ವೀರಯೋಧ ಕಾಶೀರಾಯ ಬಮ್ಮನಳ್ಳಿ ಸ್ಮರಣಾರ್ಥ ಸರ್ವಧರ್ಮ ಸಮ್ಮೇಳನ- ದೇಶಪ್ರೇಮ ಬೆಳೆಸಿಕೊಳ್ಳಲು ಗೋವಿಂದ ಕಾರಜೋಳ ಕರೆ

ವಿಜಯಪುರ: ಈ ದೇಶದಲ್ಲಿ ವಾಸಿಸುವ ಪ್ರತಿಯೊಬ್ಬರು ದೇಶಪ್ರೇಮ ಮೆರೆಯಬೇಕು. ಪ್ರತಿಯೊಬ್ಬ ಭಾರತೀಯರು ಯಾವುದೇ ಜಾತಿ-ಮತ ಪಂಥಗಳನ್ನು ಮೀರಿ ರಾಷ್ಟ್ರಪ್ರೇಮ ಬೆಳೆಸಿಕೊಂಡು, ಒಗ್ಗಟ್ಟಾಗಿ ಸುಭದ್ರ ದೇಶ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಕರೆ ನೀಡಿದರು. ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದ ಬಿಎಲ್‌ಡಿಇ ಸಂಸ್ಥೆಯ ನ್ಯೂ ಇಂಗ್ಲೀಷ್ ಹೈಸ್ಕೂಲ್ ಆವರಣದಲ್ಲಿ ಪುಲ್ವಾಮಾ ದಾಳಿಯಲ್ಲಿ ಹುತ್ಮಾತ್ಮರಾದ ವೀರಯೋಧ ಶೌರ್ಯಚಕ್ರ ಪ್ರಶಸ್ತಿ ಪುರಸ್ಕೃತ ಹವಲ್ದಾರ ಕಾಶೀರಾಯ ಬಮ್ಮನಳ್ಳಿ ಅವರ ಕಂಚಿನ ಪುತ್ಥಳಿ ಅನಾವರಣ ಹಾಗೂ […]

ಕೇಂದ್ರ ಸರಕಾರದ ಯೋಜನೆಗಳ ಸದುಪಯೋಗ ಪಡಿಸಿಕೊಳ್ಳಿ- ಸಂಸದ ಜಿಗಜಿಣಗಿ ಕರೆ

ವಿಜಯಪುರ: ಕೇಂದ್ರ ಸರಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಯೋಜನೆಗಳ ಬಗ್ಗೆ ಸಾರ್ವಜನಿಕರು ಅರಿತುಕೊಂಡು ಅದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ. ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕೇಂದ್ರ ಸಂವಹನ ಇಲಾಖೆ, ವಿಜಯಪುರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನೆಹರು ಯುವ ಕೇಂದ್ರ, ವಿಜಯಪುರ ಇವರುಗಳ  ಸಹಯೋಗದಲ್ಲಿ ನಗರದ ಪಿ ಡಿ ಜೆ ಪದವಿ ವೂರ್ವ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ […]

ಕೋಲ್ಡ್ ಸ್ಟೋರೇಜ್ ನಿರ್ಮಾಣ ಕಾಮಗಾರಿ ಡಿಪಿಆರ್ ತಯಾರಿಸಿ ಟೆಂಡರ್ ಪ್ರಕ್ರಿಯೆ ಮುಗಿಸಿ- ರಾಹುಲ್ ಶಿಂಧೆ

ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ  ಅವರು  ತಿಕೋಟಾ ತಾಲೂಕಿನ ತೊರವಿ ಗ್ರಾಮಕ್ಕೆ ಭೇಟಿ ನೀಡಿ 10,000 ಮೆಟ್ರಿಕ್ ಟನ್ ಸಾಮರ್ಥ್ಯದ ಕೋಲ್ಡ್ ಸ್ಟೋರೇಜ್ ನಿರ್ಮಾಣ ಸ್ಥಳ ಪರಿಶೀಲನೆ ನಡೆಸಿದರು.  ಸರಕಾರದಿಂದ ಮಂಜೂರಾದ 10,000 ಮೇಟ್ರಿಕ್ ಟನ್ ಸಾಮರ್ಥ್ಯದ ಕೋಲ್ಡ್ ಸ್ಟೋರೇಜ್ ನಿರ್ಮಾಣ ಸ್ಥಳಕ್ಕೆ ನವೆಂಬರ್ 8 ರಂದು NABCONS ಸಂಸ್ಥೆಯಿxದ ಎx.ಎಸ್.ಎಲ್ ಪ್ರಭಾಕರ, ವ್ಯವಸ್ಥಾಪಕ ನಿರ್ದೇಶಕರು, SONNE Infrastructure ಹಾಗೂ ವಿ. ಭರತ, ಯೋಜನಾ ಸಲಹೆಗಾರರು, NABCONS ಮತ್ತು ವ್ಯವಸ್ಥಾಪಕ ನಿರ್ದೇಶಕರು, […]

ರಾಷ್ಟ್ರೀಯ ಶರೀರಕ್ರಿಯಾ ಶಾಸ್ತ್ರಜ್ಞರ ಸೊಸಾಯಿಟಿಯ 34ನೇ ರಾಷ್ಟ್ರೀಯ ಸಮ್ಮೇಳನ ಯಶಸ್ವಿ

ವಿಜಯಪುರ: ರಾಷ್ಟ್ರೀಯ ಶರೀರಕ್ರಿಯಾ ಶಾಸ್ತ್ರಜ್ಞರ ಸೊಸಾಯಿಟಿಯ 34ನೇ ರಾಷ್ಟ್ರೀಯ ಸಮ್ಮೇಳನ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ನವೆಂಬರ್ 1 ಬುಧವಾರದಿಂದ ನವೆಂಬರ್ 3ರ ಶುಕ್ರವಾರದ ವರೆಗೆ ನಡೆಯಿತು. ರಾಷ್ಟ್ರೀಯ ಶರೀರಕ್ರಿಯಾ ಶಾಸ್ತ್ರಜ್ಞರ ಸೊಸೈಟಿಯ ಈ ಸಮ್ಮೇಳನವನ್ನು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೊಧನಾ ಕೇಂದ್ರದ ಶರೀರ ಕ್ರಿಯಾ ಶಾಸ್ತ್ರ ವಿಭಾಗ ಆಯೋಜಿಸಿತ್ತು. ಸಮ್ಮೆಳನದ ಮೊದಲ ದಿನ ನಿರಂತರ ವೈದ್ಯಕೀಯ ಶಿಕ್ಷಣ ಹಾಗೂ ಕಾರ್ಯಾಗಾರವನ್ನು ನಡೆಯಿತು. ಈ ಕಾರ್ಯಾಗಾರದಲ್ಲಿ […]

ಮರದ ಕೊಂಬೆ ಬಿದ್ದು ಮೆದುಳಲ್ಲಿ ರಕ್ತಸ್ರಾವವಾಗಿದ್ದ ವ್ಯಕ್ತಿಗೆ ಫೋರ್ಟೀಸ್ ಆಸ್ಪತ್ರೆ ವೈದ್ಯರ ಯಶಸ್ವಿ ಸಂಕೀರ್ಣ ಶಸ್ತ್ರಚಿಕಿತ್ಸೆ- ಡಾ. ರಾಜಕುಮಾರ್ ದೇಶಪಾಂಡೆ

ಬೆಂಗಳೂರು: ಮರದ ಕೊಂಬೆ ತಲೆ ಮೇಲೆ ಬಿದ್ದು ಮೆದುಳಿನ ಭಾಗದಲ್ಲಿ ರಕ್ತ ಸ್ರಾವವಾಗಿ ಸಾವಿನ ದವಡೆಯಲ್ಲಿದ್ದ ವ್ಯಕ್ತಿಗೆ ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ಸಂಕೀರ್ಣ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಈ ಕುರಿತು ಮಾತನಾಡಿದ ಫೋರ್ಟಿಸ್ ಆಸ್ಪತ್ರೆಯ ನರಶಸ್ತ್ರಚಿಕಿತ್ಸಾ ವಿಭಾಗದ ನಿರ್ದೇಶಕ ಡಾ. ರಾಜಕುಮಾರ್ ದೇಶಪಾಂಡೆ, ೩೫ ವರ್ಷದ ವ್ಯಕ್ತಿ ಬೆಳಗ್ಗಿನ ಜಾವ ಉದ್ಯಾನವನದಲ್ಲಿ ವಾಕಿಂಗ್‌ ಮಾಡುವ ವೇಳೆ ಮರದ ಕೊಂಬೆಯೊಂದು ನೇರವಾಗಿ ಅವರ ತಲೆ ಮೇಲೆ ಬಿದ್ದ ಪರಿಣಾಮ ತಲೆಗೆ ತೀವ್ರತರವಾದ ಗಾಯವಾಗಿ ಸಾಕಷ್ಟು ರಕ್ತ ಕಳೆದುಕೊಂಡಿದ್ದರು. […]

ತೆರಿಗೆ ಹಣದಲ್ಲಿ ಅಭಿವೃದಿ ಕಾರ್ಯಗಳನ್ನು ಕೈಗೊಳ್ಳುವಂತೆ ಸಚಿವ ಶಿವಾನಂದ ಎಸ್.ಪಾಟೀಲ ಅಧಿಕಾರಿಗಳಿಗೆ ಸೂಚನೆ ಸೂಚನೆ

ವಿಜಯಪುರ: ತೆರಿಗೆಯಿಂದ ಬಂದ ಹಣದಲ್ಲಿ ಮಸೂತಿ, ಕೂಡಗಿ, ತೆಲಗಿ ಮುತ್ತಗಿ ಮತ್ತು ಗೊಳಸಂಗಿಯಲ್ಲಿ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳುವಂತೆ ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್. ಪಾಟೀಲ ಸೂಚನೆ ನೀಡಿದ್ದಾರೆ. ಕೊಲ್ಹಾರ ತಾಲೂಕಿನ ಕೂಡಗಿ ಎನ್‌ ಟಿ ಪಿ ಸಿ ಸಭಾಭವನದಲ್ಲಿ ನಡೆದ 11ನೇ ಗ್ರಾಮ ಅಭಿವೃದ್ದಿ ಸಲಹಾ ಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇನ್ನೂ ಪ್ರಗತಿಯಲ್ಲಿರುವ  ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು.  ಬಾಕಿ ಮತ್ತು ಇನ್ನೂ ಆರಂಭವಾಗದ ಕಾಮಗಾರಿಗಳ […]

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ರಫೀ ಬಂಡಾರಿ ಅವರಿಗೆ ಸನ್ಮಾನ

ವಿಜಯಪರ: ಪ್ರಸಕ್ತ ವರ್ಷ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರರಾದ ಡೇಲಿ ಸಾಲಾರ ಉರ್ದುು ದಿನಪತ್ರಿಕೆಯ ಹಿರಿಯ ಪತ್ರಕರ್ತ ರಫೀ ಭಂಡಾರಿ ಅವರನ್ನು ಅವರ ಅಭಿಮಾನಿಗಳು ಹಾಗೂ ನಾನಾ ಮುಖಂಡರು ಸನ್ಮಾನಿಸಿ ಗೌರವಿಸಿದರು.  ನಗರದ ಗಗನ ಮಹಲ ಉದ್ಯಾನವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಾಯು ವಿಹಾರ ಬಳಗದ ನಾನಾ ಸಮಾಜದ ಮುಖಂಡರು ಅತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ರಪೀ ಭಂಡಾರಿ, ತಮ್ಮ ಈ ಪ್ರಶಸ್ತಿಯನ್ನು ಭಾಷೆ ಮತ್ತು ಕೋಮು ಸೌಹಾರ್ಧತೆಗೆ ಸಮರ್ಪಿಸುವುದಾಗಿ ತಿಳಿಸಿದರು. ಹಿಂದೂ- ಮುಸ್ಲಿಂ ಸಮಾಜ […]

ಇಂಡಿ ತಾಲೂಕಿನ ಕೆರೆ ಕಾಲುವೆಗಳಿಗೆ ನೀರು ಹರಿಸದಿದ್ದರೆ ರಾಜೀನಾಮೆ- ನೂತನ ಜಿಲ್ಲೆ ಮಾಡದಿದ್ದರೆ ರಾಜಕೀಯ ನಿವೃತ್ತಿ- ಶಾಸಕ ಯಶವಂತರಾಯಗೌಡ ವಿ. ಪಾಟೀಲ ಎಚ್ಚರಿಕೆ

ವಿಜಯಪುರ: ಇಂಡಿ ಮತಕ್ಷೇತ್ರದ ಕೆರೆ ಮತ್ತು ಕಾಲುವೆಗಳಿಗೆ ನೀರು ಹರಿಸದಿದ್ದರೆ ರಾಜೀನಾಮೆ ನೀಡುವುದಾಗಿ ಆಡಳಿತಾರೂಢ ಇಂಡಿ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ವಿ. ಪಾಟೀಲ ಎಚ್ಚರಿಕೆ ನೀಡಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀರಾವರಿ ಯೋಜನೆಗಳಡಿ ಇಂಡಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಭೌತಿಕವಾಗಿ ಕಾಮಗಾರಿಗಳು ಮುಗಿದಿವೆ.  ಆದರೆ, ಈ ಯೋಜನೆಗಳು ಪೂರ್ಣಗೊಂಡು 22 ವರ್ಷಗಳು ಕಳೆದರೂ ಈವರೆಗೂ ಕಾಲುವೆಯ ಟೇಲ್ ಎಂಡ(ಕೊನೆಯ ತುದಿ) ವರೆಗೂ ನೀರು ಹರಿಯುತ್ತಿಲ್ಲ.  ಈಗ ಭೀಕರ ಬರ ಎದುರಾಗಿರುವ ಹಿನ್ನಲೆಯಲ್ಲಿ ರೈತರು, ಜನ, ಜಾನುವಾರುಗಳು ಸಂಕಷ್ಟದಲ್ಲಿದ್ದಾರೆ.  […]

ಬಿ.ಎಲ್.ಡಿ.ಇ ಸಂಸ್ಥೆ ಬಸವ ನಾಡಿನ ಸರ್ವಾಂಗೀಣ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದೆ- ಅಥಣಿ ಶ್ರೀ ಪ್ರಭುಚನ್ನಬಸವ ಸ್ವಾಮೀಜಿ

ವಿಜಯಪುರ: ಬಸವಾದಿ ಶರಣರ ಆಶಯದಂತೆ ಪ್ರಾರಂಭವಾದ ಬಿ.ಎಲ್.ಡಿ.ಇ ಸಂಸ್ಥೆ ಜಿಲ್ಲೆಯ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕೃತಿಕ ಸೇರಿದಂತೆ ಸರ್ವತೋಮುಖ ಅಭಿವೃದ್ಧಿಗೆ ಕಾರಣವಾಗಿದೆ ಎಂದು ಅಥಣಿಯ ಶ್ರೀ ಮೋಟಗಿಮಠದ ಶ್ರೀ ಪ್ರಭುಚನ್ನಬಸಸವ ಸ್ವಾಮೀಜಿ ಹೇಳಿದ್ದಾರೆ. ನಗರದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಗ್ರಂಥಾಲಯದಲ್ಲಿ ಎ. ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯ ಆಯೋಜಿಸಿದ್ದ ಬಿ.ಎಲ್.ಡಿ.ಇ ಸಂಸ್ಥೆಯ ಸಂಸ್ಥಾಪನೆ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಬ್ರಿಟೀಷರ ಆಡಳಿತದಲ್ಲಿ ಹಿಂದುಳಿದಿದ್ದ ಅಖಂಡ ವಿಜಯಪುರ ಜಿಲ್ಲೆಯಲ್ಲಿ ಸರ್ವಾಂಗೀಣ ಅಭಿವೃದ್ಧಿಗಾಗಿ 1910ರಲ್ಲಿ […]

ಕಟೀಲ ಬರ ಅಧ್ಯಯನ ಬದಲು ಬಿಜೆಪಿ ಪ್ರತಿಪಕ್ಷದ ನಾಯಕನ ಆಯ್ಕೆ ಅಧ್ಯಯನ ನಡೆಸಲಿ- ಸುನೀಲಗೌಡ ಪಾಟೀಲ

ವಿಜಯಪುರ: ಬಿಜೆಪಿ ರಾಜ್ಯಾದ್ಯಕ್ಷ ನಳೀನ ಕುಮಾರ ಕಟೀಲ ಬರ ಅಧ್ಯಯನ ನಡೆಸುವ ಬದಲು ತಮ್ಮ ಪಕ್ಷದಲ್ಲಿ ಪ್ರತಿಪಕ್ಷದ ನಾಯಕನ ಆಯ್ಕೆಗೆ ಅಧ್ಯಯನ ನಡೆಸಲಿ ಎಂದು ಎಂ. ಎಲ್. ಸಿ. ಸುನೀಲಗೌಡ ಪಾಟೀಲ ವ್ಯಂಗ್ಯವಾಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬರ ಅಧ್ಯಯನಕ್ಕೆ ತಿಕೋಟಾ ತಾಲೂಕಿಗೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ ನೇತೃತ್ವದ ತಂಡ ಜಿಲ್ಲೆಯಲ್ಲಿ ಸಚಿವ ಎಂ. ಬಿ. ಪಾಟೀಲ ಅವರು ಮಾಡಿರುವ ನೀರಾವರಿ ಯೋಜನೆಗಳನ್ನು ನೋಡಿ ಖುಷಿಪಟ್ಟಿದೆ ಎಂದು ತಿಳಿಸಿದ್ದಾರೆ. […]