ಅಪಘಾತ ರಹಿತ ಚಾಲನೆ: ಮುಖ್ಯಮಂತ್ರಿಗಳಿಂದ ಬಸವ ನಾಡಿನ ಆರು ಚಾಲಕರಿಗೆ ಪದಕ

ವಿಜಯಪುರ: ಶಕ್ತಿ ಗ್ಯಾರಂಟಿಗೆ ಶತಕೋಟಿ ಸಂಭ್ರಮದ ಅಂಗವಾಗಿ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆದ  ನಡೆದ ಕಾರ್ಯಕ್ರಮದಲ್ಲಿ ಜಿಲ್ಲೆಯ ಆರು ಜನ ಚಾಲಕರು ಅಪಘಾತ ರಹಿತ ಚಾಲನೆಗೆ ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳಿಂದ ಚಿನ್ನದ ಪದಕ ಪಡೆದುಕೊಂಡಿದ್ದಾರೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ಮೊಹಮ್ಮದ ಫೈಜ್ ಅವರು ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ವಿಜಯಪುರ ನಿಗಮದ ಚಾಲಕರಾದ ಮುದ್ದೇಬಿಹಾಳ ಘಟಕದ ಸಿ. ಎಸ್. ಕಸಬೇಗೌಡರ, ಸಿಂದಗಿಯ ಪಿ. […]

ಲೋಕಸಭೆ ಟಿಕೆಟ್ ನನಗೆ ಸಿಗಲಿದೆ- ಹೈಕಮಾಂಡ್ ಮೇಲೆ ಸಂಪೂರ್ಣ ವಿಶ್ವಾಸವಿದೆ- ರಮೇಶ ಜಿಗಜಿಣಗಿ

ವಿಜಯಪುರ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಈ ಬಾರಿಯೂ ನನಗೇ ಟಿಕೆಟ್ ಸಿಗುತ್ತದೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ವಿಷಯದಲ್ಲಿ ನಮ್ಮ ರಾಷ್ಟ್ರೀಯ ನಾಯಕರು ಯಾರಿಗೆ ಟಿಕೆಟ್ ಕೊಡುತ್ತಾರೆ ಅವರು ಅಭ್ಯರ್ಥಿಯಾಗುತ್ತಾರೆ.  ನಾನೇ ಅಭ್ಯರ್ಥಿಯಾಗಬೇಕು ಎಂದು ಹಟ ಇಲ್ಲ.  ಯಾರು ಗೆಲ್ಲುತ್ತಾರೆ? ಗೆಲ್ಲಲು ಸಾಧ್ಯವಿದೆ ಅದರ ಕುರಿತು ಪಕ್ಷದವರು ಯೋಚನೆ ಮಾಡಿ ಟಿಕೆಟ್ ಕೊಡುತ್ತಾರೆ ಎಂಬ ಸಂಪೂರ್ಣ ವಿಶ್ವಾಸ ನನಗಿದೆ.  ಪಕ್ಷದವರು ನನಗೇ […]

ಸಾರವಾಡ ದ್ಯಾಮವ್ವದೇವಿ, ಬುರಣಾಪುರ ರಸ್ತೆಯ ಘತ್ತರಗಿ ಭಾಗಮ್ಮ ಜಾತ್ರಾ ಮಹೋತ್ಸವದಲ್ಲಿ ಸಚಿವ ಎಂ. ಬಿ. ಪಾಟೀಲ ಭಾಗಿ

ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಇಂದು ಸೋಮವಾರ ಬಬಲೇಶ್ವರ ತಾಲೂಕಿನ ಸಾರವಾಡ ದ್ಯಾಮವ್ವದೇವಿ ಮತ್ತು ವಿಜಯಪುರ ನಗರದ ಬುರಣಾಪುರ ರಸ್ತೆಯಲ್ಲಿರುವ ಘತ್ತರಗಿ ಭಾಗಮ್ಮ ದೇವಿಯ ಜಾತ್ರೆಯಲ್ಲಿ ಪಾಲ್ಗೋಂಡು ದೇವಿಯ ಆಶೀರ್ವಾದ ಪಡೆದರು.  ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದಲ್ಲಿ ನಡೆಯುತ್ತಿರುವ ದ್ಯಾಮವ್ವದೇವಿ ದೇವಸ್ಥಾನದ ಉದ್ಘಾಟನೆ ಮತ್ತು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೋಂಡ ಸಚಿವರು ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.   ಈ ಸಂದರ್ಭದಲ್ಲಿ ಸಾರವಾಡ ಗ್ರಾಮಸ್ಥರು […]

ಜಿಲ್ಲಾಡಳಿತದಿಂದ ಸಂವಿಧಾನ ದಿನಾಚರಣೆ- ಸಂವಿಧಾನದ ಆಶಯದಂತೆ ನಡೆದುಕೊಳ್ಳೋಣ- ಎಡಿಸಿ ಮಹಾದೇವ ಮುರಗಿ ಕರೆ

ವಿಜಯಪುರ: ಸಂವಿಧಾನದ ಪ್ರಸ್ತಾವನೆಯ ಆಶಯವನ್ನು ಪ್ರತಿಯೊಬ್ಬರೂ ಅರ್ಥಮಾಡಿಕೊಂಡು, ಸಂವಿಧಾನಕ್ಕನುಗುಣವಾಗಿ ಕಾರ್ಯನಿರ್ವಹಿಸಬೇಕು ಹಾಗೂ ನಡೆದುಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರು ಹೇಳಿದರು. ಸಂವಿಧಾನ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾರತದ ಸಂವಿಧಾನದ ಪ್ರಸ್ತಾವನೆಯನ್ನು ಅಧಿಕಾರಿ,ಸಿಬ್ಬಂದಿಗೆ ಬೋಧಿಸಿ,  ಮಾತನಾಡಿದ ಅವರು,ಎಲ್ಲರಿಗೂ ರಕ್ಷಣೆ ಒದಗಿಸುತ್ತದೆ.  ಸಂವಿಧಾನವು ದೇಶದ ಬಹು ದೊಡ್ಡ ಶಕ್ತಿಯಾಗಿದೆ. ಅದು, ಜನರನ್ನು ಸಶಕ್ತಗೊಳಿಸಿದೆ.  ಡಾ. ಬಿ. ಆರ್. ಅಂಬೇಡ್ಕರ ಅವರು ದೇಶಕ್ಕೆ ಬಹು ದೊಡ್ಡ ಸಂವಿಧಾನ […]

ಸಕ್ಕರೆ ಕರ್ಖಾನೆ ಮಾಲೀಕರೊಂದಿಗೆ ಡಿಸಿ ಟಿ. ಭೂಬಾಲನ್ ಸಭೆ- ಸಕಾಲದಲ್ಲಿ ಕಬ್ಬಿನ ಬಿಲ್ ಪಾವತಿಸಲು ಸೂಚನೆ

ವಿಜಯಪುರ: ಕಬ್ಬು ನುರಿಸಿದ 14 ದಿನಗಳಲ್ಲಿ ಸಕ್ಕರೆ ಕರ‍್ಖಾನೆಗಳು ನೇರವಾಗಿ  ರೈತರ ಖಾತೆಗಳಿಗೆ ಎಫ್‍ಆರ್‍ಪಿ ದರದಂತೆ ಕಬ್ಬಿನ ಬಿಲ್ಲನ್ನು ಜಮೆ ಮಾಡುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಂಬಂಧಿಸಿದ ಸಕ್ಕರೆ ಕರ‍್ಖಾನೆಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಕ್ಕರೆ ಕಾರ್ಕಾನೆಗಳ ಮಾಲೀಕರು ಹಾಗೂ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಬ್ಬಿನ ಬಿಲ್ ಪಾವತಿಸುವಲ್ಲಿ ಯಾವುದೇ ವಿಳಂಬ ಧೋರಣೆ ಅನುಸರಿಸದೇ ಸಕಾಲದಲ್ಲಿ ಮತ್ತು ನಿಗದಿತ ದರದನ್ವಯ ಬಿಲ್ ಪಾವತಿ ಮಾಡಬೇಕು. ಸಕ್ಕರೆ ಕರ‍್ಖಾನೆ ಮಾಲಿಕರು […]

ಸಂವಿಧಾನ ಸಮಾನತೆ ನೀಡಿದ್ದರೂ ಮಹಿಳೆಯರು ಇನ್ನೂ ವಂಚಿತರಾಗುತ್ತಿರುವುದು ವಿಷಾಧನೀಯ- ಪ್ರೊ. ಚಂದ್ರಮ್ಮ

ವಿಜಯಪುರ: ನಮ್ಮ ಸಂವಿಧಾನವು ಮಹಿಳೆಯರಿಗಾಗಿ ಸಮಾನ ವೇತನ ಕಾಯಿದೆ, ಮಾತೃತ್ವ ಸವಲತ್ತು ಕಾಯಿದೆ, ಬಹು ಪತ್ನಿತ್ವ ನಿಷೇಧ ಕಾಯಿದೆ, ಅಂತರ್ಜಾತಿ ವಿವಾಹ ಕಾಯಿದೆ ಸೇರಿದಂತೆ ಹಲವಾರು ವಿಧಿಗಳನ್ನು ನೀಡಿದ್ದರು ಇಂದಿಗೂ ಹಲವು ಕಡೆಗಳಲ್ಲಿ ಮಹಿಳೆಯರು ಇದರಿಂದ ವಂಚಿತರಾಗುತ್ತಿರುವುದು ವಿಷಾದನೀಯ ಎಂದು ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದ ಪ್ರಭಾರ ಕುಲಸಚಿವೆ ಪ್ರೊ. ಚಂದ್ರಮ್ಮ ಎಂ. ಅಭಿಪ್ರಾಯಪಟ್ಟಿದ್ದಾರೆ. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಕೋಶ, ಮಹಿಳಾ ಅಧ್ಯಯನ ಕೇಂದ್ರ ಹಾಗೂ ಡಾ. ಬಿ. ಆರ್. […]

ಬಸವ ನಾಡಿನಲ್ಲಿ ಗಮನ ಸೆಳೆದ ಗಣವೇಷಧಾರಿಗಳ ಪಥ ಸಂಚಲನ- ಜಾತಿ, ಸಮಾಜ ವಿಂಗಡಣೆ ಬಗ್ಗೆ ಎಚ್ಚರಿಕೆ ಅಗತ್ಯ- ನರೇಂದ್ರ

ವಿಜಯಪುರ: ಕೊರೊನಾದಂಥ ಅನೇಕ ವೈರಸ್ ನಮ್ಮ ಜೊತೆಗಿದ್ದು ಜಾತಿಗಳ ನಡುವೆ ವಿಘಟನೆ ಮತ್ತು ಹಿಂದೂ ಸಮಾಜದಲ್ಲಿ ಒಡಕು ಮೂಡಿಸುವ  ಪ್ರಯತ್ನ ಮಾಡುತ್ತವೆ ಎಂದು ಆರ್ ಎಸ್ ಎಸ್ ಉತ್ತರ ಕರ್ನಾಟಕ ಪ್ರಾಂತ ಪ್ರಚಾರಕ ನರೇಂದ್ರ ಹೇಳಿದ್ದಾರೆ. ನಗರದ ದರಬಾರ ಹೈಸ್ಕೂಲ್ ಮೈದಾನದಲ್ಲಿ ಆರ್ ಎಸ್ ಎಸ್ ನಗರ ವಾರ್ಷಿಕೋತ್ಸವದತ ಅಂಗವಾಗಿ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು. ಹಿಂದೂ ಎಂಬುದು ಕೇವಲ ಮೆರವಣಿಗೆಯ ಘೋಷಣೆಗೆ ಸೀಮಿತವಾಗಬಾರದು.  ಪ್ರತಿದಿನ ಹಿಂದೂ ಆಗಬೇಕು.  ಹಿಂದೂ ಸಮಾಜ ಎಷ್ಟು ಬೇಗ ಸಂಘಟಿತವಾಗುತ್ತದೆಯೋ […]

ಡಿಸಿಎಂ ಕೇಸ್ ನಲ್ಲಿ ಸರಕಾರ ಕಾನೂನು ಪ್ರಕಾರ ಕ್ರಮ ಕೈಗೊಂಡಿದೆ- ಕೇಂದ್ರದಿಂದ ತನಿಖಾ ಸಂಸ್ಥೆಗಳ ದುರ್ಬಳಕೆಯಾಗುತ್ತಿದೆ- ಎಂ. ಬಿ. ಪಾಟೀಲ

ವಿಜಯಪುರ: ರಾಜ್ಯ ಸಚಿವ ಸಂಪುಟ ಕಾನೂನು ಪ್ರಕಾರವೇ ಡಿಸಿಎಂ ಡಿ. ಕೆ. ಶಿವಕುಮಾರ ವಿರುದ್ಧ ಸಿಬಿಐ ತನಿಖೆಗೆ ನೀಡಿರುವ ಆದೇಶ ರದ್ದು ಪಡಿಸುವಂತೆ ಶಿಫಾರಸು ಮಾಡಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.  ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರದ ಈ ನಿರ್ಧಾರದಿಂದ ಕಾನೂನು ಸಮರಕ್ಕೆ ಕಾರಣವಾಗಬಹುದಾ ಎಂದು ಕೇಳಲಾದ ಪ್ರಶ್ನೆಗೆ ಸಚಿವರು ತೀಕ್ಷ್ಣವಾಗಿ ಉತ್ತರಿಸಿದರು.  ಸಿಬಿಐ ಈ ವಿಚಾರದಲ್ಲಿ […]

ತಿಕೋಟಾ ನರ್ಸಿಂಗ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಜೀವ ಗಾಂಧಿ ವಿವಿ ಕಬಡ್ಡಿ ತಂಡಕ್ಕೆ ಆಯ್ಕೆ

ವಿಜಯಪುರ: ಬಿ.ಎಲ್.ಡಿ.ಇ ಸಂಸ್ಥೆಯ ತಿಕೋಟಾ ನರ್ಸಿಂಗ್ ಕಾಲೇಜಿನ ಬಿ.ಎಸ್ಸಿ ನರ್ಸಂಗ್ 2ನೇ ಸೆಮಿಸ್ಟರ್ ವಿದ್ಯಾರ್ಥಿಗಳಾದ ಕುಮಾರ ಸಾನ್ವಿ ಮತ್ತು ಐಶ್ವರ್ಯ ಪಾರೆ ಅವರು ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಕಬಡ್ಡಿ ತಂಡಕ್ಕೆ ಆಯ್ಕೆಯಾಗುವ ಮೂಲಕ ಗಮನ ಸೆಳೆದಿದ್ದಾರೆ. ಅಲ್ಲದೇ, ಇದೇ ಕಾಲೇಜಿನ ದೈಹಿಕ ನಿರ್ದೇಶಕ ಭೀಮರಾವ ದೇಸಾಯಿ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಈ ವಿದ್ಯಾರ್ಥಿಗಳು ಮತ್ತು ತರಬೇತುದಾರರು ಇನ್ನು ಮುಂದೆ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವನ್ನು ಕಬಡ್ಡಿಯಲ್ಲಿ ಪ್ರತಿನಿಧಿಸಲಿದ್ದಾರೆ.   ಯುನಿವರ್ಸಿಟಿ ಬ್ಲ್ಯೂ ಆಗಿ ಆಯ್ಗೆಯಾದ […]

ಬಸವ ನಾಡಿನಿಂದ ಬೆಂಗಳೂರಿಗೆ ವಂದೇ ಭಾರತ ರೈಲು ಓಡಿಸಲು ಕ್ರಮ ಕೈಗೊಳ್ಳಿ- ಸಂಸದರಾದ ಜಿಗಜಿಣಗಿ

ವಿಜಯಪುರ: ವಿಜಯಪುರ ಮತ್ತು ಬೆಂಗಳೂರು ಮಧ್ಯೆ ವಂದೆ ಭಾರತ ರೈಲು ಸೇವೆ ಪ್ರಾರಂಭಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಸುನಿಲಗೌಡ ಪಾಟೀಲ ವಿಜಯಪುರ ಸಂಸದ ರಮೇಶ್ ಜಿಗಜಿಣಗಿ ಮತ್ತು ಬಾಗಲಕೋಟೆ ಸಂಸದ ಪಿ. ಸಿ. ಗದ್ದಿಗೌಡರ ಅವರಿಗೆ ಮನವಿ ಮಾಡಿದ್ದಾರೆ. ಈ ಕುರಿತು ಉಭಯ ಸಂಸದರಿಗೆ ಪತ್ರ ಬರೆದಿರುವ ಸುನಿಲಗೌಡ ಪಾಟೀಲ ಅವರು, ವಿಜಯಪುರದಿಂದ ಬೆಂಗಳೂರಿಗೆ ಹೋಗಲು ರೈಲು ಸೇವೆ ಇದ್ದರೂ ಈ ರೈಲುಗಳು ಸಂಚಾರ ಸಮಯ ಅನಕೂಲಕರವಾಗಿಲ್ಲ. ಅಲ್ಲದೇ, ಈ ರೈಲುಗಳು ಸರಿಯಾದ ಸಮಯಕ್ಕೆ ನಿಗದಿತ […]