ಕಾನೂನು ಪಾಲನೆಯೊಂದಿಗೆ ಮಾನವೀಯ ಮನೋಭಾವದಿಂದ ಕಾರ್ಯನಿರ್ವಹಿಸಿ- ಜಿ. ಪಂ. ಸಿಇಓ ರಾಹುಲ್ ಶಿಂಧೆ

ವಿಜಯಪುರ: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕಟ್ಟುನಿಟ್ಟಾಗಿ ನಿಯಮ ಪಾಲಿಸುವುದರೊಂದಿಗೆ ಮಾನವೀಯ ನೆಲೆಯಲ್ಲಿ ಗ್ರಾಮೀಣ ಭಾಗದ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಹೇಳಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ಜಿಲ್ಲೆಯಲ್ಲಿ ಮನರೇಗಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಪ್ರಸ್ತುತ ಜಿಲ್ಲೆಯ 12 ತಾಲೂಕುಗಳಲ್ಲಿ ಬರ ಘೋಷಣೆಯಾಗಿದೆ. ಗ್ರಾಮೀಣ ಜನರು ಸಂಕಷ್ಟಕ್ಕೆ […]

ಡೆಂಗ್ಯೂ ರಥ ಅಭಿಯಾನ- ಜಿಲ್ಲಾಧಿಕಾರಿ ಟಿ. ಭೂಬಾಲನ್ ಚಾಲನೆ

ವಿಜಯಪುರ:: ಜಿಲ್ಲಾಡಳಿತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ರೋಗವಾಹಕ ಅಶ್ರಿತ ರೋಗಗಳ ನಿಯಂತ್ರಣಾದಿಕಾರಿಗಳ ಕಾರ್ಯಾಲಯ ವಿಜಯಪುರ ವತಿಯಿಂದ ಆಯೊಜಿಸಲಾಗಿರುವ ಡೆಂಗ್ಯೂ ರಥ ಅಭಿಯಾನಕ್ಕೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಡೆಂಗೀ ರೋಗ ನಿಯಂತ್ರಣದಲ್ಲಿ ಸಾರ್ವಜನಿಕರ ಪಾತ್ರ ಅತಿಮುಖ್ಯವಾಗಿದೆ. ಸಾರ್ವಜನಿಕರೂ ಸಹ ತಮ್ಮ ಅಕ್ಕ-ಪಕ್ಕದ ಪರಿಸರದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು.  ಡೆಂಗೀ ರೋಗ ಹರಡದಂತೆ ಎಲ್ಲ ಮುಂಜಾಗ್ರತಾ ಕ್ರಮಗಳನ್ನು  ಕೈಗೊಳ್ಳಬೇಕು ರೋಗ ಕುರಿತು  ಜಾಗೃತಿ ಮೂಡಿಸಲು ರಥ […]

ಬಸವನ ಬಾಗೇವಾಡಿ ತಾ. ಪಂ. ಗೆ ಜಿ. ಪಂ. ಸಿಇಓ ರಾಹುಲ್ ಶಿಂಧೆ ಭೇಟಿ- ಸಮರ್ಪಕವಾಗಿ ಕಾರ್ಯ ನಿರ್ವಹಣೆಗೆ ಸೂಚನೆ

ವಿಜಯಪುರ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ಶಿಂಧೆ ಅವರು ಬಸವನ ಬಾಗೇವಾತಿ ತಾಲೂಕು ಪಂಚಾಯಿತಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾ. ಪಂ. ಯ ನಾನಾ ವಿಭಾಗಗಳ ಪರಿಶೀಲನೆ ನಡೆಸಿದ ಅವರು, ಕಚೇರಿಗೆ ನಾನಾ ಕಾರ್ಯಗಳಿಗಾಗಿ ಬರುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು.  ಯಾವುದೇ ಕಾರ್ಯಕ್ಕಾಗಿ ವಿಳಂಭ ಧೋರಣೆ ಅನುಸರಿಸದೇ ನಿಗದಿತ ಕಾಲಾವಧಿಯಲ್ಲಿ ಸಾರ್ವಜನಿಕರ ಕೆಲಸ ಮಾಡಿಕೊಡಬೇಕು.  ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿ ಯಾವುದೇ ದೂರುಗಳಿಗೆ ಆಸ್ಪದ ನೀಡದೆ ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು. […]

ವಿಜಯಪುರ ಸಂಚಾರ ಸಮಸ್ಯೆಗಳಿಗೆ 8277971008 ಸಹಾಯವಾಣಿ ಆರಂಭ- ಎಸ್ಪಿ ಸೋನಾವಣೆ- ಕರೆ ಮಾಡಿ ಇಲ್ಲವೆ ವಾಟ್ಸಾಪ್ ಮೂಲಕ ಮಾಹಿತಿ ನೀಡಲು ಸಲಹೆ

ವಿಜಯಪುರ: ನಗರದ ಸಂಚಾರ ದಟ್ಟಣೆ ಮತ್ತೀತರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಲು ಪೊಲೀಸ್ ಇಲಾಖೆ ಹೊಸ ಹೆಲ್ಪಲೈನ್ ವ್ಯವಸ್ಥೆ ಮಾಡಿದೆ.   ಈ ಕುರಿತು ಮಾಹಿತಿ ನೀಡಿರುವ ಎಸ್ಪಿ ಸೋನಾವಣೆ ರಿಷಿಕೇಶ ಭಗವಾನ, ಸಾರ್ವಜನಿಕರು 827791008 ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಅಥವಾ ವಾಟ್ಸಾಪ್ ಗೆ ಸಂದೇಶ ಕಳುಹಿಸುವ ಮೂಲಕ ದೂರು ನೀಡಬಹುದು ಎಂದು ತಿಳಿಸಿದ್ದಾರೆ.  ಈ ಹೊಸ ನಂಬರಿಗೆ ಕರೆ ಮಾಡಿ ಅಥವಾ ವಾಟ್ಸಾಪ್ ಮೂಲಕ ಮಾಹಿತಿ ನೀಡಿದರೆ, ಟ್ರಾಫಿಕ್ ಜಾಮ್ ಸೇರಿದಂತೆ ಸಂಚಾರಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ […]

ಎರಡು ತಿಂಗಳಲ್ಲಿ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಶಾಸಕ ಯತ್ನಾಳ ಸೂಚನೆ

ವಿಜಯಪುರ: ಎರಡು ತಿಂಗಳಲ್ಲಿ ಆಶ್ರಯ ಮನೆಗಳ ಕಾಮಗಾರಿ ಪೂರ್ಣಗೊಳಿಸಿ, ಫಲಾನುಭವಿಗಳು ವಾಸಿಸಲು ಅನುಕೂಲ ಮಾಡಿ ಕೊಡಬೇಕು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಧಿಕಾರಿಗಳಿಗೆ ಗಡುವು ನೀಡಿದ್ದಾರೆ. ನಗರ ಮತಕ್ಷೇತ್ರ ವ್ಯಾಪ್ತಿಯ ನಮೋ ನಗರದಲ್ಲಿ ನಿರ್ಮಾಣ ಆಗುತ್ತಿರುವ ಆಶ್ರಯ ಮನೆಗಳ ಕಾಮಗಾರಿಯನ್ನು ವೀಕ್ಷಿಸಿದ ಅವರು, ತ್ವರಿತಗತಿಯಲ್ಲಿ ಬಾಕಿ ಕಾಮಗಾರಿ ಮುಗಿಸುವ ಜೊತೆಗೆ ಗುಣಮಟ್ಟತೆ ಕಾಯ್ದುಕೊಳ್ಳಬೇಕು.  ಎರಡು ದಿನಗಳಿಗೊಮ್ಮೆ ಭೇಟಿ ನೀಡಿ, ಪರಿಶೀಲನೆ ನಡೆಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತ ಬದ್ರುದ್ದೀನ್ ಸೌದಾಗರ ಅವರಿಗೆ ಸೂಚನೆ ನೀಡಿದರು. […]

ವಿಶ್ವದ ಶೇ. 2 ಅತ್ಯುತ್ತಮ ವಿಜ್ಞಾನಿಗಳ ಪಟ್ಟಿಗೆ ಸೇರ್ಪಡೆಯಾದ ಬಸವನಾಡಿನ ಮೂರು ಜನ ಸಂಶೋಧಕರು- ಅವರ ಸಾಧನೆ ಮಾಹಿತಿ ಇಲ್ಲಿದೆ

ವಿಜಯಪುರ: 2023 ನೇ ವರ್ಷದ ವಿಶ್ವದ ಉನ್ನತ 2% ವಿಜ್ಞಾನಿಗಳ ಪಟ್ಟಿಯಲ್ಲಿ ನಗರದ ಬಿ.ಎಲ್. ಡಿ. ಇ. ವಿಶ್ವವಿದ್ಯಾಲಯದ ಮೂರು ಜನ ಸಂಶೋಧಕರನ್ನು ಆಯ್ಕೆ ಮಾಡಲಾಗಿದೆ. ವಿಜಯಪುರದ ಬಿ. ಎಲ್. ಡಿ. ಇ ವಿಶ್ವವಿದ್ಯಾಲಯದ ರಜಿಸ್ಟ್ರಾರ್ ಡಾ. ರಾಘವೇಂದ್ರ ಕುಲಕರ್ಣಿ, ಡಾ. ಕುಸಾಲ ದಾಸ ಹಾಗೂ ಡಾ. ರಘು ಎ. ವಿ. ಅಇವರಿಗೆ ಔಷಧ ವಿಜ್ಞಾನ, ಶರೀರ ಶಾಸ್ತ್ರ ಹಾಗೂ ಪಾಲಿಮರ್ ಕ್ಷೇತ್ರದಲ್ಲಿನ ಸಂಶೋಧನೆಗಾಗಿ 2023 ನೇ ವರ್ಷದ ವಿಶ್ವದ ಉನ್ನತ 2% ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ […]

ವಿಜಯಪುರ ಡಿಎಚ್ಓ ಕಚೇರಿ, ಜಿಲ್ಲಾಸ್ಪತ್ರೆಗೆ ಡಿಸಿ ಟಿ. ಭೂಬಾಲನ್, ಜಿ. ಪಂ. ಸಿಇಓ ರಾಹುಲ ಶಿಂಧೆ ದಿಢೀರ ಭೇಟಿ- ವ್ಯವಸ್ಥೆ ಪರಿಶೀಲನೆ

ವಿಜಯಪುರ: ಜಿಲ್ಲಾಧಿಕಾರಿ ಟಿ. ಭೂಬಾಲನ್ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ಶಿಂಧೆ ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಹಾಗೂ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯಲ್ಲಿನ ಕಾರ್ಯವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದರು. ಬೆಳಿಗ್ಗೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ರೋಗಿಗಳಿಗೆ ಕಲ್ಪಿಸಲಾಗುತ್ತಿರುವ ವೈದ್ಯೋಪಚಾರ ಕುರಿತು ರೋಗಿಗಳಿಂದ ಮಾಹಿತಿ ಪಡೆದುಕೊಂಡ ಅವರು, ಸಿಬ್ಬಂದಿಗಳ ಹಾಜರಾತಿಯನ್ನು ವೀಕ್ಷಣೆ ನಡೆಸಿ, ತಡವಾಗಿ ಬಂದ ಸಿಬ್ಬಂದಿಗಳ ಹಾಜರಾತಿಯನ್ನು ಗೈರುಹಾಜರಿ ಎಂದು ಪರಿಗಣಿಸಿ ಅಂತಹ ಸಿಬ್ಬಂದಿಗಳಿಗೆ ಕಾರಣ […]

ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಅಸಂಘಟಿತ ಕಾರ್ಮಿಕರ ಆರೋಗ್ಯಕ್ಕಾಗಿ ಫ್ಯಾಮಿಲಿ ಹೆಲ್ತ್ ಕಾರ್ಡ್ ವಿತರಣೆ- ಇದರ ವಿಶೇಷತೆ ಏನು ಗೊತ್ತಾ?

ವಿಜಯಪುರ: ಅಸಂಘಟಿತ ವಲಯದ ಕಾರ್ಮಿಕರಿಗೆ ಉತ್ತಮ ಆರೋಗ್ಯ ಸೇವೆ ನೀಡಲು ಬಿ.ಎಲ್.ಡಿ.ಇ ಆಸ್ಪತ್ರೆ ಮುಂದಾಗಿದ್ದು, ಈ ನಿಟ್ಟಿನಲ್ಲಿ ಫ್ಯಾಮಿಲಿ ಹೆಲ್ತ್ ಕಾರ್ಡ್ ವಿತರಣೆ ಆರಂಭಿಸಿದೆ. ಸಂಸ್ಥೆಯ  ಅಧ್ಯಕ್ಷ ಮತ್ತು ಸಚಿವ ಎಂ. ಬಿ.ಪಾಟೀಲ ಅವರ ಜನ್ಮದಿನದ ಅಂಗವಾಗಿ ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಸಂಘಟಿತ ವಲಯದ ಕಾರ್ಮಿಕರಿಗೆ ಬಿ.ಎಲ್.ಡಿ.ಇ ಆರೋಗ್ಯ ಯೋಜನೆಯಡಿ ಕುಟುಂಬದ ಆರೋಗ್ಯ ಕಾರ್ಡ್ ವಿತರಿಸುವ ಕಾರ್ಯಕ್ರಮಕ್ಕೆ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕುಲಪತಿ ಡಾ. ಆರ್. ಎಸ್. ಮುಧೋಳ, ಪ್ರಾಚಾರ್ಯ ಡಾ. ಅರವಿಂದ ಪಾಟೀಲ, […]

ಬರ ಅನುದಾನ ಹೆಚ್ಚಿಗೆ ನೀಡಿ- ತಿಕೋಟಾ ತಾಲೂಕನ್ನು ಬರಪೀಡಿತ ಎಂದು ಘೋಷಿಸುವಂತೆ ವರದಿ ಸಲ್ಲಿಸಿ- ಕೇಂದ್ರ ತಂಡಕ್ಕೆ ಸಚಿವ ಎಂ. ಬಿ. ಪಾಟೀಲ ಪರವಾಗಿ ಮನವಿ ಪತ್ರ ಸಲ್ಲಿಕೆ

ವಿಜಯಪುರ: ತೀವ್ರ ಬರ ಪೀಡಿತ ವಿಜಯಪುರ ಜಿಲ್ಲೆಗೆ ಹೆಚ್ಚಿನ ಅನುದಾನ ಒದಗಿಸುವ ನಿಟ್ಟಿನಲ್ಲಿ ಕೇಂದ್ರಕ್ಕೆ ವರದಿ ಸಲ್ಲಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಕೇಂದ್ರ ಬರ ಅಧ್ಯಯನ ತಂಡಕ್ಕೆ ಮನವಿ ಮಾಡಿದ್ದಾರೆ. ಸಚಿವರು ಸಧ್ಯಕ್ಕೆ ವಿದೇಶ ಪ್ರವಾಸದಲ್ಲಿದ್ದು, ಅವರ ಸೂಚನೆಯಂತೆ ಸಚಿವರ ಸಾರ್ವಜನಿಕ‌ ಸಂಪರ್ಕಾಧಿಕಾರಿ ಡಾ. ಮಹಾಂತೇಶ ಬಿರಾದಾರ, ಸಚಿವರ ಕಚೇರಿಯ ಅಧಿಕಾರಿಗಳಾದ ಎಂ. ಎನ್. ಚೋರಗಸ್ತಿ ಮತ್ತು ದಶರಥ […]

ಕೇಂದ್ರ ಬರ ಅದ್ಯಯನ ತಂಡ ಭೇಟಿ ಹಿನ್ನೆಲೆ- ಹೊರ್ತಿ ಗ್ರಾಮಕ್ಕೆ ಡಿಸಿ ಟಿ. ಭೂಬಾಲನ್ ಭೇಟಿ- ಹಾನಿಗೊಳಗಾದ ಬೆಳೆ ವೀಕ್ಷಣೆ

ವಿಜಯಪುರ: ಕೇಂದ್ರ ಬರ ತಂಡ ವಿಜಯಪುರ ಜಿಲ್ಲೆಗ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಜಿಲ್ಲೆಯ ಹೊರ್ತಿ ಮತ್ತು ಕಪನಿಂಬರಗಿ ಗ್ರಾಮಗಳಿಗೆ  ಭೇಟಿ ನೀಡಿ, ಬರದಿಂದ ಹಾನಿಗೊಳಗಾದ ಬೆಳೆ ವೀಕಅಷಣೆ ಮಾಡಿದರು. ತೋಟಗಾರಿಕೆ ಬೆಳೆಗಳಾದ ಲಿಂಬೆ, ಈರುಳ್ಳಿ, ಮೆಣಸಿನಕಾಯಿ, ಕೃಷಿ ಬೆಳೆಗಳಾದ ಸಜ್ಜೆ, ಮೆಕ್ಕೆಜೋಳ ಬೆಳೆಗಳ   ಕುರಿತು ಮಾಹಿತಿ ಪಡೆದುಕೊಂಡ ಅವರು, ಕೋಳೂರಗಿ ಗ್ರಾಮದ ರೈತರೋರ್ವ ಜಮೀನಿನಲ್ಲಿ ಸೂರ್ಯಕಾಂತಿ ಬೆಳೆ ಕಟಾವು ವೀಕ್ಷಿಸಿದರು.  ಅಲ್ಲದೇ, ಕಪನಿಂಬರಗಿ ಕೆರೆ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ […]