ಮುಂದಿನ ವರ್ಷ ವಿಜಯಪುರ ಮೇಯರ್, ಉಪಮೇಯರ್ ಚುನಾವಣೆ- ದಿನಾಂಕ ಯಾವುದು ಗೊತ್ತಾ?

ವಿಜಯಪುರ: ಬಹುನಿರೀಕ್ಷಿತ ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಚುನಾವಣೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ.  ಕಾರ್ಪೋರೇಟರ್ ಗಳಾಗಿ ಆಯ್ಕೆಯಾಗಿ ಒಂದು ವರ್ಷ ಎರಡು ತಿಂಗಳ ನಂತರ ಮೇಯರ್ ಮತ್ತು ಉಪಮೇಯರ್ ಚುನಾವಣೆ ದಿನಾಂಕ ನಿಗದಿ ಮಾಡಲಾಗಿದೆ. ಈ ಹಿಂದೆ ಮೂರ್ನಾಲ್ಕು ಬಾರಿ ಚುನಾವಣೆ ದಿನಾಂಕ ನಿಗದಿಯಾಗಿತ್ತು.  ಆದರೆ, ನಾನಾ ಕಾರ್ಪೋರೇಟರ್ ಗಳು ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ನಿಗದಿಯಾಗಿರುವ ಮೀಸಲಾತಿ ಪ್ರಶ್ನಿಸಿ ಕಲಬುರಗಿ ಹೈಕೋರ್ಟ್ ಮೊರೆ ಹೋಗಿದ್ದರು.  ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ […]

ಭೀಮಾ ತೀರದ ಚಡಚಣ ಪ. ಪಂ. ಚುನಾವಣೆ- ಶೇ. 73.93 ಮತದಾನ- ಡಿ. 30 ರಂದು ಶನಿವಾರ ಬೆಳಿಗ್ಗೆ 8.30ರೊಳಗೆ ಎಲ್ಲ ಫಲಿತಾಂಶ ಪ್ರಕಟ ನಿರೀಕ್ಷೆ

ವಿಜಯಪುರ: ಜಿಲ್ಲೆಯ ಚಡಚಣ ಪಟ್ಟಣ ಪಂಚಾಯಿತಿಗೆ ನಡೆದ ಚುನಾವಣೆಯಲ್ಲಿ ಶೇ. 73.93 ರಷ್ಟು ಜನರು ತಮ್ಮ ಹಕ್ಕು ಚಲಾಯಿಸಿದ್ದು, ಶಾಂತಿಯುತ ಮತದಾನ ನಡೆದಿದೆ. ಚಡಚಣ ಪಟ್ಟಣ ಪಂಚಾಯಿಯ 16 ವಾರ್ಡುಗಳಿಗೆ ಚುನಾವಣೆ ನಡೆಯುತ್ತಿದ್ದು, 41 ಅಭ್ಯರ್ಥಿಗಳು ಕಣದಲ್ಲಿದ್ದಾರೆ.  ಬೆಳಿಗ್ಗೆಯಿಂದಲೇ ಮತದಾರರು ಉತ್ಸಾಹದಿಂದ ಮತಗಟ್ಟೆಗಳಿಗೆ ತೆರಳಿ ತಮ್ಮ ಹಕ್ಕು ಚಲಾಯಿಸಿದರು. ಒಟ್ಟು 16080 ಮತದಾರಲ್ಲಿ 11888 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.  ಇವರಲ್ಲಿ ಒಟ್ಟು 8062 ಪುರುಷರಲ್ಲಿ 6020 ಮತ್ತು 8018 ಮಹಿಳೆಯರಲ್ಲಿ 5868 ಮತದಾರರು ತಮ್ಮ ಹಕ್ಕು […]

ಇಂಡಿ ನೂತನ ಜಿಲ್ಲೆಯಾಗಲು ಕಾಲ ಇನ್ನೂ ಪಕ್ವವಾಗಿಲ್ಲ- ಡಿ. 29ರ ಸಭೆ ರದ್ದು ಪಡಿಸಬೇಕು- ಮಾಜಿ ಎಂಎಲ್ಸಿ ಅರುಣ ಶಹಾಪುರ

ವಿಜಯಪುರ: ಇಂಡಿ ನೂತನ ಜಿಲ್ಲೆಯಾಗಲು ಕಾಲ ಇನ್ನೂ ಪಕ್ವವಾಗಿಲ್ಲ.  ಹೀಗಾಗಿ ಡಿಸೆಂಬರ್ 29 ರಂದು ಈ ಕುರಿತು ಕರೆಯಲಾದ ಸಭೆಯನ್ನು ರದ್ದು ಪಡಿಸಬೇಕು ಎಂದು ವಿಧಾನ ಪರಿಷತ ಮಾಜಿ ಸದಸ್ಯ ಅರುಣ ಶಹಾಪುರ ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಡಿ ನೂತನ ಜಿಲ್ಲೆ ಮಾಡುವ ಕುರಿತು ಜನಾಭಿಪ್ರಾಯ ಸಂಗ್ರಹಿಸಲು ಸಿಂದಗಿ ತಹಸೀಲ್ದಾರರು ಡಿಸೆಂಬರ್ 29 ರಂದು ಸಭೆ ಕರೆದಿದ್ದಾರೆ.  ಇದು ಸರಿಯಲ್ಲ.  ಸರಕಾರ ವಿಜಯಪುರ ಜಿಲ್ಲೆಯನ್ನು ವಿಭಜಿಸುವ ಪ್ರಸ್ತಾಪ ಹೊಂದಿದೆಯೇ ಎಂಬುದನ್ನು ಸರಕಾರ ಸ್ಪಷ್ಟಪಡಿಸಬೇಕು ಎಂದು […]

ಭ್ರಷ್ಚಾಚಾರ ಆರೋಪ- ಶಾಸಕರ ವಿಚಾರಣೆ ನಡೆಸಬೇಕು- ಬಿಜೆಪಿ ನಾಯಕರ ಮೌನ, ಸಮ್ಮತಿ ಲಕ್ಷಣಂ ಎಂಬಂತಿದೆ- ಎಸ್. ಎಂ. ಪಾಟೀಲ ಗಣಿಹಾರ

ವಿಜಯಪುರ: ಬಿಜೆಪಿ ಸರಕಾರದ ಅವಧಿಯಲ್ಲಿ ಕೊರೊನಾ ನಿರ್ವಹಣೆಯಲ್ಲಿ ರೂ. 40 ಸಾವಿರ ಕೋ. ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ವಿಚಾರಣೆ ನಡೆಸಿ ಮತ್ತಷ್ಟು ಸತ್ಯಾಂಶ ಹೊರಬರಲು ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ಎಸ್. ಎಂ. ಪಾಟೀಲ ಗಣಿಹಾರ ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯತ್ನಾಳ ಅವರ ಹೇಳಿಕೆಯನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಬೇಕು.  ಈ ಕುರಿತು ಯತ್ನಾಳ ಅವರನ್ನು ವಿಚಾರಣೆ ನಡೆಸಿದರೆ ಮತ್ತಷ್ಟು ಸತ್ಯಾಂಶ ಹೊರಬರಲಿದೆ.  ಹೀಗಾಗಿ […]

ರಾತ್ರಿಯಿಡಿ ಡ್ಯೂಟಿ- ನಸುಕಿನ ಜಾವ 21 ಕಿ. ಮೀ. ಓಟದಲ್ಲಿ ಪಾಲ್ಗೊಂಡ ಡಿಆರ್ ಪೊಲೀಸ್ ಪೇದೆ ಭೀಮಾಶಂಕರ ಮಾಡಗ್ಯಾಳ- ಇವರ ಕ್ರೀಡಾಸ್ಪೂರ್ತಿ ಇತರರಿಗೆ ಮಾದರಿ

ವಿಜಯಪುರ: ರಾತ್ರಿಯಿಡಿ ಕರ್ತವ್ಯ ನಿರ್ವಹಿಸುವ ಜೊತೆಗೆ ನಸುಕಿನ ಜಾವ ನಡೆದ ವೃಕ್ಷೊಥಾನ್ ಹೆರಿಟೇಜ್ ರನ್-2023ರ 21 ಕಿ. ಮೀ. ಓಟದಲ್ಲಿ ಪಾಲ್ಗೋಂಡ ಜಿಲ್ಲಾ ಮೀಸಲು ಪೊಲೀಸ್ ಪಡೆಯ ಪೇದೆಯೊಬ್ಬರು ಕ್ರೀಡಾಭಿಮಾನ ಮೆರೆದಿದ್ದಾರೆ. ಹಳಗುಣಕಿ ಗ್ರಾಮದ ಮತ್ತು ವಿಜಯಪುರ ಮೀಸಲು ಪಡೆ ಪೊಲೀಸ್ ಪೇದೆಯಾಗಿರುವ ಭೀಮಾಶಂಕರ ಮಾಡಗ್ಯಾಳ(38) ಡಿಸೆಂಬರ್ 23ರಂದ ರಾತ್ರಿಯಿಡೀ ಕರ್ತವ್ಯ ನಿರ್ವಹಿಸಿದ್ದರು. ಅಲ್ಲದೇ, ಮರುದಿನ ಡಿಸೆಂಬರ್ 24 ರಂದು ರವಿವಾರ ಬೆಳಿಗ್ಗೆ 6 ಗಂಟೆಗೆ ಪ್ರಾರಂಭವಾದ 21 ಕಿ. ಮೀ. ಮ್ಯಾರಾಥಾನ್ ಓಟದಲ್ಲಿ ಪಾಲ್ಗೋಂಡಿದ್ದಾರೆ. ಅಷ್ಟೇ […]

ಲೋಕಸಭೆ ಚುನಾವಣೆಗೆ ಟಿಕೇಟ್ ನೀಡಿ- ಸಚಿವ ಸತೀಶ ಜಾರಕಿಹೊಳಿಗೆ ಅರ್ಜಿ ಸಲ್ಲಿಸಿದ ಅರ್ಜುನ ರಾಠೋಡ

ವಿಜಯಪುರ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಆಗ್ರಹಿಸಿ ಜಿ. ಪಂ. ಮಾಜಿ ಅಧ್ಯಕ್ಷ ಅರ್ಜುನ ರಾಠೋಡ ಮನವಿ ಪತ್ರ ಸಲ್ಲಿಸಿದ್ದಾರೆ.  ವಿಜಯಪುರಕ್ಕೆ ಭೇಟಿ ನೀಡಿದ್ದ ಸಚಿವ ಸತೀಶ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ ಅರ್ಜುನ ರಾಠೋಡ, ಕಳೆದ ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದೇನೆ.  ಈವರೆಗೆ ನಡೆದ ಎಲ್ಲ ವಿಧಾನ ಸಭೆ ಮತ್ತು ವಿಧಾನ ಪರಿಷತ ಮತ್ತು ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸಿದ್ದೇನೆ.  ಅಷ್ಟೇ ಅಲ್ಲ, ಪಕ್ಷದ […]

ಸಚಿವ ಸತೀಶ ಜಾರಕಿಹೊಳಿ ಅವರಿಂದ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ- ಶೀಘ್ರವೇ ವಿಮಾನಗಳ ಹಾರಾಟದ ಭರವಸೆ

ವಿಜಯಪುರ: ನಗರದ ಹೊರವಲಯದಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಸೋಮವಾರ ಲೋಕೋಪಯೋಗಿ ಖಾತೆ ಸಚಿವರಾದ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿ  ಟರ್ಮಿನಲ್ ಕಟ್ಟಡ, ನಿಲ್ದಾಣದ ರನವೇ, ಟ್ಯಾಕ್ಸಿ ವೇ, ಬ್ಯಾಗೇಜ್ ಹ್ಯಾಂಡಲಿಂಗ್ ವ್ಯವಸ್ಥೆ, ಸೆಕ್ಯುರಿಟಿ ಸ್ಕ್ಯಾನರ್  ಸೇರಿದಂತೆ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿ, ಭದ್ರತಾ ಉಪಕರಣಳು ಸೇರಿದಂತೆ ಬಾಕಿ ಕಾಮಗಾರಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಡರು.  ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಜಯಪುರ ವಿಮಾನ ನಿಲ್ದಾಣ ಮೇಲ್ದರ್ಜೆಗೇರಿಸುವುದನ್ನು ಒಳಗೊಂಡಂತೆ ಎಲ್ಲ ಭೌತಿಕ ಕಾಮಗಾರಿಗಳು ಶೇ.90ರಷ್ಟು […]

ವೀರಶೈವ ಮಹಾಸಭೆ ಬಿ ಎಸ್ ವೈ ಅಂದರೆ ಭೀಮಣ್ಣ, ಶಾಮನೂರು, ಯಡಿಯೂರಪ್ಪ ಆಗಿದೆ- ಕೊರೊನಾ ಸಂದರ್ಭದಲ್ಲಿ ರೂ 40000 ಕೋ. ಭ್ರಷ್ಟಾಚಾರ ನಡೆದಿದೆ- ಯತ್ನಾಳ ಆರೋಪ

ವಿಜಯಪುರ: ಅಖಿಲ ಭಾರತ ವೀರಶೈವ ಮಹಾಸಭೆ ಬಿ ಎಸ್ ವೈ ಅಂದರೆ ಭೀಮಣ್ಣ ಖಂಡ್ರೆ, ಶಾಮನೂರು ಶಿವಶಂಕರಪ್ಪ ಮತ್ತು ಬಿ. ಎಸ್. ಯಡಿಯೂರಪ್ಪ ಅವರ ಕುಟುಂಬದಂತಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕಾಣಿಸಿಕೊಂಡ ಕೊರೊನಾ ಚಿಕಿತ್ಸೆ ವಿಚಾರದಲ್ಲಿ ರೂ. 40 ಸಾವಿರ ಕೋಟಿ ಭ್ರಷ್ಟಾಚಾರ ನಡೆದಿದೆ ಎಂದು ಗಂಭೀರ ಆರೋಪ ಮಾಡಿದರು. ವೀರಶೈವ ಮಹಾಸಭೆ ಮಹಾಧಿವೇಶನ ವಿಚಾರ ದಾವಣಗೆರೆಯಲ್ಲಿ […]

ಗೃಹಲಕ್ಷ್ಮಿ ಯೋಜನೆಯ ತಾಂತ್ರಿಕ ತೊಂದರೆ ನಿವಾರಣೆಗೆ ಜಿಲ್ಲೆಯ 211 ಗ್ರಾ.ಪಂ.ಗಳಲ್ಲಿ ಕ್ಯಾಂಪ್ಗಳ ಆಯೋಜನೆ- ಸಿಇಓ ರಾಹುಲ್ ಶಿಂಧೆ

ವಿಜಯಪುರ: ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮತ್ತು ಮಹಿಳೆಯರನ್ನು ಸಬಲೀಕರಣಗೊಳಿಸುವ ಗುರಿ ಹೊಂದಿರುವ ಗೃಹಲಕ್ಷ್ಮಿ ಯೋಜನೆಗೆ ದಿನಾಂಕ:19-07-2023 ರಂದು ರಾಜ್ಯಾದ್ಯಂತ ಚಾಲನೆ ನೀಡಲಾಗಿದ್ದು, ಜಿಲ್ಲೆಯ ಕೆಲವು ಫಲಾನುಭವಿಗಳಿಗೆ ತಾಂತ್ರಿಕ ತೊಂದರೆಗಳಿಂದ ಖಾತೆಗಳಿಗೆ ಹಣ ಜಮಾ ಆಗದೇ ಇರುವುದರಿಂದ  ಸಮಸ್ಯೆ ನಿವಾರಣೆಗಾಗಿ ಡಿ.27 ರಿಂದ 29ರವರೆಗೆ ಜಿಲ್ಲೆಯ 211 ಗ್ರಾಮ ಪಂಚಾಯತ್‍ಗಳಲ್ಲಿ ಕ್ಯಾಂಪ್‍ಗಳನ್ನು ಆಯೋಜಿಸಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಮನವಿ ಮಾಡಿದ್ದಾರೆ. ಜಿಲ್ಲೆಯಲ್ಲಿ 1999 ಫಲಾನುಭವಿಗಳ ಇ-ಕೆವೈಸಿ […]

ರಾಜ್ಯದ ಎಲ್ಲಡೆ ಮಾದಿಗ ಮುನ್ನಡೆ ಸಮಾವೇಶ- ಕಾಂಗ್ರೆಸ್ ವಿರುದ್ಧ ಮಾಜಿ ಡಿಸಿಎಂ ಗೋವಿಂದ ಕಾರಜೋಳ

ವಿಜಯಪುರ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ಮಾದಿಗರಿಗೆ ಮಿಸಲಾತಿ ಕೊಡಿಸುವ ಮತ್ತು ಸಾಮಾಜಿಕ ನ್ಯಾಯ ಕೊಡಿಸುವ ಹೋರಾಟದಲ್ಲಿ ನಾನು ನಿಮ್ಮ ಜೊತೆಗಿದ್ದೇನೆ ಎಂದು ನಮ್ಮನ್ನು ಅಪ್ಪಿಕೊಂಡಿದ್ದಾರೆ.  ಆದರೆ, ಕಾಂಗ್ರೆಸ್ ಮುಖ್ಯಮಂತ್ರಿ ನೀವು ನಮ್ಮವರು ಎಂದು ಮಾದಿಗರನ್ನು ಎಂದಿಗೂ ಅಪ್ಪಿಕೊಂಡು ಮಾತನಾಡಿಲ್ಲ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಪರೋಕ್ಷವಾಗಿ ಸಿದ್ದರಾಮಯ್ಯ ಅವರನ್ನು ಟೀಕಿಸಿದ್ದಾರೆ.  ನಗರದ ಅಥಣಿ ರಸ್ತೆಯ ಇಟಗಿ ಪೆಟ್ರೋಲ್ ಪಂಪ್ ಬಳಿ ಇರುವ ಸಾಯಿ ಗಾರ್ಡನ್‌ನಲ್ಲಿ ನಡೆದ ರಾಜ್ಯದ ಎಲ್ಲಡೆ ಮಾದಿಗ ಮುನ್ನಡೆ ಸಮಾವೇಶದಲ್ಲಿ […]