ತಾಯಿ, ದೇವರ ಸಾಕ್ಷಿಯಾಗಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪರ ಕೆಲಸ ಮಾಡುತ್ತೇವೆ- ಡಿಕೆಶಿ ಸಿಬಿಐ ಪ್ರಕರಣದ ವಿರುದ್ಧ ನ್ಯಾಯಲಯಕ್ಕೆ ಮೊರೆ- ಯತ್ನಾಳ

ವಿಜಯಪುರ: ತಾಯಿ ಸಾಕ್ಷಿಯಾಗಿ, ದೇವರ ಸಾಕ್ಷಿಯಾಗಿ ಹೇಳುತ್ತಿದ್ದೇವೆ.  ಮುಂಬರುವ ಲೋಕಸಭೆಯಲ್ಲಿ ಬಿಜೆಪಿ ಪರ ಕೆಲಸ ಮಾಡಿ ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯನ್ನಾಗಿ ಮಾಡುತ್ತೇವೆ ಎಂದು ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆ ವಿಚಾರದ ಹಿನ್ನೆಲೆಯಲ್ಲಿ ತಮ್ಮ ಮುಂದಿನ ನಿರ್ಧಾರವೇನು ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು. ಭಾರತ ಮತ್ತೋಂದು ಇಸ್ರೆಲ್ ಆಗಬಾರದು ನಾನು, ಶಾಸಕರಾದ ಸುನೀಲಕುಮಾರ, ರಮೇಶ ಜಾರಕಿಹೊಳಿ, ಅರವಿಂದ […]

ಅನಿಮಿಯಾ ಮುಕ್ತ, ಪೌಷ್ಟಿಕ ಕರ್ನಾಟಕ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿ- ಡಿಎಚ್ಓ ಬಸವರಾಜ ಹುಬ್ಬಳ್ಳಿ

ವಿಜಯಪುರ: ಅನಿಮಿಯಾ, ಅಪೌಷ್ಠಿಕತೆ ಹಾಗೂ ಮಕ್ಕಳ ದೈಹಿಕ ಬೆಳವಣಿಗೆ ಕುರಿತು ತಾಯಂದಿರು ಮತ್ತು ಪೋಷಕರು ಹೆಚ್ಚು ಜಾಗೃತರಾಗಿರಬೇಕು. ಅನಿಮಿಯಾ ಮುಕ್ತ, ಪೌಷ್ಟಿಕ ಕರ್ನಾಟಕ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ ಹೇಳಿದರು. ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸರಕಾರಿ ಬಾಲಕರ ಪದವಿ ಪೂರ್ವ ಮಹಾವಿದ್ಯಾಲಯ ಹಾಗೂ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ […]

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಸಿಗುವವರೆಗೆ ಯಾವುದೇ ತ್ಯಾಗಕ್ಕೂ ಸಿದ್ದ- ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿ

ವಿಜಯಪುರ: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಗಾಗಿ ಅನೇಕ ರೀತಿ ಹೋರಾಟ ಮಾಡಿದರೂ, ಯಾವುದೇ ಸರಕಾರ ಸರಿಯಾಗಿ ಸ್ಪಂಧಿಸಿಲ್ಲ.  ಬೇಡಿಕೆ ಈಡೇರುವವರೆಗೂ ಯಾವುದೇ ತ್ಯಾಗಕ್ಕೂ ಸಿದ್ಧ ಎಂದು ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ತಿಕೋಟಾ ತಾಲೂಕಿನ ಕನಮಡಿ ಬಳಿಯ ಸುಕ್ಷೇತ್ರ ಗಡಿಭಾಗದಲ್ಲಿರುವ ಶ್ರೀ ಧರಿದೇವರ ದೇವಸ್ಥಾನದ ಬಳಿಯ ಪ್ರೌಢಶಾಲೆಯ ಆವರಣದಲ್ಲಿ ಇಷ್ಟಲಿಂಗ ಪೂಜೆಯೊಂದಿಗೆ ರಾಷ್ಟ್ರೀಯ ಹೆದ್ದಾರಿ ತಡೆ, ಚನ್ನಮ್ಮ ಜಯಂತಿ ವಿಜಯೋತ್ಸವ ಹಾಗೂ ಪಂಚಮಸಾಲಿ ಸಮಾಜದ ಬೃಹತ್ ಸಮಾವೇಶ ಉದ್ಘಾಟಿಸಿ ಅವರು […]

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಎಂ. ಬಿ. ಪಾಟೀಲರ ಪುತ್ರ ಬಸನಗೌಡ- ಶ್ಯಾಮನೂರು ಶಿವಶಂಕರಪ್ಪ ಮೊಮ್ಮಗಳು ಅಖಿಲಾ ಜೋಡಿ

ಬೆಂಗಳೂರು: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಮತ್ತು ಆಶಾ ಎಂ. ಪಾಟೀಲ ಅವರ ಹಿರಿಯ ಪುತ್ರ ಹಾಗೂ ಬಿ.ಎಲ್.ಡಿ.ಇ ಸಂಸ್ಥೆಯ ನಿರ್ದೇಶಕ ಬಸನಗೌಡ ಪಾಟೀಲ ಅವರ ವಿವಾಹ ಹಿರಿಯ ಶಾಸಕ ಡಾ. ಶ್ಯಾಮನೂರು ಶಿವಶಂಕರಪ್ಪ ಅವರ ಮೊಮ್ಮಗಳಾದ ಅಖಿಲಾ ಅವರೊಂದಿಗೆ ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆಯಿತು. ಸಿದ್ದಗಂಗಾ ಸ್ವಾಮೀಜಿ, ಸುತ್ತೂರ ಸ್ವಾಮೀಜಿ, ಆದಿಚುಂಚನಗಿರಿ ಸ್ವಾಮೀಜಿ, ಬೇಲಿಮಠ ಸ್ವಾಮೀಜಿ, ಸೇರಿದಂತೆ ಪ್ರಮುಖ ಸ್ವಾಮೀಜಿಗಳ ಸಾನಿದ್ಯದಲ್ಲಿ ನಡೆದ […]

ಜಿಲ್ಲಾ ಪ್ರವಾಸಿ ತಾಣಗಳಲ್ಲಿ ಬುದ್ಧವಿಹಾರ ಸೇರ್ಪಡೆ- ಯಾತ್ರಿ ನಿವಾಸ ನಿರ್ಮಾಣಕ್ಕೆ ಅನುದಾನ- ಸಚಿವ ಎಚ್. ಕೆ. ಪಾಟೀಲ ವಾಗ್ದಾನ

ವಿಜಯಪುರ: ಜಿಲ್ಲಾ ಪ್ರವಾಸದಲ್ಲಿರುವ ಕರ್ನಾಟಕ ಸರಕಾರದ ಪ್ರವಾಸೋದ್ಯಮ ಸಚಿವ ಎಚ್. ಕೆ.  ಪಾಟೀಲ ಅವರು ನಗರದ ಸಾರಿಪುತ್ರ- ಬೋಧಿಧಮ್ಮ ಬುದ್ಧವಿಹಾರಕ್ಕೆ ಭೇಟಿ ನೀಡಿದರು. ಬುದ್ಧವಿಹಾರ ನಿರ್ಮಾಣ ಸಮಿತಿಯ ಆಡಳಿತ ಮಂಡಳಿಯ ಮನವಿಗೆ ಸ್ಪಂದಿಸಿದ ಸಚಿವ ಎಚ್.ಕೆ. ಪಾಟೀಲ ಅವರು, ಭಂತೆ ಬೋಧಿಧಮ್ಮ ಅವರಿಂದಆಶೀರ್ವಾದ ಪಡೆದು ಮಾತನಾಡಿದರು. ಬಳಿಕ ಮಾತನಾಡಿದ ಅವರು ಹೃದಯ ಭಾಗದಲ್ಲಿರುವ ಬುದ್ಧ ವಿಹಾರವನ್ನು ಪ್ರವಾಸಿ ತಾಣಗಳ ಪಟ್ಟಿಯಲ್ಲಿ ಸೇರಿಸುವುದಲ್ಲದೆ ವಿಹಾರದ ಆವರಣದಲ್ಲಿ ಯಾತ್ರಿ ನಿವಾಸ ನಿರ್ಮಿಸಿ ಕೊಡುವುದಾಗಿ ವಾಗ್ದಾನ ಮಾಡಿದರು.  ಅಲ್ಲದೇ, ಯಾತ್ರಿ ನಿವಾಸದ […]

ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆಯೊಂದಿಗೆ ಪ್ರವಾಸೋದ್ಯಮಕ್ಕೆ ಒತ್ತು ನೀಡಿ- ಎಚ್. ಕೆ. ಪಾಟೀಲ

ವಿಜಯಪುರ: ಐತಿಹಾಸಿಕ ತಾಣಗಳಿಂದ ಕೂಡಿರುವ ವಿಜಯಪುರ ಜಿಲ್ಲೆಯಲ್ಲಿರುವ ಸ್ಮಾರಕಗಳ ರಕ್ಷಣೆ, ಸಂರಕ್ಷಣೆ ಸೇರಿದಂತೆ ಪ್ರವಾಸೋದ್ಯಮ ಉತ್ತೇಜನಕ್ಕೆ ಪೂರಕವಾಗಿ ಕ್ರಮವಹಿಸುವಂತೆ ಪ್ರವಾಸೋದ್ಯಮ ಇಲಾಖೆ ಸಚಿವ ಎಚ್. ಕೆ. ಪಾಟೀಲ ಅವರು ಸೂಚನೆ ನೀಡಿದ್ದಾರೆ.  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರವಾಸೋದ್ಯಮ ಸೇರಿದಂತೆ ನಾನಾ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಭಾರತೀಯ ಪುರಾತತ್ವ ಇಲಾಖೆ, ಕರ್ನಾಟಕ ಪ್ರಾಚ್ಯವಸ್ತು ಸಂಗ್ರಹಾಲಯ, ಪ್ರವಾಸೋದ್ಯಮ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳು ಸಮನ್ವಯತೆಯಿಂದ  ಆಸಕ್ತಿ ವಹಿಸಿ ಕಾರ್ಯನಿರ್ವಹಿಸಬೇಕು. ಸ್ಮಾರಕಗಳ ರಕ್ಷಣೆಗೆ ಒತ್ತು ನೀಡಿ, ಸ್ಮಾರಕಗಳಲ್ಲಿ ಸ್ವಚ್ಛತೆಗೆ […]

ನ. 24, 25 ರಂದು ಭಾವಸಾರ ಕ್ಷತ್ರೀಯ ಭವನ ಉದ್ಘಾಟನೆ- ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಭಾಗಿ

ವಿಜಯಪುರ: ನಗರದ ಭಾವಸಾರ ಕ್ಷತ್ರೀಯ ಸಮಾಜದ ನೂತನ ಸಾಂಸ್ಕೃತಿಕ ಭವನ ಉದ್ಘಾಟನೆ ಸಮಾರಂಭ ನ. 24 ಮತ್ತು 25 ರಂದು ನಡೆಯಲಿದ್ದು, ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ ಎಂದು ಭಾವಸಾರ ಕ್ಷತ್ರೀಯ ಸಮಾಜದ ಜಿಲ್ಲಾಧ್ಯಕ್ಷ ರಾಜೇಶ ದೇವಗಿರಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ ನಗರದ ಬಿಎಲ್.ಡಿ.ಇ ಎಂಜಿನಿಯರಿಂಗ್ ಕಾಲೇಜ್ ಎದುರಿನ ಆನಂದ ನಗರದಲ್ಲಿ ರೂ. 2.65 ಕೋ. ವೆಚ್ಚದಲ್ಲಿ ನಿರ್ಮಿಸಲಾದ ನೂತನ ಭಾವಸಾರ ಕ್ಷತ್ರೀಯ ಸಮಾಜದ ಸಾಂಸ್ಕೃತಿಕ ಭವನವನ್ನು ನ.24 ರಂದು  […]

ಐತಿಹಾಸಿಕ ಸ್ಮಾರಕಗಳ ವೀಕ್ಷಣೆ ನಡೆಸಿದ ಸಚಿವ ಎಚ್. ಕೆ. ಪಾಟೀಲ

ವಿಜಯಪುರ: ಪ್ರವಾಸೋದ್ಯಮ ಸಚಿವ ಎಚ್. ಕೆ. ಪಾಟೀಲ ಅವರು ನಮ್ಮ ಸ್ಮಾರಕ ದರ್ಶನ ಮತ್ತು ಸಂರಕ್ಷಣೆಗಾಗಿ ಪ್ರವಾಸ ಕಾರ್ಯಕ್ರಮದ ಅಂಗವಾಗಿ ಪ್ರವಾಸೋದ್ಯಮ ಇಲಾಖೆ ಬಸ್‌ನ ಮೂಲಕ ಪ್ರವಾಸ ಕೈಗೊಂಡು ವಿಜಯಪುರ ಜಿಲ್ಲೆಯ ನಾನಾ ಐತಿಹಾಸಿಕ ಸ್ಮಾರಕಗಳನ್ನು ವೀಕ್ಷಿಸಿದರು. ಈ ಸ್ಮಾರಕಗಳಲ್ಲಿ ಅಳವಡಿಸಲಾಗಿರುವ ಕಲೆ, ಶಿಲ್ಪಕಲೆ, ಸಂಸ್ಕೃತಿಯನ್ನು ಬಿಂಬಿಸುವ ಚಿತ್ರಕಲೆಯನ್ನು ವೀಕ್ಷಿಸಿ, ಐತಿಹಾಸಿಕ ಸ್ಮಾಕರಗಳ ಸಂರಕ್ಷಣೆಗಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಬೆಳಿಗ್ಗೆ ಮುತ್ತಗಿಯಲ್ಲಿರುವ ಸ್ಮಾರಕ ಹಾಗೂ ದೇವಾಲಯಗಳ ವೀಕ್ಷಣೆ ನಡೆಸಿ, ವಿಜಯಪುರಕ್ಕೆ ಆಗಮಿಸಿದ ಸಚಿವರು,  […]

ಸೈಕ್ಲಿಂಗ್ ವೆಲೊಡ್ರೊಂ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ- ಎನ್. ಮಂಜುನಾಥ ಪ್ರಸಾದ ಸೂಚನೆ

ವಿಜಯಪುರ: ನಗರದ ಹೊರವಲಯದ ಭೂತನಾಳ ಗ್ರಾಮದ ಹತ್ತಿರ ನಿರ್ಮಾಣವಾಗುತ್ತಿರುವ ಸೈಕ್ಲಿಂಗ್ ವೆಲೊಡ್ರೊಂ ಬಾಕಿ ಕಾಮಗಾರಿ ಒಂದು ತಿಂಗಳೊಳಗಾಗಿ ಪೂರ್ಣಗೊಳಿಸುವಂತೆ ಸಹಕಾರ ಇಲಾಖೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ ಅವರು ಸಂಬಂಧಿಸಿದ  ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸೈಕ್ಲಿಂಗ್  ವೆಲೊಡ್ರೊಂ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಕಾಮಗಾರಿಯನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.     ಈ ಕಾಮಗಾರಿಗೆ ಪೂರಕವಾಗಿ ಹೆಚ್ಚುವರಿ ಕಾಮಗಾರಿ  ಕೈಗೆತ್ತಿಕೊಳ್ಳಲು ಅವಶ್ಯವಿರುವ ಅನುದಾನ ಕೋರಿ ಸರಕಾರಕ್ಕೆ […]

ದೇಶದ ಸಾಮಾಜಿಕ, ಆರ್ಥಿಕ ಬೆಳವಣಿಗೆಗೆ ಸಹಕಾರಿ ಕ್ಷೇತ್ರದ ಕೊಡುಗೆ ಅಪಾರ- ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ

ವಿಜಯಪುರ: ದೇಶದ ಸಾಮಾಜಿಕ ಮತ್ತು ಆರ್ಥಿಕತೆ ಬೆಳವಣಿಗೆಗೆ ಸಹಕಾರಿ ಕ್ಷೇತ್ರದ ಕೊಡುಗೆ ಅಪಾರ ಎಂದು ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಹೇಳಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ಬಾಗಲಕೋಟ ಮತ್ತು ಬೆಳಗಾವಿ ಜಿಲ್ಲೆಗಳ ಸ್ಥಳೀಯ ಸಹಕಾರ ಸಂಘಗಳು ಹಾಗೂ ಸಹಕಾರ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಸೋಲಾಪುರ ರಸ್ತೆಯ ಕಿತ್ತೂರು ಚನ್ನಮ್ಮ ನಗರದಲ್ಲಿರುವ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಆವರಣದಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ ಹಾಗೂ […]