ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಗೆ ನೋಂದಣಿಗೆ ಡಿಸಿ ಟಿ. ಭೂಬಾಲನ್ ಮನವಿ

ವಿಜಯಪುರ: ಮುಂಗಾರು ಹಂಗಾಮಿನಲ್ಲಿ ಕೃಷಿ ಬೆಳೆಗಳಿಗೆ ಬೆಳೆ ವಿಮೆ ನೋಂದಣಿ ಮಾಡಿಸಲು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ ಬಿಮಾ ಯೋಜನೆ ಅಧಿಸೂಚಿಸಲಾಗಿದ್ದು, ಜಿಲ್ಲೆಯಲ್ಲಿ ಓರಿಯೆಂಟಲ್ ಜನರಲ್ ಇನ್ಸೂರೆನ್ಸ ಕಂಪನಿ ಮೂಲಕ ಅನುಷ್ಠಾನಗೊಳಿಸಲಾಗುತ್ತಿದ್ದು, ಈ ಯೋಜನೆಯಡಿ ರೈತರು ತಮ್ಮ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಮನವಿ ಮಾಡಿದ್ದಾರೆ. ಗ್ರಾಮ ಪಂಚಾಯಿತಿ ಮಟ್ಟಕ್ಕೆ ಅಧಿಸೂಚಿಸಲಾದ ಮಳೆಯಾಶ್ರಿತ ಬೆಳೆಗಳಾದ ತೊಗರಿ, ಸಜ್ಜೆ ಹಾಗೂ ನೀರಾವರಿ ಮುಸುಕಿನ ಜೋಳ ಮತ್ತು ತೊಗರಿ ಬೆಳೆಗಳಿಗೆ ವಿಮಾ ನೋಂದಣಿಗೆ 31.07.2024 ಕೊನೆಯ ದಿನವಾಗಿದೆ.  ನೀರಾವರಿ […]

ಬೆಳೆಗಳ ವಿವರ ಮೊಬೈಲ್ ಆಪ್‍ನಲ್ಲಿ ದಾಖಲಿಸಿ- ರೈತರಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಮನವಿ

ವಿಜಯಪುರ: ಜಿಲ್ಲೆಯ ರೈತರು ಮುಂಗಾರು ಹಂಗಾಮಿನಲ್ಲಿ ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆ ವಿವರಗಳನ್ನು ಮುಂಗಾರು ರೈತರ ಬೆಳೆ ಸಮೀಕ್ಷೆ ಮೊಬೈಲ್ ಆಪ್‍ನಲ್ಲಿ ದಾಖಲಿಸುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಮನವಿ ಮಾಡಿಕೊಂಡಿದ್ದಾರೆ. ರೈತರು ಗೂಗಲ್ ಪ್ಲೇ ಸ್ಟೋರ್ ಅಥವಾ ಕ್ಯೂ ಆರ್ ಕೋಡ್‍ನಿಂದ ಮುಂಗಾರು ಬೆಳೆ ಸಮೀಕ್ಷೆ ಆಪ್ ಡೌನ್‍ಲೋಡ್ ಮಾಡಿಕೊಂಡು, ಸ್ವತ: ತಾವೇ ಬೆಳೆ ಸಮೀಕ್ಷೆ ಮಾಡಿ, ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರಗಳನ್ನು ದಾಖಲಿಸಬಹುದಾಗಿದೆ. ರೈತರು ಸ್ವತ: ತಮ್ಮ ಜಮೀನಿನ ಬೆಳೆ ಸಮೀಕ್ಷೆ ಮಾಡಿಕೊಳ್ಳಲು 31.08.2024ರ […]

ಬೆಳೆ ಅಂದಾಜು ಸಮೀಕ್ಷೆ ತರಬೇತಿ ಕಾರ್ಯಕ್ರಮ- ಜಿ. ಪಂ. ಸಿಇಓ ರಿಶಿ ಆನಂದ ಉದ್ಘಾಟನೆ

ವಿಜಯಪುರ: ಗ್ರಾಮ ಆಡಳಿತ ಅಧಿಕಾರಿಗಳು ತೋಟಗಾರಿಕೆ ಅಧಿಕಾರಿಗಳು, ಪಿಡಿಓಗಳು, ಸಹಾಯಕ ಕೃಷಿ ಅಧಿಕಾರಿಗಳು ಹಾಗೂ ಉಪತಹಸೀಲ್ದಾರರು, ಕಂದಾಯ ನಿರೀಕ್ಷಕರು ಮತ್ತು ತಾ. ಪಂ. ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಗುರುವಾರ ನಗರದ ಜಿ. ಪಂ. ಸಭಾಂಗಣದಲ್ಲಿ ಬೆಳೆ ಅಂದಾಜು ಸಮೀಕ್ಷೆ ತರಬೇತಿ ಕಾರ್ಯಕ್ರಮ ನಡೆಯಿತು.   ಈ ಕಾರ್ಯಕ್ರಮವನ್ನು ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಉದ್ಘಾಟಿಸಿದರು. ಜಿಲ್ಲಾಧಿಕಾರಿ ಟಿ. ಭೂಬಾಲನ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕಚೇರಿಯ ಸಹಾಯಕ ನಿರ್ದೇಶಕಕ ಅಲ್ತಾಫ […]

ರಸ್ತೆ ಕಾಮಗಾರಿ: ನಾನಾ ಪ್ರದೇಶ, ಕಚೇರಿಗಳಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಭೇಟಿ, ಪರಿಶೀಲನೆ

ವಿಜಯಪುರ: ನಗರದ ಜಿಲ್ಲಾ ಪಂಚಾಯಿತಿ ಪ್ರವೇಶ ದ್ವಾರದಿಂದ ಜಿಲ್ಲಾ ಪಂಚಾಯಿತಿ ಕಚೇರಿಯವರೆಗೆ ಲೋಕೋಪಯೋಗಿ ಇಲಾಖೆಯಿಂದ ಕೈಗೊಂಡಿರುವ ರಸ್ತೆ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗುರುವಾರ ರಸ್ತೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದವರಿಗೆ ಸೂಚನೆ ನೀಡಿದರು.  ನಂತರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಬಾಲಮಂದಿರ, ಗಾಂಧಿಭವನದ ಪಕ್ಕದಲ್ಲಿ ಜಿಲ್ಲಾಡಳಿತ ಕಚೇರಿಗಳ […]

ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ, ಸರ್ವೇ ಕಾರ್ಯ ಸರಳೀಕರಣಕ್ಕೆ ಆದ್ಯತೆ ನೀಡಿ- ಡಿಸಿ ಟಿ. ಭೂಬಾಲನ್ ಸೂಚನೆ

ವಿಜಯಪುರ: ಕಂದಾಯ ಗ್ರಾಮಗಳ ರಚನೆಗೆ ಸರ್ಕಾರ ವಿಶೇಷ ಆಸಕ್ತಿ ವಹಿಸಿದ್ದು, ಈ ನಿಟ್ಟಿನಲ್ಲಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆಗೆ ಕ್ರಮ ವಹಿಸುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳ ನಿರ್ದೇಶನ ಹಿನ್ನಲೆಯಲ್ಲಿ ಕಂದಾಯ ಇಲಾಖೆಯ ನಾನಾ ವಿಷಯಗಳ ಕುರಿತು ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಕಂದಾಯ ಗ್ರಾಮಗಳಲ್ಲಿರುವ ಫಲಾನುಭವಿಗಳಿಗೆ […]

ಅಖಿಲ ಭಾರತ ವೀರಶೈವ ಮಹಾಸಭೆ ಮಹಿಳಾ ಘಟಕದ ನೂತನ ಪದಾಧಿಕಾರಿಗಳ ಅವಿರೋಧ ಆಯ್ಕೆ

ವಿಜಯಪುರ: ಅಖಿಲ ಭಾರತ ವೀರಶೈವ ಮಹಾಸಭಾ ವಿಜಯಪುರ ಜಿಲ್ಲಾ ಮಹಿಳಾ ಘಟಕದ ಮುುಂದಿನ ಐದು ವರ್ಷಗಳ ಅವಧಿಗೆ ಕಾರ್ಯ ನಿರ್ವಾಹಕ ಸದಸ್ಯರಾಗಿ 11 ಜನ ಆಯ್ಕೆಯಾಗಿದ್ದಾರೆ.  ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಚುನಾವಣೆ ಅಧಿಕಾರಿಗಳು, ಶಾರದಾ ಬಸಯ್ಯ ಹಿರೇಮಠ, ಶಿವಲೀಲಾ ಎಂ. ಮಠಪತಿ, ಜ್ಯೋತಿ ರಾ. ಬಾಗಲಕೋಟ, ಅಶ್ವಿನಿ ನಿ. ಆಣೆಪ್ಪನವರ, ವಿದ್ಯಾವತಿ ಕೃಷ್ಣಪ್ಪ ಅಂಕಲಗಿ, ಕಮಲಾ ಸುರೇಶ ಗೆಜ್ಜಿ, ಶಾರದಾ ಗು. ಕೊಪ್ಪ(ಐಹೊಳ್ಳಿ), ಶಾರದಾ ಗು. ಪಾಟೀಲ, ಶೈಲಜಾ ಬ. ಮೋದಿ, ವಂದನಾ ಸಿದ್ರಾಮಪ್ಪ […]

ರಾಷ್ಟ್ರೀಯ ಲೋಕ ಅದಾಲತ: ಕಕ್ಷಿದಾರರ ಅಭೂತಪೂರ್ವ ಸ್ಪಂದನೆ- 13400 ಪ್ರಕರಣಗಳು ಇತ್ಯರ್ಥ

ವಿಜಯಪುರ: ಜಿಲ್ಲೆಯಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್‌ ನಲ್ಲಿ ಕಕ್ಷಿದಾರರು ಹಾಗೂ ವಕೀಲರ ಸಹಕಾರದಿಂದ ನ್ಯಾಯಾಲಯದಲ್ಲಿ ವಿಚಾರಣೆಗಾಗಿ ಬಾಕಿ ಇದ್ದ ಒಟ್ಟು 134000 ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳು ಹಾಗೂ 2,19,475 ವ್ಯಾಜ್ಯ ಪೂರ್ವ ಪ್ರಕರಣಗಳು ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಇತ್ಯರ್ಥಗೊಂಡಿವೆ. ಈ ಲೋಕ ಅದಾಲತ್‌ನಲ್ಲಿ ನಾನಾ ಕಾರಣಗಳಿಂದ ವಿಚ್ಚೇದನಕ್ಕೆ ಮೊರೆ ಹೋಗಿದ್ದ ಏಳು ದಂಪತಿಗಳನ್ನು ನ್ಯಾಯಾಧೀಶರು ಹಾಗೂ ವಕೀಲರ ಮಧ್ಯಸ್ಥಿಕೆಯಲ್ಲಿ ನಡೆದ ರಾಜಿ ಸಂಧಾನದಲ್ಲಿ ಮೂಲಕ ಒಂದಾಗಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು. ಈ ರಾಷ್ಟ್ರೀಯ ಲೋಕ್ ಅದಾಲತನ […]

ನಾನಾ ಬೇಡಿಕೆ ಈಡೇರಿಸಲು ಆಗ್ರಹ- ಅರುಣ ಶಹಾಪುರ ನೇತೃತ್ವದಲ್ಲಿ ಸಹಶಿಕ್ಷಕರಿಂದ ಮನವಿ ಪತ್ರ ಸಲ್ಲಿಕೆ

ವಿಜಯಪುರ: ಶಿಕ್ಷಕರ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾ ಘಟಕದ ವತಿಯಿಂದ ವಿಧಾನ ಪರಿಷತ ಮಾಜಿ ಶಾಸಕ ಅರುಣ ಶಹಾಪುರ ನೇತೃತ್ವದಲ್ಲಿ ಜಿ. ಪಂ. ಡಿ. ಎಸ್. ವಿಜಯಕುಮಾರ ಆಜೂರ ಅವರಿಗೆ ಮನವಿ ಪತ್ರ ಸಲ್ಲಿಸಿದರು.  ಸರಕಾರಿ ಮತ್ತು ಅನುದಾನಿತ ಪ್ರೌಢಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರ ನಾನಾ ಬೇಡಿಕೆಗಳಾದ ಓಪಿಎಸ್ ಜಾರಿ, ಏಪ್ರಿಲ್/ಮೇ ತಿಂಗಳಲ್ಲಿ ಶಿಕ್ಷಕರ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ಜಾರಿ, ನಿಯಮಿತವಾಗಿ ಸರಕಾರಿ ಆರ್ ಎಂ ಎಸ್ ಎ, ಸಾಮಾನ್ಯ […]

ಶಿಸ್ತಿನ ಸಿಪಾಯಿಗಳ ನಿರ್ಮಾಣದಲ್ಲಿ ಭಾರತ ಸೇವಾದಳದ ಕಾರ್ಯ ಶ್ಲಾಘನೀಯ- ಡಾ. ಅಶೋಕ ಜಾಧವ

ವಿಜಯಪುರ: ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಭಾವೈಕ್ಯತೆ ಮನೋಭಾವ ಬೆಳೆಸಿ ಅವರನ್ನು ಭಾರತದ ಆದರ್ಶ ನಾಗರಿಕರನ್ನಾಗಿ ಮಾಡಲು ಭಾರತ್ ಸೇವಾದಳ ಶ್ರಮಿಸುತ್ತಿದೆ ಎಂದು ಡಾ. ಅಶೋಕ ಜಾದವ ಹೇಳಿದ್ದಾರೆ. ಭಾರತ ಸೇವಾದಳ ಜಿಲ್ಲಾ ಸಮಿತಿ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಗರದ ಸರಕಾರಿ ಮಾದರಿಯ ಪ್ರಾಥಮಿಕ ಶಾಲೆ ನಂಬರ್- 24 ರಲ್ಲಿ  ಪಿಯು ಕಾಲೇಜಿನ ಉಪನ್ಯಾಸಕರಿಗಾಗಿ ಆಯೋಜಿಸಲಾದ ರಾಷ್ಟ್ರೀಯ ಭಾವೈಕ್ಯತೆ, ರಾಷ್ಟ್ರಧ್ವಜ ಹಾಗೂ ಭಾರತ ಸೇವಾದಳ ಮಾಹಿತಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಶಿಸ್ತು, ಪ್ರಾಮಾಣಿಕತೆಯೊಂದಿಗೆ ಇಂದಿನ […]

ಅಖಿಲ ಭಾರತ ವೀರಶೈವ ಮಹಾಸಭೆ ಜಿಲ್ಲಾಧ್ಯಕ್ಷರಾಗಿ ವಿ. ಸಿ. ನಾಗಠಾಣ ಪುನರಾಯ್ಕೆ

ವಿಜಯಪುರ: ಅಖಿಲ ಭಾರತ ವೀರಶೈವ ಮಹಾಸಭಾ ವಿಜಯಪುರ ಜಿಲ್ಲಾಧ್ಯಕ್ಷರಾಗಿ ಅವಿರೋಧವಾಗಿ ವೀರಭದ್ರಪ್ಪ ಚನಬಸಪ್ಪ ನಾಗಠಾಣ ಪುನರಾಯ್ಕೆಯಾಗಿದ್ದಾರೆ.  ಐದು ವರ್ಷಗಳ ಅವಧಿಗೆ ಅವರು ಜಿಲ್ಲಾಧ್ಯಕ್ಷರಾಗಿ ಈ ಬಾರಿ ಅವಿರೋಧವಾಗಿ ಆಯ್ಕೆಯಾಗಿದ್ದು, ಸತತ ಎರಡನೇ ಬಾರಿಗೆ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದಂತಾಗಿದೆ. ಈ ಮಧ್ಯೆ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸೋಮನಗೌಡ ಪಾಟೀಲ, ಷಣ್ಮುಖಪ್ಪ ಕಸಬೇಗೌಡರ, ಅಪ್ಪಾಸಾಬ ಕೋರಿ, ಮಹಾದೇವ ಅವರಾದಿ, ರುದ್ರಪ್ಪ ತೋಟದ, ದೊಡ್ಡಣ್ಣ ಭಜಂತ್ರಿ, ಪರಶುರಾಮ ಪೋಳ, ಜಿ. ಬಿ. ಸಾಲಕ್ಕಿ, ವಿ. ಎಸ್. ತೇಲಿ, ಸಹದೇವ ನಾಡಗೌಡರ, ಮಲ್ಲಪ್ಪ ಯಾದವಾಡ, […]