ಡಾ. ಸಂಗಣ್ಣ ಎಲ್. ಲಕ್ಕಣ್ಣವರ ವಿಜಯಪುರ ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿಯಾಗಿ ವರ್ಗಾವಣೆ

ವಿಜಯಪುರ: ಜಿಲ್ಲಾಸ್ಪತ್ರೆಯ ನಿಕಟಪೂರ್ವ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸಂಗಣ್ಣ ಎಲ್. ಲಕ್ಕಣ್ಣವರ ಅವರನ್ನು ವಿಜಯಪುರ ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಇತ್ತೀಚೆಗಷ್ಟೇ ವಿಜಯಪುರ ಜಿಲ್ಲಾಸ್ಪತ್ರೆಯಿಂದ ಡಾ. ಲಕ್ಕಣ್ಣವರ ಅವರನ್ನು ವರ್ಗಾವಣೆ ಮಾಡಲಾಗಿತ್ತು.  ಆದರೆ, ಯಾವುದೇ ಸ್ಥಳ ತೋರಿಸಿರಲಿಲ್ಲ.  ಈಗ ಅವರನ್ನು ವಿಜಯಪುರ ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿಯನ್ನಾಗಿ ವರ್ಗಾವಣೆ ಮಾಡಲಾಗಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಎರಡು ವರ್ಷಗಳ ಅವಧಿಗೆ ನಗರಾಭಿವೃದ್ಧಿ ಇಲಾಖೆಯ ವಶಕ್ಕೆ ನೀಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಅಧಿಸೂಚನೆ […]

ನೀರು ಪೂರೈಕೆ ವಿಳಂಬ ಸಹಿಸಲ್ಲ- 10 ದಿನಗಳಲ್ಲಿ ವಿಜಯಪುರ ನಗರಕ್ಕೆ ಸಮರ್ಪಕ ನೀರು ಪೂರೈಸಿ- ಡಿಸಿ ಟಿ. ಭೂಬಾಲನ ಖಡಕ್ ಸೂಚನೆ

ವಿಜಯಪುರ: ನಗರದ ಕುಡಿಯುವ ನೀರಿನ ಪೂರೈಕೆಯಲ್ಲಿ ಆಗುವ ವಿಳಂಬವನ್ನು ಸಹಿಸುವುದಿಲ್ಲ. ಯಾವುದೇ ತಾಂತ್ರಿಕ, ಸಿವಿಲ್ ಕಾಮಗಾರಿ ಸಮಸ್ಯೆ ನಿವಾರಿಸಿಕೊಂಡು 10 ದಿನಗಳೊಳಗಾಗಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರಿನ ವಿಷಯದಲ್ಲಿ ಲೋಪ-ವಿಳಂಬ ಅನುಸರಿಸಿದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ನಗರದ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ […]

ಅಸಮರ್ಪಕ ವಿದ್ಯುತ್ ಪೂರೈಕೆ, ಮಹಿಷಿ ದಸರಾ ವಿಚಾರ- ರಾಜ್ಯ ಸರಕಾರದ ವಿರುದ್ಧ ಮಾಜಿ ಸಚಿವ ಎಸ್. ಎ. ರಾಮದಾಸ ವಾಗ್ದಾಳಿ

ವಿಜಯಪುರ: ಸರಕಾರದ ಮುಂದಾಲೋಚನೆ ಕೊರತೆಯಿಂದಾಗಿ ರಾಜ್ಯದಲ್ಲಿ ವಿದ್ಯುತ್ ಕೊರತೆ ಉಂಟಾಗಿದೆ ಎಂದು ಮಾಜಿ ಸಚಿವ ಎಸ್. ಎ. ರಾಮದಾಸ ಆರೋಪಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲೋಡ್ ಶೆಡ್ಡಿಂಗ್ ವಿಚಾರವಾಗಿ ಖಾರವಾಗಿ ಪ್ರತಿಕ್ರಿಯೆ ನೀಡಿದರು. ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರದಲ್ಲಿದ್ದಾಗ ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ದೇಶದಲ್ಲಿ ಕರ್ನಾಟಕದಲ್ಲಿಯೇ ಅತಿಹೆಚ್ಚು ಕರೆಂಟ್ ಉತ್ಪಾದನೆ ಆಗುತ್ತಿತ್ತು ಎಂದು ಹೇಳಿದ ಅವರು, ಆದರೆ ಈ ಸರಕಾರ ಬಂದ ಮೇಲೆ ವಿದ್ಯುತ್ ಸಮಸ್ಯೆ ಹೆಚ್ಚಾಗಿದೆ.  ಇದು ದುರ್ದೈವದ […]

ಸಿ ಎಂ ಇಬ್ರಾಹಿಂ ಜೆಡಿಎಸ್ ಬಿಡಲ್ಲ- ಜಿ. ಟಿ. ದೇವೇಗೌಡ

ವಿಜಯಪುರ: ಜೆ. ಡಿ. ಎಸ್ ರಾಜ್ಯಾಧ್ಯಕ್ಷ ಸಿ. ಎಂ. ಇಬ್ರಾಹಿಂ ಜೆಡಿಎಸ್ ತೊರೆಯುವುದಿಲ್ಲ ಎಂದು ಜಾತ್ಯತೀತ ಜನತಾ ದಳದ ಕೋರ್ ಕಮಿಟಿ ಅಧ್ಯಕ್ಷ ಜಿ. ಟಿ. ದೇವೇಗೌಡ ಹೇಳಿದ್ದಾರೆ. ವಿಜಯಪುರ ನಗರದ ಕಿತ್ತೂರು ರಾಣಿ ಚೆನ್ನಮ್ಮ ಸಮುದಾಯ ಭವನದಲ್ಲಿ ಕೋರ್ ಕಮಿಟಿ ಸಭೆಯಲ್ಲಿ ಪಾಲ್ಗೋಳ್ಳಲು ಆಗಮಿಸಿದ್ದ ಜೆಡಿಎಸ್ ಹಿರಿಯ ಮುಖಂಡರೂ ಆಗಿರುವ ಜಿ. ಟಿ. ದೇವೇಗೌಡ, ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಬಿಜೆಪಿ ಜೆಡಿಎಸ್ ಮೈತ್ರಿಯ ಕಾರಣದಿಂದ ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಸಿ. ಎಂ. ಇಬ್ರಾಹಿಂ ಪಕ್ಷ […]

ಜ್ಞಾನಯೋಗಾಶ್ರಮಕ್ಕೆ ಭೇಟಿ ನೀಡಿದ ಜೆಡಿಎಸ್ ಮುಖಂಡರು- ಶ್ರೀ ಸಿದ್ದೇಶ್ವರ ಸ್ವಾಮೀಜಿ ಭಾವಚಿತ್ರದ ದರ್ಶನ ಪಡೆದ ನಾಯಕರು

ವಿಜಯಪುರ: ಕೋರ್ ಕಮಿಟಿ ಸಭೆಯ ಹಿನ್ನೆಲೆಯಲ್ಲಿ ಬಸವನಾಡು ವಿಜಯಪುರ ನಗರಕ್ಕೆ ಆಗಮಿಸಿದ್ದ ಜೆಡಿಎಸ್ ಮುಖಂಡರು ಜ್ಞಾನಯೋಗಾಶ್ರಮಕ್ಕೆ ತೆರಳಿ ವೇಂದಾಂತ ಕೇಸರಿ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮೀಜಿಯವರ ಗದ್ದುಗೆ ಮತ್ತು ನಡೆದಾಡುವ ದೇವರು ಶ್ರೀ ಸಿದ್ಧೇಶ್ವರ ಅವರ ಭಾವಚಿತ್ರದ ದರ್ಶನ ಪಡೆದರು.  ಈ ಸಂದರ್ಭದಲ್ಲಿ ಆಶ್ರಮಕ್ಕೆ ಆಗಮಿಸಿದ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ. ಟಿ. ದೇವೇಗೌಡ, ಮಾಜಿ ಸಚಿವ ಬಂಡಪ್ಪ ಕಾಶೆಂಪೂರ, ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ, ಮಾಜಿ ಶಾಸಕ ಡಾ. ದೇವಾನಂದ ಚವ್ಹಾಣ, ನಾಡಗೌಡ, […]

ಭವಿಷ್ಯದಲ್ಲಿ ಕೃತಕ ಬುದ್ದಿಮತ್ತೆ ಸಂಶೋಧನೆಗಳಲ್ಲಿ ಪ್ರಾಬಲ್ಯ ಸಾಧಿಸಲಿದೆ- ಡಾ. ವೈ. ಎಂ. ಜಯರಾಜ

ವಿಜಯಪುರ: ಭವಿಷ್ಯದಲ್ಲಿ ಕೃತಕ ಬುದ್ದಿಮತ್ತೆ ಸಂಶೋಧನೆ ಕ್ಷೇತ್ರದಲ್ಲಿ ಪ್ರಾಬಲ್ಯ ಹೊಂದಲಿದೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಹೇಳಿದ್ದಾರೆ. ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಎಸ್.ಎಂ ಫಾರ್ಮಸಿ ಕಾಲೇಜಿನಲ್ಲಿ ನಡೆದ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಮತ್ತು ಮಷೀನ್ ಲರ್ನಿಂಗ್ (ML) ಆ್ಯನ್ ಅಪ್ಲಿಕೇಶನ್ ಪ್ರಾಸ್ಪೆಕ್ಟಿವ್ ಇನ್ ಹೆಲ್ತಕೇರ್ ಆ್ಯಂಡ್ ಎಜುಕೇಶನ್ ಸೆಕ್ಟರ್ಸ್ ವಿಷಯ ಕುರಿತು ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ಆಧುನಿಕ ಯುಗದಲ್ಲಿ ಕೃತಕ ಬುದ್ದಿಮತ್ತೆ […]

ಸಚಿವ ಎಂ. ಬಿ. ಪಾಟೀಲ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ 7 ಜನ ಕಾರ್ಪೋರೇಟರ್ ಗಳು- ವಿಜಯಪುರ ಮಹಾನಗರಪಾಲಿಕೆಯಲ್ಲಿ ಈಗ ಕೈಗೆ ಬಹುಮತ

ಬೆಂಗಳೂರು: ವಿಜಯಪುರ ಮಹಾನಗರ ಪಾಲಿಕೆಯ 7 ಸದಸ್ಯರು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಬೆಂಗಳೂರಿನ ನಿವಾಸದಲ್ಲಿ ಬುಧವಾರ ಕಾಂಗ್ರೆಸ್ಸಿಗೆ ಸೇರ್ಪಡೆಯಾಗಿದ್ದಾರೆ. ಮಹಾನಗರ ಪಾಲಿಕೆಯ ಪಕ್ಷೇತರ ಸದಸ್ಯರಾದ ಅಶೋಕ ನ್ಯಾಮಗೌಡ, ವಿಮಲಾ ರಫೀಕ್ ಕಾನೆ, ಅಲ್ತಾಫ್ ಇಟಗಿ, ಜೆಡಿಎಸ್ ಸದಸ್ಯೆ ಸುಮಿತ್ರಾ ರಾಜು ಜಾದವ, ಎಂಐಎಂಐಎಂ ನ ಕೈಸರ್ ಇನಾಮದಾರ ಮತ್ತು ಸೂಫಿಯಾ ವಾಟಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಪಾಲಿಕೆಯ ಮತ್ತೋರ್ವ ಸದಸ್ಯೆ ಕೂಡ ಕಾಂಗ್ರೆಸ್ ಸೇರಲು ತೀರ್ಮಾನಿಸಿದ್ದಾರೆ. ಆದರೆ, ಅವರು ಕಾರಣಾಂತರಗಳಿಂದ ಬಂದಿರಲಿಲ್ಲ. ಒಟ್ಟು […]

ಬಿ.ವಿ.ವಿ.ಎಸ್. ಹೋಮಿಯೋಪಥಿ ಕಾಲೇಜಿನಲ್ಲಿ ಯುವ ಮಂಥನ ಕಾರ್ಯಕ್ರಮ

ಬಾಗಲಕೋಟೆ- ನಗರದ ಬಿ.ವಿ.ವಿ.ಎಸ್. ಹೋಮಿಯೋಪಥಿ ಕಾಲೇಜನಲ್ಲಿ ಯುವಮಂಥನ ಕಾರ್ಯಕ್ರಮ ನಡೆಯಿತು. ಕೇಂದ್ರ ಸರಕಾರದ ಮಹಾತ್ವಾಕಾಂಕ್ಷೆಯ Y-20 ಯುವ ಮಂಥನ G-20 ಕಾಯ೯ಕ್ರಮಯನ್ನು ಆಯುಷ್ ವೈದ್ಯಾಧಿಕಾರಿ ಡಾ. ಸಿ. ಪಿ. ರಕ್ಕಸಗಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ವೈದ್ಯ ವಿದ್ಯಾಥಿ೯ಗಳು ಸಹನೆ, ಸೇವಾಗುಣ, ದೇಶ ಸೇವೆ ಬೆಳೆಸಿಕೊಳ್ಳಬೇಕು.  ದೇಶದ ಬಡಜನರ ಆರೋಗ್ಯ ಸುಧಾಹರಣೆ ನಿಮ್ಮ ಮತ್ತು ನಮ್ಮ ಹೊಣೆ ಎಂದು ಹೇಳಿದರು. ಪ್ರಾಚಾಯ೯ ಡಾ. ಅರುಣ ವಿ. ಹೂಲಿ ಅವರು, ಭಾರತದ ನೇತೃತ್ವದಲ್ಲಿ ನಡೆದ G-20 ಶೃಂಗಸಭೆ ಕುರಿತು […]

ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ- ಉಕ್ಕಲಿಯಲ್ಲಿ ರೈತರಿಂದ ಹೆಸ್ಕಾಂ ಕಚೇರಿ ಎದುರು ಪ್ರತಿಭಟನೆ

ವಿಜಯಪುರ: ಪಂಪಸೆಟ್ ಗಳಿಗೆ ಕನಿಷ್ಠ ಏಳು ಗಂಟೆ ವಿದ್ಯುತ್ ಪೂರೈಸುವಂತೆ ಆಗ್ರಹಿಸಿ ರೈತರು ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿಯಲ್ಲಿ ಹೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾದ್ಯಂತ ಬರ ಆವರಿಸಿರುವ ಹಿನ್ನೆಲೆಯಲ್ಲಿ ನೀರಿಲ್ಲದೆ ಬೆಳೆಗಳು ಒಣಗುತ್ತಿವೆ.  ಮತ್ತೋಂದೆಡೆ ಭಾವಿ ಮತ್ತು ಕೊಳವೆ ಭಾವಿಗಳಿಗೆ ಕೆಲವು ಕಡೆಗಳಲ್ಲಿ ನೀರಿದ್ದರೂ ಅಸಮರ್ಪಕ ವಿದ್ಯುತ್ ಪೂರೈಕೆಯಿಂದಾಗಿ ರೈತರ ಸಂಕಷ್ಟಗಳಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.  ದಿನಕ್ಕೆ ಕೇವಲ 2-3 ಗಂಟೆ ವಿದ್ಯುತ್ ಸರಬರಾಜು ಮಾಡಲಾಗುತ್ತಿದ್ದು, ಅದೂ ಕೂಡ ಮಧ್ಯೆ ಕಡಿತವಾಗುತ್ತಿದೆ.  ಸರಕಾರ […]

ಮನೋರೋಗಗಳ ಬಗ್ಗೆ ಜಾಗೃತಿ, ಸೂಕ್ತ ಚಿಕಿತ್ಸೆ ಅಗತ್ಯವಾಗಿದೆ- ಡಾ. ಮಂಜುನಾಥ ಮಸಳಿ

ವಿಜಯಪುರ: ಮನೋರೋಗಗಳ ಬಗ್ಗೆ ಜಾಗೃತಿ ಮೂಡಿಸಿ ಈ ಕಾಯಿಲೆಯಿಂದ ಬಳಲುವವರಿಗೆ ಸಮಯಕ್ಕೆ ಸರಿಯಾಗಿ ಸೂಕ್ತ ಚಿಕಿತ್ಸೆ ನೀಡಿದರೆ ರೋಗವನ್ನು ಗುಣಪಡಿಸಬಹುದು ಎಂದು ಜಿಲ್ಲಾ ಆರೋಗ್ಯ ಕೇಂದ್ರದ ಮಾನಸಿಕ ಆರೋಗ್ಯ ವಿಭಾಗದ ಡಾ. ಮಂಜುನಾಥ ಮಸಳಿ ಹೇಳಿದ್ದಾರೆ. ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಶುಶ್ರೂಷ ಮಹಾವಿದ್ಯಾಲಯ ಮತ್ತು ಜಿಲ್ಲಾ ಆರೋಗ್ಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಮಾನಸಿಕ ಆರೋಗ್ಯ- ಇದು ಪ್ರತಿಯೊಬ್ಬನ ಹಕ್ಕು ವಿಷಯದ ಕುರಿತು ಅವರು ವಿಶೇಷ […]