ಯುವ ಸಂಶೋಧಕರು ನೈಜತೆ, ಗುಣಮಟ್ಟದ ಸಂಶೋಧನೆಗೆ ಒತ್ತು ನೀಡಬೇಕು- ಶಂಕರಗೌಡ ಸೋಮನಾಳ

ವಿಜಯಪುರ: ಸಂಶೋಧನೆ ರಾಷ್ಟ್ರದ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ಯುವ ಸಂಶೋಧಕರು ನೈಜತೆಗೆ ಮತ್ತು ಗುಣಮಟ್ಟದ ಸಂಶೋಧನೆಗೆ ಒತ್ತು ನೀಡಬೇಕು. ಇದಕ್ಕಾಗಿ ಅವರಿಗೆ ಸೂಕ್ತ ತರಬೇತಿ ಮತ್ತು ಮಾರ್ಗದರ್ಶನ ನೀಡುವುದು ಅಗತ್ಯವಾಗಿದೆ ಎಂದು ಕುಲಸಚಿವ ಶಂಕರಗೌಡ ಸೋಮನಾಳ ಹೇಳಿದರು. ತಿಕೋಟಾ ತಾಲೂಕಿನ ತೊರವಿಯಲ್ಲಿರುವ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ 12 ದಿನಗಳ ಕಾಲ ನಡೆದ ಐ.ಸಿ.ಎಸ್‌.ಎಸ್‌.ಆರ್ ಪ್ರಾಯೋಜಿತ ಸಾಮರ್ಥ್ಯ ವೃದ್ಧಿ ಕಾರ್ಯಗಾರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಈ ಕಾರ್ಯಾಗಾರ ಯುವ ಸಂಶೋಧಕರಲ್ಲಿ ಗುಣಮಟ್ಟದ ಸಂಶೋಧನೆಗೆ ಒತ್ತು […]

ವಿಕಲಚೇತನರು ಸ್ವಾವಲಂಬಿ ಜೀವನ ನಡೆಸಲು ತರಬೇತಿ ಅಗತ್ಯ- ಜಿಲ್ಲಾಧಿಕಾರಿ ಟಿ. ಭೂಬಾಲನ

ವಿಜಯಪುರ: ವಿಕಲಚೇತನರಲ್ಲಿರುವ ಕೌಶಲ್ಯಾಭಿವೃದ್ದಿಯನ್ನು ಗುರುತಿಸಿ, ಅವರ ಕೌಶಲ್ಯಕ್ಕೆ ತಕ್ಕಂತೆ ಸೂಕ್ತ ತರಬೇತಿ ಒದಗಿಸುವ ಮೂಲಕ ವಿಕಲಚೇತನರು ಸ್ವಾವಲಂಬಿ ಜೀವನ ನಡೆಸುವಂತೆ ಅನುಕೂಲ ಕಲ್ಪಿಸುವಂತೆ ಜಿಲ್ಲಾಧಿಕಾರಿ ಟಿ. ಭೂಬಾಲನ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.  ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವಿಕಲಚೇತನರ  ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.  ಜಿಲ್ಲೆಯ ಎಲ್ಲಾ ತಾಲೂಕಾ ಮಟ್ಟದಲ್ಲಿ ವಿಕಲಚೇತನರ ಕುಂದುಕೊರತೆ ಸಭೆಗಳನ್ನು ಆಯೋಜಿಸಿ ಪರಿಹಾರ ಒದಗಿಸಲು ಪ್ರಯತ್ನಿಸಬೇಕು. ವಿಕಲಚೇತನರಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಸರ್ಕಾರಿ ಕಚೇರಿ ,ಆಸ್ಪತ್ರೆ, ಶಾಲಾ ಕಾಲೇಜುಗಳಲ್ಲಿ ಬ್ಯಾಂಕ್‌ಗಳಲ್ಲಿ […]

ವಿಜಯಪುರ ರೈಲು ನಿಲ್ದಾಣಕ್ಕೆ ಶ್ರೀ ಸಿದ್ದೇಶ್ವರ ಮಹಾಸ್ವಾಮಿಯವರ ನಾಮಕರಣ: ಅಭಿಪ್ರಾಯಗಳ ಆಹ್ವಾನ

ವಿಜಯಪುರ: ವಿಜಯಪುರ ರೈಲು ನಿಲ್ದಾಣಕ್ಕೆ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಮಹಾಸ್ವಾಮಿಯವರ ನಾಮಕರಣ ಮಾಡಲು ಸಂಘ- ಸxಸ್ಥೆಗಳು, ಗಣ್ಯ ವ್ಯಕ್ತಿಗಳಿಂದ ಅರ್ಜಿಗಳು ಸ್ವೀಕೃತವಾಗಿವೆ.  ಈ  ಹಿನ್ನಲೆಯಲ್ಲಿ ವಿಜಯಪುರ ರೈಲು ನಿಲ್ದಾಣಕ್ಕೆ ಶ್ರೀ ಸಿದ್ದೇಶ್ವರ ಮಹಾಸ್ವಾಮಿಯವರ ಹೆಸರು ನಾಮಕರಣ ಮಾಡಲು ಜಿಲ್ಲೆಯ ಪ್ರತಿನಿಧಿಗಳ, ಗಣ್ಯವ್ಯಕ್ತಿಗಳು ಹಾಗೂ ಸಾರ್ವಜನಿಕರಿಂದ ಅಭಿಪ್ರಾಯವನ್ನು ಆಹ್ವಾನಿಸಲಾಗಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ವಿಜಯಪುರ ರೈಲು ನಿಲ್ದಾಣಕ್ಕೆ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಮಹಾಸ್ವಾಮಿಯವರ ಹೆಸರನ್ನು ನಾಮಕರಣ ಮಾಡುವ ಕುರಿತು ಸ್ಪಷ್ಟ […]

ಸ್ಪೂರ್ತಿ ಫೌಂಡೇಶನ್ ಕಾರ್ಯ ಶ್ಲಾಘನೀಯ- ಅಮೃತಾನಂದ ಮಹಾಸ್ವಾಮಿ

ವಿಜಯಪುರ: ಸ್ಪೂರ್ತಿ ಫೌಂಡೇಶನ್ ನಾನಾ ಕಾರ್ಯಕ್ರಮಗಳ ಮೂಲಕ ಸಮಾಜ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ ಎಂದು ಶ್ರೀ ಅಮೃತಾನಂದ ಮಹಾಸ್ವಾಮೀಜಿ ಹೇಳಿದ್ದಾರೆ. ಫೌಂಡೇಶನ್ ವತಿಯಿಂದ ಸ್ಪೂರ್ತಿ ಫೌಂಡೇಶನ್ ವತಿಯಿಂದ ನಗರದ ಜ್ಞಾನಯೋಗಾಶ್ರಮದಲ್ಲಿ ಆಯೋಜಿಸಲಾಗಿದ್ದ ಸ್ವಚ್ಛತೆ ಮತ್ತು ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಫೌಂಡೇಶನ್ ಬಹಳಷ್ಟು ಸಾಮಾಜಿಕ ಕೆಲಸ ಮಾಡುತ್ತಿದೆ ಎಂಬುದು ನನ್ನ ಗಮನಕ್ಕೆ ಬಂದಿದೆ.  ಬಡ ಮಕ್ಕಳಿಗಾಗಿ ಓದುವುದಕ್ಕಾಗಿ ಗ್ರಂಥಾಲಯ ವ್ಯವಸ್ಥೆ ಮಾಡಿರುವುದು, ಬಡ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಾಕಷ್ಟು ಅನುಕೂಲ ಒದಗಿಸಿದಂತಾಗಿದೆ.  ಈಗ […]

ಪೊಲೀಸ್ ಹುತಾತ್ಮ ದಿನ ಆಚರಣೆ: ನಮ್ಮ ಸಂರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದ ಪೊಲೀಸರ್ ಸ್ಮರಣೆ ನಮ್ಮ ಕರ್ತವ್ಯ- ಟಿ. ಭೂಬಾಲನ

ವಿಜಯಪುರ: ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಮಾಡುತ್ತಾ ಸಮಾಜದ ಭದ್ರತೆ ಹಾಗೂ ಸುರಕ್ಷತೆಗಾಗಿ ಪ್ರಾಣ ಮುಡುಪಾಗಿಟ್ಟ ಪೊಲೀಸ್ ಅವರನ್ನು ಸ್ಮರಣೆ ಮಾಡುವುದು ನಮ್ಮ  ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಹೇಳಿದ್ದಾರೆ. ಜಿಲ್ಲಾ ಪೊಲೀಸ್ ವತಿಯಿಂದ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮ ಪೊಲೀಸ್ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿ ಅವರು ಮಾತನಾಡಿದರು. ನಮ್ಮ ರಕ್ಷಣೆ ಮಾಡುವ ಸಂದರ್ಭ ಹೋರಾಡಿ ತಮ್ಮ ಜೀವನ ತ್ಯಾಗ ಮಾಡಿದ ಪೊಲೀಸರಿಗೆ ಕಾಶ್ಮೀರದಿಂದ […]

ವಿಜಯಪುರ ಜಿಲ್ಲೆಗೆ ಬಸವ ಜಿಲ್ಲೆ, ಬಸವೇಶ್ವರ ಜಿಲ್ಲೆ ನಾಮಕರಣ: ಅಭಿಪ್ರಾಯಗಳ ಆಹ್ವಾನ

ವಿಜಯಪುರ: ವಿಶ್ವಕ್ಕೆ ಸಮಾನತೆ ಸಾರಿದ ವಿಶ್ವಗುರು ಬಸವಣ್ಣನವರು ಜನಿಸಿದ ವಿಜಯಪುರ ಜಿಲ್ಲೆಗೆ ಬಸವ ಜಿಲ್ಲೆ ಅಥವಾ ಬಸವೇಶ್ವರ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಸಂಘ- ಸಂಸ್ಥೆಗಳು, ಗಣ್ಯ ವ್ಯಕ್ತಿಗಳಿಂದ ಅರ್ಜಿಗಳು ಸ್ವೀಕೃತವಾಗಿರುವೆ.  ಈ ಹಿನ್ನಲೆಯಲ್ಲಿ  ವಿಶ್ವ ಗುರು ಬಸವಣ್ಣನವರ ಹೆಸರನ್ನು ವಿಜಯಪುರ ಜಿಲ್ಲೆಗೆ ಮರು ನಾಮಕರಣ ಮಾಡಲು ಜಿಲ್ಲೆಯ ಪ್ರತಿನಿಧಿಗಳ, ಗಣ್ಯವ್ಯಕ್ತಿಗಳ ಹಾಗೂ ಸಾರ್ವಜನಿಕರಿಂದ ಅಭಿಪ್ರಾಯವನ್ನು ಆಹ್ವಾನಿಸಲಾಗಿದೆ. ಈ ಪ್ರಕಟಣೆಯ 15 ದಿನಗಳೊಳಗಾಗಿ ವಿಶ್ವಗುರು ಬಸವಣ್ಣನವರ ಹೆಸರನ್ನು ವಿಜಯಪುರ ಜಿಲ್ಲೆಗೆ ಮರು ನಾಮಕರಣ ಮಾಡುವ ಕುರಿತು […]

ನೇಕಾರರಿಗೆ 250 ಯುನಿಟ್ ಉಚಿತ ವಿದ್ಯುತ್- ನ. 20 ರಂದು ವಿಜಯಪುರದಲ್ಲಿ ಸಹಕಾರಿ ಸಪ್ತಾರ ಕಾರ್ಯಕ್ರಮ- ಶಿವಾನಂದ ಎಸ್. ಪಾಟೀಲ

ವಿಜಯಪುರ: ನೇಕಾರರಿಗೆ 250 ಯುನಿಟ್ ಉಚಿತ ವಿದ್ಯುತ್ ಘೋಷಣೆ ಜಾರಿ ಮಾಡುವ ಮೂಲಕ ಸರಕಾರ ದೀಪಾವಳಿ ಗಿಫ್ಟ್ ನೀಡಿದೆ ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಮತ್ತು ಎ. ಪಿ. ಎಂ. ಸಿ ಸಚಿವ ಶಿವಾನಂದ ಎಸ್. ಪಾಟೀಲ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಜೆಟ್ ನಲ್ಲಿ ಘೋಷಿಸಿದಂತೆ ನೇಕಾರಿ 10 ಎಚ್ ಪಿ ವರೆಗೆ ವಿದ್ಯುತ್ ಉಚಿತವಾಗಿ ನೀಡಲಾಗುತ್ತಿದೆ.  ಈಗ ಈ ಕುರಿತು ಆದೇಶ ಹೊರಡಿಸಲಾಗಿದೆ.  10 ಎಚ್. ಪಿ. ವರೆಗೆ ನೇಕಾರರು ಪುಕ್ಕಟ್ಟೆಯಾಗಿ […]

ಐದು ಚಿನ್ನದ ಪದಕ ಪಡೆದ ಶಿಕ್ಷಕಿಯ ಮಗ- ಹರಿಯಾಣದ ಯುವ ವೈದ್ಯನ ಸಾಧನೆ ಇತರರಿಗೆ ಮಾದರಿ

ವಿಜಯಪುರ: ಶಿಕ್ಷಕಿಯ ಮಗನಿಗೆ ಐದು ಚಿನ್ನದ ಪದಕ ಸೇರಿದಂತೆ ಒಟ್ಟು 349 ವಿದ್ಯಾರ್ಥಿಗಳಿಗೆ ನಾನಾ ವೈದ್ಯಕೀಯ ಪದವಿಗಳನ್ನು ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ 11ನೇ ಘಟಿಕೋತ್ಸವದಲ್ಲಿ ಪ್ರಧಾನ ಮಾಡಲಾಯಿತು. ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಗ್ರಂಥಾಲಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಯ ಕುಲಾಧಿಪತಿ ಡಾ. ಎಂ. ಬಿ. ಪಾಟೀಲ, ಸಚಿವ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಶರಣಪ್ರಕಾಶ ಪಾಟೀಲ ಮುಂತಾದವರು ಪಿ.ಎಚ್.ಡಿ, ಸ್ನಾತಕೋತ್ತರ, ಎಂ.ಬಿ.ಬಿ.ಎಸ್ ಸೇರಿದಂತೆ 349 ವೈದ್ಯಕೀಯ ವಿದ್ಯಾರ್ಥಿಗಳಿಗೆ ಪದವಿ […]

ದುಡಿದ ಹಣದಲ್ಲಿ 10 ಪೈಸೆಯಾದರೂ ದಾನ- ಧರ್ಮ ನೀಡಿ- ಶಾಮನೂರು ಶಿವಶಂಕರಪ್ಪ

ವಿಜಯಪುರ: ಮಾಡುವ ದುಡಿಮೆಯಲ್ಲಿ 10 ಪೈಸೆಯಾದರೂ ದಾನ ಧರ್ಮದ ಸೇವೆಗೆ ನೀಡಬೇಕು ಎಂದು ಮಾಜಿ ಸಚಿವ, ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭೆ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.   ನಗರದಲ್ಲಿ ನಡೆದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ 11ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಸ್ವೀಕರಿಸಿ ಅವರು ಮಾತನಾಡಿದರು. ಈಗ ಪದವಿ ಪಡೆದಿರುವ ವೈದ್ಯರು ತಾವು ಮಾಡುವ ದುಡಿಮೆಯಲ್ಲಿ ಹತ್ತು ಪೈಸೆಯಷ್ಟಾದರೂ ದಾನ ದರ್ಮದ ಸೇವೆಗೆ ನೀಡಬೇಕು ಎಂದು ಅವರು ಕಿವಿಮಾತು ಹೇಳಿದರು. ವಿಶ್ವಾಸದಿಂದ ಜನಸೇವೆ ಮಾಡಿದರೆ ಎಲ್ಲರು […]

ವೈದ್ಯರು ಅತ್ಯಾಧುನಿಕ ಸೌಲಭ್ಯಗಳನ್ನು ಬಳಸಿಕೊಂಡು ಗ್ರಾಮೀಣ ಭಾಗದ ಜನರ ಆರೋಗ್ಯ ಸೇವೆಗೆ ಒತ್ತು ನೀಡಬೇಕು- ಡಾ. ಶರಣಪ್ರಕಾಶ ಪಾಟೀಲ

ವಿಜಯಪುರ: ಡಿಜಿಟಲ್ ತಂತ್ತಜ್ಞಾನದಿAದ ಈಗ ಆರೋಗ್ಯ ಸೇವೆಯ ಕ್ಷೇತ್ರ ವಿಸ್ತರಣೆಯಾಗುತ್ತಿದೆ.  ವೈದ್ಯರು ಎಲ್ಲ ಅತ್ಯಾಧುನಿಕ ಸೌಲಭ್ಯಗಳನ್ನು ಬಳಸಿಕೊಂಡು ಗ್ರಾಮೀಣ ಭಾಗದ ಜನರ ಆರೋಗ್ಯ ಸೇವೆಗೆ ಒತ್ತು ನೀಡಬೇಕು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯ ಅಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಕರೆ ನೀಡಿದ್ದಾರೆ.   ವಿಜಯಪುರದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ನಡೆದ 11ನೇ ಘಟಿಕೋತ್ಸವದಲ್ಲಿ ಪದವಿ ಪ್ರಧಾನ ಮಾಡಿ ಅವರು ಘಟಿಕೋತ್ಸವ ಭಾಷಣ ಮಾಡಿದರು. ವೈದ್ಯರು ಜನರ ಪಾಲಿಗೆ ಜೀವ ರಕ್ಷಿಸುವ ದೇವರಿದ್ದಂತೆ. ಆದ್ದರಿಂದ ಪ್ರೀತಿ, […]