ಭೀಮಾ ತೀರದಲ್ಲಿ ಧೊಪ್ಪೆಂದು ನೆಲಕ್ಕಪ್ಪಳಿಸಿದ ಬಾಹ್ಯಾಕಾಶ ಪರಿಕರ- ಡಿಸಿ ಹೇಳಿದ್ದೇನು ಗೊತ್ತಾ?

ವಿಜಯಪುರ: ಆಗಸದಲ್ಲಿ ಹಾರಾಡುತ್ತಿದ್ದ ಪರಿಕರವೊಂದು ರೈತರೊಬ್ಬರ ಜಮೀನಿನಲ್ಲಿ ಬಿದ್ದು ಆತಂಕ ಸೃಷ್ಠಿಸಿದ ಘಟನೆ ಚಡಚಣ ತಾಲೂಕಿನ ಮರಗೂರ ಬಳಿ ನಡೆದಿದೆ. ಪ್ಯಾರಾಚೂಟ್ ಮಾದರಿಯ ಈ ಪರಿಕರ ಕಂಡು ರೈತರು ಗಾಬರಿಯಾಗಿದ್ದಾರೆ.  ಈ ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಗ್ರಾಮದ ಜನರು ಅದರ ಮೇಲೆ ಬರೆಯಲಾದ ಮಾಹಿತಿ ತಿಳಿದು ಸ್ವಲ್ಪ ನಿಟ್ಟುಸಿರು ಬಿಟ್ಟಿದ್ದಾರೆ. ಪರಿಶೀಲನೆ ನಡೆಸಿದಾಗ ಇದು ಲೋ ಇನ್ಟೆನ್ಸಿಟಿ ವೆದರ್ ಮಾನಿಟರರಿಂಗ್ ಸಿಸ್ಟಮ್ ಪರಿಕರವಾಗಿದ್ದು, ಬೆಂಗಳೂರಿನ ಇಸ್ರೋದಿಂದ ಕೆಲ ದಿನಗಳ ಹಿಂದೆ ಉಡಾವಣೆ ಮಾಡಲಾಗಿತ್ತು ಎನ್ನಲಾಗಿದೆ.  ಲೋ […]

ಸಂಪಾದಕರು ಸಂಘಟಿತರಾಗಿ ಸರಕಾರಿ ಸೌಲಭ್ಯಗಳನ್ನು ಪಡೆಯಬೇಕಾಗಿದೆ: ರಾಜ್ಯಾಧ್ಯಕ್ಷ ಎ. ಸಿ. ತಿಪ್ಪೇಸ್ವಾಮಿ

ತುಮಕೂರು: ಸಂಪಾದಕರು ಸಂಘಟಿತರಾಗಿ ಸರಕಾರಿ ಸವಲತ್ತನ್ನು ಪಡೆಯಬೇಕಾಗಿದೆ ಎಂದು ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷ ಎ. ಸಿ. ತಿಪ್ಪೇಸ್ವಾಮಿ ಹೇಳಿದ್ದಾರೆ. ನಗರದ ಶಿರಾಗೇಟ್ ರಸ್ತೆಯ ಹೊನ್ನೇನಹಳ್ಳಿ ಬಳಿಯಿರುವ ಪರಂ ರೀಟ್ರೀಟ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸಭೆ ಹಾಗೂ ಗದಗದಲ್ಲಿ ನಡೆಯುವ ರಾಜ್ಯ ಸಮ್ಮೇಳನದ ಪೂರ್ವಭಾವಿ ಚರ್ಚೆ ಹಾಗೂ ತುಮಕೂರು ಜಿಲ್ಲಾ ಘಟಕದ ನೂತನ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂಪಾದಕರು ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು […]

ಸಂಸ್ಥೆಗಳ ಕಷ್ಟದ ದಿನಗಳಲ್ಲಿ ಗಟ್ಟಿಯಾಗಿ ನಿಂತು ಹೋರಾಡಿದವರ ಕಾರ್ಯ ಸದಾ ಶ್ಲಾಘನೀಯ- ಜಿ. ಕೆ. ಪಾಟೀಲ

ವಿಜಯಪುರ: ಸಂಸ್ಥೆಗಳ ಕಷ್ಟದ ದಿನಗಳಲ್ಲಿ ಗಟ್ಟಿಯಾಗಿ ನಿಂತು ಹೋರಾಟ ಮಾಡಿದವರ ಸೇವೆ ಸದಾ ಸ್ಮರಣೀಯವಾಗಿರುತ್ತದೆ ಎಂದು ಬಿ. ಎಲ್. ಡಿ. ಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ ಮಾಜಿ ಶಾಸಕ ಜಿ. ಕೆ. ಪಾಟೀಲ ಹೇಳಿದ್ದಾರೆ. ಬಿ.ಎಲ್.ಡಿ.ಇ ಸಂಸ್ಥೆಯ ಆಡಳಿತ ಕಚೇರಿಯ ಅಧೀಕ್ಷಕ ಎಸ್. ಎ. ಬಿರಾದಾರ(ಕನ್ನಾಳ) ಮತ್ತುವಾಹನ ಚಾಲಕ ಎಸ್. ಎಸ್. ಬಡಿಗೇರ ಅವರ ಸೇವಾ ನಿವೃತ್ತಿ ಅಂಗವಾಗಿ ನಗರದಲ್ಲಿ ಬುಧವಾರ ಮುಸ್ಸಂಜೆ ಆಯೋಜಿಸಲಾದ ಗೌರವ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಎಲ್ಲರೂ […]

ಮಕ್ಕಳ ಹಿತರಕ್ಷಣೆಗೆ ಪೂರಕವಾಗಿ ಕಾರ್ಯ ನಿರ್ವಹಿಸಿ- ಸಂಗಮೇಶ ಬಬಲೇಶ್ವರ

ವಿಜಯಪುರ: ಮಕ್ಕಳ ಹಿತರಕ್ಷಣೆಗಾಗಿ ಅಧಿಕಾರಿಗಳು ಕಾರ್ಯನಿರ್ವಹಿಸಿದಾಗ ಸರ್ಕಾರದ ಆಶಯಗಳು ಸಾಕಾರಗೊಳ್ಳುತ್ತವೆ ಎಂದು ಧಾರವಾಡದ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಅಪ್ಪಾಸಿ ಬಬಲೇಶ್ವರ ಹೇಳಿದ್ದಾರೆ. ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ನಾನಾ ಇಲಾಖಾ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಮಕ್ಕಳ ಹಿತ ದೃಷ್ಟಿಯಿಂದ ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು. ಯುನಿಸೆಫ್ ನೆರವಿನಿಂದ ಬಾಲವಿಕಾಸ ಅಕಾಡೆಮಿಯು ಹದಿಹರೆಯದ ಬಾಲಕರ ಸಶಕ್ತೀಕರಣ ಕಾರ್ಯಕ್ರಮ ಆಯೋಜಿಸಲಾಗಿದ್ದು, ರಾಜ್ಯದಲ್ಲಿ ವಿನೂತನವಾದ ಹೊಸ ಪರಿಕಲ್ಪನೆ ಇದಾಗಿದೆ. ಮಕ್ಕಳ […]

ನಿಮಗೆ ಭವಿಷ್ಯವಿದೆ ಎಂದು ಹೇಳಿ ತುಡುಗರಿಗೆ ಜವಾಬ್ದಾರಿ ಕೊಡುತ್ತಾರೆ- ನೋಡಿ ಸ್ವಾಮಿ ನಾವಿರೋದು ಹೀಗೆ- ಯತ್ನಾಳ

ವಿಜಯಪುರ: ಸತ್ಯವನ್ನು ಹೇಳಿ ದಕ್ಕಿಸಿಕೊಳ್ಳುವ ಶಕ್ತಿ ನನಗಿದೆ.  ನಿಜ ಹೇಳಿದಾಗ ನನನ್ನು ಕರೆಯಿಸಿ ನಿಮಗೆ ಉತ್ತಮ ಭವಿಷ್ಯವಿದೆ ಸುಮ್ಮನಿರಿ ಎಂದು ಹೇಳುವ ಹೈಕಮಾಂಡ್ ನಂತರ ಮತ್ತೆ ತುಡುಗರ(ಕಳ್ಳರ) ಕೈಗೆ ಜವಾಬ್ದಾರಿ ನೀಡುತ್ತಾರೆ.  ಇದು ಇಷ್ಟೇ.  ಎಲ್ಲಿಗೆ ಹೋಗಿ ತಲುಪುತ್ತೋ ಗೊತ್ತಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ನಗರದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಪ್ರತಿಭಾ ಪುರಸ್ಕಾರ ಮತ್ತು ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. […]

ಬಿ.ಎಲ್.ಡಿ.ಇ ಟ್ರಾಮಾ ಆ್ಯಂಡ್ ಎಮರ್ಜೆನ್ಸಿ ನೂತನ ಕಟ್ಟಡ ಉದ್ಘಾಟನೆ- ಸಂಸ್ಥೆಯನ್ನು ಕಟ್ಟಿ ಬೆಳಿಸಿದ ಮಹನೀಯರ ಸ್ಮರಣೆ ಕಾರ್ಯಕ್ರಮ

ವಿಜಯಪುರ: ಶತಮಾನದ ಹಿಂದೆ ಈ ಭಾಗದ ಶರಣರು ಮತ್ತು ಮಹನೀಯರು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಉತ್ತರ ಕರ್ನಾಟಕದ ಜನ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಆರ್ಥಿಕವಾಗಿ ಅಭಿವೃದ್ಧಿಯಾಗಲು ಕಾರಣರಾಗಿದ್ದಾರೆ ಎಂದು ಬೆಳಗಾವಿ ಕೆ.ಎಲ್.ಇ ಸಂಸ್ಥೆಯ ಚೇರಮನ್ ಮತ್ತು ಕಾಹೆರ ಕುಲಾಧಿಪತಿ ಪ್ರಭಾಕರ ಬಿ. ಕೋರೆ ಹೇಳಿದ್ದಾರೆ. ಇಂದು ಶನಿವಾರ ನಗರದ ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಅಪಘಾತ ಮತ್ತು ತುರ್ತು ಚಿಕಿತ್ಸೆ ವಿಭಾಗದ ಕಟ್ಟಡ(ಟ್ರಾಮಾ ಸೆಂಟರ್ ಮತ್ತು ಎಮರ್ಜೆನ್ಸಿ ಮೆಡಿಸೀನ್) ಉದ್ಘಾಟಿಸಿದ ಅವರು, ಬಿ.ಎಲ್.ಡಿ.ಇ ಸಂಸ್ಥೆಯನ್ನು ಕಟ್ಟಿ […]

ಗುಮ್ಮಟ ನಗರಿಯ ಐತಿಹಾಸಿಕ ತಾಜಬಾವಡಿ ಸುತ್ತಲಿನ ಅತಿಕ್ರಮಣ ತೆರವು

ವಿಜಯಪುರ: ಐತಿಹಾಸಿಕ ವಿಜಯಪುರ ನಗರವನ್ನು ಅಂತಾರಾಷ್ಟ್ರೀಯ ಮಟ್ಟದ ಪ್ರವಾಸಿ ತಾಣವಾಗಿ ಅಭಿವೃದ್ದಿ ಪಡಿಸುವ ನಿಟ್ಟಿನಲ್ಲಿ ತಾಜಬಾವಡಿ ಸುತ್ತಲಿನ ಪ್ರದೇಶದ ಅತಿಕ್ರಮಣವನ್ನು ಮಹಾನಗರ ಪಾಲಿಕೆ ವತಿಯಿಂದ ತೆರವುಗೊಳಿಸಲಾಯಿತು. ಐತಿಹಾಸಿಕ ತಾಜಬಾವಡಿ ಹತ್ತಿರದ ಸುತ್ತಮುತ್ತಲಿನ ಸಾರ್ವಜನಿಕ ರಸ್ತೆ, ಸರ್ಕಾರಿ ಜಾಗೆ ಮೆಲೆ ಅನಧಿಕೃತವಾಗಿ ಒತ್ತು ಮಾಡಿ ನಿರ್ಮಿಸಿದ ಕಟ್ಟಡಗಳ ಭಾಗ- ರಚನೆಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಮಹಾನಗರ ಪಾಲಿಕೆ ವತಿಯಿಂದ ಶುಕ್ರವಾರ ಕೈಗೊಳ್ಳಲಾಯಿತು. ಅನಧಿಕೃತವಾಗಿ ಒತ್ತುವರಿ ಮಾಡಿ ನಿರ್ಮಿಸಿದ ಕಟ್ಟಡಗಳ ಭಾಗ-ರಚನೆಗಳನ್ನು ತೆರವುಗೊಳಿಸಿ ಸಾರ್ವಜನಿಕ ಹಿತದೃಷ್ಟಿಯಿಂದ ರಸ್ತೆ ಉನ್ನತೀಕರಿಸುವ ಕಾರ್ಯ ಕೈಗೊಳ್ಳುವುದು […]

ಹೂಗಾರ ನಿಗಮಕ್ಕೆ ರೂ. 100 ಕೋ. ಅನುದಾನ ನೀಡಿ: ಡಾ. ಮಹಾದೇವ ಹೂಗಾರ

ವಿಜಯಪುರ: ಹೂಗಾರ ಸಮಾಜದ ಅಭಿವೃದ್ಧಿಗೆ ರೂ. 1೦೦ ಕೋ. ಹಣ ಮೀಸಲಿಡಬೇಕು.  ಕರ್ನಾಟಕದ ಪೂಜಾರ, ಗುರವ, ಜೀರ, ಮಾಲಗಾರ, ಹೂಗಾರ ಅಭಿವೃದ್ಧಿ ನಿಗಮಕ್ಕೆ ಹೂಗಾರ ಸಮಾಜದ ವ್ಯಕ್ತಿಯನ್ನು ಅಧ್ಯಕ್ಷರನ್ನಾಗಿ ನೇಮಿಸಬೇಕು ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಿಡಗುಂದಿಯಲ್ಲಿ ಹೂಗಾರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ತಹಶೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿದ ಸಮಾಜದ ಕಾರ್ಯಕರ್ತರು, ಹೂಗಾರ ಸಮಾಜವು ಅತ್ಯಂತ ಹಿಂದುಳಿದಿದ್ದು, ಅಭಿವೃದ್ಧಿಗೆ ಯಾರೂ ಸ್ಪಂದಿಸುತ್ತಿಲ್ಲ.  ಸಮಾಜದ ಅಭಿವೃದ್ಧಿ ನಿಗಮಕ್ಕೆ ಬಜೆಟ್‌ನಲ್ಲಿ ಅನುದಾನ ಮೀಸಲು ಇಡದೆ ನಮ್ಮ […]

ಪ್ರಾಥಮಿಕ, ಪ್ರೌಢ ಶಾಲೆಗಳ ಶಿಕ್ಷಕರ ವರ್ಗಾವಣೆ ಕೌನ್ಸಲಿಂಗ್: ಜಿ. ಪಂ. ಸಿಇಓ ರಿಷಿ ಆನಂದ ಪರಿಶೀಲನೆ

ವಿಜಯಪುರ: ಕೌನ್ಸಲಿಂಗ್ ಪ್ರಕ್ರಿಯೆ ಮೂಲಕ ನಾನಾ ಪ್ರಾಧಾನ್ಯತೆಗಳಡಿಯಲ್ಲಿ ತಮಗೆ ಅನುಕೂಲವಾಗುವ ಸ್ಥಳಗಳಲ್ಲಿ ವರ್ಗಾವಣೆ ಪಡೆಯುವ ಶಿಕ್ಷಕರು ಸಂತೃಪ್ತಿಯಿಂದ ಬೋಧನಾ ಕಾರ್ಯವನ್ನು ನಿರ್ವಹಿಸಿ ಇಲಾಖೆಯ ಗುರಿ ಉದ್ದೇಶಗಳ ಸಫಲತೆಗೆ ಹೆಚ್ಚು ಪರಿಶ್ರಮವಹಿಸಬೇಕು ಎಂದು ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಹೇಳಿದ್ದಾರೆ.   ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ನಡೆಯುತ್ತಿರುವ 2024-25ನೇ ವರ್ಷದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್‌ನಲ್ಲಿ ಭಾಗವಹಿಸಿರುವ ಶಿಕ್ಷಕರು ಆನ್-ಲೈನ್ ಪ್ರಕ್ರಿಯೆ ಮೂಲಕ ಸ್ಥಳ ಆಯ್ಕೆ ಮಾಡಿಕೊಳ್ಳುವ […]

ಸರಕಾರಿ ಕಾರ್ಯಕ್ರಮಗಳಲ್ಲಿ ಹಾರ, ಶಾಲು, ತುರಾಯಿ ಸನ್ಮಾನ ಕಡ್ಡಾಯ ನಿಷೇಧ- ತಪ್ಪಿದರೆ ಶಿಸ್ತು ಕ್ರಮ ಡಿಸಿ ಟಿ. ಭೂಬಾಲನ್

ವಿಜಯಪುರ: ಯಾವುದೇ ಸರಕಾರಿ ಸಮಾರಂಭಗಳಲ್ಲಿ ಹಾರ, ಶಾಲು ಮತ್ತು ತುರಾಯಿ ಇತ್ಯಾದಿ ವಸ್ತುಗಳಿಂದ ಸನ್ಮಾನ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಿರುವುದರಿಂದ ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.  ಈ ಆದೇಶ ಉಲ್ಲಂಘಿಸುವ ಅಧಿಕಾರಿಗಳ ವಿರುದ್ಧ ಕೆ. ಸಿ. ಎಸ್. ಆರ್. 1957ರ ಅನ್ವಯ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಅಡಿಯಲ್ಲಿ ಶಾಲಾ ಶೈಕ್ಷಣಿಕ ಕಾರ್ಯಕ್ರಮಗಳಲ್ಲಿ ಮತ್ತು ಇತರೆ ಸರಕಾರಿ ಸಮಾರಂಭಗಳಲ್ಲಿ […]