ವಿಜ್ಞಾನ ವಿಷಯದ ಫೋನ್ ಇನ್ ಕಾರ್ಯಕ್ರಮ ಯಶಸ್ವಿ- ವಿಷಯ ತಜ್ಞರಿಂದ ಪರಿಹಾರ ಕಂಡುಕೊಂಡ ವಿದ್ಯಾರ್ಥಿಗಳು

ವಿಜಯಪುರ: ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆ ವತಿಯಿಂದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ವಿಜ್ಞಾನ ವಿಷಯದ ಪೋನ್ ಇನ್ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.  ಈ ಕಾರ್ಯಕ್ರಮದಲ್ಲಿ ವಿಷಯ ತಜ್ಞರಿಂದ ವಿದ್ಯಾರ್ಥಿಗಳು ವಿಜ್ಞಾನ ವಿಷಯದ ಕುರಿತ ಕಲಿಕಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡಿದ್ದಾರೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಎನ್. ಎಚ್. ನಾಗೂರ ಅವರು ತಿಳಿಸಿದ್ದಾರೆ. ಜಿಲ್ಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ವಿಜ್ಞಾನ ವಿಷಯದ ವಿಜಯಪುರದ ಉರ್ದು ಶಿಕ್ಷಕರ ತರಬೇತಿ ಸಂಸ್ಥೆಯ ಸಭಾಭವನದಲ್ಲಿ ಸಂಜೆ 6 ರಿಂದ […]

ಮಾನವ ಹಕ್ಕುಗಳ ಪಾಲನೆ ನಾಗರಿಕರ ಹೊಣೆ- ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ

ವಿಜಯಪುರ: ಮಾನವ ಹಕ್ಕುಗಳ ಪಾಲನೆ ಮಾಡುವುದು ಪ್ರತಿಯೊಬ್ಬ ನಾಗರಿಕರ ಹೊಣೆಯಾಗಿದ್ದು, ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ಪರಿಪಾಲಿಸುವ ಜವಾಬ್ದಾರಿ ನಮ್ಮದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರು ಹೇಳಿದ್ದಾರೆ.  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆಗೆ ಚಾಲನೆ ನೀಡಿದ ಅವರು ಮಾನವ ಹಕ್ಕುಗಳ ದಿನಾಚರಣೆಯ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು. ಹಕ್ಕು ಮತ್ತು ಕರ್ತವ್ಯಗಳನ್ನು ಸರಿಯಾಗಿ ಪಾಲನೆ ಮಾಡಬೇಕು.ಮಾನವ ಹಕ್ಕುಗಳ ಪಾಲನೆ ಕುರಿತು ಮಕ್ಕಳಲ್ಲಿ ಅರಿವು ಮೂಡಿಸಬೇಕು.  ಮಾನವ ಹಕ್ಕುಗಳು ಸ್ವಾಭಾವಿಕವಾಗಿ ಪ್ರದತ್ತವಾದ […]

ಖೊಟ್ಟಿ ದಾಖಲೆ ಸೃಷ್ಠಿಸಿ ನೋಂದಣಿ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ- ಸಚಿವ ಎಂ. ಬಿ. ಪಾಟೀಲ ಖಡಕ್ ಸೂಚನೆ

ವಿಜಯಪುರ: ವಿಜಯಪುರ ನಗರ ಸೇರಿದಂತೆ ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಖೊಟ್ಟಿ ದಾಖಲೆಗಳನ್ನು ಸೃಷ್ಠಿಸಿ ಆಸ್ತಿ ನೋಂದಣಿ ಮಾಡುವ ಪ್ರಕರಣಗಳು ಕಂಡು ಬಂದಿದ್ದು ಇಂತವರ ಮೇಲೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅಧಿಕಾರಿಗಳಿಗೆ ಖಡಕ್ಕ್ಕಾಗಿ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ಕೆಲವರು ಆಧಾರ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಮೂಲಕ […]

ಹಳ್ಳಿಗಳ ಅಭಿವೃದ್ಧಿಯಲ್ಲಿ ಗ್ರಾಮಸ್ಥರ ಸಹಕಾರ ಅಗತ್ಯ- ಜಿ. ಪಂ. ಸಿಇಓ ರಾಹುಲ ಶಿಂಧೆ

ವಿಜಯಪುರ: ಗ್ರಾಮಗಳ ಅಭಿವೃದ್ಧಿಯಲ್ಲಿ ಗ್ರಾಮಸ್ಥರ ಸಹಕಾರ ಅತಿಮುಖ್ಯವಾಗಿದ್ದು, ಗ್ರಾಮಸ್ಥರು ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ಅಗತ್ಯ ಸಹಕಾರ ನೀಡುವ   ಗ್ರಾಮ ಪಂಚಾಯತಿ ಅಭಿವೃದ್ಧಿ ಕೈ ಜೋಡಿಸುವಂತೆ ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ಶಿಂಧೆ ಮನವಿ ಮಾಡಿದ್ದಾರೆ.  ಬಸವನ ಬಾಗೇವಾಡಿ ತಾಲೂಕಿನ ಕಣಕಾಲ ಮತ್ತು ಮುತ್ತಗಿ ಗ್ರಾಮಗಳಿಗೆ ಭೇಟಿ ನೀಡಿ ನಾನಾ ಯೋಜನೆಗಳ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದ ಅವರು, ಕಣಕಾಲ ಗ್ರಾಮದಲ್ಲಿ ಸರಕಾರಿ ಜಾಗ ಅತಿಕ್ರಮಣವಾಗಿರುವ ಕುರಿತು ಗ್ರಾಮಸ್ಥರೊಂದಿಗೆ ಚರ್ಚಿಸಿದರು.  ಅತೀಕ್ರಮಣವಾಗಿದೆ ಎನ್ನಲಾದ ಸ್ಥಳದಲ್ಲಿ ಹಲವಾರು ವರ್ಷಗಳಿಂದ […]

ಆಯುಷ್ ಪಂಚಕರ್ಮ ಆಸ್ಪತ್ರೆಗೆ ಭೇಟಿ ಜಿ. ಪಂ. ಸಿಇಓ ಭೇಟಿ: ಮಾದರಿ ಪಂಚಕರ್ಮ ಘಟಕವನ್ನಾಗಿಸಲು ಶ್ರಮ ವಹಿಸಿ ಕಾರ್ಯ ನಿರ್ವಹಲು ಕರೆ

ವಿಜಯಪುರ: ನಮ್ಮ ವಿಜಯಪುರದ ಆಯುಷ್ ಪಂಚಕರ್ಮ ಘಟಕವು ಇತರ ಘಟಕಗಳಿಗೆ ಮಾದರಿಯಾಗಬೇಕು ಆ ನಿಟ್ಟಿನಲ್ಲಿ ಎಲ್ಲರೂ ಹೆಚ್ಚಿನ ಶ್ರಮವಹಿಸಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಸೂಚನೆ ನೀಡಿದರು. ವಿಜಯಪುರದ ಆಯುಷ್ ಹೈಟೆಕ್ ಪಂಚಕರ್ಮ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ, ಪರಿಶೀಲನೆ ನಡೆಸಿದ ಅವರು, ಆಯುಷ್ ಘಟಕ ಕಾರ್ಯನಿರ್ವಹಿಸುತ್ತಿರುವ ಕುರಿತು ಹಾಗೂ ಈ ಘಟಕದಲ್ಲಿ ದೊರೆಯು ಸೌಲಭ್ಯಗಳ ಕುರಿತು ವಿವಿಧ ಐಇಸಿ ಚಟುವಟಿಕೆಗಳ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಘಟಕದಲ್ಲಿ […]

ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ: ಸೈನಿಕರಿಗೆ ಕೃತಜ್ಞತೆ ಸಲ್ಲಿಸಲು ಸಶಸ್ತ್ರ ಪಡೆಗಳ ಧ್ವಜ ಸದಾವಕಾಶ- ಡಿಸಿ ಟಿ. ಭೂಬಾಲನ್

ವಿಜಯಪುರ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಆಚರಿಸಲಾಯಿತು. ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಈ ಸಂದರ್ಭದಲ್ಲಿ ಸಶಸ್ತ್ರ ಪಡೆಗಳ ಸಾಂಕೇತಿಕ ಧ್ವಜ ಬಿಡುಗಡೆಗೊಳಿಸಿ, ನಂತರ ಸಾಂಕೇತಿಕವಾಗಿ ಧ್ವಜ ಸ್ವೀಕರಿಸಿ, ದೇಣಿಗೆ ನೀಡುವುದರ ಮೂಲಕ ಸಾರ್ವಜನಿಕರಿಗೆ ಧ್ವಜಗಳನ್ನು ಮಾರಾಟ ಮಾಡಿ ದೇಣಿಗೆ ಸಂಗ್ರಹಿಸುವ ಕಾರ್ಯಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು,ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯನ್ನು ದೇಶದ ಎಲ್ಲ ಭಾಗಗಳಲ್ಲಿ ಪ್ರತಿ ವರ್ಷ ಇದೇ ದಿನ ಡಿ.7ರಂದು […]

ಪಶು ಸಖಿಯರು ಸೇವಾ ಮನೋಭಾವದಿಂದ ಕಾರ್ಯನಿರ್ವಹಣೆ ಮಾಡಬೇಕು- ಜಿ. ಪಂ. ಸಿಇಓ ರಾಹುಲ ಶಿಂಧೆ

ವಿಜಯಪುರ: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ(ಡೇ-ಎನ್‌ಆರ್‌ಎಲ್‌ಎಂ) ಹಾಗೂ ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವಿಜಯಪುರ ಇವರುಗಳ ಸಹಯೋಗದೊಂದಿಗೆ ರುಡಸೆಟ್ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಆರು ದಿನಗಳ ಮೊದಲನೇ ಮಾಡ್ಯೂಲ್ ಪಶು ಸಖಿಯರ ತರಬೇತಿ ಕಾರ್ಯಾಗಾರವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ಶಿಂಧೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಆರು ದಿನಗಳ ಈ ಪಶು ಸಖಿಯರ ತರಬೇತಿ ಕಾರ್ಯಾಗಾರವು ಬಹಳ ಉಪಯುಕ್ತವಾದ ತರಬೇತಿಯಾಗಿದೆ.  ಈಗಾಗಲೇ ಕಳೆದ ಒಂದು ವರ್ಷದಿಂದ ನಮ್ಮ ಜಿಲ್ಲೆಯ ಎಲ್ಲಾ […]

ಸಿದ್ಧೇಶ್ವರ ಶ್ರೀಗಳ ಹಾಗೆ ಮಾನವ ಕುಲಕ್ಕೆ ಸ್ವಾಮಿಗಳಾಗಬೇಕು: ಪ್ರಕಾಶ ಆರ್. ಕೆ

ವಿಜಯಪುರ: ಜಾತಿಗೊಬ್ಬ ಸ್ವಾಮಿಗಳು ಆಗುವ ಬದಲು ಸಿದ್ಧೇಶ್ವರ ಶ್ರೀಗಳ ಹಾಗೆ ಮಾನವ ಕುಲಕ್ಕೆ ಸ್ವಾಮಿಗಳಾಗಬೇಕು.  ಯಾವುದೇ ಫಲಾಪೇಕ್ಷೆ, ಆಸೆ ಆಮೀಷಗಳಿಗೆ ಒಳಗಾಗದೇ ಎಲ್ಲಾ ಸಮಾಜಕ್ಕಾಗಿ ಒಳಿತನ್ನು ಬಯಸಿದ್ದವರೆಂದರೆ ನಡೆದಾಡುವ ದೇವರಾದ ನಮ್ಮ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಶ್ರೀಗಳು ಎಂದು ಗಾನಯೋಗಿ ಸಂಘದ ಮುಖಂಡ ಪ್ರಕಾಶ ಆರ್. ಕೆ ಹೇಳಿದರು. ನಗರದ ಹೊರ ವಲಯದ ಸಿಂದಗಿ ರಸ್ತೆಗೆ ಅಂಟಿಕೊಂಡಿರುವ ಬೈಪಾಸ್ ಅಂಡರ್‌ಗ್ರೌಂಡ ಗೋಡೆಗೆ ನಡೆದಾಡುವ ಶ್ರೀಗಳಾದ ಸಿದ್ಧೇಶ್ವರ ಶ್ರೀಗಳ ಛಾಯಾಚಿತ್ರವನ್ನು ಬಿಡಿಸಿ ಅವರು ಮಾತನಾಡಿದರು. ಇಡೀ ಜಗತ್ತಿನಲ್ಲಿ ಪ್ರವಚನ ಸಾರುವ […]

ಗುಮ್ಮಟ ನಗರಿಯಲ್ಲಿ ಜಿಲ್ಲಾಡಳಿತದ ವತಿಯಿಂದ ಡಾ. ಬಿ. ಆರ್. ಅಂಬೇಡ್ಕರ್ 67ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಗೌರವ ಸಮರ್ಪಣೆ

ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಪ್ರಯುಕ್ತ ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಹಾಗೂ ಜಿಪಂ ಸಿಇಒ ರಾಹುಲ್ ಶಿಂಧೆ ಅವರು ನಗರದ  ಅಂಬೇಡ್ಕರ್ ವೃತ್ತದಲ್ಲಿನ ಡಾ. ಬಿ. ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮತ್ತು ಪುಷ್ಪಾರ್ಚನೆ ಮಾಡಿ, ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಮಹಾದೇವ ಮುರಗಿ, ವಿಜಯಪುರ ಉಪ ವಿಭಾಗಾಧಿಕಾರಿ ಬಸಣೆಪ್ಪ ಕಲಶೆಟ್ಟಿ,ಸಮಾಜ ಕಲ್ಯಾಣ ಇಲಾಖೆಯ […]

ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಶಾಲೆಯಲ್ಲಿ ಕರ್ನಾಟಕ ಸಂಭ್ರಮ ಅಂಗವಾಗಿ ಚಿಗುರು ಸಾಂಸ್ಕೃತಿಕ ಕಾರ್ಯಕ್ರಮ

ವಿಜಯಪುರ: ಮಕ್ಕಳಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ ಪ್ರೊತ್ಸಾಹಿಸುವ ಅವಶ್ಯಕತೆ ಇದೆ ಎಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಅಧ್ಯಕ್ಷ ಸುರೇಶ ದೇಸಾಯಿ ಅಭಿಪ್ರಾಯಪಟ್ಟರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ವಿವೇಕನಗರದ ಶಿವಶರಣೆ ಹೆಮರೆಡ್ಡಿ ಮಲ್ಲಮ್ಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಕರ್ನಾಟಕ ಸಂಭ್ರಮ-50ರ ಅಂಗವಾಗಿ ಆಯೋಜಿಸಿದ ಚಿಗುರು ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶೈಕ್ಷಣಿಕ ಹಾಗೂ ಕ್ರೀಡೆಯ ಜೊತೆಗೆ ಮಕ್ಕಳಿಗೆ ನಮ್ಮ ಕಲೆ ಸಂಸ್ಕೃತಿ ಸಾಹಿತ್ಯವನ್ನು ಪರಿಚಯಿಸುವುದರೊಂದಿಗೆ ಅವರಲ್ಲಿ ಅಡಗಿರುವ ಕಲಾ […]