ಕುಡಿಯುವ ನೀರಿಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಸಚಿವ ಎಂ. ಬಿ. ಪಾಟೀಲ ಸೂಚನೆ

ವಿಜಯಪುರ: ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇರುವುದರಿಂದ ಮುಂಬರುವ ದಿನಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಈಗಿನಿಂದಲೇ ಯೋಜನಾಬದ್ಧವಾಗಿ ಕುಡಿಯುವ ನೀರಿಗೆ ವಿಷಯದಲ್ಲಿ ವ್ಯವಸ್ಥಿತವಾಗಿ ಕರ್ತವ್ಯ ನಿರ್ವಹಿಸುವಂತೆ ಬೃಹತ್ ಮತ್ತು ಮದ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರಾದ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಬರ ಪರಿಸ್ಥಿತಿ ಹಾಗೂ ಬರ ನಿರ್ವಹಣೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, […]

ಸಚಿವ ಎಂ. ಬಿ. ಪಾಟೀಲ ಅವರಿಂದ ವಿಜಯಪುರ ಜಿಲ್ಲೆ ಬರಪೀಡಿತ ತಾಲೂಕುಗಳಿಗೆ ಭೇಟಿ- ಪರಿಶೀಲನೆ

ವಿಜಯಪುರ: ಬೃಹತ್ ಮತ್ತು ಮದ್ಯಮ ಕೈಗಾರಿಕೆ, ಮೂಲ ಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ. ಬಿ. ಪಾಟೀಲ ಅವರು ಜಿಲ್ಲೆಯ ಬರಪೀಡಿತ  ವಿಜಯಪುರ, ಇಂಡಿ, ಚಡಚಣ, ದೇವರ ಹಿಪ್ಪರಗಿ, ಮುದ್ದೇಬಿಹಾಳ ಹಾಗೂ ಬಸವನ ಬಾಗೇವಾಡಿ ತಾಲೂಕಿನ ನಾನಾ ಪ್ರದೇಶಗಳಿಗೆ ಭೇಟಿ ನೀಡಿ ಬರ ನಿರ್ವಹಣೆ ಪರಿಶೀಲನೆ ಹಾಗೂ ಜನ, ಜಾನುವಾರು, ಕುಡಿಯುವ ನೀರು, ಮೇವಿನ ಪರಿಸ್ಥಿತಿ, ನರೇಗಾ ಯೋಜನೆ ಕಾಮಗಾರಿ, ಗ್ರಾಮೀಣ ಪ್ರದೇಶದವರಿಗೆ ಉದ್ಯೋಗ ಸೃಜನೆ ಸೇರಿದಂತೆ ಜಿಲ್ಲೆಯ ಬರ ಪರಿಸ್ಥಿತಿ ಕುರಿತು […]

ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಂ. ಜವಾಹರಲಾಲ ನೆಹರು ಜನ್ಮದಿನೋತ್ಸವ ಆಚರಣೆ

ವಿಜಯಪುರ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ಪಂ. ಜವಾಹರಲಾಲ ೆಹರು ಅವರ 135ನೇ ಜನ್ಮದಿನವನ್ನು ಆಚರಿಸಲಾಯಿತು.   ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಸದಸ್ಯ ಅಬ್ದುಲ್ ಹಮೀದ್ ಮುಷ್ರಿಫ್, ಪಂ. ಜವಾಹರಲಾಲ ನೆಹರೂ ಅವರು ಈ ದೇಶವನ್ನು ಎತ್ತರಕ್ಕೆ ಕರೆದೊಯ್ದ ಮಹಾನ್ ನಾಯಕರಾಗಿದ್ದಾರೆ.  ಸ್ವತಂತ್ರ ಭಾರತದ ಮೊದಲ ಪ್ರಧಾನ ಮಂತ್ರಿಯಾಗಿ ಶಿಕ್ಷಣಕ್ಕೆ ಮತ್ತು ಆರ್ಥಿಕತೆಯ ಸುಧಾರಣೆಗಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿ ಭದ್ರ ಬುನಾದಿ ಹಾಕಿದ್ದಾರೆ ಎಂದು ಹೇಳಿದರು. ಲೋಕತಂತ್ರ, ಜಾತ್ಯತೀತತೆ, ವಿಜ್ಞಾನ ಕ್ಷೇತ್ರ ಮತ್ತು ಔದ್ಯೋಗಿಕ ಕ್ಷೇತ್ರಗಳನ್ನು […]

ಶ್ರೀ ಸಿದ್ಧೇಶ್ವರ ಸಂಸ್ಥೆಯ ಗೋರಕ್ಷಾ ಕೇಂದ್ರದ ಉತ್ಪನ್ನಗಳ ಮಾರಾಟ ಮಳಿಗೆ ಉದ್ಘಾಟನೆ

ವಿಜಯಪುರ: ಶ್ರೀ ಸಿದ್ಧೇಶ್ವರ ಸಂಸ್ಥೆಯ ಕಗ್ಗೋಡ ಶ್ರೀ ರಾಮನಗೌಡ ಬಾ ಪಾಟೀಲ(ಯತ್ನಾಳ) ಗೋ ರಕ್ಷಾ ಕೇಂದ್ರದ ಸಾವಯವ ಗೋ ಉತ್ಪನ್ನಗಳ ಮಾರಾಟ ಮಳಿಗೆಯನ್ನು ಉದ್ಘಾಟಿಸಲಾಯಿತು. ನಗರದ ಶ್ರೀ ಸಿದ್ಧೇಶ್ವರ ದೇವಾಲಯದ ಪಕ್ಕದಲ್ಲಿ ಪ್ರಾರಂಭಿಸಲಾಗಿರುವ ಈ ಮಾರಾಟ ಮಳಿಗೆಯನ್ನು ಸಂಸ್ಥೆಯ ಉಪಾಧ್ಯಕ್ಷ ಸಂಗು ಸಜ್ಜನ ಮತ್ತು ಚೇರಮನ್‌ ಬಸಯ್ಯ ಎಸ್. ಹಿರೇಮಠ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಎಸ್. ಎಚ್. ದೇಸಾಯಿ, ಬಸವರಾಜ ಸುಗೂರ, ಕೋಶಾಶದ್ಯಕ್ಷ ಶಿವಾನಂದ ನೀಲಾ, ನಿರ್ದೇಶಕ ರಮೇಶ ಹಳ್ಳದ, ಸದಾಶಿವ ಗುಡ್ಡೋಡಗಿ, ಎಂ. […]

ನೆಹರು ಅವರು ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದಾರೆ- ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ

ಬೆಂಗಳೂರು: ಜವಾಹರಲಾಲ ನೆಹರು ಅವರು ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದಾರೆ.  ಅವರ ದೂರದೃಷ್ಟಿಯ ಫಲವನ್ನು ಪ್ರತಿಯೊಬ್ಬರು  ಅನುಭವಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಮಾಜಿ ಪ್ರಧಾನಿ ಜವಾಹರಲಾಲ ನೆಹರೂ ಅವರ 134ನೇ ಜನ್ಮ ದಿನೋತ್ಸವದ ಅಂಗವಾಗಿ ವಿಧಾನಸೌಧದಲ್ಲಿ ಇರುವ ಪ್ರತಿಮೆಗೆ ಹೂಮಾಲೆ ಹಾಕಿ ಗೌರವ ಸಲ್ಲಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಪ್ರಜಾಪ್ರಭುತ್ವ-ಸಮಾಜವಾದ-ಜಾತ್ಯತೀತತೆ ನೆಹರೂ ಬದುಕಿನ ಮೌಲ್ಯಗಳು. ಈ ಮೌಲ್ಯಗಳನ್ನು ಪ್ರಧಾನಮಂತ್ರಿಯಾಗಿ ಭಾರತದಲ್ಲಿ ನೆಲೆಯೂರಿಸಲು ಶ್ರಮಿಸಿದರು.  ಈ ಮೌಲ್ಯಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವುದೇ ನೆಹರೂ ಅವರಿಗೆ […]

ಆನಲೈನ್ ವಂಚನೆ- ನೈಜಿರಿಯಾ ಮೂಲದ ಪೀಟರ್, ಹ್ಯಾಪಿ, ಸ್ಟ್ಯಾನ್ಲಿ ಬಂಧಿಸಿದ ಬಸವ ನಾಡಿನ ಸಿಇಎನ್ ಪೊಲೀಸರು

ವಿಜಯಪುರ: ನಗರದ ಜವಳಿ ಉದ್ಯಮಿಯೊಬ್ಬರಿಗೆ ಆನಲೈನ್ ಮೂಲಕ ವಂಚಿಸಿದ್ದ ನೈಜಿರಿಯಾ ಮೂಲದ ಮೂರು ಜನರನ್ನು ಬಂಧಿಸುವಲ್ಲಿ ವಿಜಯಪುರ ಸಿಇಎನ್ ಪೊಲೀಸರು ಯಶಸ್ವಿಯಾಗಿದ್ದಾರೆ. ಕ್ರಿಪ್ಟೋ ಮೈನಿಂಗ್ ನಲ್ಲಿ ಹೂಡಿಕೆ ಮಾಡಿದರೆ ಹಾಕಿದ ಬಂಡವಾಳದ ಹಣದ ಜೊತೆಗೆ ಶೇ. 200 ರಷ್ಟು ಲಾಭಾಂಶ ಕೊಡುವದಾಗಿ ಹೇಳಿ ಈ ಆರೋಪಿಗಳು ನಾನಾ ಸುಳ್ಳು ಸಬೂಬೂಗಳನ್ನು ಉದ್ಯಮಿಯಿಂದ ನಾನಾ ಹಂತಗಳಲ್ಲಿ ತಮ್ಮ ಬ್ಯಾಂಕ್ ಖಾತೆಗಳಿಗೆ ರೂ. 59 ಲಕ್ಷ 12 ಸಾವಿರದ 765  ಹಣವನ್ನು ಹಾಕಿಸಿಕೊಂಡಿದ್ದರು.  ಅಲ್ಲದೇ, ಉದ್ಯಮಿಗೆ ಯಾವುದೇ ಲಾಭಾಂಶ ಕೊಡದೇ […]

ಸಚಿವ ಎಂ. ಬಿ. ಪಾಟೀಲರಿಂದ ನ. 15 ರಿಂದ 16 ರಂದು ವಿಜಯಪುರ ಜಿಲ್ಲಾ ಪ್ರವಾಸ

ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು, ನವೆಂಬರ್ 14 ರಿಂದ ನವೆಂಬರ್ 16ರ ವರೆಗೆ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ನವೆಂಬರ್ 14 ರಂದು ಮಂಗಳವಾರ ರಾತ್ರಿ ವಿಜಯಪುರಕ್ಕೆ ಆಗಮಿಸಲಿರುವ ಅವರು ವಾಸ್ತವ್ಯ ಮಾಡಲಿದ್ದಾರೆ. ನವೆಂಬರ್ 15 ರಂದು ಬುಧವಾರ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯ ವರೆಗೆ ವಿಜಯಪುರ ಜಿಲ್ಲೆಯ ಬರಪೀಡಿತ ತಾಲೂಕುಗಳಿಗೆ ಭೇಟಿ ನೀಡಲಿದ್ದಾರೆ. ಅಲ್ಲದೇ, ಬರ […]

ಚುನಾವಣೆಗಳು ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುತ್ತವೆ- ಡಾ. ಪ್ರಕಾಶ ಸಿದ್ದಾಪುರ

ವಿಜಯಪುರ: ಚುನಾವಣೆಗಳು ಪ್ರಜಾಪ್ರಭುತ್ವನ್ನು ಗಟ್ಟಿಗೊಳಿಸುತ್ತವೆ.  ಈ ಪ್ರಕ್ರಿಯೆಯಲ್ಲಿ ಎಲ್ಲರೂ ಪಾಲ್ಗೋಂಡು ತಮ್ಮ ಹಕ್ಕು ಚಲಾಯಿಸಬೇಕು ಎಂದು ತಿಕೋಟಾ ಬಿ. ಎಲ್. ಡಿ. ಇ ನರ್ಸಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಪ್ರಕಾಶ ಸಿದ್ದಾಪುರ ಹೇಳಿದ್ದಾರೆ. ತಿಕೋಟಾ ಪಟ್ಟಣದಲ್ಲಿರುವ ಬಿ. ಎಲ್. ಡಿ. ಇ ನರ್ಸಿಂಗ್ ಕಾಲೇಜಿನಲ್ಲಿ  ಶನಿವಾರ ಚುನಾವಣೆ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿದ್ದ ರಸಪ್ರಶ್ನೆ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಚುನಾವಣೆ ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅವರು, ಮತದಾನ ಪ್ರತಿಯೊಬ್ಬರ ಹಕ್ಕು.  ಎಲ್ಲರೂ ನರ್ಸಿಂಗ್ […]

ಬಿ. ವೈ. ವಿಜಯೇಂದ್ರ ನೇತೃತ್ವದಲ್ಲಿ 25 ಲೋಕಸಭೆ ಸೀಟುಗಳಲ್ಲಿ ಬಿಜೆಪಿ ಗೆಲುವು- ನಮ್ಮವರೇ ಪ್ರತಿಪಕ್ಷದ ನಾಯಕರಾಗ್ತಾರೆ- ಗೋವಿಂದ ಕಾರಜೋಳ

ವಿಜಯಪುರ: ಶಾಸಕ ಬಿ. ವೈ. ವಿಜಯೇಂದ್ರ ಅವರನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿರುವುದನ್ನು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಸ್ವಾಗತಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾಡಿನ ಜನತೆಗೆ ದೀಪಾವಳಿ ಶುಭಾಷಯ ಕೋರಿದರು.  ಬೆಳಕಿನ ಹಬ್ಬ ದೀಪಾವಳಿ ಸಂದರ್ಭದಲ್ಲಿ ಶಾಸಕ ಬಿ. ವೈ. ವಿಜಯೇಂದ್ರ ಅವರನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿರುವುದ್ನನು ಅವರು ಸ್ವಾಗತಿಸಿದರು. ಬಿಜೆಪಿ ಯುವಕರಿಗೆ ಪ್ರೋತ್ಸಾಹ ಕೊಡುತ್ತದೆ ಎಂಬುದನ್ನು ಹೈಕಮಾಂಡ್ ಮತ್ತೆ ಎತ್ತಿ ತೋರಿಸಿದೆ.  ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ […]

ಬಿಜೆಪಿ ಕೋಮುದ್ವೇಷ ಬಿತ್ತನೆಯಲ್ಲಿ ತೊಡಗಿದೆ- ಕಮಲ ಪಡೆಗೆ ಅಧಿಕಾರದ ಬರ ಕಾಡುತ್ತಿದೆ- ಎಸ್. ಎಂ. ಪಾಟೀಲ ಗಣಿಹಾರ

ವಿಜಯಪುರ: ಕೋಮುದ್ವೇಷ ಬಿತ್ತನೆಯಲ್ಲಿ ತೊಡಗಿರುವ ಬಿಜೆಪಿಗೆ ಅಧಿಕಾರದ ಬರ ಕಾಡುತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಸ್. ಎಂ. ಪಾಟೀಲ ಗಣಿಹಾರ ಆರೋಪಿಸಿದ್ದಾರೆ. ಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಬಿಜೆಪಿಗೆ ಅಧಿಕಾರದ ಮದವೇರಿತ್ತು.  ಕಾಂಗ್ರೆಸ್ ಅಧಿಕಾರಕಕ್ಕೆ ಬಂದ ಮೇಲೆ ಕಮಲ ಪಡೆಗೆ ಅಧಿಕಾರದ ಬರ ಕಾಡುತ್ತಿದೆ.  ಇದರ ಪರಿಣಾಮವಾಗಿ ಬಿಜೆಪಿ ನಾಯಕರು ಸ್ವಾರ್ಥಕ್ಕಾಗಿ ಬರ ಅಧ್ಯಯನ ಮಾಡುತ್ತಿದ್ದಾರೆ ಹೊರತು ರೈತರ ಮೇಲಿನ ಕಾಳಜಿಯಿಂದ ಅಲ್ಲ ಎಂದು ವಾಗ್ದಾಳಿ ನಡೆಸಿದರು. ಡೋಂಗಿ ರಾಜಕಾರಣ ಮಾಡುತ್ತಿರುವ ಬಿಜೆಪಿ ನಾಯಕರಿಗೆ […]