ಎವಿಎಸ್ ಆಯುರ್ವೇದ ಕಾಲೇಜು ಕೊರೊನಾ ಸಮಯದಲ್ಲಿ ಗಮನಾರ್ಹ ಕೆಲಸ ಮಾಡಿದೆ- ಸುನೀಲಗೌಡ ಪಾಟೀಲ

ವಿಜಯಪುರ: ಎವಿಎಸ್ ಆಯುರ್ವೇದ ವೈದ್ಯ ಪದ್ಧತಿ ಕೊರೊನಾ ಸಂಕಷ್ಟ ಸಮಯದಲ್ಲಿ ರೋಗ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಆರೋಗ್ಯವಾಗಿರಲು ಬಹಳಷ್ಟು ಜನರಿಗೆ ನೆರವಾಗಿದೆ ಎಂದು ವಿಧಾನ ಪರಿಷತ ಸದಸ್ಯ ಮತ್ತು ಬಿ.ಎಲ್.ಡಿ.ಇ ಸಂಸ್ಥೆಯ ನಿರ್ದೇಶಕ ಸುನೀಲಗೌಡ ಪಾಟೀಲ ಹೇಳಿದ್ದಾರೆ. ಇಂದು ಶನಿವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎವಿಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ 2017ನೇ ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಅಂಗವಾಗಿ ನಡೆದ ಘಟಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. […]

ಪ್ರತಿಪಕ್ಷದ ನಾಯಕ ರಾಜ್ಯಾಧ್ಯಕ್ಷನ ರೀತಿಯಲ್ಲಿ ಅಧಿವೇಶನದಲ್ಲಿ ಸಮರ್ಥವಾಗಿ ಮಾತನಾಡಿದ್ದೇನೆ ಎಂದು ಕಾಂಗ್ರೆಸ್ಸಿಗರು ಹೇಳುತ್ತಿದ್ದಾರೆ- ಯತ್ನಾಳ

ವಿಜಯಪುರ: ಬೆಳಗಾವಿ ಅಧಿವೇಶನದಲ್ಲಿ ಪ್ರತಿಪಕ್ಷದ ನಾಯಕ, ಅಧ್ಯಕ್ಷನಾಗಿ ಮಾಡಬೇಕಾದ ಕೆಲಸವನ್ನು ನಾನು ಸಮರ್ಥವಾಗಿ ನಿಭಾಯಿಸಿದ್ದೇನೆ.  ಇದನ್ನು ಕಾಂಗ್ರೆಸ್ ಮುಖಂಡರೇ ಹೇಳುತ್ತಿದ್ದಾರೆ.  ಈ ಮೂಲಕ ನಾನು ಉತ್ತರ ಕರ್ನಾಟಕದ ನಾಯಕರೂ ಸಮರ್ಥವಾಗಿ ಕೆಲಸ ಮಾಡುತ್ತಾರೆ ಎಂಬುದನ್ನು ತೋರಿಸಿದ್ದೇನೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.  ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಚರ್ಚೆ ನಡೆದಿರುವುದು ಸಮಾಧಾನ ತಂದಿದೆ.  ಮೂರು ದಿನಗಳ ಕಾಲ ನಡೆದ ಸುದೀರ್ಘ ಚರ್ಚೆಯ ಬಳಿಕ ಮುಖ್ಯಮಂತ್ರಿ […]

ಲಿಂಗತ್ವ ಅಲ್ಪಸಂಖ್ಯಾತರಿಗೆ ಗುರುತಿನ ಚೀಟಿ ವಿತರಣೆ- ಮುಖ್ಯವಾಹಿನಿಯಲ್ಲಿ ತೊಡಗಿಸಿಕೊಳ್ಳಲು ಸಕಲ ನೆರವು- ಡಿಸಿ ಟಿ. ಭೂಬಾಲನ

ವಿಜಯಪುರ: ನ್ಯಾಶನಲ್ ಪೋರ್ಟಲ್‌ನಲ್ಲಿ ನೊಂದಣಿಯಾದ ವಿಜಯಪುರ ಜಿಲ್ಲೆಯ ಲಿಂಗತ್ವ ಅಲ್ಪಸಂಖ್ಯಾತರಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಗುರುತಿನ ಚೀಟಿ ವಿತರಿಸಿದರು. ನ್ಯಾಶನಲ್ ಪೋರ್ಟಲ್‌ನಲ್ಲಿ ನೊಂದಣಿ ಮಾಡಿಕೊಂಡ ಜಿಲ್ಲೆಯ 100 ಲಿಂಗತ್ವ ಅಲ್ಪಸಂಖ್ಯಾತರಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುತಿನ ಚೀಟಿಯನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಮಾತನಾಡಿ, ಲಿಂಗತ್ವ ಅಲ್ಪಸಂಖ್ಯಾತ ಸಮುದಾಯ ಮುಖ್ಯವಾಹಿನಿಯಲ್ಲಿ ತಮ್ಮ ಬದುಕು ಕಟ್ಟಿಕೊಳ್ಳಲು ಜಿಲ್ಲಾಡಳಿತದಿಂದ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದ ಅವರು, ಮಹಾನಗರ ಪಾಲಿಕೆಯಿಂದ ಲಿಂಗತ್ವ ಅಲ್ಪಸಂಖ್ಯಾತರಿಗೆ ವಸತಿ ಕಲ್ಪಿಸುವ ಕುರಿತು ಸಹ ಪರಿಶೀಲನೆ ನಡೆಸಿ, […]

ಡಿ.16, 17 ರಂದು ಕರ್ನಾಟಕ ಲೋಕಸೇವಾ ಆಯೋಗದ ಸ್ಪರ್ಧಾತ್ಮಕ ಪರೀಕ್ಷೆ- ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಎಡಿಸಿ ಸೂಚನೆ

ವಿಜಯಪುರ: ಕರ್ನಾಟಕ ಲೋಕಸೇವಾ ಆಯೋಗದಿಂದ ಕರ್ನಾಟಕ ರಾಜ್ಯ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಕಿರಿಯ ಲೆಕ್ಕ ಸಹಾಯಕರ ಸಿ ಗ್ರೂಪ್ ಹುದ್ದೆಗಳ ನೇಮಕಾತಿಗೆ ಡಿ. 16 ಮತ್ತು 17 ರಂದು ವಿಜಯಪುರದ ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ಜರುಗಲಿದ್ದು, ಪರೀಕ್ಷೆಯಗಳು ವ್ಯವಸ್ಥಿತವಾಗಿ ನಡೆಸುವಂತೆ ನೋಡಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,  ಡಿ. 16 ರಂದು ಸರkeರಿ ಬಾಲಕರ […]

ಅತಿಥಿ ಉಪನ್ಯಾಸಕರ ಸಮಸ್ಯೆಗೆ ಸ್ಪಂದಿಸಲು ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರಿಂದ ಪ್ರತಿಭಟನೆ

ವಿಜಯಪುರ: ರಾಜ್ಯ ಸರಕಾರ ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಿ, ವಿದ್ಯಾರ್ಥಿಗಳ ತರಗತಿಗಳು ಸುಗಮವಾಗಿ ನಡೆಸುವಂತೆ ಆಗ್ರಹಿಸಿ ಬೃಹತ್ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.  ಈ ಸಂದರ್ಭದಲ್ಲಿ ಮಾತನಾಡಿದ ಎಬಿವಿಪಿ ಪ್ರಾಂತ ಕಾರ್ಯದರ್ಶಿ ಸಚೀನ ಕುಳಗೇರಿ, ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದ್ದಾರೆ.  ಇದರಿಂದಾಗಿ ಪದವಿ ಕಾಲೇಜುಗಳಲ್ಲಿ ಸರಿಯಾಗಿ ತರಗತಿಗಳು ನಡೆಯದೆ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಹಿನ್ನಡೆಯಾಗುತ್ತಿದೆ.  […]

ದಿಂಡವಾರ ಗ್ರಾಮದಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಜನಜಾಗೃತಿ ಕಾರ್ಯಕ್ರಮ

ವಿಜಯಪುರ: ರಾಷ್ಟ್ರೀಯ ತಂಬಾಕು ನಿಯಂತ್ರಣ ಜನಜಾಗೃತಿ ಕಾರ್ಯಕ್ರಮದಡಿ ಬಸವನ ಬಾಗೇವಾಡಿ ತಾಲೂಕಿನ ದಿಂಡವಾರ ಗ್ರಾಮದಲ್ಲಿ ಅಂಗಡಿಗಳಿಗೆ ತೆರಳಿ ಜನಜಾಗೃತಿ ಮೂಡಿಸಲಾಯಿತು.  ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಶರಣಬಸು ಗುದ್ದಿ ನೇತೃತ್ವದಲ್ಲಿ ಎಸ್. ಡಿ. ಎಂ. ಸಿ ಅಧ್ಯಕ್ಷರು, ಶಾಲೆಯ ಮುಖ್ಯ ಶಿಕ್ಷಕರು ದಸ್ತಗೀರಸಾಬ ವಾಲಿಕಾರ ಮತ್ತೀತತರು ಈ ಜಾಗೃತಿ ಮೂಡಿಸಿದರು. ತಂಬಾಕು ಉತ್ಪನ್ನಗಳ ಬಳಕೆಯಿಂದ ಜನಸಾಮಾನ್ಯರಿಗೆ ಹಲವಾರು ರೀತಿಯ ಗಂಭೀರ ಸ್ವರೂಪದ ಕಾಯಿಲೆಗಳು ಬರುತ್ತbz.  ಯುವಜನತೆ ಹೆಚ್ಚಾಗಿ ತಂಬಾಕು ವ್ಯಸನಕ್ಕೆ ದಾಸರಾಗುತ್ತಿರುವುದರಿಂದ  ತಂಬಾಕು […]

ಶಾಸಕ ಯತ್ನಾಳ ಜನ್ಮ ದಿನದ ಅಂಗವಾಗಿ ಅನಾಥ ಆಶ್ರಮ ಮಕ್ಕಳಿಗೆ ಅನ್ನ ಪ್ರಸಾದ ವ್ಯವಸ್ಥೆ

ವಿಜಯಪುರ: ನಗರ ಶಾಸಕ ಬಸನಗೌಡ ರಾ. ಪಾಟೀಲ ಯತ್ನಾಳ ಅವರ 61ನೇ ಜನ್ಮ ದಿನದ ಅಂಗವಾಗಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ವಿಕ್ರಮ ಗಾಯಕವಾಡ ಅವರು ಬಸವನಗರದಲ್ಲಿರುವ ಅನಾಥಾಶ್ರಮದ ಮಕ್ಕಳಿಗೆ ಅನ್ನ ಪ್ರಸಾದ ವ್ಯವಸ್ಥೆ ಮಾಡಿದರು. ನಂತರ ಮಾತನಾಡಿದ ಅವರು, ಅಭಿವೃದ್ಧಿ ಹರಿಕಾರರಾದ ಹೆಮ್ಮೆಯ ಶಾಸಕರ ಜನ್ಮದಿವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಅನಾಥಾಶ್ರಮದ ಮಕ್ಕಳೊಂದಿಗೆ ಕೇಕ್ ಕತ್ತರಿಸಿ, ಪ್ರಸಾದ ವ್ಯವಸ್ಥೆ ಮಾಡಲಾಗಿದೆ.  ನಮ್ಮ ನಾಯಕರಿಗೆ ಉನ್ನತ ಹುದ್ದೆ ದೊರಕಿ, ನಾಡಿನ ಅಭಿವೃದ್ಧಿಗೆ ಶ್ರಮಿಸಲು ಅವಕಾಶ ಸಿಗಲಿ ಎಂದು […]

ಕಾರ್ಖಾನೆಗಳಲ್ಲಿ ಎಲೆಕ್ಟ್ರಾನಿಕ್ ತೂಕ ಮಷಿನ್ ಅಳವಡಿಕೆ ಕಡ್ಡಾಯ- ಸಚಿವ ಕೆ. ಎಚ್. ಮುನಿಯಪ್ಪ

ಬೆಳಗಾವಿ: ರೈತರಿಗೆ ತೂಕದಲ್ಲಿ ಮೋಸ ಆಗದಂತೆ ತಡೆಯಲು ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಎಲೆಕ್ಟ್ರಾನಿಕ್ ಆಧಾರಿತ ತೂಕ ಮಷಿನ್ ಅಳವಡಿಸಲು ಕ್ರಮ ಕೈಗೊಳ್ಳಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಚ್. ಮುನಿಯಪ್ಪ ಕಾನೂನು ಮಾಪನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.  ಬೆಳಗಾವಿಯ ಸುವರ್ಣ ಸೌಧದಲ್ಲಿ ಆಹಾರ ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೆಳಗಾವಿ ಜಿಲ್ಲೆಯ ಎಲ್ಲಾ ತಾಲೂಕಿನ ಆಯ್ದ […]

ರಾಷ್ಟ್ರೀಯ ಬಾಲ್ಯ ಸ್ವಾಸ್ಥ್ಯ ಕಾರ್ಯಕ್ರಮ ಯಶಸ್ವಿ ಅನುಷ್ಟಾನ- ಜಿಲ್ಲೆಯ ಆರ್.ಬಿ.ಎಸ್.ಕೆ ಪ್ರಗತಿ ಇತತರಿಗೆ ಮಾದರಿ- ರಾಹುಲ ಶಿಂಧೆ

ವಿಜಯಪುರ: ಜಿಲ್ಲೆಯ ಆರ್. ಬಿ. ಎಸ್. ಕೆ ಕಾರ್ಯಕ್ರಮದಲ್ಲಿ ಸಾಧಿಸಿದ ಪ್ರಗತಿ ಇತರರಿಗೆ ಮಾದರಿಯಾಗಿದೆ.  ಹೆಮ್ಮೆ ಪಡುವಂಥ ಸಾಧನೆಯಲ್ಲಿ ಭಾಗಿಯಾದ ಎಲ್ಲ ಇಲಾಖೆಯ ಅಧಿಕಾರಿಗಳ ಸಮನ್ವಯದಿಂದ ಯಶಸ್ವಿ ಅನುಷ್ಟಾನಗೊಂಡಿದೆ.  ಮುಂಬರುವ ದಿನಗಳಲ್ಲಿ ತಾವೆಲ್ಲರೂ     ಇನ್ನಷ್ಟು ಅನುಕೂಲ ಕಲ್ಪಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿಯ      ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಹೇಳಿದ್ದಾರೆ. ಡಿ. 12ರಂದು ಜಿ. ಪಂ. ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಬಾಲ್ಯ ಸ್ವಾಸ್ಥ್ಯ ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕೆ ಶ್ರಮಿಸಿದ ತಂಡದ ವೈದ್ಯಾಧಿಕಾರಿಗಳಿಗೆ, ತಾಲೂಕಾ ಆರೋಗ್ಯ […]

ವಿಜಯಪುರದಿಂದ ಕ್ಷೇತ್ರ ಮುರುಗೋಡಕ್ಕೆ ಪಾದಯಾತ್ರೆ ಹೊರಟ ಭಕ್ತರು

ವಿಜಯಪುರ: ಶ್ರೀ ಕ್ಷೇತ್ರ ಕೆಂಗೇರಿ ಮುರಗೋಡದಲ್ಲಿ ಡಿಸೆಂಬರ್ 18 ರಂದು ಶ್ರೀ ಚಿದಂಬರೇಶ್ವರ ಮಹಾಸ್ವಾಮಿಗಳ 264 ನೇ ಅವತಾರ ಜಯಂತೋತ್ಸವ ಅಂಗವಾಗಿ ಶ್ರೀ ಚಿದಂಬರೇಶ್ವರ ಕಲ್ಯಾಣ ರಥೋತ್ಸವ ವೈಭವದಿಂದ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸುಕ್ಷೇತ್ರ ಮುರಗೋಡಕ್ಕೆ ವಿಜಯಪುರದಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶ್ರೀ ಚಿದಂಬರೇಶ್ವರ ಪಾದಯಾತ್ರೆ ಮಂಡಳಿಯಿಂದ ವಿಜಯಪುರ ನಗರದ ಚಿದಂಬರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪಾದಯಾತ್ರೆ ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ರಾಘವೇಂದ್ರ ಜೋಶಿ ಸಂಕನಾಳ, ಸೇವೆಯಲ್ಲಿ ಪಾದಯಾತ್ರೆ ಸೇವೆ ದೊಡ್ಡದು.  […]