳು” ಕುರಿತ ಒಂದು ದಿನದ ರಾಷ್ಟ್ರೀಯ ವಿಚಾರ […]

ರೂ. 32.15 ಲಕ್ಷ ಮೌಲ್ಯದ 202.38 ಗ್ರಾಂ ಮಾದಕ ವಸ್ತು ನಾಶಪಡಿಸಿದ ಪೊಲೀಸರು

ವಿಜಯಪುರ: ಜಿಲ್ಲೆಯಲ್ಲಿ ದಾಖಲಾದ ಎನ್‌ ಡಿ ಪಿ ಎಸ್ ನಡಿ ದಾಖಲಾದ 32 ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾದ ಮಾದಕ ವಸ್ತುಗಳನ್ನು ಪೊಲೀಸರು ನಾಶಪಡಿಸಿದ್ದಾರೆ. ಜಿಲ್ಲೆಯಲ್ಲಿ ಎನ್ ಡಿ ಪಿ ಎಸ್ ಕಾಯಿದೆಯಡಿ ಒಟ್ಟು 32 ಪ್ರಕರಣಗಳಲ್ಲಿ ರೂ. 32 ಲಕ್ಷ 15 ಸಾವಿರದ 450 ಮೌಲ್ಯದ 202.380 ಗ್ರಾಂ ಮಾದಕ ವಸ್ತುಗಳನ್ನು ಮತ್ತು ಮಾದ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿತ್ತು.   ಪೊಲೀಸ್ ಪ್ರಧಾನ ಕಚೇರಿ ಆದೇಶದ ಹಿನ್ನೆಲೆಯಲ್ಲಿ ಜಿಲ್ಲಾ ಮಾದಕ ವಸ್ತುಗಳ ವಿಲೇವಾರಿ ಸಮೀತಿಯ ನೇತೃತ್ವದಲ್ಲಿ ವಿಜಯಪುರ ನಗರದ ಇಂಡಿ […]

ವಿಜಯಪುರ ಡಿಡಿಪಿಐ ಕುರ್ಚಿಗೆ ಇಬ್ಬರು ಅಧಿಕಾರಿಗಳ ಕಿತ್ತಾಟ- ಕಡತಗಳಿಗೆ ನಾನೇ ಸಹಿ ಹಾಕುವೆ ಎಂದು ಪಟ್ಟು

ವಿಜಯಪುರ: ನಗರದಲ್ಲಿ ಒಂದೇ ಕುರ್ಚಿಗಾಗಿ ಇಬ್ಬರು ಜಿಲ್ಲಾ ಮಟ್ಟದ ಸರಕಾರಿ ಅಧಿಕಾರಿಗಳು ಕಾದಾಟ ನಡೆಸುತ್ತಿದ್ದಾರೆ. ವಿಜಯಪುರ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯಲ್ಲಿ ಡಿಡಿಪಿಐ ಎನ್. ಎಚ್. ನಾಗೂರ ಹಾಗೂ ಪ್ರಭಾರಿ ಡಿಡಿಪಿಐ ಉಮಾದೇವಿ ಸೊನ್ನವರ ಅವರ ಮಧ್ಯೆ ಕುರ್ಚಿಗಾಗಿ ಜಗಳ ನಡೆಯುತ್ತಿದೆ. ಹಣಕಾಸು ದುರುಪಯೋಗ ಹಿನ್ನೆಲೆ ಅಮಾನತಾಗಿದ್ದ ಡಿಡಿಪಿಐ ಎನ್. ಎಚ್. ನಾಗೂರ ಹಣಕಾಸು ದುರುಪಯೋಗ ಮತ್ತು ಕರ್ತವ್ಯ ಲೋಪದ ಆರೋಪದ ಹಿನ್ನೆಲೆಯಲ್ಲಿ ಹಿಂದಿನ ಡಿಡಿಪಿಐ ಎನ್. ಎಚ್. ನಾಗೂರ ಅವರನ್ನು ಜನೇವರಿ 30 ರಂದು […]

ವಿಜಯಪುರ-ಬೆಂಗಳೂರು, ಮುಂಬೈಗೆ ವಂದೇ ಭಾರತ ರೈಲು ಪ್ರಾರಂಭಿಸಿ- ಸುನೀಲಗೌಡ ಪಾಟೀಲ ಆಗ್ರಹ

ವಿಜಯಪುರ: ಭಾರತದ ಸ್ವಾತಂತ್ರ‍್ಯ ಸುವರ್ಣ ಮಹೋತ್ಸವದ ಅಂಗವಾಗಿ ಪ್ರಾರಂಭಿಸಲಾಗಿರುವ ವಂದೇ ಭಾರತ ರೈಲು ಸೇವೆಯನ್ನು ವಿಜಯಪುರದಿಂದ ಬಾಗಲಕೋಟೆ ಮಾರ್ಗವಾಗಿ ಬೆಂಗಳೂರಿಗೆ ಮತ್ತು ಮುಂಬೈ- ಸೋಲಾಪುರ ರೈಲನ್ನು ವಿಜಯಪುರದ ವರೆಗೆ ವಿಸ್ತರಿಸುವಂತೆ ಆಗ್ರಹಿಸಿ ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಕೇಂದ್ರ ಅಶ್ವಿನಿ ವೈಷ್ಣವ ಅವರಿಗೆ ಪತ್ರ ಬರೆದಿದ್ದಾರೆ. ಭಾರತದ ಸ್ವಾತಂತ್ರ‍್ಯ ಸುವರ್ಣ ಮಹೋತ್ಸವದ ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿಗಳು ಜನತೆ ಒಂದು ಸ್ಥಳದಿಂದ ಮತ್ತೋಂದು ಸ್ಳಳಕ್ಕೆ ಸಂಚರಿಸಲು ಹೆಚ್ಚುವರಿಯಾಗಿ ರೈಲುಗಳನ್ನು ಓಡಿಸುವುದರ ಜೊತೆಗೆ ರೈಲಿನಲ್ಲಿ ಸ್ವಚ್ಚತೆ ಸೇರಿದಂತೆ […]

ಕೇಂದ್ರ ಜಲ ಶಕ್ತಿ ತಂಡದಿಂದ ಇಂಡಿ ತಾಲೂಕಿನ ನಿಂಬಾಳ ಕೆ. ಡಿ., ಕೊಳುರಗಿ, ಬಬಲಾದ, ಹೊರ್ತಿ, ಚವಡಿಹಾಳ ಕ್ಷೇತ್ರ ಭೇಟಿ

ವಿಜಯಪುರ:   ಗಣಿ ಸಚಿವಾಲಯದ ನಿರ್ದೇಶಕರು ಹಾಗೂ ಕೇಂದ್ರ ಜಲ ಶಕ್ತಿ ತಂಡದ ಕೇಂದ್ರ ನೋಡಲ್ ಅಧಿಕಾರಿಗಳಾದ ವಿವೇಕ ಕುಮಾರ ಶರ್ಮಾ ಮತ್ತು ವಿಜ್ಞಾನಿಗಳು(ಬಿ), ಜಲವಿಜ್ಞಾನ, ಕೇಂದ್ರ ಅಂತರ್ಜಲ ಮಂಡಳಿ ಆಯುಶ್ ಕೇಶರ್ವಾಣಿ ಅವರು ಇಂಡಿ ತಾಲೂಕಿನ ನಿಂಬಾಳ ಕೆ. ಡಿ, ಕೊಳುರಗಿ, ಬಬಲಾದ, ಹೊರ್ತಿ ಹಾಗೂ ಚವಡಿಹಾಳ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿದರು. ನಿಂಬಾಳ ಕೆ.ಡಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ಬೋರ್‌ವೆಲ್ ಮರುಪೂರಣ ಘಟP,À ಕೊಳುರಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಾವಳಸಂಗ ಗ್ರಾಮದ ಸಾಮಾಜಿಕ ಅರಣ್ಯ […]

ನಿಯಮಿತ ವ್ಯಾಯಾಮ, ಆರೋಗ್ಯ ಪೂರ್ಣ ಆಹಾರ ಸೇವನೆಯಿಂದ ಕ್ಯಾನ್ಸರ ರೋಗ ತಡೆಗಟ್ಟಬಹುದು- ಟಿ. ಭೂಬಾಲನ್

ವಿಜಯಪುರ: ನಿಯಮಿತ ವ್ಯಾಯಾಮ ಮತ್ತು ಆರೋಗ್ಯ ಪೂರ್ಣ ಆಹಾರ ಸೇವನೆಯಿಂದ ಕ್ಯಾನ್ಸರ್ ರೋಗ ತಡೆಗಟ್ಟಬಹುದು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದ್ದಾರೆ. ನಗರದಲ್ಲಿ ಭಾರತೀಯ ರೆಡ್‌ಕ್ರಾಸ ಸೊಸೈಟಿ ವಿಜಯಪುರ ಜಿಲ್ಹಾ ಶಾಖೆ ಮತ್ತು ಜಿಲ್ಹಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಕ್ಯಾನ್ಸರ ರೋಗದ ಅರಿವು ಮತ್ತು ಮುಂಜಾಗ್ರತೆ ಕುರಿತ ಕಾರ್ಯಕ್ರಮದಲ್ಲಿ ಪಾಲ್ಗೋಂಡು ಕ್ಯಾನ್ಸರ ರೋಗ ಕುರಿತು 25 ಸಾವಿರ ಭಿತ್ತಿ ಪತ್ರಗಳನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು. ಕ್ಯಾನ್ಸರ್ ಕುರಿತು ಭಾರತದಲ್ಲಿ ಮಾತ್ರವಲ್ಲ ವಿಶ್ವಾದ್ಯಂತ […]

ಕಾರ್ಯನಿರತ ಪತ್ರಕರ್ತರ ಸಂಘದಿಂದ ಉತ್ತಮ ಜಿಲ್ಲಾ ಸಂಘ ಪ್ರಶಸ್ತಿ ಪ್ರದಾನ: ವಿಜಯಪುರ ಘಟಕ ಚಟುವಟಿಕೆಗೆ ಸಭಾಪತಿ ಬಸವರಾಜ ಹೊರಟ್ಟಿ ಪ್ರಶಂಸೆ

ವಿಜಯಪುರ: ಕಾರ್ಯನಿರತ ಪತ್ರಕರ್ತರ ಸಂಘದಿಂದ ಉತ್ತಮ ಜಿಲ್ಲಾ ಸಂಘ ಪ್ರಶಸ್ತಿಗೆ ಪುರಸ್ಕೃತವಾದ ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ದಾವಣಗೆರೆಯಲ್ಲಿ ನಡೆದ 38ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿಗೆ ಪುರಸ್ಕೃತವಾದ ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪರವಾಗಿ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ ಸಂಘದ ಸದಸ್ಯರ ಹರ್ಷೋದ್ಘಾರಗಳ ಮಧ್ಯೆ ಗಣ್ಯರಿಂದ ಪ್ರಶಸ್ತಿ ಸ್ವೀಕರಿಸಿದರು. ಶಶಿಕಾಂತ ಪ್ರಶಸ್ತಿ ಸ್ವೀಕಾರ : […]

ಕೇಂದ್ರ ಜಲ ಶಕ್ತಿ ತಂಡದಿಂದ ಜಿಲ್ಲೆಯ ನಾನಾ ಗ್ರಾಮ ಪಂಚಾಯಿತ್ಗಿಳಿಗೆ ಭೇಟಿ, ಪರಿಶೀಲನೆ

ವಿಜಯಪುರ: ಗಣಿ ಸಚಿವಾಲಯದ ನಿರ್ದೇಶಕರು ಹಾಗೂ ಕೇಂದ್ರ ಜಲ ಶಕ್ತಿ ತಂಡದ ಕೇಂದ್ರ ನೋಡಲ್ ಅಧಿಕಾರಿಗಳಾದ ವಿವೇಕ ಕುಮಾರ ಶರ್ಮಾ ಮತ್ತು ವಿಜ್ಞಾನಿಗಳು, ಜಲವಿಜ್ಞಾನ, ಕೇಂದ್ರ ಅಂತರ್ಜಲ ಮಂಡಳಿ ಆಯುಷ್ ಕೇಶರ್ವಾಣಿ ಅವರನ್ನೊಳಗೊಂಡ ತಂಡ ವಿಜಯಪುರ ತಾಲೂಕಿನ ಹೆಗಡಿಹಾಳ, ಐನಾಪುರ ಹಾಗೂ ಹಡಗಲಿ ಗ್ರಾಮ ಪಂಚಾಯಿತಿಗಳಿಗೆ ಭೇಟಿ ಪರಿಶೀಲನೆ ನಡೆಸಿತು. ಹೆಗಡಿಹಾಳ ಗ್ರಾಮ ಅಮೃತ ಸರೋವರ, ಬೋರ್ ವೆಲ್ ಮರು ಪೂರಣ ಘಟಕ ಮತ್ತು ಶುದ್ಧ ಕುಡಿಯುವ ನೀರಿನ ಘಟಕ ಕಾಮಗಾರಿಗಳನ್ನು ಪರಿಶೀಲನೆ ಮಾಡಿದರು. ನಂತರ ಅಮೃತ […]

ಕ್ರಿಕೆಟ್, ಪುಟಬಾಲ್ ಜೊತೆ ಅಥ್ಲೇಟಿಕ್ಸ್ ಗೂ ಪ್ರೋತ್ಸಾಹ ಅಗತ್ಯ- ಪ್ರೋ. ಆರ್. ಸಿ. ಬಿದರಿ

ವಿಜಯಪುರ: ಕ್ರಿಕೆಟ್ ಮತ್ತು ಪುಟಬಾಲ್ ಜೊತೆ ಅಥ್ಲೇಟಿಕ್ಸ್ಗೂ ಪ್ರೋತ್ಸಾಹ ನೀಡುವುದು ಅಗತ್ಯವಾಗಿದೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಜನರಲ್ ಮೆಡಿಸೀನ್ ವಿಭಾಗದ ಪ್ರಾಧ್ಯಾಪಕ ಪ್ರೋ. ಡಾ. ಆರ್. ಸಿ. ಬಿದರಿ ಹೇಳಿದ್ದಾರೆ. ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಕ್ರೀಡಾಂಗಣದಲ್ಲಿ ರವಿವಾರ ದಿ. ಡಾ. ಸಿ. ಆರ್. ಬಿದರಿ ಸ್ಮರಣಾರ್ಥ ಆಯೋಜಿಸಲಾಗಿದ್ದ 9ನೇ ಅಂತರಶಾಲಾ ಕಾಲೇಜುಗಳ ಅಥ್ಲೇಟಿಕ್ ಕ್ರೀಡಾಕೂಟ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ನಮ್ಮ ತಂದೆ ಡಾ. ಸಿ. ಆರ್. […]

ವಸತಿ ನಿಲಯಗಳಲ್ಲಿ ಮೂಲಭೂತ ಸೌಲಭ್ಯ ಸಮರ್ಪಕವಾಗಿ ಕಲ್ಪಿಸಲು ಆದ್ಯತೆ ನೀಡಿ- ಜಿಲ್ಲಾಧಿಕಾರಿ ಟಿ. ಭೂಬಾಲನ್

ವಿಜಯಪುರ: ವಸತಿ ನಿಲಯಗಳಲ್ಲಿ ಅಗತ್ಯ ಮೂಲಭೂತ ಸೌಲಭ್ಯ ಒದಗಿಸಲು ಆದ್ಯತೆ ನೀಡುವ ಮೂಲಕ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಣೆ ಮೇಲ್ವಿಚಾರಕರ ಜವಾಬ್ದಾರಿಯಾಗಿದೆ. ಸರ್ಕಾರ ಒದಗಿಸುವ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆ, ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳು ಹಾಗೂ ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಶುಚಿ, ರುಚಿಯಾದ ಮತ್ತು ಪೌಷ್ಟಿಕ ಆಹಾರ ಒದಗಿಸುವ ಮತ್ತು […]